ವಿರಾಜಪೇಟೆ ಆ.19 NEWS DESK : ಭವ್ಯ ರಾಷ್ಟ್ರದ ನಿರ್ಮಾಣದಲ್ಲಿ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ ಎಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಾಲ್ಡಾನ್ಹಾ ಅವರು ಅಭಿಪ್ರಾಯಪಟ್ಟರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನ್ ಎಸ್ ಎಸ್ ಸಮಾಜ ಸೇವೆಯನ್ನು ಕಲಿಸಿದರೆ, ಯುವ ರೆಡ್ ಕ್ರಾಸ್ ಆರೋಗ್ಯದ ಪಾಠವನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಪ್ರಾಮಾಣಿಕತೆ, ಜವಾಬ್ದಾರಿಯುತ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಅರಿತಾಗ ಮಾತ್ರ ನೈಜ ಸೇವೆಯು ಸಮಾಜಕ್ಕೆ ದೊರಕುತ್ತದೆ. ಆ ನಿಟ್ಟಿನಲ್ಲಿ ಭವಿಷ್ಯದ ಹಿತದೃಷ್ಟಿಯಿಂದ ಸರ್ವರೂ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಮುಂದಾಗಬೇಕು. ಯಂಗ್ ಇಂಡಿಯಾ ಬಲಿಷ್ಠವಾಗಬೇಕೆಂದರು. ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು, ಸೇವಾ ಮನೋಭಾವನೆ ಎಂಬುವುದು ಎಲ್ಲರಲ್ಲಿಯೂ ಬರಬೇಕು. ಪರರ ಹಿತಕ್ಕಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಬೇಕು. ಶಿಸ್ತನ್ನು ಪರಿಪಾಲಿಸುವುದರ…
ಲೇಖಕ: admin
ಮಡಿಕೇರಿ ಆ.19 NEWS DESK : ಕುಶಾಲನಗರದ ಜ್ಞಾನಗಂಗಾ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಹೆಚ್.ಪ್ರೇಕ್ಷಾಳಿಗೆ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ ಲಭಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ನೀಡುವ ನಾವೀನ್ಯತೆ ಕ್ಷೇತ್ರದ ಪ್ರಶಸ್ತಿಗೆ ಪ್ರೇಕ್ಷಾ ಭಾಜನಳಾಗಿದ್ದು, ರೂ.10 ಸಾವಿರ ನಗದು ಹಾಗೂ ಪಾರಿತೋಷಕ ಪಡೆದಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಹೆಸರು ದಾಖಲಿಸಿದ, ತಾಲೂಕು ಮಟ್ಟದ ಪ್ರಬಂಧ, ಅಬಾಕಸ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆಯ ಪ್ರೇಕ್ಷಾ, ಸೋಮವಾರಪೇಟೆ ಸಮೀಪದ ಅಬ್ಬೂರುಕಟ್ಟೆ ಗ್ರಾಮದ ಗುತ್ತಿಗೆದಾರ ಟಿ.ಕೆ.ಹರೀಶ್ ಹಾಗೂ ವಿ.ಎಸ್.ಸಿಂಧುಜ ದಂಪತಿಯ ಪುತ್ರಿ.
ನಾಪೋಕ್ಲು ಆ.19 NEWS DESK : 2024-25ರ ಸಾಲಿನ ವಾರ್ಷಿಕ ರೂ.61.77 ಲಕ್ಷ ಲಾಭ ಗಳಿಸಿದ್ದು ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ ರೂ1.50 ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಹೇಳಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2024-25ರ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರ ಕನಸಾದ ವಿಕಸಿತ ಭಾರತ ಸಂಕಲ್ಪಕ್ಕೆ ಸಹಕಾರ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಪಿ.ಎಂ.ಅಶೋಕ, ನಿರ್ದೇಶಕರುಗಳಾದ ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ, ದೀನರಾಜ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ವಿನೀತ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು. ಸಂಘದ…
ಮಡಿಕೇರಿ NEWS DESK ಆ.19 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 5 ರಿಂದ 6 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಅರ್ಜುನನಿಗೆ ಗೀತೋಪದೇಶ ಮಾಡುವ ಶ್ರೀಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ನಾಪೋಕ್ಲು ಆ.19 NEWS DESK : ಗ್ರಾಮೀಣ ಮಟ್ಟದಲ್ಲಿ ಹಲವು ಪ್ರತಿಭೆಗಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದೂ ಬಾಂಧವರಿಗಾಗಿ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು, ಜನಾಂಗದವರನ್ನು ಉಗ್ಗೂಡಿಸುವ ಶಕ್ತಿ ಕ್ರೀಡೆಗಿದೆ. ದೇಶಕ್ಕೆ ದೊಡ್ಡ ಕೊಡುಗೆಯನ್ನು ಜಿಲ್ಲೆಯ ಕ್ರೀಡಾಪಟುಗಳು ನೀಡಿದ್ದಾರೆ ಮತ್ತಷ್ಟು ಕ್ರೀಡಾ ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು ಎಂದರು. ನಾಡಿನ ಸಮಸ್ತ ದೇವಾನುದೇವತೆಗಳು ಯುವಕರಿಗೆ,ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿ.ಉತ್ತಮಮಳೆ-ಬೆಳೆಯಾಗಿ ನಾಡು ನಾಡುಸಮೃದ್ದಿಯಿಂದ ಕೂಡಿರಲಿ ಎಂದರು. ಸ್ಥಳೀಯ ಗ್ರಾಮೀಣ ನಿವಾಸಿಗಳು ಶತಮಾನಗಳಿಂದ ಹಗ್ಗಜಗ್ಗಾಟದಂತಹ ಹಲವು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ ಇಂತಹ ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ…
