ಲೇಖಕ: admin

ಮಡಿಕೇರಿ ಆ.20 NEWS DESK : ಹಾಕತ್ತೂರು ಪ್ರೌಢಶಾಲೆಯಲ್ಲಿ ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಬರಲು  ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಳಿಯ ದಾನಿಗಳಾದ ಕವನ್ ಭೀಷ್ಮ ಅವರು ಮಾತನಾಡಿ ನಾವು ಉತ್ತಮವಾದ ನಾಗರೀಕರಾಗಿರುವುದನ್ನು ಮುಖ್ಯವಾದ ಗುರಿಯನ್ನಾಗಿಸಿಕೊಳ್ಳಬೇಕು.ನಮ್ಮ ಶಾಲೆ ಪ್ರತಿ ವರ್ಷ ಸನ್ಮಾನಕ್ಕೆ ಭಾಜನರಾಗುತ್ತಿರುವುದು ನಮ್ಮ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತಿದೆ. ಈ ಸನ್ಮಾನ ಪಡೆದುಕೊಂಡು ಸಿಕ್ಕ ಗೌರವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನುಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್,  ದಲಿತ ಸಂಘರ್ಷ ಕಳೆದ ಒಂದು ದಶಕದಿಂದ ನಡೆಸಿದ ಸೇವೆ ಹಾಗೂ ವಿದ್ಯಾರ್ಥಿಗಳಿಗೆ, ಪೋಷಕರಿಗೆ ನೀಡಿದ ಸನ್ಮಾನದ ಉದ್ದೇಶ ಅವರು ಮತ್ತಷ್ಟು ಸಾಧನೆ ಮಾಡಲಿ ಎನ್ನುವುದು, ಸನ್ಮಾನದಿಂದ ಸ್ಪೂರ್ತಿ ಪಡೆಯುವ ಉಳಿದ ವಿದ್ಯಾರ್ಥಿಗಳು ತಾವೂ ಹೆಚ್ಚಿನ ಸಾಧನೆ ತೋರಲು ಪ್ರಯತ್ನ ಪಡುತ್ತಾರೆ. ವಿದ್ಯಾರ್ಥಿಗಳು ದೇಶದ ಶಕ್ತಿ ಅವರನ್ನು ಚಿಕ್ಕಂದಿನಿಂದಲೇ ಜಾಗೃತಗೊಳಿಸಬೇಕಿದೆ ಎಂದರು. ಮುಖ್ಯ ಅತಿಥಿಯಾದ ಮೇಕೇರಿ ಗ್ರಾಮ…

Read More

ನಾಪೋಕ್ಲು ಆ.20 NEWS DESK : ಮರಂದೋಡ ಗ್ರಾಮದ ಅನ್ನಾಡಿಯಂಡ ಕುಟುಂಬಸ್ಥರ ಐನ್ ಮನೆಯ ಒಂದು ಭಾಗವು ವಿಪರೀತ ಗಾಳಿ ವಮಿತ್ತ ಆಗ್ಗಾಗ್ಗೆ ಬಂದು ಈಮನೆಯಲ್ಲಿ ನೆಲೆಸುತ್ತಿದ್ದರು. ಮನೆಯ ಒಂದು ಭಾಗ ುಳೆಯಿಂದ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಅನ್ನಡಿಯಂಡ ಮೋನಿಷ್ ಎಂಬವರು ತೋಟದಲ್ಲಿನ ಕೆಲಸದ ನಿ ಕುಸಿದು ಬಿದ್ದುದ್ದರಿಂದ ಮನೆಯಲ್ಲಿನ ವಸ್ತುಗಳು ಹಾನಿಗೊಳಗಾಗಿವೆ. ಮರಂದೊಡ ಗ್ರಾಮ ಪಂಚಾಯಿತಿ ಸದಸ್ಯರಾದ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ಅನ್ನಾಡಿಯಂಡ ಮಂದಣ್ಣ ಹಾಗೂ ಗ್ರಾಮ ಲೆಕ್ಕಾಧಿಕಾರಿ ಶರ್ಮಿಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವರದಿ : ದುಗ್ಗಳ ಸದಾನಂದ.

