ಪೊನ್ನಂಪೇಟೆ ಅ.15 NEWS DESK : ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲು ನಿರ್ದಾರ ಕೈಗೊಳ್ಳಲಾಗಿದೆ ತಿಳಿಸಿದರು. ಸಂಘದಲ್ಲಿ ಪ್ರಸ್ತುತ ಒಟ್ಟು 1570 ಸದಸ್ಯರಿದ್ದು, ಈ ಸಾಲಿನ ಸಂಘದ ಮಹಾಸಭೆಗೆ ಒಟ್ಟು 1143 ಸದಸ್ಯರು ಪಾಲ್ಗೊಂಡಿದ್ದಾರೆ. ಸಂಘದಲ್ಲಿ 31.03.2025ರ ಅವಧಿಗೆ ರೂ. 1,77,01,000 ಪಾಲು ಬಂಡವಾಳ ಹಾಗು ಸಂಚಯ ಠೇವಣಿ, ನಿರಖು ಠೇವಣಿ . ಪಿಗ್ಮಿ ಠೇವಣಿ ಮತ್ತು ಸಿಬ್ಬಂದಿ ಠೇವಣಿ, ಮರಣ ನಿಧಿ ಸೇರಿ…
ಲೇಖಕ: admin
ಮಡಿಕೇರಿ NEWS DESK ಅ.15 : ಪಂಚಾಯತ್ ರಾಜ್, ಗ್ರಾಮೀಣ ಅಭಿವೃದ್ಧಿ ಮತ್ತು ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ವೈಫಲ್ಯಗಳನ್ನು ಮರೆಮಾಚಲು ಹಾಗೂ ಕಾಂಗ್ರೆಸ್ ಹೈಕಮಾಂಡ್ ನ್ನು ಮೆಚ್ಚಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಅತ್ಯಂತ ಪ್ರಮುಖ ಖಾತೆಗಳನ್ನು ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಾಗದೆ ವೈಫಲ್ಯವನ್ನು ಕಾಣುತ್ತಿದ್ದಾರೆ. ತಮ್ಮ ಇಲಾಖೆಗಳ ನ್ಯೂನತೆಯನ್ನು ಮರೆಮಾಚಲು ಮತ್ತು ಚರ್ಚೆಯ ದಿಕ್ಕನ್ನು ಬದಲಾಯಿಸುವ ಉದ್ದೇಶದಿಂದ ಆರ್ಎಸ್ಎಸ್ ವಿರುದ್ಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ, ಅಲ್ಲದೆ ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇವರು ಆರ್ಎಸ್ಎಸ್ ವಿರುದ್ಧ ಹಲವು ಬಾರಿ ದ್ವೇಷ ಕಾರಿದ್ದಾರೆ. ಆರ್ಎಸ್ಎಸ್…
ಮಡಿಕೇರಿ ಅ.15 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ. ಜಿಲ್ಲೆಯ ಎಲ್ಲೆಲ್ಲೂ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಸಂಘಸಂಸ್ಥೆಗಳ ಸದಸ್ಯರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕೊಡಗಿನ ಸ್ವಚ್ಛತೆ ಸಂಬಂಧಿತ ಕಾಳಜಿ ತೋರಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಕಸ ಹೆಕ್ಕುವ ಮೂಲಕ ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಶಾಸಕ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಕೊಡಗು ನಿರ್ಮಾಣದ ಜವಾಬ್ದಾರಿ ಜಿಲ್ಲೆಯ ಪ್ರತೀಯೋವ೯ರ ಮೇಲಿದೆ. ಕೊಡಗನ್ನು ಅಸುಚಿತ್ವದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಸ್ವಚ್ಛತಾ ಆಂದೋಲನದ ಆಯೋಜನೆ ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆಯ ಸುಂದರ ಪ್ರಕೃತಿ, ಸಂಪನ್ಮೂಲ…
