ಮೈಸೂರು ಅ.13 NEWS DESK : ಎಲ್ಲರೂ ಅರೋಗ್ಯವಾಗಿರಬೇಕೆಂಬ ಏಕೈಕ ಉದ್ದೇಶದೊಂದಿಗೆ “ಸೆಲಬ್ರೇಷನ್ ಮೈಸೂರು” ಎಂಬ ಹೆಸರಿನಲ್ಲಿ ಭಾನುವಾರ ನಡೆದ ಮ್ಯಾರಥಾನ್ ನಲ್ಲಿ ಭಾಗಿಯಾಗಿದ್ದು ನಿಜಕ್ಕೂ ಖುಷಿ ನೀಡಿತು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಕೋಟೆ ಆಂಜನೇಯ ದೇವಸ್ಥಾನದಿಂದ ಆರಂಭವಾಗಿ ಅಲ್ಲೇ ಕೊನೆಗೊಂಡ 10ಏ, 1/2 ಮ್ಯಾರಥಾನ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿದ ನಂತರ ಪ್ರತಿಕ್ರಿಯೆ ನೀಡಿದ್ದಾರೆ. ಮ್ಯಾರಥಾನ್ ದೈಹಿಕ ಶಕ್ತಿಗೆ ಮಾತ್ರವಲ್ಲ,ಮಾನಸಿಕ ವ್ಯಕ್ತಿತ್ವ ವಿಕಸನ ಸಹಕಾರಿಯಾಗುತ್ತದೆ. ನಿತ್ಯವೂ ನಾನು ಜಾಗಿಂಗ್, ದೈಹಿಕ ವ್ಯಾಯಾಮ ಮಾಡುತ್ತೇನೆ ಎಂದು ಸಂಸದರು ತಿಳಿಸಿದ್ದಾರೆ. ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಮ್ಮ ಮೈಸೂರು ಆಯುರ್ವೇದ ಎಂಬ ಮಹತ್ಚದ ಕೊಡುಗೆ ನೀಡಿದೆ. ಈಗ ಯೋಗ ವಿಶ್ವಮಟ್ಟದಲ್ಲಿಯೂ ಮನ್ನಣೆ ಪಡೆದುಕೊಂಡಿದೆ. ಇದು ಆರೋಗ್ಯ ವೃದ್ಧಿಸುವ ಮತ್ತೊಂದು ಕ್ರಮವಾಗಿದೆ ಎಂದರು. ಯುವಕರು ಈಗ ಮ್ಯಾರಥಾನ್ ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು ನೋಡಿ ಖುಷಿಯಾಯಿತು ಎಂದು ಯದುವೀರ್ ತಿಳಿಸಿದ್ದಾರೆ. ಪ್ರಧಾನಿ ಆಶಯದಂತೆ ದೇಶದಲ್ಲಿ ಫಿಟ್…
ಲೇಖಕ: admin
ಮಡಿಕೇರಿ ಅ.13 NEWS DESK : ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಆಯೋಜಿತ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗೆ ಭಾನುವಾರ ಸಂಜೆ ಜಿಲ್ಲೆಯ ಶಾಸಕದ್ವಯರು ಜ್ಯೋತಿ ಬೆಳಗಿ, ರೈಡ್ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರ ಅಧ್ಯಕ್ಷತೆಯಲ್ಲಿ ಆಯೋಜಿತ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿ ಸಮಾರಂಭ ಉದ್ಘಾಟಿಸಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಕೊಡಗು ಜಿಲ್ಲೆ ಅಸಂಖ್ಯ ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನೀಡಿದ ಖ್ಯಾತಿಯನ್ನು ಹೊಂದಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರತಿಯೊಬ್ಬರು ತೊಡಗಿಸಿಕೊಳ್ಳುವುದು ಅವಶ್ಯವೆಂದ ಅವರು, ಇಂತಹ ಕ್ರೀಡಾ ಚಟುವಟಿಕೆಗಳು ನಮ್ಮ ಆರೋಗ್ಯವನ್ನು ಕಾಪಾಡುವುದಲ್ಲದೆ ಸಮಚಿತ್ತತೆಯಿಂದ ಬದುಕನ್ನು ಎದುರಿಸಲು ಸಹಕಾರಿಯಾಗಿದೆಯೆಂದು ನುಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಳೆಯ ಕಾರಣದಿಂದ ದಸರಾ…
