ಲೇಖಕ: admin

ಮಡಿಕೇರಿ ಅ.14 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು. ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್, 18 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ…

Read More

ಕುಶಾಲನಗರ ಅ.13 : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ಎನ್ ಚಂದ್ರಮೋಹನ್ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ ಜೆ ಶಿವರಾಜ್ ಆಯ್ಕೆಗೊಂಡಿದ್ದಾರೆ. 2025-28 ರ ಸಾಲಿನ ಆಡಳಿತ ಮಂಡಳಿಯ ಚುನಾವಣೆ ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಮಹಮ್ಮದ್ ಮುಸ್ತಫಾ, ಕಾರ್ಯದರ್ಶಿಯಾಗಿ ಕೆ ಕೆ ನಾಗರಾಜ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡು ನಿರ್ದೇಶಕ ಸ್ಥಾನಗಳಿಗೆ ಮೂರು ನಾಮಪತ್ರ ಸಲ್ಲಿಕೆಯಾಗಿದ್ದು, ಜಯಪ್ರಕಾಶ್ ನಾಮಪತ್ರ ಹಿಂತೆಗೆದುಕೊಂಡ ಕಾರಣ ನಿರ್ದೇಶಕರಾಗಿ ಹೆಚ್ ವಿ ವಿನೋದ್ ಮತ್ತು ರಘು ಹೆಬ್ಬಾಲೆ ಅವರು ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾ ಅಧಿಕಾರಿಯಾಗಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಗ್ರಂಥಪಾಲಕರಾದ ಎಸ್ ನಂದೀಶ್ ಮತ್ತು ಚುನಾವಣಾ ವೀಕ್ಷಕರಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಪಾರ್ಥ ಚಿಣ್ಣಪ್ಪ ಕಾರ್ಯನಿರ್ವಹಿಸಿದರು.

Read More

ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ವಾಸವಿರುವ ಭೂರಹಿತ ಪರಿಶಿಷ್ಟ ಕುಟುಂಬಗಳಿಗೆ ‘ಸೂರು’ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಅವರು, ಈಗಾಗಲೇ ಪರಿಶಿಷ್ಟರಿಗೆ ವಿತರಿಸಲೆಂದು ಕಾಯ್ದಿರಿಸಿದ ಸರಕಾರಿ ಜಾಗಗಳಲ್ಲಿ ಟೆಂಟ್‍ಗಳನ್ನು ನಿರ್ಮಿಸಿಕೊಂಡು ಸಂಕಷ್ಟದ ಬದುಕು ಸವೆಸುತ್ತಿರುವ ಪರಿಶಿಷ್ಟ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಬದಲಾಗಿ ಅವರನ್ನು ಸ್ಥಳದಿಂದ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಸತಿ ನಿವೇಶನಗಳಿಲ್ಲದ 6 ಸಾವಿರಕ್ಕೂ ಹೆಚ್ಚಿನ ಪರಿಶಿಷ್ಟ ಮಂದಿ ಇದ್ದು, ಸದರಿ ಫಲಾನುಭವಿಗಳಿಗೆ ವಿತರಿಸಲು ಲಭ್ಯವಿರುವ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸಿ ವಿತರಿಸಬೇಕು. ಈ ರೀತಿಯ ಕ್ರಮ ಕೈಗೊಳ್ಳದೆ ಅಲ್ಲಿ ಟೆಂಟ್ ನಿರ್ಮಿಸಿಕೊಂಡು ಬದುಕುತ್ತಿರುವ ಬಡವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಿವೇಶನ ರಹಿತರಿಗೆ ಅನ್ಯಾಯವಾಗುತ್ತಿರುವುದರಿಂದ ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದ…

