ಸುಂಟಿಕೊಪ್ಪ, NEWS DESK ಸೆ.1: ಯುವಶಕ್ತಿ ದಾರಿ ತಪ್ಪದಂತೆ ಹಿರಿಯರು ಹಾಗೂ ಸಮಾಜವು ನಿಸ್ವಾರ್ಥ ಸಂಘಟನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ಹೇಳಿದರು. ಜಾತಿ, ಧರ್ಮ ಹಾಗೂ ರಾಜಕೀಯ ರಹಿತವಾಗಿ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸುವ ಉದ್ದೇಶದಿಂದ ನೂತನವಾಗಿ ರಚನೆಯಾದ ‘ವೇವ್’ ಸಂಘಟನೆಯ ಅಧಿಕೃತ ಉದ್ಘಾಟನೆಯನ್ನು ಸುಂಟಿಕೊಪ್ಪದಲ್ಲಿ ನೆರವೇರಿಸಿ ಅವರು ಮಾತನಾಡಿದರು. ಕೊರೊನಾ ಮಹಾಮಾರಿ ಹಾಗೂ ಪ್ರಕೃತಿ ವಿಕೋಪದ ಭೂಕುಸಿತದ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು 300–400 ಕುಟುಂಬಗಳಿಗೆ ನೆರವಾದ ಕರುಣಾಮಯಿ ಯುವಕರ ತಂಡ ಇದೀಗ ‘ವೇವ್’ ಎಂಬ ಅಧಿಕೃತ ರೂಪ ಪಡೆದುಕೊಂಡಿದೆ. ಕಡಲಿನ ಅಲೆಯಂತೆ ಈ ಬಳಗದ ನಿಸ್ವಾರ್ಥ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು. ಸಂಘಟನೆಯ ಸಂಚಾಲಕರಾಗಿ ಕೆ.ಎ. ಲತೀಫ್ ಹಾಗೂ ವಕೀಲ ಫರಾಝ್ ಉಸ್ಮಾನ್ ಅವರನ್ನು ನೇಮಕಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್, ಕೋಶಾಧಿಕಾರಿ ಕೆ.ಎಸ್. ಅನಿಲ್ ಕುಮಾರ್,…
ಲೇಖಕ: admin
ಮಡಿಕೇರಿ, NEWS DESK ಸೆ.1 : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯ ಪರಿಣಾಮ ಭಾಗಮಂಡಲ ಕುಂದಚೇರಿ ಗ್ರಾಮದಲ್ಲಿ ಸಣ್ಣ ಪ್ರಮಾಣದ ಬೆಟ್ಟ ಕುಸಿತ ಸಂಭವಿಸಿದೆ. ಕುಂದಚೇರಿ ಗ್ರಾಮದ ಪೂವಲಮಣಿ ಎಂಬಲ್ಲಿ ಮಣ್ಣು ಹಾಗೂ ಸಣ್ಣ ಗಾತ್ರದ ಕಲ್ಲುಗಳು ಬೆಟ್ಟದ ಮೇಲ್ಭಾಗದಿಂದ ಕೆಳಕ್ಕೆ ಕುಸಿದು ಬಿದ್ದಿವೆ. ಬೆಟ್ಟದ ಕೆಳಭಾಗದಲ್ಲಿ ಜನವಸತಿ ಇದ್ದು ಗ್ರಾಮಸ್ಥರು ಆತಂಕಗೊAಡಿದ್ದಾರೆ. ಮಾಹಿತಿ ತಿಳಿದ ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದ ಪ್ರಸ್ತುತ ಸ್ಥಿತಿ, ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಹಾಗೂ ಸ್ಥಳದಲ್ಲಿರುವ ನೈಜ ಸ್ಥಿತಿಯ ಕುರಿತು ನಿವಾಸಿಗಳಿಂದ ಮಾಹಿತಿ ಕಲೆ ಹಾಕಿದರು. ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಟ್ಟದ ಕೆಳಭಾಗದಲ್ಲಿ ವಾಸವಾಗಿದ್ದ ಎರಡು ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮಳೆ ಮುಂದುವರೆದಲ್ಲಿ ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು…