ಮಡಿಕೇರಿ ಅ.15 NEWS DESK : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನ.9 ರಂದು ಮಡಿಕೇರಿ ನಗರದ ಓಂಕಾರ ಸದನದಲ್ಲಿ “ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಹಿಮವನ ಸಾಂಸ್ಕೃತಿಕ ಸಂಗಮ” ಎಂಬ ಸಾಂಸ್ಕೃತಿಕ ಸ್ಪಧಾ೯ ಕಾಯ೯ಕ್ರಮಗಳನ್ನು ಮಹಿಳೆಯರು ಹಾಗೂ ಮಕ್ಕಳಿಗಾಗಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ. :: ಸ್ಪಧೆ೯ಗಳ ವಿವರಗಳು :: ಛದ್ಮವೇಷ ಸ್ಪರ್ಧೆ :: 1 ರಿಂದ 3 ವರ್ಷದ ಮಕ್ಕಳಿಗೆ ಮತ್ತು 4 ರಿಂದ 7 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಭಾಗದಲ್ಲಿ. ಹೆಸರು ನೋಂದಣಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ : 9902651146 – ಬಿ. ಸಿ. ಶಾಂತಿ ಅಚ್ಚಯ್ಯ., 7022884803 – ಕಡ್ಲೇರ ತುಳಸಿ ಮೋಹನ್. :: ಸಮೂಹ ನೃತ್ಯ :: 8 ರಿಂದ 12 ವರ್ಷದ ಮಕ್ಕಳಿಗೆ. – ನಿಯಮಗಳು. – ತಂಡದಲ್ಲಿ ಕನಿಷ್ಠ 6 ಗರಿಷ್ಠ 10 ಮಕ್ಕಳು ಇರಬೇಕು. ಹಾಡು ಕನ್ನಡದ್ದೇ ಆಗಿರಬೇಕು. ಸಮಯ 4 ನಿಮಿಷ. ಹೆಸರು ನೋಂದಣಿಗಾಗಿ ಸಂಪರ್ಕಿಸಿ,…
ಮಡಿಕೇರಿ ಅ.15 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಗದಲ್ಲಿ ನಡೆದ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಕೈಜೋಡಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ರಸ್ತೆಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಮಾತನಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಅಭಿಯಾನದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ.ಪಿ.ನಾಗರಾಜ್, ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಡಾ.ಶೈಲಶ್ರೀ ಕೆ ಹಾಗೂ ಅಲೋಕ್ ಬಿ.ಜೈ, ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕರು ಹಾಗೂ 70ಕ್ಕೂ ಹೆಚ್ಚು ಸ್ವಯಂಸೇವಕರು ಪಾಲ್ಗೊಂಡಿದ್ದರು.
ಮಡಿಕೇರಿ ಅ.15 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನದ ಅಂಗವಾಗಿ ಮಡಿಕೇರಿ ವಿಪತ್ತು ನಿರ್ವಾಹಣ ಘಟಕದ ಶೌರ್ಯ ತಂಡದಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಮಡಿಕೇರಿ ಭಗವತಿ ನಗರದ ಅಂಗನವಾಡಿ ಕೇಂದ್ರದ ಸುತ್ತ ಬೆಳೆದಿದ್ದ ಗಿಡ ಗಂಟಿಗಳನ್ನು ತಂಡದ ಪ್ರಮುಖರು ಹಾಗೂ ಪದಾಧಿಕಾರಿಗಳು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ತಂಡದ ಸಂಯೋಜಕಿ ಲೀಲಾ ಶೇಷಮ್ಮ, ಪ್ರೇಮಾ, ಸದಸ್ಯರಾದ ಹರಿಣಾಕ್ಷಿ, ಲತಾ ರಘು, ತಾಜುನೀಸ, ಬಾನು, ತಾರಮಣಿ, ವೀಣಾ, ಶಕ್ತಿಸಂಘದ ಇಂದಿರಾ, ಸರಸ್ವತಿ, ಲೀಲಾವತಿ ರೈ, ಅಂಗನವಾಡಿ ಶಿಕ್ಷಕಿ ಶಶಿ, ಸಹಾಯಕಿ ಮೋಹಿನಿ ಪಾಲ್ಗೊಂಡಿದ್ದರು.