Read More

ಮಡಿಕೇರಿ ಅ.13 NEWS DESK : ಹುದಿಕೇರಿ ಮಾಜಿ ಸೈನಿಕರ ಸಂಘದಿಂದ ದಕ್ಷಿಣ ಕೊಡಗಿನ ಅಂಜಿಗೇರಿ ನಾಡ್‍ನ ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಮರ್ ಜವಾನ್ ಸ್ಮಾರಕ’ ಮತ್ತು ಧ್ವಜ ಸ್ತಂಭದ ಉದ್ಘಾಟನಾ ಸಮಾರಂಭ ಅ.27 ರಂದು ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಹುದಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಲ್ಯಮೀದೇರಿರ ಎ. ಪ್ರಕಾಶ್, ಅಂದು ಬೆಳಗ್ಗೆ 10.30 ಗಂಟೆಗೆ ಸ್ಮಾರಕ ಮತ್ತು ಧ್ವಜ ಸ್ತಂಭವನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು, ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ ಎಂದರು. ಹುದಿಕೇರಿ ಕೊಡವ ಸಮಾಜದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎ.ಎಸ್.ಪೊನ್ನಣ್ಣ, ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ ಕೆ., ಪೊನ್ನಂಪೇಟೆ ತಹಸೀಲ್ದಾರ್ ಕೆ.ಎಸ್.ಮೋಹನ್ ಕುಮಾರ್, ಕರ್ನಲ್ ಆರ್.ಮುಕುಂದನ್, ಹುದಿಕೇರಿ ಪಂಚಾಯ್ತಿ…

Read More

ಮಡಿಕೇರಿ ಅ.13 NEWS DESK : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಅ.17 ರಂದು ನಡೆಯಲಿದೆ. ಈ ಉದ್ಯೋಗಮೇಳಕ್ಕೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ವಲಯಗಳ 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಗೆ ಭೇಟಿ ನೀಡಿ ನೋಂದಣಿಯಾಗಲು ಕೋರಿದೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಮೇಳದಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಅ.13 NEWSDESK : ಲೋಕಸಭಾ ಚುನಾವಣೆಯ ಸಂದರ್ಭ ನಿರಂತರವಾಗಿ ಕೊಡಗು ಜಿಲ್ಲೆಗೆ ಅನ್ಯಾಯವಾಗುತ್ತಿರುವುದರಿಂದ ಕೊಡಗಿನವರಿಗೆ ರಾಜ್ಯಸಭೆಯಲ್ಲಿ ಸ್ಥಾನ ಕಲ್ಪಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ.ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಕೊಡಗು ಜಿಲ್ಲೆ ಕರ್ನಾಟಕದ ಗರ್ವವಾಗಿದ್ದು, ಶೌರ್ಯ, ಶಿಸ್ತಿನ ಜೀವನಶೈಲಿ ಮತ್ತು ದೇಶಸೇವೆಯ ಪರಂಪರೆಯಿಂದ ಪ್ರಸಿದ್ಧವಾಗಿದೆ. ಭಾರತೀಯ ಸೇನೆ, ಕ್ರೀಡಾರಂಗ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಕೊಡಗಿನ ಅನೇಕರು ತೊಡಗಿಸಿಕೊಂಡು ರಾಷ್ಟ್ರಕ್ಕೆ ಗೌರವ ತಂದುಕೊಟ್ಟಿದ್ದಾರೆ. ಈ ರೀತಿಯ ಹೆಗ್ಗಳಿಕೆಯನ್ನು ಹೊಂದಿರುವ ಕೊಡಗು ಜಿಲ್ಲೆಗೆ ಪ್ರತಿ ಲೋಕಸಭಾ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಪ್ರಮುಖ ರಾಷ್ಟ್ರೀಯ ಪಕ್ಷಗಳು ಕೊಡಗಿನ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡದೆ ಕಡೆಗಣಿಸುತ್ತಿವೆ ಎಂದು ಆರೋಪಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕೊಡಗು ಜಿಲ್ಲೆಯ ಅಭ್ಯರ್ಥಿಗಳು ಚುನಾಯಿತರಾಗಿಲ್ಲ. ಈ ಕಾರಣದಿಂದ ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ಮಟ್ಟದಲ್ಲಿ ಧ್ವನಿ ಇಲ್ಲದಂತಾಗಿದೆ ಮತ್ತು ಸ್ಪಂದನೆ ಮರೀಚಿಕೆಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಎರಡೂ…

Read More

ಮಡಿಕೇರಿ ಅ.13 NEWS DESK : ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದ್ದು, ಅ. 15 ರಂದು ಸ್ವಚ್ಚತೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ , ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ. ಜಿಲ್ಲೆಯಾದ್ಯಂತಲಿನಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಅ.15 ರಂದು ಬುಧವಾರ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ  ಬಳಿ ಬೆಳಗ್ಗೆ 8 ಗಂಟೆಗೆ ಶಾಸಕ…