ಸೋಮವಾರಪೇಟೆ, NEWS DESK ಸೆ.01: ಪಟ್ಟಣದ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಸೋಮವಾರ ಸಂಜೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣಕ್ಕೆ ಸರ್ಕಾರದಿಂದ ಸುಮಾರು 27 ಲಕ್ಷ ರೂ ಗಳ ಅನುದಾನ ಮಂಜೂರು ಮಾಡಲಾಗಿದೆ. ಚಾಲಕರು ಮತ್ತು ಆಟೋ ಮಾಲೀಕರ ಬಹುದಿನಗಳ ಬೇಡಿಕೆಯಾಗಿದ್ದ ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬAಧಿಸಿದ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು. ಚಾಲಕ ವೃತ್ತಿ ಸುಲಭವಾದುದಲ್ಲ. ಪ್ರತಿನಿತ್ಯ ಬಿಸಿಲು, ಮಳೆ ಎನ್ನದೆ ಸಾರ್ವಜನಿಕರಿಗೆ ಸೇವೆ ನೀಡುವ ಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಬಾಡಿಗೆ ವಾಹನಗಳು ಹಾಗೂ ಆಟೋಗಳನ್ನು ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದೆ ಚಾಲಕರು ಪರದಾಡುತ್ತಿರುವುದು ಗಮನಕ್ಕೆ ಬಂದಿದೆ. ಮಳೆಯಲ್ಲಿಯೇ ವಾಹನಗಳನ್ನು…
ಸುಂಟಿಕೊಪ್ಪ, NEWS DESK ಸೆ.1: ಮಾನವ–ವನ್ಯಜೀವಿ ಸಂಘರ್ಷದ ಕುರಿತು ಮುಂದಿನ ವಾರದಿಂದಲೇ ಸಭೆಗಳನ್ನು ನಡೆಸಿ, ಹಂತ ಹಂತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಹೇಳಿದರು. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಮಾನವ–ವನ್ಯಜೀವಿ ಸಂಘರ್ಷ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದರೂ ಆನೆ–ಮಾನವ ಸಂಘರ್ಷದಿಂದಾಗುವ ಸಾವು-ನೋವು ಮತ್ತು ದಾಳಿಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ 8 ಗ್ರಾಮ ಪಂಚಾಯಿತಿಗಳಲ್ಲಿ ಆನೆ–ಮಾನವ ಸಂಘರ್ಷದ ಸಮಸ್ಯೆ ನಿರಂತರವಾಗಿದ್ದು, ತುರ್ತು ಸಂದರ್ಭದಲ್ಲಿ ಆಸ್ಪತ್ರೆ ಅಥವಾ ಪರಿಹಾರಕ್ಕಾಗಿ ಚೆಕ್ ನೀಡುವ ಪರಿಸ್ಥಿತಿ ಎದುರಾಗುತ್ತಿದೆ ಎಂದರು. ಅರಣ್ಯ ಇಲಾಖೆಯ ವಿವಿಧ ವಲಯಗಳ ನಡುವೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಿರುವುದನ್ನು ಪ್ರಸ್ತಾಪಿಸಿದ ಅವರು, ಅರಣ್ಯ ಇಲಾಖೆ, ಜನರು ಹಾಗೂ ವನ್ಯಜೀವಿಗಳ ಸಮಸ್ಯೆಯನ್ನು ಅರಣ್ಯ ಸಚಿವರ ಮಡಿಕೇರಿ ಭೇಟಿಯ ಸಂದರ್ಭ ಗಮನಕ್ಕೆ…
