ಲೇಖಕ: admin

ಮಡಿಕೇರಿ ಅ.9 NEWS DESK : ಇದೇ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವಾಟರ್ ಪ್ರೋಫ್ ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‍ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಹಾಡುಗಳನ್ನು ಮಾತ್ರ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ…

Read More

ಮಡಿಕೇರಿ ಅ.9 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಇತರೆ ಚುನಾವಣೆ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಹಿನ್ನೆಲೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿಯೂ ಸಹ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. 2002 ರಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗಿತ್ತು, ಆ ದಿಸೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳುವಂತಾಗಬೇಕು ಎಂದು ಕೋರಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ನಮೂನೆ-6 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮೂನೆ-07 ಮತದಾರರ ಪಟ್ಟಿಯಿಂದ ಹೆಸರು…

Read More

ಮಡಿಕೇರಿ ಅ.9 NEWS DESK : ಪ್ರತಿಯೊಬ್ಬರೂ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ ಪ್ರಕೃತಿ, ಪರಿಸರ ಹಾಗೂ ವನ್ಯಜೀವಿಗಳನ್ನು ಉಳಿಸಲು ಸಾಧ್ಯ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ( ಎನ್ನೆಸ್ಸೆಸ್ ) ಘಟಕಗಳ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಅರಣ್ಯ ಭವನದ ಆವರಣದಲ್ಲಿ “ಮಾನವ ಪ್ರಾಣಿ ಸಹಬಾಳ್ವೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 71 ನೇ ವನ್ಯಜೀವಿ ಸಪ್ತಾಹ : 2025 ದ ಅಂಗವಾಗಿ “ಪರಿಸರ ನಡಿಗೆ”ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ಅರಣ್ಯ ಹಾಗೂ…

Read More

ವಿರಾಜಪೇಟೆ ಅ.9 NEWS DESK :  ಅಖಿಲ ಭಾರತ ಎಸ್.ಎನ್.ಡಿ.ಪಿ ಯೋಗಂ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಾಗೂ ಉದ್ಯಮಿಗಳಾದ  ವೆಲ್ಲಪಳ್ಳಿ ನಟೇಶನ್  ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಗೋಲ್ಡನ್ ಬೀನ್ಸ್ ಹೋಂ ಸ್ಟೇ ಗೆ ಖಾಸಗಿ ಭೇಟಿಯನ್ನು ನೀಡಿದರು. ಭೇಟಿ ಸಂದರ್ಭದಲ್ಲಿ ಎಸ್ ಎನ್ ಡಿ ಪಿ ಯ ಪಧಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಎಸ್ ಎನ್ ಡಿ ಪಿ ಸಂಘಟನೆಯ ವಿರಾಜಪೇಟೆ, ಸಿದ್ದಾಪುರ ಹಾಗೂ ಹೆಗ್ಗಳ ದ ಪದಾಧಿಕಾರಿಗಳು ಭೇಟಿಯಾಗಿ ಸಂಘಟನೆಯ ಕುರಿತು ಚರ್ಚೆ ನಡೆಸಿದರು. ಮಾತ್ರವಲ್ಲದೆ ಉಭಯ ಕುಶಲೋಪರಿಯನ್ನು ನಡೆಸಿದರು. ಎಸ್ ಎನ್ ಡಿ ಪಿ ಸಂಘಟನೆ ಹಾಗೂ ಹೆಗ್ಗಳದ ಗೋಲ್ಡನ್ ರಾಕ್ಸ್ ನ ವತಿಯಿಂದ ವೆಲ್ಲಪಳ್ಳಿ ನಟೇಶನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಹೆಗ್ಗಳ ಗ್ರಾಮದ ಗೋಲ್ಡನ್ ರಾಕ್ಸ್ ಹಾಗೂ ಗೋಲ್ಡನ್ ಬೀನ್ಸ್ ನ ಮಾಲೀಕರು, ಉದ್ಯಮಿಗಳಾದ ಸಜೇಶ್ ಭರತನ್, ಪತ್ನಿ ಪೂಜಾ ಸಜೇಶ್, ವಿರಾಜಪೇಟೆ ಪುರಸಭಾ ಸದಸ್ಯ ಪೃಥ್ವಿನಾಥ್, ವಿರಾಜಪೇಟೆ ಹಿಂದೂ ಮಲಯಾಳಿ ಮಹಿಳಾ…

