ಮಡಿಕೇರಿ ಅ.14 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಇತ್ಯಾದಿ ಸಂಸ್ಥೆಗಳೊಂದಿಗೆ ಅ.15ರಂದು ನಡೆಯುವ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಫೀ.ಮಾ.ಕಾರ್ಯಪ್ಪ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು, ಎನ್ಸಿಸಿ, ಎನ್ಎಸ್ಎಸ್, ಸ್ಫೋರ್ಟ್ಸ್ ಮತ್ತು ಇಸಿ/ಸಿಸಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಅ.14 NEWS DESK : ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಹೋಂಸ್ಟೇ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.15ರಂದು ನಡೆಯುವ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಕೊಡಗು ಕಲಾವಿದರ ಸಂಘ ಪಾಲ್ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ತಿಳಿಸಿದ್ದಾರೆ. ಕೊಡಗು ಕಲಾವಿದರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಬುಧವಾರ ನಡೆಯುವ ಅಭಿಯಾನದಲ್ಲಿ ತಾವಿರುವ ಪ್ರದೇಶದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಪ್ರಕೃತಿ ಸೌಂದರ್ಯದ ಕಾವೇರಿನಾಡು ಕೊಡಗು ದಕ್ಷಿಣ ಕಾಶ್ಮೀರವೆಂದೇ ಖ್ಯಾತಿ ಗಳಿಸಿದೆ. ಇಲ್ಲಿನ ಸುಂದರ ಪರಿಸರ ದೇಶ ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಈ ಹಸಿರ ಪ್ರಕೃತಿಯ ಸೊಬಗನ್ನು ಉಳಿಸಿಕೊಳ್ಳಲು ಮತ್ತು ಸಂರಕ್ಷಿಸಲು ಸ್ವಚ್ಛತೆಗೆ ಆದ್ಯತೆ ನೀಡುವ ಅಗತ್ಯವಿದೆ. ಸ್ವಚ್ಛತೆಯಿಂದ ಮಾತ್ರ ಕಾವೇರಿಯ ತವರೂರು ಕೊಡಗು ಸುಂದರವಾಗಿರಲು ಸಾಧ್ಯ. ಆದ್ದರಿಂದ ಸ್ವಚ್ಛತಾ…
ಬೆಂಗಳೂರು ಅ.14 NEWS DESK : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು, ಎಲ್ಲರ ನೆಮ್ಮದಿಯ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ “ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ, ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು…
ಮಡಿಕೇರಿ ಅ.14 NEWS DESK : ಸಾಹಿತ್ಯದ ಮೂಲಕ ಎಲ್ಲೆಯನ್ನು ಮೀರಬಹುದು ಮತ್ತು ವಿಶ್ವದ ಅನೇಕ ಸಾಹಿತ್ಯಗಳ ಪರಿಚಯ ನಮಗಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಅಭಿರುಚಿಯನ್ನು ರೂಡಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಂಗ್ಲಮಾಧ್ಯಮ ವಿಭಾಗದ ವತಿಯಿಂದ ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ಆಂಗ್ಲ ವಿಭಾಗದ “ಜಾಯ್ಸ್” ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅವರು, ಆಂಗ್ಲ ಐಚ್ಚಿಕ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಹೊಂದಿರಬೇಕು ಮತ್ತು ವಿವಿಧ ಸಾಹಿತ್ಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿಭಾಗದ ಮುಖ್ಯಸ್ಥರಾದ ಪ್ರೊ. ನಯನಾ ಕಶ್ಯಪ್ ಮತ್ತು ಸಹ ಪ್ರಾಧ್ಯಾಪಕರಾದ ಕೆ.ಎಂ.ಪೂಣಚ್ಚ, ಹೆಚ್.ಆರ್.ರಮೇಶ್, ಅಲೋಕ್ ಬಿ ಜೈ ಹಾಗೂ ಉಪನ್ಯಾಸಕರಾದ ಎಂ.ಪಿ.ಡೀನಾ, ಕನ್ನಿಕಾ ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು,…
ಮಡಿಕೇರಿ ಅ.14 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಇಂದು ಪೊನ್ನಂಪೇಟೆಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಮೀಕ್ಷೆ ನಡೆಯುತ್ತಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಮಾಧ್ಯಮ ಸಹಾಯಕರಾದ ಪೆಮ್ಮಂಡ ವಿನಿಲ್ ಸೋಮಣ್ಣ ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ದಾಖಲೆಗಳನ್ನು ಒದಗಿಸಿದರು.