ಸುಂಟಿಕೊಪ್ಪ, NEWS DESK ಸೆ.೦1 : ಸುಂಟಿಕೊಪ್ಪ ಹೋಬಳಿಯಲ್ಲಿ ಮಿತಿಮೀರಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಸುಂಟಿಕೊಪ್ಪ ಹೋಬಳಿ ರೈತಸಂಘವು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರಿಗೆ ಮನವಿ ಸಲ್ಲಿಸಿದೆ. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಮಾನವ-ವನ್ಯಜೀವಿ ಸಂಘರ್ಷ ಕುರಿತ ಸಭೆಯಲ್ಲಿ ರೈತಸಂಘದ ಅಧ್ಯಕ್ಷ ನಾಗಚೆಟ್ಟಿರ ಸ. ಪೊನ್ನಪ್ಪ ಅವರು ಮನವಿ ಸಲ್ಲಿಸಿದರು. ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಶಾಶ್ವತ ಆನೆ ತಡೆಗೋಡೆ ಹಾಗೂ ಸೌರಬೇಲಿ ನಿರ್ಮಾಣ, ಆನೆಗಳ ಸಂಚಾರ ಮಾರ್ಗಗಳ ಗುರುತಿಸುವಿಕೆ, ಬೆಳೆ ಹಾನಿಗೆ ಸಮಗ್ರ ಪರಿಹಾರ, 24×7 ಮುನ್ನೆಚ್ಚರಿಕೆ ವ್ಯವಸ್ಥೆ, ಅರಣ್ಯ ಇಲಾಖೆ–ರೈತರ ಸಮನ್ವಯ ಸಮಿತಿ ರಚನೆ ಸೇರಿದಂತೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ವಿಶೇಷ ಕಾರ್ಯಯೋಜನೆ ರೂಪಿಸಿ ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮಡಿಕೇರಿ, NEWS DESK ಸೆ.01: ಕ್ಷುಲ್ಲಕ ಜಗಳವಾಡಿದ ತಾಯಿ ಹಾಗೂ ಮಗಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಭಾಗಮಂಡಲ ಸಮೀಪದ ತಣ್ಣಿಮಾನಿ ಗ್ರಾಮದ ಕೆಂಪುರಾಶಿ ಮೊಟ್ಟೆಯಲ್ಲಿ ನಡೆದಿದೆ. ಮಂಜು ಎಂಬುವವರ ಪತ್ನಿ ಪ್ರೇಮ (36) ಹಾಗೂ ಮಗಳು ಪ್ರಿಯಾಂಕಾ (14) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ತಾಯಿ ಹಾಗೂ ಮಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಆ.31ರ ಸಂಜೆ ಜಗಳ ನಡೆದಿದೆ ಎನ್ನಲಾಗಿದೆ. ಮಗಳು ಪ್ರಿಯಾಂಕಾ ತಾನು ಕೆರೆಗೆ ಹಾರುವುದಾಗಿ ಹೇಳಿ ಮನೆಯಿಂದ ಓಡಿ ಹೋಗಿದ್ದಾಳೆ. ಮಗಳು ಕೆರೆಯತ್ತ ಹೋಗುವುದನ್ನು ಕಂಡ ತಾಯಿ ಪ್ರೇಮ ಕೂಡ ಆತಂಕಗೊಂಡು ಆಕೆಯ ಹಿಂದೆ ಓಡಿದ್ದಾರೆ. ಈ ವೇಳೆ ಪ್ರಿಯಾಂಕಾ ಕೆರೆಗೆ ಹಾರಿದ್ದು, ಮಗಳನ್ನು ರಕ್ಷಿಸುವ ಉದ್ದೇಶದಿಂದ ತಾಯಿ ಪ್ರೇಮ ಕೂಡ ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯನ್ನು ದೂರದಿಂದ ಕಂಡ ಸ್ಥಳೀಯರು ಇಬ್ಬರನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಭಾಗಮಂಡಲ ಪೊಲೀಸರು ಭೇಟಿ ನೀಡಿ, ಮಂಗಳವಾರ ಬೆಳಗ್ಗೆ ತಾಯಿ…
