ಲೇಖಕ: admin

ವಿರಾಜಪೇಟೆ ಅ.8 NEWS DESK  :  ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ. ಆರೋಗ್ಯ ಉತ್ತಮವಾಗಿರಲು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಮನೆಯಲ್ಲಿ ಹಸಿ ಕಸ ಒಣ ಕಸಗಳನ್ನು ಬೇರ್ಪಡಿಸಿ ಹಸಿ ಕಸವನ್ನು ಕಾಂಪೋಸ್ಟ್ ಗೊಬ್ಬರವಾಗಿ ಪರಿವರ್ತಿಸಿ ಗಿಡಗಳಿಗೆ ಬಳಸಿಕೊಳ್ಳಬೇಕು. ಒಣ ಕಸಗಳನ್ನು ಸ್ವಚ್ಛತಾ ಕರ್ಮಿಗಳಿಗೆ ನೀಡಿ ಪರಿಸರ ಮಾಲಿನ್ಯವಾಗದಂತೆ ಪ್ರತಿಯೊಬ್ಬರು ಗಮನ ಹರಿಸಿದರೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು…

Read More

ಬೆಂಗಳೂರು ಅ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ ಮತ್ತು 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಅಮೋಘ ಸೇವೆ ಸಲ್ಲಿಸಿದ ಅರಣ್ಯ ಸಿಬ್ಬಂದಿಗಳಿಗೆ ಪದಕ ನೀಡಿ, ಗೌರವಿಸಿದರು. ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿಗಳಾದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.8 NEWS DESK : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಚೆಪ್ಪುಡಿರ ಅರುಣ್ ಮಾಚಯ್ಯ ಅವರನ್ನು ಕಾಂಗ್ರೆಸ್ ಮುಖಂಡ ಅಪ್ರು ರವೀಂದ್ರ ಹಾಗೂ ಬೆಂಬಲಿಗರು ಸನ್ಮಾನಿಸಿ ಗೌರವಿಸಿದರು. ಅರುಣ್ ಮಾಚಯ್ಯ ಅವರ ಸ್ವಗೃಹಕ್ಕೆ ಭೇಟಿ ನೀಡಿದ ಅಪ್ರು ರವೀಂದ್ರ ನೇತೃತ್ವದ ನಿಯೋಗ ಆತ್ಮೀಯವಾಗಿ ಸನ್ಮಾನಿಸಿ ಮುಂದಿನ ಸಾರ್ವಜನಿಕ ಜೀವನ ಮತ್ತಷ್ಟು ಯಶಸ್ಸಿನತ್ತ ಸಾಗಲಿ ಎಂದು ಶುಭ ಹಾರೈಸಿತು. ವಿನೋದ್ ಪೂಜಾರಿ, ಅರುಣ, ಸುಜಾತ, ವಿನೋದ್ ಬಿ.ಎಂ, ಪರಿಚನ ಪ್ರಬಿ, ಪರಿಚನ ಮಹೇಶ್, ಅಕ್ಷಿತ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

Read More

ಬೆಂಗಳೂರು ಅ.8 NEWS DESK : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು…

Read More

ಸುಂಟಿಕೊಪ್ಪ ಅ.8 NEWS DESK : ಕುಶಾಲನಗರ ತಾಲ್ಲೂಕಿನ ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಸಮಸ್ತ ಮಲೆಯಾಳಿ ಭಾಷಿಗರ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಮೂರನೇ ವರ್ಷದ ಓಣಂ ಆಚರಣೆ ತಾ.12 ರಂದು ಕಾನ್ ಬೈಲ್ ನಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಕಲ್ಲೂರು ಬಸವೇಶ್ವರ ದೇವಾಲಯ ದಿಂದ ಕಾನ್ ಬೈಲ್ ಶಾಲೆಯವರೆಗೂ ಚಂಡೆ ಮೇಳದೊಂದಿಗೆ ಮೆರವಣಿಗೆ ಇರುತ್ತದೆ.  ಬಳಿಕ ಕಾನ್ ಬೈಲ್ ನ ಸರ್ಕಾರಿ ಶಾಲಾ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಓಣಂ ಅಂಗವಾಗಿ ಮಲೆಯಾಳಿ ಹಿಂದೂ ಸಮಾಜ ಬಾಂಧವರಿಗೆ ಪೂಕಳಂ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಬಳಿಕ ತಿರುವಾದಿರ ನೃತ್ಯ ದೊಂದಿಗೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೇರಳದ ವಿಶೇಷ ಬಾಣಸಿಗರಿಂದ ತಯಾರಿಸಿದ ಓಣಂ ಸದ್ಯ ಏರ್ಪಡಿಸಲಾಗಿದೆ ಎಂದು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಕೆ.ಜಿ.ರಾಜ ತಿಳಿಸಿದ್ದಾರೆ.…