ಮಡಿಕೇರಿ ಅ.14 NEWS DESK : ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸಹ ಕ್ರೀಡೆ, ಸೇನೆ, ಜ್ಞಾನ, ಬುದ್ಧಿವಂತಿಗೆ ಹೀಗೆ ಹಲವಾರು ವಿಷಯಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಮುಂಚೂಣಿಯಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕಾವೇರಿ ಕೊಡವಕೇರಿ ವತಿಯಿಂದ ನಡೆದ 4ನೇ ವರ್ಷದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೊಡವ ಜನಾಂಗದವರ ಸಂಸ್ಕೃತಿ ವಿಭಿನ್ನವಾಗಿದ್ದು, ನಮ್ಮ ಆಚಾರ ವಿಚಾರಗಳು ವಿಶಿಷ್ಟ ರೀತಿಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಈ ಇತಿಹಾಸ, ಪರಂಪರೆಯನ್ನು ಪೋಷಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂತಹ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಕೊಡವ ಜನಾಂಗದವರ ಹಲವಾರು ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದು, ಕೋವಿ ವಿಷಯದಲ್ಲಿ ಪೂರಕವಾಗಿ ಆದೇಶ ಬರುವಂತೆ ನೋಡಿಕೊಂಡಿದ್ದೇನೆ. ಯುವ ಜನತೆಗೆ ಅನುಕೂಲವಾಗಲಿ ಎಂದು ಜಿಲ್ಲೆ ಹಾಗೂ ವಿರಾಜಪೇಟೆ ಕ್ಷೇತ್ರದಾದ್ಯಂತ ಕ್ರೀಡೆಯ ಅಭಿವೃದ್ಧಿಗೆ ಹಲವಾರು…
ಮಡಿಕೇರಿ ಅ.14 NEWS DESK : ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳವು ಮಾಡಿರುವ ಘಟನೆ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ನಿಟ್ಟೂರು ಕಾರ್ಮಾಡು ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿ ಕಡಿದು ಕಳ್ಳತನ ಮಾಡಿದ್ದಾರೆ. ಗ್ರಾಮ ಸಭೆಯಲ್ಲಿ ವಸತಿನಿಲಯದ ಕ್ಯಾಮರಾವನ್ನು ಮರ ಕಾಣುವ ಹಾಗೆ ತಿರುಗಿಸಲು ಗ್ರಾಮಸ್ಥರು ಪ್ರಾಸ್ತಪಿಸಿದ್ದರು. ಈ ವಿಷಯ ತಿಳಿದ ಚೋರರು ತಾರಾತೂರಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವಾರವಷ್ಟೇ ನಿಟ್ಟೂರು ಮುಖ್ಯ ರಸ್ತೆಯ ಬದಿಯ ಮನೆಗಳಲ್ಲಿ ಕಳ್ಳತನ ನಡೆದಿತ್ತು. ಕಳ್ಳರ ಬಂಧನಕ್ಕೆ ಕ್ರಮ ಕೖಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಅ.14 : ಉಪ ನಿರ್ದೇಶಕರು(ಖಾಗ್ರಾ), ಗ್ರಾಮೀಣ ಕೈಗಾರಿಕೆ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ಕಚೇರಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ವಿದ್ಯುತ್ ಚಾಲಿತ ಟೈಲರಿಂಗ್ ಮತ್ತು ಎಲೆಕ್ಟ್ರೀಷಿಯನ್ ಕಸುಬಿನ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಆನ್ಲೈನ್ ವೆಬ್ಸೈಟ್ https://kodagu.nic.in/en/application-for-distribution-of-free-motorised-toolkits-for-rural-tailor-and-electrician-artisans-2025-26 ಮೂಲಕ ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು (ಗ್ರಾ.ಕೈ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ಅವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-228113 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು(ಖಾಗ್ರಾ) ಅವರು ತಿಳಿಸಿದ್ದಾರೆ.
