ಲೇಖಕ: admin

ಮಡಿಕೇರಿ ಅ.15 NEWSDESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.  2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ.  :: ಕಳುಹಿಸಬೇಕಾದ ವಿಳಾಸ ::  ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 30.10.2025 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.…

Read More

ಚೆಟ್ಟಳ್ಳಿ ಅ.15 NEWS DESK : ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ ಚೆಟ್ಟಳ್ಳಿ ಶ್ರೀಮಂಗಲ ಶ್ರೀಭಗವತಿ ದೇವಾಲಯದಲ್ಲಿ ಸಂಕ್ರಮಣ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ವಿಘ್ನೇಶ್ವರ, ಕ್ಷೇತ್ರಪಾಲಕ, ನಾಗದೇವರಿಗೆ ಅರ್ಚಕರು ಪೂಜೆ ಸಲ್ಲಿಸಿ ಶ್ರೀ ಭಗವತಿ ದೇವರಿಗೆ ವಿಶೇಷ ಸಂಕ್ರಮಣ ಧಾರೆ ಪೂಜೆಯನ್ನು ಸಲ್ಲಿಸಿದರು. ಹಿರಿಯರಾದ ನಿವೃತ್ತ ಕ್ಯಾಪ್ಟನ್ ಮುಳ್ಳಂಡ ಪ್ರಭ ತಿಮ್ಮಯ್ಯ ಮಾತನಾಡಿ, ಹಿಂದಿನ ನಡೆದು ಬಂದ ಸಂಪ್ರದಾಯದಂತೆ ಕಾವೇರಿ ಸಂಕ್ರಮಣಕ್ಕೆ ಮುಂಚಿತವಾಗಿ ದೇವಾಲಯದಲ್ಲಿ ಸಂಕ್ರಮಣ ಪೂಜೆಯನ್ನು ನಡೆಸಿಕೊಂಡು ಬರುತ್ತಿದ್ದು ಊರಿಗೆ ಒಳಿತನ್ನು ಮಾಡಲೆಂದು ಬೇಡಿಕೊಂಡರು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.

Read More

ವಿರಾಜಪೇಟೆ ಅ.16 NEWS DESK : ವಿರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘದ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಇತ್ತಿಚೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡು ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಅರಮೇರಿ ಕಳಂಚೇರಿ ಮಠದ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು, ದೇಶ ರಕ್ಷಿಸುವ ಧೀರ ಯೋಧರು ಎಂದರೆ ನೆನಪಿಗೆ ಬರುವ ಜಿಲ್ಲೆಯಾಗಿರುವ ಕೊಡಗು, ದೇಶಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಯೋಧರನ್ನು ನೀಡಿದೆ. ಕೊಡಗು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರಂತೆ ಮಹಾನ್ ಯೋಧರನ್ನು ಕೊಡುಗೆಯಾಗಿ ನೀಡಿದ ವೀರರ ಜಿಲ್ಲೆ. ಕಳೆದ ದಶಕದವರೆಗೂ ಕೊಡಗಿನಲ್ಲಿ ಸೈನ್ಯಕ್ಕೆ ಮಕ್ಕಳನ್ನು ಕಳುಹಿಸುವುದೆಂದರೆ ಅದೊಂದು ಪ್ರತಿಷ್ಠೆ, ಹೆಮ್ಮೆಯಾಗಿತ್ತು. ಹೀಗಾಗಿ ಕೊಡಗಿನ ಪ್ರತಿ ಮನೆಯ ಒಬ್ಬರಾದರೂ ಸೇನೆಯಲ್ಲಿ ದೇಶ ರಕ್ಷಣೆಯ ಕರ್ತವ್ಯದಲ್ಲಿದ್ದವರು ಕಂಡುಬರುತ್ತಿದ್ದರು. ಕೊಡಗಿನವರ ಮನೆಗಳಲ್ಲಿ ದೇಶ ರಕ್ಷಣೆ ಬಗ್ಗೆ ಒಂದಿಲ್ಲೊಂದು ವೀರತೆಯ ಕಥೆಗಳಿರುತ್ತಿದ್ದವು. ಇಂತಹ ಒಂದು ಹೆಮ್ಮೆಯ ಜಿಲ್ಲೆ ನಮ್ಮ ಕೊಡಗು ಎಂದರೆ ತಪ್ಪಾಗಲಾರದು. ಯುವಜನತೆ ಹೆಚ್ಚು ಸೈನ್ಯಕ್ಕೆ ದೇಶ ರಕ್ಷಣೆಗೆ…

Read More

ವಿರಾಜಪೇಟೆ ಅ.15 NEWS DESK : ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚೆನ್ನೈನ ಸೀತಾಲಕ್ಷ್ಮೀ ಮಧುರವೋಯಲ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಬ್ಯಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಾಂಪಿಯನ್ ಆಗಿದ್ದಾರೆ. ವಿದ್ಯಾರ್ಥಿಗಳಾದ 7ನೇ ತರಗತಿಯ ಚರಣ್, ಯದುನಂದನ್ ಮತ್ತು ಚಿರಂತ್ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಚಿರಂತ್ ಚಾಂಪಿಯನ್ ಆಗಿ, ಚರಣ್ ಹಾಗೂ ಯದುನಂದನ್ ಟಾಪರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಎನ್.ಸಿ. ಚಿರಂತ್ ವಿರಾಜಪೇಟೆಯ ಗಾಂಧಿನಗರದ ಎನ್.ಜಿ.ಚಂದ್ರಶೇಖರ್ ಹಾಗೂ ಹೇಮಾವತಿ ಅವರ ಪುತ್ರ. ಬಿ.ಸಿ.ಚರಣ್ ಬಿಟ್ಟಂಗಾಲದ ಬಲ್ಲಡಿಚಂಡ ಕಿರಣ್ ಹಾಗೂ ಸುಮಿತ್ರ ಅವರ ಪುತ್ರ. ಪಿ.ಎಸ್.ಯದುನಂದನ್ ಕೊಮ್ಮೆತೋಡು ಗ್ರಾಮದ ಶಾಜಿ ಮತ್ತು ಸೌಮ್ಯ ದಂಪತಿಯ ಪುತ್ರ.