ಮಡಿಕೇರಿ ಅ. 13 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಅ. 15 ರಂದುಕೊಡಗು ಜಿಲ್ಲೆಯಾದ್ಯಂತ ಬೖಹತ್ ರೀತಿಯಲ್ಲಿ ಸ್ವಚ್ಚ ಕೊಡಗು – ಸುಂದರ ಕೊಡಗು – ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದೆ. ಬುಧವಾರ ಬೆಳಗ್ಗೆ8 ಗಂಟೆಯಿಂದ ಕೊಡಗಿನಾದ್ಯಂತ ರಸ್ತೆ ಬದಿಗಳಲ್ಲಿನ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಹೊಣೆಯರಿತ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ,ಕೊಡಗು ಹೋಂಸ್ಟೇ ಅಸೋಸಿಯೇಷನ್ , ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಟ್ರಾವಲ್ ಅಸೋಸಿಯೇಷನ್, ರೋಟರಿ, ಲಯನ್ಸ್ , ರೆಡ್ ಕ್ರಾಸ್, ಗ್ರೀನ್ ಸಿಟಿ ಫೋರಂ, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯ ಹಲವಾರು ಸಂಸ್ಥೆಗಳು ಈ ಸ್ವಚ್ಚತಾ ಅಭಿಯಾನಕ್ಕೆ ಕೈಜೋಡಿಸಿವೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೊಡಗಿನಾದ್ಯಂತ ಮುಖ್ಯ ರಸ್ತೆಗಳ…
ಮಡಿಕೇರಿ NEWS DESK ಅ.11 : ರಾಷ್ಟ್ರೀಯ ಜನಗಣತಿಯ ಸಂದರ್ಭ ಆದಿಮಸಂಜಾತ, ಇಂಡಿಜಿನಸ್, ಆ್ಯನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ದಾಖಲೀಕರಣವಾದರೆ ಮಾತ್ರ ಕೊಡವರಿಗೆ ಸಂವಿಧಾನಬದ್ಧ ಹಕ್ಕು ದೊರೆಯಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನೂರೊಕ್ಕ ನಾಡಿನ ಚೆಟ್ಟಳ್ಳಿಯಲ್ಲಿ ನಡೆದ 15ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಕೊಡವರಿಗೆ ಸಂಸತ್ತು ಮತ್ತು…
ಶ್ರೀಮಂಗಲ ಅ.11 NEWS DESK : ‘ಕೊಡವ ತಕ್ಕ್ ಎಳ್ತ್ಕಾರಡ ಕೂಟ’ವು ತನ್ನ ವಿಶೇಷ ಕವಿಗೋಷ್ಠಿಗೆ ಆಹ್ವಾನಿಸಿದ ‘ಕನ್ಯಾರ್ ಕವನ’ ಬರೆದು ಕಳುಹಿಸಲು ನೀಡಿದ್ದ ಅವಧಿಯನ್ನು ವಿಸ್ತರಿಸಿದ್ದು, ಅ.15 ಕೊನೆ ದಿನವಾಗಿದೆ. ಯುವಜನಾಂಗಕ್ಕೆ ಕವನ ಬರೆಯುವ ಆಸಕ್ತಿ ಹೆಚ್ಚಿಸುವ ಹಾಗೂ ಎಲೆಮರೆ ಕಾಯಿಯಂತಿರುವ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅವದಿಯನ್ನು ವಿಸ್ತರಿಸಲಾಗಿದೆ. ಕವಿಗಳು ಕೊಡವ ಕ್ಯಾಲೆಂಡರಿನ “ಕನ್ಯಾರ್” ತಿಂಗಳಿಗೆ (ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 16 ರವರೆಗಿನ ಅವಧಿ) ಸಂಬಂಧಿಸಿದ ವಸ್ತು ವಿಶಯವನ್ನಾಧರಿಸಿ ಸ್ವಂತವಾಗಿ ರಚಿಸಿದ ಕವನವನ್ನು ವಾಚಿಸುವ ವಿನೂತನ ಗೋಷ್ಠಿಯನ್ನು ‘ಕೂಟ’ ನಡೆಸುತ್ತಿದ್ದು, ಕವಿಗಳು ಕನ್ಯಾರ್ ತಿಂಗಳಿನ ವಿಶೇಷತೆಯನ್ನಾಧರಿಸಿ ಬರೆದ ಕೊಡವ ಕವನವನ್ನು ಅ.15ರ ಒಳಗೆ ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಕಛೇರಿಗೆ ತಲುಪಿಸಬಹುದು. ಅಥವಾ 9880584732, 9448326014, 9449998789 ಸಂಖ್ಯೆಗಳಿಗೆ ವಾಟ್ಸಾಪ್ ಮೂಲಕ ಕಳುಹಿಸಬಹುದು. ರಾಜ್ಯಮಟ್ಟದ ಈ ಕನ್ಯಾರ್ ಕವಿಗೋಷ್ಠಿಗೆ ಜಾತಿ, ಧರ್ಮದ ನಿರ್ಬಂಧವಿಲ್ಲದೆ ಕೊಡವ ಭಾಷೆಯಲ್ಲಿ ‘ಕನ್ಯಾರ್’ ತಿಂಗಳ ವಸ್ತು ವಿಷಯಗಳನ್ನಾಧರಿಸಿ ಬರೆದ ಕವನಗಳನ್ನು…
