ಲೇಖಕ: admin

ಮಡಿಕೇರಿ ಜು.1 NEWS DESK : ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಕರುಗಳು ಸೇರಿದಂತೆ ನಾಲ್ಕು ಹಸುಗಳು ಸಾವನ್ನಪ್ಪಿರುವ ಘಟನೆ ಸಂಪಾಜೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಕೊಯನಾಡಿನಲ್ಲಿ ನಡೆದಿದೆ. ಕೊಯನಾಡು ಶ್ರೀಗಣಪತಿ ದೇವಾಲಯದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಧ್ಯರಾತ್ರಿ ವಾಹನ ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಜಾನುವಾರುಗಳನ್ನು ಸಾಕುವ ಮಾಲೀಕರು ಅವುಗಳ ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ತೋರಬೇಕು ಮತ್ತು ಹೆದ್ದಾರಿಯಲ್ಲಿ ಮೇಯಲು ಬಿಡಬಾರದು ಎಂದು ಪ್ರಾಣಿ ಪ್ರಿಯರು ಮನವಿ ಮಾಡಿದ್ದಾರೆ.

Read More

ಸಿದ್ದಾಪುರ ಜು.1 NEWS DESK : ಇಕ್ರಾ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗ ಶಿಬಿರದಲ್ಲಿ ಪಾಲ್ಗೊಂಡು ಯೋಗದ ಮಹತ್ವವನ್ನು ತಿಳಿದುಕೊಂಡರು. ಯೋಗಾ ತರಬೇತುದರಾದ ಶಿಕ್ಷಕಿ ಎನ್.ಎ.ವಿದ್ಯಾ ಮಾತನಾಡಿ, ದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಎಲ್ಲಾ ಕಡೆ ಆಚರಿಸಲಾಗುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಕಲಿಕಾ ಶಿಬಿರಗಳಲ್ಲಿ ಪಾಲ್ಗೊಂಡು ಯೋಗಾಭ್ಯಾಸದ ಮಹತ್ವವನ್ನು ತಿಳಿದುಕೊಳ್ಳಬೇಕೆಂದರು. ಇಕ್ರಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಯು.ಅಬ್ದುಲ್ ರಜಾಕ್ ಮಾತನಾಡಿ, ಮಾನಸಿಕ, ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗಾಭ್ಯಾಸವು ಬಹಳ ಸಹಕಾರಿ ಆಗಲಿದೆ. ಎಲ್ಲರೂ ಸಹ ತಮ್ಮ ಜೀವನದುದ್ದಕ್ಕೂ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭ ನೂರಾರು ವಿದ್ಯಾರ್ಥಿಗಳು ಯೋಗಭ್ಯಾಸದಲ್ಲಿ ಪಾಲ್ಗೊಂಡು ತಮ್ಮ ಪ್ರದರ್ಶನ ತೋರಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳು, ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು.

Read More

ಬೆಂಗಳೂರು ಜು.1 NEWS DESK  : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಸುಳ್ಳು ಮತ್ತು ಊಹಾ ಪತ್ರಿಕೋದ್ಯಮ ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದರು. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು…

Read More

ಮಡಿಕೇರಿ ಜು.1 NEWS DESK : ಕೊಡಗು ಪತ್ರಕರ್ತರ ಸಂಘದಿಂದ ಜಿಲ್ಲೆಯ ಹತ್ತು ಮಂದಿ ಪತ್ರಕರ್ತರಿಗೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಹಾಗೂ ಗಣ್ಯರು ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.  :: ಪ್ರಶಸ್ತಿ ವಿಜೇತರು :: ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕುಡೆಕಲ್ ಸಂತೋಷ್ ಅವರ ಇರುವುದೊಂದೇ ಕ್ರೀಡಾಂಗಣ ಅದಕ್ಕೂ ಗ್ರಹಣ ಎಂಬ ವರದಿ, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾರ್ಥ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ…

Read More

ಮಡಿಕೇರಿ ಜು.1 NEWS DESK :  ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 61.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1418.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 848.64 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.05 ಮಿ.ಮೀ. ಕಳೆದ ವರ್ಷ ಇದೇ ದಿನ 66.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2033.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1227.23 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 106.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1414.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 889.55 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…

Read More

ಹೈದರಾಬಾದ್ ಜು.1 NEWS DESK : ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.  ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

Read More

ಮಡಿಕೇರಿ ಜು.1 NEWS DESK : ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ. ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು…

Read More

ಮಡಿಕೇರಿ ಜು.1 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಸಿಖ್, ಪಾರ್ಸಿ, ಜೈನ್, ಬೌಧ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5000ಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ: 08272-220214 ಹಾಗೂ ಇಲಾಖಾ ವೆಬ್‍ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.1 NEWS DESK : ಜೂ.30ಕೊಡಗು ಜಿಲ್ಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಯ್ದೆಯಡಿ ಸುಮಾರು 12,629 ಮಂದಿ(9971 ಪುರುಷ ಮತ್ತು 2,658 ಮಹಿಳೆಯರು) ಕಾರ್ಮಿಕರು ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 3069(2424 ಪುರುಷ ಮತ್ತು 645 ಮಹಿಳೆ), ಸೋಮವಾರಪೇಟೆ ತಾಲ್ಲೂಕಿನಲ್ಲಿ 4146 ಮಂದಿ ಹೆಸರು ನೋಂದಾಯಿಸಿದ್ದು(3759 ಪುರುಷ ಮತ್ತು 387 ಮಹಿಳೆಯರು), ವಿರಾಜಪೇಟೆ ತಾಲ್ಲೂಕಿನಲ್ಲಿ 5414 ಮಂದಿ (3788 ಪುರುಷ ಮತ್ತು 1626 ಮಹಿಳೆಯರು) ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿಯಾಗಲು ಸಹಾಯವಾಣಿ 155214 ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪಿಂಚಣಿ ಸೌಲಭ್ಯದಡಿ ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಪಲಾನುಭವಿಗೆ ಮಾಸಿಕ ಪಿಂಚಣಿ ಸೌಲಭ್ಯ ದೊರೆಯಲಿದೆ. ಕುಟುಂಬ ಪಿಂಚಣಿ ಸೌಲಭ್ಯದಡಿ ಮೃತ ಪಿಂಚಣಿದಾರರ ಪತಿ/…

Read More

ಚೆಟ್ಟಳ್ಳಿ NEWS DESK ಜೂ.30 : ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲದಲ್ಲಿರುವ ಪುಚ್ಚಿಮಾಂಡ ಐನ್ ಮನೆಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಐನ್ ಮನೆಯಲ್ಲಿ ನಡೆಯುತ್ತಿರುವ ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಂಡರು. ಐನ್ ಮನೆಯಲ್ಲಿ ನಡೆಯುತ್ತಿರುವ ಶ್ರೀ ವಿಷ್ಣುಮೂರ್ತಿ ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಹಾಗೂ ಪ್ರಸಾದ ಪಡೆದರು. ಈ ಸಂದರ್ಭ ಪುಚ್ಚಿಮಾಂಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More