ಮಡಿಕೇರಿ ಅ.15 NEWS DESK : ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆರ್ ಆರ್ ಸಿ ಘಟಕದ ವತಿಯಿಂದ ಮಡಿಕೇರಿಯಲ್ಲಿ ಹೆಚ್ಐವಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಚ್ಐವಿ ಏಡ್ಸ್ ಹರಡುವಿಕೆ, ಅದರ ಪರೀಕ್ಷೆ ಮತ್ತು ಚಿಕಿತ್ಸೆ ಸೇವೆಗಳು ಹಾಗೂ ಸರ್ಕಾರವು ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ ಮಡಿಕೇರಿಯ ಆಪ್ತ ಸಮಾಲೋಚಕಿ ಅನಿತಾ ಕುಮಾರಿ, ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ.ಕೆ.ಶೈಲಶ್ರೀ, ಅಲೋಕ್ ಬಿ.ಜೈ , ವಿದ್ಯಾರ್ಥಿ ನಾಯಕರು ಹಾಗೂ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರು ಬಿತ್ತಿ ಪತ್ರಗಳು ಹಾಗೂ ಪೋಸ್ಟರ್ ಗಳೊಂದಿಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡರು.
ನಾಪೋಕ್ಲು ಅ.15 NEWS DESK : ತಲಕಾವೇರಿ ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಯಾವುದೇ ವಿಘ್ನ ಬಾರದಿರಲಿ ಎಂದು ಪ್ರಾರ್ಥಿಸಿ, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನಂದಾ ದೀಪವನ್ನು ಉರಿಸಿ ಚಾಲನೆ ನೀಡಲಾಯಿತು. ಸೆ.26 ರಿಂದ ಆರಂಭಗೊಂಡ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಜ್ಞಾ ಮುಹೂರ್ತ, ಪತ್ತಾಯಕ್ಕೆ ಅಕ್ಕಿ ಹಾಕುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು. ಮಂಗಳವಾರ ಅಕ್ಷಯಪಾತ್ರೆಗೆ ಅಕ್ಕಿ ಹಾಕುವ ಕಾರ್ಯಕ್ರಮ ಜರುಗಿತು. ಅರ್ಚಕ ರವಿ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ, ಬಳಿಕ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಹಾಗೂ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ನಂದಾದೀಪವನ್ನು ಹಚ್ಚಿಸಿದರು. ಬೆಳಿಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ ಅಕ್ಷಯ ಪಾತ್ರೆಗೆ ಅಕ್ಕಿಯನ್ನು ಸುರಿದು ಚಾಲನೆ ನೀಡಿದರು. ಇಂದಿನಿಂದ ಒಂದು ತಿಂಗಳ ಕಾಲ ಕಿರು ಸಂಕ್ರಮಣದವರೆಗೆ ನಂದಾದೀಪ ತುಪ್ಪದಿಂದ ಉರಿಯಲಿದೆ. ತುಲಾ ಮಾಸದಲ್ಲಿ ಜಾತ್ರೆಗೆ ಯಾವುದೇ ವಿಘ್ನ ಬಾರದಿರಲಿ ಎಂಬ ನಂಬಿಕೆಯಿಂದ ನಂದಾ ದೀಪವನ್ನು ಉರಿಸಲಾಗುತ್ತಿದೆ.…