Read More

ವಿರಾಜಪೇಟೆ ಅ.9 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ, ಸಮಾಜದ ಏಳಿಗೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ತಿಳಿಸಿದರು. ಮಹಿಳಾ ಸಮಾಜಕ್ಕೆ ಸುಸಜ್ಜಿತ ಶೌಚಾಲಯದ ಅವಶ್ಯಕತೆ ಇದ್ದು, ಅದನ್ನು ನಿರ್ಮಾಣ ಮಾಡುವ ಯೋಜನೆಯ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ. ಇದಕ್ಕೆ ದಾನಿಗಳ ಸಹಕಾರವೂ ಅಗತ್ಯವಿದೆ. ಎಲ್ಲರೂ ಸಹಕಾರ ನೀಡಿದ್ದಲ್ಲಿ ಉತ್ತಮ ಸುಸಜ್ಜಿತ ಶೌಚಾಲಯ ನಿರ್ಮಾಣವಾಗುತ್ತದೆ. ಹಂತ ಹಂತವಾಗಿ ಸಮಾಜದ ಅಭಿವೃದ್ಧಿ ಕಾರ್ಯ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಸದಸ್ಯತ್ವ ನೋಂದಣಿ ಹಣ ಹೆಚ್ಚಿಸುವಂತೆ ಹಾಗೂ ಇತರ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಮಾಡಿ ಅನುಮೋದಿಸಲಾಯಿತು. ಸಭೆ ಪ್ರಾರಂಭದ ಮೊದಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ…

Read More

ಪುತ್ತೂರು ಅ.9 NEWS DESK : ಕೃತಕ ಬುದ್ಧಿಮತ್ತೆಯು ದಿನದಿಂದ ದಿನಕ್ಕೆ ಅಗಾಧವಾಗಿ ವ್ಯಾಪಿಸುತ್ತಿದ್ದು, ಮಾನವ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ (AIML)  ವಿದ್ಯಾರ್ಥಿ ವಿಭಾಗ, IEEE VCET ವಿದ್ಯಾರ್ಥಿ ವಿಭಾಗ ಮತ್ತು IEEE ಕಮ್ಯುನಿಕೇಶನ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಕಥಾನ್ ಸ್ಪರ್ಧೆ ಕೋಡ್ ಮಂಥನ್-25ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗೆ ಬಳಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದರು. IEEE VCET ವಿದ್ಯಾರ್ಥಿ ವಿಭಾಗದ ಸಂಯೋಜಕಿ ಡಾ.ಜೀವಿತಾ.ಬಿ.ಕೆ ಮಾತನಾಡಿ ಕೃತಕ ಬುದ್ಧಿಮತ್ತೆ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳಲ್ಲಿ ತಮ್ಮ ಸಾಮಥ್ರ್ಯವನ್ನು ತೋರಿಸಲು ವಿದ್ಯಾರ್ಥಿಗಳಿಗೆ ಇದೊಂದು ಸದವಕಾಶ ಎಂದರು. ಸಮಾಜದಲ್ಲಿ ಜನಸಾಮಾನ್ಯರು ವಿವಿಧ ಕ್ಷೇತ್ರಗಳಲ್ಲಿ ಎದುರಿಸುವ ಸಮಸ್ಯೆಗಳಿಗೆ…