Read More

ಮಡಿಕೇರಿ ಅ.13 NEWS DESK : ಕಳೆದ ಹಲವಾರು ವರ್ಷಗಳಿಂದ ಪ್ರತಿಭಾವಂತ ಬಡ ವಿದ್ಯಾರ್ಥಿನಿಯರಿಗೆ ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ದತ್ತಿ ನಿಧಿ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ಪ್ರಸಕ್ತ ಸಾಲಿನಲ್ಲಿ ನೂರಾರು ಅರ್ಜಿಗಳು ಬಂದಿದ್ದು, ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುರಸ್ಕೃತಗೊಂಡ ಅರ್ಹ ವಿದ್ಯಾರ್ಥಿನಿಯರಿಗೆ ವಿರಾಜಪೇಟೆಯ ಶಾಸಕರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿನಿಯರಿಗೆ ಮುಂದಿನ 3 ವರ್ಷದ ವಿದ್ಯಾಭ್ಯಾಸಕ್ಕೆ ತಲಾ 10,000 ದಂತೆ, ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲಿದ್ದಾರೆ ಎಂದು ತಿಳಿಸಿದರು. ಕೊಡಗಿನ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂಬ ಕಾರಣದಿಂದ, ತಂದೆ ತಾಯಿಯ ಹೆಸರಿನಲ್ಲಿ ಶೈಕ್ಷಣಿಕ ಕಳಕಳಿಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು. ಈಗಾಗಲೇ ನೂರಾರು ವಿದ್ಯಾರ್ಥಿಗಳು ಇದರ ಫಲಾನುಭವಿಗಳಾಗಿದ್ದು, ಈ ಕಾರ್ಯಕ್ರಮವು ನಿರಂತರವಾಗಿ…

Read More

ಮಡಿಕೇರಿ ಅ.13 NEWS DESK : ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂಧ್ಯರ ಸಂಘದ ವತಿಯಿಂದ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ್ ನಾರಾಯಣ ಅವರನ್ನು ಗೌರವಿಸಲಾಯಿತು. ಸಂಘದ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ವಿಶ್ವ ಕಿವುಡರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ಸಂದರ್ಭ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಹೆಚ್.ಶಂಕರ್, ಅಧ್ಯಕ್ಷ ಕೆ.ಎಸ್.ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ದೇವರಾಜ್, ಅರಣು ಇಲಾಖೆ ಸಿಸಿಎಫ್ ಹನುಮಂತಪ್ಪ, ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ನವೀನ್ ಕುಮಾರ್, ಶಿವಮೊಗ್ಗ ಮೂಕರ ಮತ್ತು ಶ್ರವಣಮಾಂಧ್ಯ ಸಂಘದ ಗೌರವಾಧ್ಯಕ್ಷ ಎಸ್.ಎಸ್.ಸಂದೇಶ್, ಹೆಲ್ಪಿಂಗ್ ಹ್ಯಾಂಡ್ಸ್‍ನ ನಂದಿನಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶ್ರವಣ ಮಾಂಧ್ಯರು ಹಾಜರಿದ್ದರು.

Read More

ಮಡಿಕೇರಿ ಅ.13 NEWS DESK : ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನದಲ್ಲಿ ಸ್ಥಳೀಯ ಯುವಕರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕುಶಾಲನಗರದ ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನ ನಿರ್ವಹಣೆ ಇಲ್ಲದೆ ಮೈದಾನದ ತುಂಬಾ ಹುಲ್ಲು ಗಿಡಗಂಟಿಗಳು ಬೆಳೆದು ಶಾಲಾ ಮಕ್ಕಳು  ಮೈದಾನದಲ್ಲಿ ಆಟವಾಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡ ಗ್ರಾಮದ ಯುವಕರು ಸುಮಾರು 3 ಏಕರೆ ಗಿಂತ ಅಧಿಕವಿರುವ ಮೈದಾನದಲ್ಲಿ ಬೆಳೆದಿದ್ದ ಹುಲ್ಲು ಮತ್ತು ಗಿಡ ಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ವೀಡ್ ಕಟರ್ ಮೂಲಕ ಸ್ವಚ್ಛಗೊಳಿಸಿದರು. ಸ್ಥಳೀಯ ಯುವಕರ  ಉತ್ತಮ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Read More