Read More

ಕೂಡಿಗೆ ಆ.20 NEWS DESK : ಒಳ ಮೀಸಲಾತಿ ವರ್ಗಿಕರಣಕ್ಕೆ ಸಂಬಂಧಿಸಿದ ನ್ಯಾಯಮೂರ್ತಿ ಹೆಚ್.ಎನ್.ನಾಗ‌ಮೋಹನ್ ದಾಸ್ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಬಾಬು ಜಗಜೀವನ್ ರಾಮ್ ಒಕ್ಕೂಟದ ವತಿಯಿಂದ ಕೊಡಗು ಉಸ್ತುವಾರಿ ಸಚಿವರಾದ ಭೋಸ್ ರಾಜ್  ಅವರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಪ್ರಮುಖರು ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು. ಈ ಸಂದರ್ಭದ ಒಕ್ಕೂಟದ ಪ್ರಮುಖರಾದ ಹೆಚ್.ಕೆ.ಶಿವಶಂಕರ್, ಹೆಚ್.ಎಸ್.ದಾಸ್, ಜಗದೀಶ್, ಬೇಲೂರಯ್ಯ, ರಂಗನಾಥ್, ದಾಮೋದರ, ಗಿರೀಶ್, ಚಿರಂಜೀವಿ, ಕೀರ್ತಿ, ಸಂಜು ಆನಿ ಇತರರು ಹಾಜರಿದ್ದರು.

Read More

ಮಡಿಕೇರಿ ಆ.20 NEWS DESK : ಸಂಪಾಜೆ ಸಮೀಪ ದಬ್ಬಡ್ಕ ಗ್ರಾಮದ ತೋಟವೊಂದರಲ್ಲಿ ಪತ್ತೆಯಾದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಸ್ನೇಹಿಗಳಾದ ಮೋಹನ್ ಹಾಗೂ ಶರತ್ ಕೀಲಾರು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟರು. ಈ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಕಾರ್ತಿಕ್, ತಿಲಕ ಮತ್ತಿತರರು ಹಾಜರಿದ್ದರು. ವರದಿ : ಶರತ್ ಕೀಲಾರು.. ಸಂಪಾಜೆ

Read More

ಮಡಿಕೇರಿ ಆ.21 NEWS DESK : ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸಮಿತಿಯ ಸದಸ್ಯರುಗಳಾದ ರಾಜೇಂದ್ರ, ಎಂ.ಎ.ನಿರಂಜನ್, ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.

Read More

ಮಡಿಕೇರಿ ಆ.20 NEWS DESK : ಸೋಮವಾರಪೇಟೆ, ಮಹದೇಶ್ವರ ಬ್ಲಾಕ್ ನಿವಾಸಿ ಕಾಫಿ ಬೆಳೆಗಾರ ಹಾಗೂ ಪಟ್ಟಣದ ರಾಘವೇಂದ್ರ ಪ್ರಾವಿಷನ್ ಸ್ಟೋರ್ ಮಾಲೀಕ ಬಿ.ಎಸ್.ನಿರ್ವಾಣಿ (83) ಇಂದು(ಬುಧವಾರ) ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 3ಗಂಟೆಗೆ ಕರ್ಕಳ್ಳಿಯಲ್ಲಿರುವ ಕುರುಹಿನಶೆಟ್ಟಿ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷೆ ಲೀಲಾ ನಿರ್ವಾಣಿ ಸೇರಿದಂತೆ ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಸೋಮವಾರಪೇಟೆ NEWS DESK ಆ.19 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ ಸತೀಶರವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ರಸಾದ್ ರವರನ್ನ ನೇಮಿಸಲಾಗಿದೆ.ಈ ಹಿಂದೆ ಇವರು ವಿರಾಜಪೇಟೆ ಹಾಗೂ ಕುಶಾಲನರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ NEWS DESK ಆ.19 : ಸೋಮವಾರಪೇಟೆ ತಾಲ್ಲೂಕಿನ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದ ನೀರಿಗೆ ಬಿದ್ದಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಹಣಕೋಡು ಗ್ರಾಮದ ಚಿದಾನಂದ (27) ಎಂಬುವವರೇ ಮೃತ ವ್ಯಕ್ತಿ. ಭಾನುವಾರ ರಾತ್ರಿ ಚಿದಾನಂದ ತಾನು ಕೆಲಸ ಮಾಡುತ್ತಿದ್ದ ವಿದ್ಯುತ್ ಉತ್ಪಾದನಾ ಘಟಕದಲ್ಲಿಯೇ ನೀರಿಗೆ ಬಿದ್ದಿದ್ದರು ಎಂದು ಹೇಳಲಾಗಿದೆ. ಸೋಮವಾರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಜಲಾಶಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರೆತ್ತಿರಲಿಲ್ಲ. ಮಂಗಳವಾರ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಮರದ ಬುಡಕ್ಕೆ ಮೃತದೇಹ ಸಿಲುಕಿಕೊಂಡಿರುವುದು ಗೋಚರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

*ಪೊಲೀಸರ ಮನೆಯಲ್ಲೇ ಕಳ್ಳತನ : ದೇಶದ ವಿವಿಧೆಡೆ ಅಪರಾಧ ಕೃತ್ಯವೆಸಗಿದ್ದ ಆರೋಪಿಗಳ ಬಂಧನ : 500 ಸಿಸಿ ಕ್ಯಾಮರಾ ಪರಿಶೀಲನೆ* ಮಡಿಕೇರಿ NEWS DESK ಆ.19 : ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಅಪರಾಧ ಕೃತ್ಯಗಳನ್ನು ನಡೆಸಿ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕೇಂದ್ರ‍್ರ ಸ್ಥಾನ ಮಡಿಕೇರಿಯಲ್ಲಿ ಪೊಲೀಸ್ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣದ ತನಿಖೆೆ ಕೈಗೊಂಡ ಪೊಲೀಸರಿಗೆ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಕಳೆದ ಎರಡು ತಿಂಗಳಿನಿಂದ ನೂರಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ನಾರ್ವಲ್ಲಿ ಗ್ರಾಮದ ಸುರೇಶ್ ಸೆಂಗಾರ್(23) ಹಾಗೂ ಮಾಲ್‌ಪುರ ಗ್ರಾಮದ ಮನೀಶ್ ಭಗೇಲ್ (27) ಎಂದು ಗುರುತಿಸಲಾಗಿದೆ. ಸುರೇಶ್ ವಿರುದ್ಧ…

Read More

ಮಡಿಕೇರಿ ಆ.19 NEWS DESK : ಕಾಡಾನೆ ದಾಳಿಯಿಂದ ಮಹಿಳೆ ಪಾರಾದ ಘಟನೆ ಬಾಣವಾರ ಸಮೀಪದ ಭುವಂಗಾಲ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗಿದ್ದು, ಮಹಿಳೆ ಕಿರುಚುತ ಸಮೀಪದ ಮನೆಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭುವಂಗಾಲ ಗ್ರಾಮದಲ್ಲಿ ಕಳೆದ 15ದಿನಗಳಿಂದ ಬಾಣವಾರ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬರುವ ಕಾಡಾನೆಗಳು ಸಿದ್ದಲಿಂಗಪುರ, ಬಾಣವಾರ, ಭುವಂಗಾಲ ವ್ಯಾಪ್ತಿಯ ಪೋಲಿಸ್ ಪೆದೆ ವಿವೇಕ್  ಸೇರಿದಂತೆ ರೈತರ ಜಮೀನಿಗೆ ದಾಳಿ ಮಾಡಿ ತೆಂಗು, ಸಿಹಿ ಗೆಣಸು, ಮರ ಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು ತುಳಿದು ಅಪಾರ ಪ್ರಮಾಣದಲ್ಲಿ ಬೆಳೆಗಳನ್ನು ನಷ್ಟ ಪಡಿಸಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕಾಡಾನೆ ಹಗಲು ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕಾಡಾನೆಯನ್ನು ತಕ್ಷಣವೆ ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

Read More