Read More

ಮಡಿಕೇರಿ ಅ.8 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಕೆ.ಇ.ಉತ್ತಯ್ಯ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್  ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.

Read More

ವಿರಾಜಪೇಟೆ ಅ.8 NEWS DESK : “ವಿಶ್ವದ ಅಗ್ರ 2% ವಿಜ್ಞಾನಿಗಳು” (2025ರ ಸಮೀಕ್ಷೆ) ಪಟ್ಟಿಯಲ್ಲಿ ಡಾ.ಉತ್ತಪ್ಪ ಯು.ಟಿ. ಅವರು ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಮೆರಿಕಾದ ಸ್ಟ್ಯಾಂಫರ್ಡ್ ವಿಶ್ವವಿದ್ಯಾಲಯದ ಪ್ರೊ. ಪಿ.ಎ.ಜಾನ್ ಇಯೋನಿಡಿಸ್ ಅವರು, ಎಲ್ಸೆವಿಯರ್ (Elsevier) ಮತ್ತು ಸ್ಕೋಪಸ್ Scopus ಸಂಸ್ಥೆಗಳ ಸಹಯೋಗದೊಂದಿಗೆ “ವಿಶ್ವದ ಅಗ್ರ 2% ವಿಜ್ಞಾನಿಗಳು” ಎಂಬ ಪಟ್ಟಿಯನ್ನು ಪ್ರಕಟಿಸುತ್ತಾರೆ. ಈ ಪಟ್ಟಿ ವಿಶ್ವದಾದ್ಯಂತದ ಸುಮಾರು 2% ವಿಜ್ಞಾನಿಗಳಲ್ಲಿ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳನ್ನು ಗುರುತಿಸುವುದು. ಈ ಸಮೀಕ್ಷೆ ಮಾನದಂಡಿತ ಉಲ್ಲೇಖ (citation) ಅಂಶಗಳು ಮತ್ತು ಸಂಯುಕ್ತ ವೈಜ್ಞಾನಿಕ ಪರಿಣಾಮದ ಸೂಚ್ಯಂಕಗಳ ಆಧಾರದ ಮೇಲೆ ಮಾಡಲ್ಪಟ್ಟಿದೆ. ಡಾ. ಉತಪ್ಪ ಯು.ಟಿ. ಅವರು ಪ್ರಸ್ತುತ ಚೀನಾದ ಶೆನ್ಜೆನ್ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಮತ್ತು ಪರಿಸರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಸ್ಟ್-ಡಾಕ್ಟರಲ್ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮೊದಲು ಅವರು ದಕ್ಷಿಣ ಕೊರಿಯಾದ ಚೋನ್ನಮ್ ನ್ಯಾಷನಲ್ ಯುನಿವರ್ಸಿಟಿಯಲ್ಲಿ (2021-2022) ಪೋಸ್ಟ್-ಡಾಕ್ಟರಲ್ ಫೆಲೋ ಆಗಿ ಹಾಗೂ ಯಾಂಗ್ನಮ್ ಯುನಿವರ್ಸಿಟಿಯಲ್ಲಿ (2022-2023) ಸಂಶೋಧನಾ ಪ್ರಾಧ್ಯಾಪಕರಾಗಿ ಸೇವೆ…