ಮಡಿಕೇರಿ ಅ.11 NEWS DESK : ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಪದ್ಮ ಭೂಷಣ ಎಸ್.ಎಲ್.ಬೈರಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕ ಶ್ರದ್ಧಾಂಜಲಿ ಅರ್ಪಿಸಿತು. ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಎಸ್.ಎಲ್.ಬೈರಪ್ಪ ಅವರ ಸಾಹಿತ್ಯ ಸಾಧನೆಯನ್ನು ಕೊಂಡಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪದ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಎಸ್.ಎಲ್.ಬೈರಪ್ಪ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಬೈರಪ್ಪ ಅವರ ಸಾಹಿತ್ಯ ಜೀವನದ ಹಾದಿ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದು, ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ ಎಂದು ಹೇಳಿದರು. ಹಿರಿಯ ಸಾಹಿತಿ ಕಿಗ್ಗಾಲು.ಎಸ್.ಗಿರೀಶ್ ಅವರು ಶ್ರೇಷ್ಠ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸಾಧನೆ ಹಾಗೂ ಜೀವನ ಚರಿತ್ರೆಯನ್ನು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಿವರಿಸಿದರು. ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಪದಾಧಿಕಾರಿಗಳಾದ ವಿಘ್ನೇಶ್…
ಮಡಿಕೇರಿ ಅ.11 NEWS DESK : ನಗರದಲ್ಲಿರುವ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಮಡಿಕೇರಿ ತಾಲ್ಲೂಕು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಹಣ ಪೋಲಾಗುವುದನ್ನು ತಪ್ಪಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರ್ಜಿದಾರರ ಹಿತದೃಷ್ಟಿಯಿಂದ ಎಲ್ಲಾ ಸರಕಾರಿ ಕಚೇರಿಗಳು ಒಂದೇ ಕಟ್ಟಡದಲ್ಲಿ ಇರಬೇಕೆನ್ನುವ ಉದ್ದೇಶದಿಂದ ನಗರದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಿನಿ ವಿಧಾನಸೌಧ ನಿರ್ಮಿಸಲಾಗಿದೆ. ಕಟ್ಟಡ ಉದ್ಘಾಟನೆಗೊಂಡು ಹಲವು ದಿನಗಳೇ ಕಳೆದಿದ್ದರು ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ರೂಪದಲ್ಲಿ ವಾರ್ಷಿಕ ಲಕ್ಷಾಂತರ ಹಣ ಪೋಲಾಗುತ್ತಿದೆ. ಇದು ಸಾರ್ವಜನಿಕರ ತೆರಿಗೆ ಹಣವಾಗಿರುವುದರಿಂದ ಈ ಹೊರೆಯನ್ನು ತಪ್ಪಿಸಲು ತಕ್ಷಣ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. *ಮಾಹಿತಿ ಕೊರತೆ* ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕಡತಗಳ…