ಪೊನ್ನಂಪೇಟೆ, NEWS DESK ಸೆ.೦1: ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆಯು ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ವರ್ಚುವಲ್ ಮೂಲಕ ಭಾಗವಹಿಸಿ, ಕುಡಿಯುವ ನೀರು, ಸ್ವಚ್ಛತೆ, ಒಳಚರಂಡಿ, ರಸ್ತೆ, ಪುರಸಭೆ ಕಟ್ಟಡ ಕಾಮಗಾರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿ ಮತ್ತು ಅಧಿಕಾರಿಗಳ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಸ್ತಾಪಿಸಿದರು. ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಡಿಕೇರಿ, NEWS DESK ಸೆ.೦1: ಮಡಿಕೇರಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿ.ಜಿ.ಎಸ್. ಪ್ರೌಢಶಾಲೆಯ ಬಾಲಕಿಯರ ತಂಡವು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಮಡಿಕೇರಿ NEWS DESK ಸೆ.1: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ 31ನೇ ವಾರ್ಷಿಕ ಸಾರ್ವಜನಿಕ ಕೈಲ್‌ಪೊವ್ದ್ ಆಚರಣೆ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಕ್ಕಾಗಿ ಕೊಡವರು ಮುಂದಿಟ್ಟಿರುವ ಹಕ್ಕೊತ್ತಾಯವು ಸ್ಥಳೀಯ ಕೊಡವರ ಸ್ವಾಭಾವಿಕ ಹಾಗೂ ನ್ಯಾಯಸಮ್ಮತ ಹಕ್ಕಾಗಿದೆ. ಈ ಗುರಿ ತಾರ್ಕಿಕ ಅಂತ್ಯ ತಲುಪುವವರೆಗೂ ಸಿಎನ್‌ಸಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಕೊಡವ ಸಂಸ್ಕೃತಿಯಲ್ಲಿ ಬಂದೂಕು, ಭೂತಾಯಿ, ಯೋಧತ್ವ, ಮಂದ್, ದೇವಕಾಡ್, ಪಿತ್ರಾರ್ಜಿತ ಭೂಮಿ ಹಾಗೂ ಕೊಡವ ವಂಶಾವಳಿಗಳು ಅವಿಭಾಜ್ಯ ಅಂಗಗಳಾಗಿವೆ. ಪೂರ್ವಜರ ಪರಂಪರೆ ಹಾಗೂ ಯೋಧ ಸಂಸ್ಕೃತಿಯ ಸಂಕೇತವಾಗಿ ಕೈಲ್‌ಪೊವ್ದ್ ಸಂದರ್ಭದಲ್ಲಿ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಸಂವಿಧಾನದ 51A(f) ಅಡಿಯಲ್ಲಿ ಪ್ರಾಚೀನ ಹಾಗೂ ಅತಿ ಸಣ್ಣ ಜನಾಂಗೀಯ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸುವುದು ರಾಜ್ಯ ಹಾಗೂ ಜನರ ಕರ್ತವ್ಯವಾಗಿದೆ. ಸಂವಿಧಾನದ 32ನೇ ವಿಧಿಯಡಿ ಕೊಡವರ ಕುಂದುಕೊರತೆಗಳಿಗೆ ಸಾಂವಿಧಾನಿಕ ಪರಿಹಾರ ಕಲ್ಪಿಸಬೇಕು ಎಂದು…
ಮಡಿಕೇರಿ NEWS DESK ಸೆ.1 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಲದ್ವಾನಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧದ ಪ್ರಕರಣವು ದುರುದ್ದೇಶಪೂರಿತವಾಗಿದ್ದು, ಸೇಡಿನ ರಾಜಕಾರಣದ ಭಾಗವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಈ ಸಂಬoಧ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ…