Read More

ವಿರಾಜಪೇಟೆ ಅ.8 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ವತಿಯಿಂದ ಎನ್‍ಎಸ್‍ಎಸ್ ವಿಶೇಷ ಶಿಬಿರ ಅಮ್ಮತ್ತಿಯಲ್ಲಿ ನಡೆಯಿತು. ನಶಾ ಮುಕ್ತ ಭಾರತ ಅಭಿಯಾನ ಭಾಗವಾಗಿ ನಡೆದ ವಿಶೇಷ ಶಿಬಿರದಲ್ಲಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಶಿಬಿರದ ಸಮಾರೋಪ ಸಮಾರಂಭ ಅಮ್ಮತ್ತಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಎ.ಡಿ.ಅಕ್ಕಮ್ಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಶಿಸ್ತು, ಸಮಯ ಪಾಲನೆ, ಸಂಯಮ, ಎಲ್ಲರೊಡನೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಅಮ್ಮತ್ತಿ ಪ್ರೌಢಶಾಲೆ ಅಧ್ಯಕ್ಷ ಕಾವಾಡಿಚಂಡ ಗಣಪತಿ ಮಾತನಾಡಿ, ದಸರ ರಜೆಯಲ್ಲಿ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡು ಸಮಾಜಮುಖಿ ಕಾರ್ಯದಲ್ಲಿ ಭಾಗಿಯಾಗಿರುವುದು ಉತ್ತಮ ಬೆಳವಣಿಗೆ. ಸಮಾಜ ಸೇವೆ ಮಾಡಲು ಸಿಗುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಅಮ್ಮತ್ತಿ ಪ್ರೌಢಶಾಲೆ ನಿರ್ದೇಶಕ ಕೇಚಂಡ ಎಂ.ಕುಶಾಲಪ್ಪ, ಸದಸ್ಯೆ ಬಿ.ನಳಿನಿ, ಕಾವೇರಿ ಪಿಯು ಕಾಲೇಜಿನ ಪ್ರಾಂಶುಪಾಲ ನುಚ್ಚುಮಣಿಯಂಡ ನಾಣಯ್ಯ ಮುಂತಾವದರು…

Read More

ನಾಪೋಕ್ಲು ಅ.8 NEWS DESK : ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಕಾಡೆಮಿ ಪರವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಸುಳ್ಯದ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆ ಮತ್ತು 110 ಕೆವಿ ವಿದ್ಯುತ್ ಕಾಮಗಾರಿಯ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರಾದ ಹರೀಶ್ ಕುಮಾರ್ ಶೀಘ್ರ ದಲ್ಲಿಯೇ ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸುವುದಾಗಿ ತಿಳಿಸಿದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಅ.8 NEWS DESK : ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿಯಲ್ಲಿ ರೂ.1 ಕೋಟಿ 60ಲಕ್ಷ ಅನುದಾನದಲ್ಲಿ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿ ಪೂಜೆ ನೆರೆವೇರಿಸಿದರು. ಇದೀಗ ಕಾಮಗಾರಿ ಆರಂಭಗೊಂಡ ನಾಲ್ಕು ದಿನಗಳಲ್ಲಿ ಅರ್ಧದಷ್ಟು ಪೂರ್ಣಗೊಂಡಿದೆ. ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಬೆನ್ನಲ್ಲೇ, ಕಾಮಗಾರಿ ವೇಗ ಪಡೆದುಕೊಂಡು, ಇನ್ನು ಒಂದು ವಾರದೊಳಗೆ ಕಾಮಗಾರಿ ಮುಗಿಯುವ ಸಾಧ್ಯತೆ ಇದೆ.  ಶಾಸಕ ಪೊನ್ನಣ್ಣ ಅವರ ಕಾರ್ಯಕ್ಷಮತೆಗೆ ಸಾರ್ವಜನಿಕರಿಂದವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Read More