ಮಡಿಕೇರಿ ಅ.11 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ನ 24ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅ.19 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಟೇಬಲ್ ಟೆನ್ನಿಸ್ ಸಿಂಗಲ್ಸ್ ಮತ್ತು ಡಬಲ್ಸ್, ಕೇರಂ ಸಿಂಗಲ್ಸ್ ಮತ್ತು ಡಬಲ್ಸ್ ಮತ್ತು ಚೆಸ್ ಪಂದ್ಯಾವಳಿ ನಡೆಯಲಿದೆ. ಟೇಬಲ್ ಟೆನ್ನಿಸ್, ಕೇರಂ ಸಿಂಗಲ್ಸ್ ಪಂದ್ಯಾವಳಿಗೆ ಹೆಸರು ನೋಂದಾಯಿಸಿಕೊಂಡವರನ್ನು, ಡಬಲ್ಸ್ ತಂಡಗಳನ್ನಾಗಿ ಬಳಿಕ ವಿಂಗಡಿಸಿಕೊಳ್ಳಲಾಗುವುದು. ಚೆಸ್ ಪಂದ್ಯಾವಳಿಯನ್ನು 15 ವರ್ಷ ವಯೋಮಿತಿಯ ಒಳಗಿನ ಮತ್ತು ಅದಕ್ಕೆ ಮೇಲ್ಪಟ್ಟ ಎರಡು ವಿಭಾಗಗಳಲ್ಲಿ ನಡೆಸಲಾಗುತ್ತದೆ. ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರು ದಯವಿಟ್ಟು ಚೆಸ್ ಬೋರ್ಡ್ ತರಬೇಕೆಂದು ವಿನಂತಿ. ಟಿಟಿ, ಕೇರಂ, ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರು ವ್ಯವಸ್ಥಾಪಕರು, ಪತ್ರಿಕಾ ಭವನ ಮೊ.8970565856 ಇವರನ್ನು ಸಂಪರ್ಕಿಸಬೇಕೆಂದು ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ವಿನಂತಿಸಿಕೊಂಡಿದ್ದಾರೆ.
ಮಡಿಕೇರಿ ಅ.11 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಮೆರವಣಿಗೆ ಮೂಲಕ ಹೊರಟ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರಲ್ಲದೇ ಅಣಕು ಚಿತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಆಗಮಿಸಿದ ಸಂಘದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಕಚೇರಿ ಮುಂದೆ ಧರಣಿ ನಡೆಸಿ ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಉಪವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೆ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಶೇಷ ಪರಿಣಿತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಸರ್ಕಾರವನ್ನು…
ನಾಪೋಕ್ಲು ಅ.11 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ನಡೆಯಿತು. ಒಕ್ಕೂಟದ ಸದಸ್ಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಾನಪದ ದಸರಾ ವೇದಿಕೆ ಅಲಂಕಾರದಲ್ಲಿ ಭಾಗವಹಿಸಿದ ಒಕ್ಕೂಟದ ಸದಸ್ಯರು ಮಡಿಕೇರಿ ಹಾಗೂ ಗೋಣಿಕೊಪ್ಪಲು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಹಾಗೂ ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ವಿಜೇತರಾದ ತಂಡಕ್ಕೆ ಅಭಿನಂದನೆ ಸಲ್ಲಿಸಿ ಅವರ ಸಾಧನೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಪೂಜಾ ವಿಧಿ ವಿಧಾನವನ್ನು ಕೊಟ್ಟೂರು ಶ್ರೀ ಗೋಪಾಲಕೃಷ್ಣ ದೇವಾಲಯದ ಪ್ರಧಾನ ಅರ್ಚಕರಾದ ಮುರಳಿ ಭಟ್ ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.