Read More

ಮಡಿಕೇರಿ ಅ.9 NEWS DESK : ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೇ ಪೌರಸಿಬ್ಬಂದಿಗಳ ಮೂಲಕ ನಗರ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪೌರಸಿಬ್ಬಂದಿಗಳಾದ ಅಹಮ್ಮದ್ ಕಬೀರ್, ಎಚ್.ಆರ್.ಶಂಕರ್, ಈರಪ್ಪ ಶೆಟ್ಟಿ, ವಸಂತ ಕುಮಾರ್, ಬಿ.ಟಿ. ಜಗದೀಶ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಳೆದ ಕೆಲವು ವಷ೯ಗಳಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಸ್ವಚ್ಚತೆ ಸಂಬಂಧಿತ ಜನರಲ್ಲಿ ಹೆಚ್ಚು ಅರಿವು ಮೂಡಿದೆ. ಪೌರಸಿಬ್ಬಂದಿಗಳು ನಗರದ ತ್ಯಾಜ್ಯ ವಿಲೇವಾರಿ ಮಾಡುವ ಪೌರಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ನಗರಸಭೆ ಹೆಚ್ಚಿನ ಕಾಳಜಿ ವಹಿಸಿದೆ. ಪ್ರತೀ ವಷ೯ ಅತ್ಯುತ್ತಮ ರೀತಿಯಲ್ಲಿ ಪೌರಸಿಬ್ಬಂದಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅಗತ್ಯವುಳ್ಳವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದೂ ರಮೇಶ್ ನುಡಿದರು. ಈಗಾಗಲೇ ಮಡಿಕೇರಿಯ ರಾಜರಾಜೇಶ್ವರಿ ಬಡಾವಣೆಯಲ್ಲಿ ಪೌರಸಿಬ್ಬಂದಿಗಳಿಗೆ 12 ಮನೆಗಳನ್ನು ನಿಮಿ೯ಸಿ ಉಚಿತವಾಗಿ ವಿತರಿಸುವ ಕಾಯ೯ವೂ ಪ್ರಗತಿಯಲ್ಲಿದೆ ಎಂದೂ ರಮೇಶ್ ಹೇಳಿದರು.700 ಜನಸಂಖ್ಕೆಗೊಬ್ಬರಂತೆ ಓವ೯…

Read More

ಮಡಿಕೇರಿ ಅ.9 NEWS DESK : ಹೆರವನಾಡು ಗ್ರಾಮದ ಉಡೋತ್ ಮೊಟ್ಟೆ ನಿವಾಸಿ ಕೆ.ಜೆ.ಥೋಮಸ್ (63) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಅ.10 ರಂದು ಉಡೋತ್ ಮೊಟ್ಟೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮೈಸೂರು ಅ.9 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ ಅವರ 77ನೇ ಹುಟ್ಟುಹಬ್ಬದ ಆಚರಣೆಯ ಅಂಗವಾಗಿ ಅ.11 ರಂದು ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರಿಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಂದು ಬೆಳಿಗ್ಗೆ 10.45 ಕ್ಕೆ ನಗರದ ಉರ್ಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜೆಎಲ್‌ಬಿ ರಸ್ತೆಯಲ್ಲಿರುವ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ  ಹಾಸನದ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಮಂಜುನಾಥ್, ಮೈಸೂರು ವಿಜಯ ಕರ್ನಾಟಕ  ಐತಿಚಂಡ  ಸಂಪಾದಕರಾದ ರಮೇಶ್ ಉತ್ತಪ್ಪ,  ವೈದ್ಯವರ್ತ ಪ್ರಕಾಶನದ ನಿರ್ದೇಶಕ ಶ್ರೀನಿವಾಸ ಬಹದ್ದೂರ್, ಮಂಗಳೂರಿನ ಲಿಮೆರಿಕ್ಸ್ ಲೇಖಕಿ ಮತ್ತು ಸಾಹಿತಿ ಜಾಹ್ನವಿ ಸೀತಾಲಕ್ಷ್ಮಿ ವರ್ಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಎಂಎಲ್‍ಸಿ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಲಿದ್ದು, ಶಾಸಕ ತನ್ವೀರ್ ಸೇಠ್ ಹಾಗೂ ಚುಟುಕು ಯುಗಾಚಾರ್ಯ ಡಾ.ಎಂ.ಜಿ.ಆರ್. ಉರ್ಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

Read More

ಮಡಿಕೇರಿ ಅ.9 NEWS DESK : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರಾದ ಮಾರುತಿ, ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠ ಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಪ್ರಾಸ್ತಾವಿಕ ಮಾತನಾಡಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್…

Read More