Read More

ಕುಶಾಲನಗರ ಅ.15 NEWS DESK :  ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕರ ತಂಡ ಕಬಡ್ಡಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಪಿ.ಚಂದ್ರಕಲ, ಪ್ರಾಂಶುಪಾಲರಾದ ಬಿ.ಎಸ್.ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರಾದ ಡಿ.ಕೆ.ಸುರೇಶ್ ಹಾಗೂ ಉಪನ್ಯಾಸಕರು ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಅ.15 NEWS DESK : ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದ ಅಂಗವಾಗಿ ಕೊಡಗಿನಾದ್ಯಂತ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಅದರಂತೆ ಚೆಟ್ಟಳ್ಳಿಯಲ್ಲಿ ಮಹಿಳೆಯರ ಅವರ್ ಕ್ಲಬ್, ಸ್ಪೋಡ್ಸ್ ಕ್ಲಬ್, ವಿನಾಯಕ ರಿಕ್ರಿಏಷನ್ ಕ್ಲಬ್ ಹಾಗೂ ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಸ್ಪಚ್ಚತಾ ಕಾರ್ಯ ನಡೆಸಲಾಯಿತು. ರಸ್ತೆಯ ಎರಡು ಬದಿಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.

Read More

ಮಡಿಕೇರಿ NEWS DESK  ಅ.14 : ರಾಜ್ಯ ಸರಕಾರ ನಡೆಸಿದ ಜಾತಿ ಜನಗಣತಿಯ ಸಂದರ್ಭ ಕೊಡವರು ಮೂರೂ ಕಾಲಂಗಳಲ್ಲಿ ‘ಕೊಡವ’ ಎಂದು ನಮೂದಿಸುವ ಮೂಲಕ ಉತ್ಸಾಹ ಮೆರೆದಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯಲ್ಲೂ ಕೊಡವರಿಂದ ಇದೇ ಉತ್ಸಾಹ ಮುಂದುವರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜನಗಣತಿ ಸಂದರ್ಭ ‘ಕೊಡವ’ ಎಂದು ನಮೂದಿಸುವಂತೆ ಸಿಎನ್‌ಸಿ ಕರೆ ನೀಡಿತ್ತು. ಈ ಕರೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ‘ಕೊಡವ’ ಎಂದೇ ಗುರುತಿಸಿಕೊಂಡ ಸರ್ವ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯ ಸಂದರ್ಭವೂ ಕೊಡವ ಸಮುದಾಯ ಜಾಗೃತಗೊಂಡು ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಿ ‘ಕೊಡವ’ ಎಂದು ದಾಖಲಿಸುವ ಮೂಲಕ ಒಗ್ಗಟ್ಟನ್ನು ತೋರ್ಪಡಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರಸ್ತುತ ಎರವಲು ಪಡೆದ ಸಂಸ್ಕೃತಿಯನ್ನು ತ್ಯಜಿಸಬೇಕು ಅಥವಾ ಆಮದು ಮಾಡಿಕೊಂಡ ದೇವತೆಗಳನ್ನು ಬಿಡಬೇಕು ಎಂದು ಸಿಎನ್‌ಸಿ ಕರೆ ನೀಡುತ್ತಿಲ್ಲ. ಸನಾತನ ದೇವಾಲಯಗಳು,…

Read More

ಮಡಿಕೇರಿ ಅ.14 NEWS DESK : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಸ್ಕೃತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 13 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. (ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ 08276-200023 ಅಥವಾ 08276-282281 ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು 4 ಹಂತಗಳಿದ್ದು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ…

Read More

ಗೋಣಿಕೊಪ್ಪ ಅ.14 NEWS DESK : ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರತಿನಿಧಿ ಪತ್ರಿಕೆ ಜಿಲ್ಲಾ ವರದಿಗಾರ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧ ಪುನರಾಯ್ಕೆಯಾದರು.  ಕೊಡಗು ಹಿಂದು ಮಲಯಾಳಿ ಸಮಾಜ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್, ಖಜಾಂಚಿಯಾಗಿ ವಿ. ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಯಾಗಿ ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ. ಕೆ. ಪ್ರತಾಪ್, ಸಹಾಯಕ ಚುನಾವಣಾಧಿಕಾರಿಯಾಗಿ ಸಿಇಒ, ಬಿ. ಇ. ಕಿರಣ್ ಕಾರ್ಯನಿರ್ವಹಿಸಿದರು. ವೀಕ್ಷಕರಾಗಿ ಸುನಿಲ್ ಪೊನ್ನೇಟಿ ಕಾರ್ಯನಿರ್ವಹಿಸಿದರು. ಚುನಾಯಿತರಿಗೆ ಪ್ರಮಾಣ ಪತ್ರ ವಿತರಿಸಿ ಶುಭಕೋರಲಾಯಿತು.

Read More

ಮಡಿಕೇರಿ ಅ.14 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲ್ಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಎಲ್‍ಒಗಳು ಜೊತೆ ಚುನಾವಣೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್‍ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹ್ವತದ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಿಎಲ್‍ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು…

Read More