ಮಡಿಕೇರಿ ಅ.15 NEWS DESK : ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ. ಮಾಂದಲಪಟ್ಟಿ ಜೀಪು ಚಾಲಕರ ಸಂಘವು ಈ ಅಭಿಯಾನಕ್ಕೆ ಕೈಜೋಡಿಸಿದೆ. ಸುಮಾರು 25 ಮಂದಿ ನಾಲ್ಕೈದು ತಂಡಗಳಾಗಿ ಶ್ರಮಾದಾನದಲ್ಲಿ ತೊಡಗಿದ್ದು, ನಂದಿಮೊಟ್ಟೆಯಿಂದ ಮಾಂದಲಪಟ್ಟಿವರೆಗೆ 18 ಕಿ.ಮೀ ರಸ್ತೆ ಬದಿಯಲ್ಲಿನ ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಪ್ರವಾಸಿಗರು ಹಾಗೂ ಸಾರ್ವಜನಿಕರು ರಸ್ತೆ ಬದಿ ಕಸ ಎಸೆಯದೆ ಸ್ವಚ್ಛತೆ ಕಾಪಾಡುವಂತೆ ಮಾಂದಲಪಟ್ಟಿ ಜೀಪು ಚಾಲಕರ ಸಂಘದ ಖಜಾಂಚಿ ಮೊಣ್ಣಯ್ಯ ಮನವಿ ಮಾಡಿದ್ದಾರೆ. ಮಾಂದಲಪಟ್ಟಿಗೆ ತೆರಳುವ ಪ್ರವಾಸಿಗರು ಅಲ್ಲಿ ಕಸ ಹಾಕದಂತೆ ಜೀಪು ಚಾಲಕರು ಎಚ್ಚರ ವಹಿಸಬೇಕೆಂದು ಅವರು ಹೇಳಿದರು. ಈ ಸಂದರ್ಭ ಸಂಘದ ಪ್ರಮುಖರಾದ ಶರಣು, ಪುಷ್ಪರಾಜ್, ರವಿ, ಡೇವಿಡ್ರಾಜ್, ದರ್ಶನ್, ಪಾಂಡಿರ ರವಿ, ಪಾಂಡಿರ ಚೇತು, ಗಜೇಂದ್ರ, ನಾರಾಯಣ, ಮನು, ಗಣೇಶ್, ರಾಜೇಶ್, ಮುತ್ತಣ್ಣ ಸೇರಿದಂತೆ ಮತ್ತಿತರರು ಇದ್ದರು.
ಮಡಿಕೇರಿ ಅ.15 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಆರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗಹಿಸಿ ಕರ್ನಾಟಕ ಆರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘದ ನೇತೃತ್ವದಲ್ಲಿ ಪೊನ್ನಂಪೇಟೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ, ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡ ವಿದ್ಯಾರ್ಥಿಗಳು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೊನ್ನಂಪೇಟೆಯಲ್ಲಿ ಜಾಥಾ ಹೊರಡಿಸಿ ಘೋಷಣೆಗಳನ್ನು ಕೂಗಿ, ಮಾನವ ಸರಪಳಿ ನಿರ್ಮಿಸಿ ಹಾಗೂ ಬೀದಿ ನಾಟಕದ ಮೂಲಕ ಅರಣ್ಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಹಶೀಲ್ದಾರ್ ಕಚೇರಿಗೆ ತೆರಳಿ ಬೇಡಿಕೆಗಳ ಮನವಿಯನ್ನು ಸಲ್ಲಸಿದರು. ಎರಡನೇ ದಿನ ತರಗತಿ ಬಹಿಷ್ಕರಿಸಿ ಕಾಲೇಜು ಮುಂದೆ ಶಾಂತಿಯುತ ಪ್ರತಿಭಟನೆ ನಡೆಸಿದರು. ಮೂರನೇ ದಿನ ಕಾಲೇಜಿನ ಮೈದಾನದಲ್ಲಿ ಅಣುಕು ಶವಯಾತ್ರೆ ಮೂಲಕ ಸರ್ಕಾರದ ನೀತಿ ಖಂಡಿಸಿ, ಅಸಮಾಧಾನ ವ್ಯಕ್ತಪಡಿಸಿದರು. ನಾಲ್ಕನೇ ದಿನ …






