ವಿರಾಜಪೇಟೆ ಅ.10 NEWS DESK : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನವನ್ನು ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣಗಳನ್ನು ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್ ಶಿಬಿರಗಳು ಅತ್ಯುತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಶಿಬಿರಗಳು ಉತ್ತಮ ವೇದಿಕೆಯಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಹಕಾರ, ಸೌಹಾರ್ದ ಮನೋಭಾವನೆಯನ್ನು ಬೆಳೆಸುತ್ತದೆ. ತಮ್ಮಲ್ಲಿ ಹುದುಗಿರುವ ವಿವಿಧ ಕಲೆ, ಹವ್ಯಾಸಗಳನ್ನು ತೋರ್ಪಡಿಸಲು ಇದೊಂದು ಉತ್ತಮ ವೇದಿಕೆ. ಪ್ರತೀ ವ್ಯಕ್ತಿಯನ್ನು ಬಾಲ್ಯದಲ್ಲಿ ಆತನ ತಂದೆ ತಾಯಿಗಳ ಹೆಸರಿನ ಮೂಲಕ ಗುರುತಿಸುತ್ತಾರೆ. ಅದೇ ವ್ಯಕ್ತಿ ಯವ್ವನವನ್ನು ತಲುಪಿದಂತಹ ಸಂದರ್ಭದಲ್ಲಿ ಆತ ಮಾಡಿದ ಸಾಧನೆಯಿಂದ ಆತನ ಹೆಸರಿನ ಮೂಲಕ ತಂದೆ…
ಲೇಖಕ: admin
ಮಡಿಕೇರಿ ಅ.10 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯವು ಅಕ್ಟೋಬರ್, 13 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ. ಈ ಸಮಯದಲ್ಲಿ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಯವರ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ ಅ.11 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್5 ಹೊದ್ದೂರು ಹಾಗೂ ಎಫ್2 ನಾಪೋಕ್ಲು ಫೀಡರ್ನಲ್ಲಿ ಅ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕೊಟ್ಟಮುಡಿ, ಪಾಲೂರು, ಹೊದವಾಡ, ನಾಪೋಕ್ಲು, ಬೇತು, ಹಳೆತಾಲೂಕು, ಕೊಳಕೇರಿ, ಕಕ್ಕಬೆ, ನಾಲಡಿ, ಚೋನಕೆರೆ, ಎಮ್ಮೆಮಾಡು, ಪಡಿಯಾನಿ, ಬಲ್ಲಮಾವಟಿ, ಪೇರೂರು, ಕಿಯಲ್ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಅ.10 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಸರ್ಕಾರ…
ಮಡಿಕೇರಿ ಅ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ವಿಶೇಷವಾಗಿ ಈ ಭಾಗದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುವ ಕಾರ್ಯಕ್ರಮ ಹಮ್ಮಿಕೊಂಡಿರುವ ಶಾಸಕರು, ರೂ.90 ಲಕ್ಷ ವೆಚ್ಚದಲ್ಲಿ ನೂತನ 11 ಕೆವಿ ಹೆಚ್ ಟಿ ವಿದ್ಯುತ್ ಮಾರ್ಗ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ, ಹಲವು ನೂತನ ವಿದ್ಯುತ್ ಪರಿವರ್ತಕಗಳನ್ನು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು, ಕ್ಷೇತ್ರಾದ್ಯಂತ ಉತ್ತಮ ವಿದ್ಯುತ್ ಪೂರೈಸಿ ಕೃಷಿಕರಿಗೆ ಹಾಗೂ ಗ್ರಾಹಕರಿಗೆ ನಿರಂತರವಾಗಿ ತಡೆರಹಿತ ವಿದ್ಯುತ್ ನೀಡಲು ಸರ್ಕಾರದ ವತಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟದ ನೂತನ ವಿದ್ಯುತ್ ಮಾರ್ಗಗಳನ್ನು ಅಳವಡಿಸುವುದರೊಂದಿಗೆ, ನೂತನ ವಿದ್ಯುತ್ ಪರಿವರ್ತಕಗಳನ್ನು ಹಾಗೂ ಸಬ್ ಸ್ಟೇಷನ್ ಗಳನ್ನು ಕ್ಷೇತ್ರಾದ್ಯಂತ ಕೈಗೊಂಡಿರುವುದು ತಿಳಿಸಿದರು. ಈ ಸಂದರ್ಭ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಆದ್ಯತೆ ಮೇರೆಗೆ ಎಲ್ಲಾ ಸಮಸ್ಯೆಗಳನ್ನು…
ಮಡಿಕೇರಿ ಅ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಗ್ರಾಮದ ಪ್ರಸಿದ್ಧ ಮೃತ್ಯುಂಜಯ ದೇವಸ್ಥಾನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪತ್ನಿ ಕಾಂಚನ್ ಪೊನ್ನಣ್ಣ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮೃತ್ಯುಂಜಯ ಸ್ವಾಮಿಯು ನಾಡಿನ ಎಲ್ಲರಿಗೂ ಸುಭಿಕ್ಷೆಯನ್ನು ಕರುಣಿಸಲಿ ಎಂದು ಶಾಸಕರು ಪ್ರಾರ್ಥಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಅ.10 NEWS DESK : ಸರ್ಕಾರದ ಪೋಷಣ್ ಕಾರ್ಯಕ್ರಮದ ಭಾಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹುದಿಕೇರಿ ಕೊಡವ ಸಮಾಜದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕಲಿಯುವ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಲೆಂದು ಸರಕಾರವು ಮಕ್ಕಳಿಗೆ ವಿವಿಧ ಸೌಲತ್ತುಗಳನ್ನು ಕಲ್ಪಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ಪುಟ್ಟ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅವರಿಗೆ ಬೇಕಾದಂತಹ ಎಲ್ಲಾ ಪೌಷ್ಟಿಕಾಂಶ ಇರುವ ಆಹಾರಗಳನ್ನು ಸರಕಾರ ಕೊಡುಗೆಯಾಗಿ ನೀಡುತ್ತಿದೆ. ಈ ಕಾರ್ಯಕ್ರಮಗಳು ಎಲ್ಲರಿಗೂ ತಲುಪುವಂತಾಗಬೇಕು. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಪೌಷ್ಟಿಕಾಂಶದ ಕೊರತೆಗಳಿಂದ ಬಳಲುತ್ತಿರುವುದು ವರದಿಗಳಿಂದ ಮನಗಂಡ ಸರಕಾರವು ಇಂತಹ ಮಕ್ಕಳ ಆರೋಗ್ಯ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಶಾಸಕರು ಕರೆ ನೀಡಿದರು. ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ಅವರು ಸೀಮಂತ…
ಮಡಿಕೇರಿ ಅ.10 NEWS DESK : ಸ್ವಚ್ಛ ಕಾವೇರಿಗಾಗಿ ಅ.24 ರಿಂದ ನ.16ರ ವರೆಗೆ ಕಾವೇರಿ ಜಾಗೃತಿ ರಥಯಾತ್ರೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದೊಂದಿಗೆ ಅ.24 ರಿಂದ ನ.16ರ ವರೆಗೆ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ತಲಕಾವೇರಿಯಿಂದ ಪೊಂಪ್ಹಾರ್ ವರೆಗೆ ಯಾತ್ರೆ ಕೈಗೊಳ್ಳಲಾಗಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಸಾಧುಸಂತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.23 ರಂದು ಮಧ್ಯಾಹ್ನ 2 ಗಂಟೆಗೆ ಸಾಧು ಸಂತರ ತಂಡ ಕಾವೇರಿ ಮಾತೆಯ…