ಮಡಿಕೇರಿ ಅ.14 NEWS DESK : ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ “ಆನರ್ ಆಫ್ ಅಶೋಕ ಪ್ರಶಸ್ತಿ 2025” ಲಭಿಸಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಮಾಂಚಲ್ ಪ್ರದೇಶ ಮಾಜಿ ಕ್ಯಾಬಿನೆಟ್ ಸಚಿವರು, ಮಾಜಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಭಾರತೀಯ ಸೇನಾ ಸಿಬ್ಬಂದಿ, ಮಾಜಿ ಉಪಾಧ್ಯಕ್ಷ ಲೆಫ್ಟಿನೆಂಟ್ ಜನರಲ್ ಎಸ್.ಕೆ.ಸೈನಿ, AVSM VM VSM ಏರ್ ಮಾರ್ಷಲ್ ಜಿ.ಎಸ್.ಬೇಡಿ, ಲೆಫ್ಟಿನೆಂಟ್ ಜನರಲ್ ಕರಣ್ಬೀರ್ ಸಿಂಗ್ ಬ್ರಾರ್, ಕಾರ್ಯತಂತ್ರದ ಸಲಹೆಗಾರ IITM ಪ್ರವರ್ತಕ್ ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಜೇಂದರ್ ಜೈನ್ ವಹಿಸಿದ್ದರು. ಚಾರ್ಲ್ಸ್ ವಾಲ್ಟರ್ಸ್ ಕೌನ್ಸಿಲ್ ಫಾರ್ ಇನ್ನೋವೇಶನ್ & ರಿಸರ್ಚ್ ಸಂಚಾಲಕರು ಮತ್ತು ಅಶೋಕ ಪ್ರಶಸ್ತಿಯ ಸ್ಥಾಪಕ ನಿರ್ದೇಶಕಕರಾದ ಅಭಿಷೇಕ್ ಪಾಂಡೆ ಅವರು ಕಾರ್ಯಕ್ರಮ…
ನಾಪೋಕ್ಲು ಅ.14 NEWS DESK : ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ಮಹಿಳಾ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು. ಹಳೆ ತಾಲೂಕಿನ ಭಗವತಿ ಮಹಿಳಾ ಸಮಾಜದ ವತಿಯಿಂದ ಭಗವತಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮಹಿಳಾ ಸಮಾಜದ ನಿವೇಶನದ ಜೊತೆಗೆ ಕಟ್ಟಡದ ಅವಶ್ಯಕತೆ ಇದೆ. ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಟ್ಟಡದ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ದಾನಿಗಳು ಮಹಿಳಾ ಸಮಾಜಕ್ಕೆ ಮ್ಯಾಟ್, ಮೈಕ್ ಸೆಟ್ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡಿದು,್ದ ಸಮಾಜ ಅಭಿವೃದ್ಧಿ ಸಾಧಿಸುತ್ತಿದೆ ಎಂದರು. ಮುಂದಿನ ಕೆಲವು ಕಾರ್ಯಕ್ರಮಗಳನ್ನು ಕೊಡವ ಮಕ್ಕಳ ಕೂಟದ ಸಹಯೋಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು. ಈ ಸಂದರ್ಭ ಜಾನಪದ ತಂಜ್ಞೆ ಪ್ರಶಸ್ತಿ ಪಡೆದಿರುವ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಇವರನ್ನು ಹಾಗೂ ರಾಜ್ಯ ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ಪಡೆದಿರುವ ಹಳೆತಾಲುಕು…