ಮಡಿಕೇರಿ NEWS DESK ಅ.10 : ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ಪ್ರಕರಣ ಖಂಡನೀಯ. ಇದು ಸಂವಿಧಾನದ ಮೇಲಿನ ದಾಳಿಯಾಗಿದ್ದು, ಈ ರೀತಿಯ ಘಟನೆಗಳು ನ್ಯಾಯಾಂಗದ ಘನತೆಗೆ ದಕ್ಕೆ ತರುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಕೀಲ ರಾಕೇಶ್ ಕಿಶೋರ್ ಮಾಡಿರುವ ತಪ್ಪನ್ನು ಸ್ವತ: ವಕೀಲನಾಗಿರುವ ನಾನು ತೀವ್ರವಾಗಿ ಖಂಡಿಸುತ್ತೇನೆ, ಇದು ಕ್ಷಮಿಸಲಾಗದ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ. ಇದು ನಮ್ಮ ದೇಶದ ಪವಿತ್ರ ಸಂವಿಧಾನದ ಮೇಲಿನ ದಾಳಿಯಾಗಿದ್ದು, ಈ ರೀತಿಯ ಬೆಳವಣಿಗೆ ಕಾನೂನು ವ್ಯವಸ್ಥೆಯನ್ನು ಹಾಳು ಮಾಡುತ್ತದೆ. ಶಾಂತಿಯುತ ಹೋರಾಟಗಳು ನ್ಯಾಯಾಂಗ ವ್ಯವಸ್ಥೆ, ಸಂವಿಧಾನದ ಆಶಯ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಹೆಚ್ಚಿಸುತ್ತದೆ. ಸಂವಿಧಾನದ ಆಶಯಗಳಿಗೆ ಬದ್ಧರಾಗಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಬೆಂಬಲಕ್ಕೆ ಸಿಎನ್ಸಿ ನಿಲ್ಲಲಿದೆ. ನ್ಯಾಯಾಂಗ ವ್ಯವಸ್ಥೆ ಮತ್ತು ಸಂವಿಧಾನ ಸಂಸ್ಥೆಗಳಲ್ಲಿ ಅಪಾರ ಗೌರವ ಹೊಂದಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ…
ವಿರಾಜಪೇಟೆ ಅ.10 NEWS DESK : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿಯು ದಿ. ಎಸ್.ಎಲ್. ಭೈರಪ್ಪ ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಕರ್ತರ ವೇದಿಕೆ ವಿರಾಜಪೇಟೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ದಿ. ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು. ಕನ್ನಡ ಭಾಷೆ ನಾಡು ನುಡಿಗೆ ಸಂಬಂಧಿಸಿದಂತೆ ಕೊಡುಗೆಯನ್ನು ನೀಡಿದವರಲ್ಲಿ ದಿ. ಎಸ್. ಎಲ್. ಭೈರಪ್ಪ ರವರು ಅಗ್ರಗಣ್ಯರು. ಸಾಹಿತ್ಯ ಲೋಕದಲ್ಲಿ ಸದಾ ಅವಿಸ್ಮರಣಿಯವಾಗಿ ಉಳಿದಿದ್ದಾರೆ. ಮಾತ್ರವಲ್ಲದೆ ತಮ್ಮದೇ ಆದ ಶೈಲಿಯಲ್ಲಿ ಕೃತಿಯ ರಚನೆಯನ್ನು ಮಾಡಿರುತ್ತಾರೆ. ಕವಿಗಳು ಹಾಗೂ ಸಾಹಿತಿಗಳನ್ನು ಇಂದಿನ ದಿವಸಗಳಲ್ಲಿ ಜಾತಿಯ ಲೆಕ್ಕಾಚಾರದಲ್ಲಿ ನೋಡುತ್ತಿರುವುದು ವಿಷಾದನೀಯ. ಸಾಹಿತಿಗಳು ಒಂದು ನಿರ್ದಿಷ್ಟ ಜಾತಿಗೆ ಸಂಬಂಧಿಸಿದವರಾಗಿರದೆ ಒಂದು ನಾಡಿಗೆ ಸಂಬಂಧಿಸಿದವರಾಗಿರುತ್ತಾರೆ ಎಂದರು. ಎಸ್. ಎಲ್. ಭೈರಪ್ಪ ಅವರ ಪ್ರಮುಖ ಕೃತಿಗಳನ್ನು ಹಾಗೂ ಅದರಲ್ಲಿ ಅಡಗಿರುವ ಅಂಶಗಳನ್ನುಉದಾಹರಣೆ ಸಮೇತ ವಿವರಿಸಿದರು. ಗೋಣಿಕೊಪ್ಪಲು ಕಾವೇರಿ…