ವಿರಾಜಪೇಟೆ ಆ.19 NEWS DESK : ರಾಜ್ಯದಾದ್ಯಂತ ಪ್ರಖ್ಯಾತವಾಗಿರುವ ವಿರಾಜಪೇಟೆಯ ಐತಿಹಾಸಿಕ ಗೌರಿ ಗಣೇಶ ಉತ್ಸವ ಕಾನೂನು ಕಟ್ಟಳೆಗಳನ್ನು ಪಾಲನೆ ಮಾಡುವುದರೊಂದಿಗೆ ಅಹಿತಕರ ಘಟನೆಗಳಿಗೆ ಅನುವು ಮಾಡಿಕೊಡದೆ ಸಾಮರಸ್ಯದ ಹಬ್ಬವಾಗಿ ಆಚರಣೆ ಆಗಲಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದರು. ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ, ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಸಭೆಯಲ್ಲಿ ಈ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಪೊನ್ನಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷ ಅದ್ದೂರಿಯಿಂದ ಆಚರಿಸಲ್ಪಡುವ ಶ್ರೀ ಗಣೇಶೋತ್ಸವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಅತೀ ಮುಖ್ಯವಾಗಿ ಪರಿಸರ ಕಾಳಜಿಯೊಂದಿಗೆ ಈ ಗಣೇಶೋತ್ಸವವನ್ನು ಆಚರಿಸುವಂತೆ ಸಲಹೆ ನೀಡಿದ ಶಾಸಕರು, ಪ್ರಕೃತಿಗೆ ಹಾನಿಕಾರವಾದ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಪರಿಸರಕ್ಕೆ ಮಾರಕವಾಗಬಹುದಾದಂತಹ ಯಾವುದೇ ಬಣ್ಣವಾಗಲಿ, ಪೇಪರ್ ವಸ್ತುಗಳನ್ನಾಗಲಿ ಬಳಸದೇ ಗಣೇಶೋತ್ಸವವನ್ನು ಆಚರಿಸೋಣ ಎಂದರು. ನಾಡಿನ ಪರಂಪರೆ, ಸಂಸ್ಕೃತಿ ಹಾಗೂ ಕಲೆಯನ್ನು ಪೆÇ್ರೀತ್ಸಾಹಿಸುವಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ…
ಮಡಿಕೇರಿ NEWS DESK ಆ.19 : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಕೇವಲ ಪ್ರಚಾರಕ್ಕಾಗಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಈ.ಅಶ್ರಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಿಂದ ಹತಾಶಗೊಂಡಿರುವ ಜೆಡಿಎಸ್ ಪಕ್ಷದ ಮುಖಂಡರೆನಿಸಿಕೊಂಡಿರುವ ಕೆಲವರು ರಾಜಕೀಯ ನಿರುದ್ಯೋಗದಿಂದ ಹೊರ ಬರಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಜೆಡಿಎಸ್ ನ ಅನೇಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಮತ್ತು ಶಾಸಕರುಗಳಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಮತ್ತಷ್ಟು ಮಂದಿ ಕಾಂಗ್ರೆಸ್ ಗೆ ಬರಲು ಕಾಯುತ್ತಿದ್ದಾರೆ. ಇದನ್ನು ಸಹಿಸದ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದೆ. ಅಲ್ಪಸಂಖ್ಯಾತರ ಹಿತ ಕಾಯುವಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿದೆ. ಜಿಲ್ಲೆಯ…
ಮಡಿಕೇರಿ ಆ.19 NEWS DESK : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಹಾಗೂ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ದಿನನಿತ್ಯ ಹಲವರು ಪ್ರತಿಭೆಗಳು ಹೊರ ಹೊಮ್ಮುತ್ತಿದ್ದಾರೆ, ಈ ಕಲೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಡಾ.ಹೆಚ್.ಎಂ.ರಘು ಕೋಟಿ ವಹಿಸಿ ಮಾತನಾಡಿ, ತಮ್ಮ ಪ್ರತಿಭೆ ಹೊರ ಹೊಮ್ಮಲು ಯಾವುದೇ ಪದವಿಗಳ ಅವಶ್ಯಕತೆ ಇಲ್ಲ ಅದು ಸುಪ್ತ ಮನಸ್ಸಿನಿಂದ ಹೊರ ಹೊಮ್ಮಿ ಜಗತ್ತಿಗೆ ಅನಾವರಣಗೊಳ್ಳುತ್ತದೆ. ತಮಗೊಲಿದ ಕಲೆಯನ್ನು ನಿಷ್ಠೆಯಿಂದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಘು ಕೋಟಿ ಹೇಳಿದರು. ಹಿರಿಯ ಸಾಹಿತಿ ಭಾರದ್ವಾಜ್.ಕೆ. ಅನಂತ ತೀರ್ಥ ಅವರು ಸಾಹಿತ್ಯದ ನುಡಿಗಳನ್ನು ನುಡಿದರು, ಕಾವ್ಯ ಕವಿತೆಯಲ್ಲಿ ಆಸಕ್ತಿ ಇರುವವರು…
ವಿರಾಜಪೇಟೆ ಆ.19 NEWS DESK : ಶ್ರೀ ಕೃಷ್ಣ ಜನ್ಮಾಷ್ಠಮಿಯು ನಮ್ಮ ಇತಿಹಾಸ ಮತ್ತು ಸಂಸ್ಕøತಿಯಲ್ಲಿ ಬಹಳ ಮಹತ್ವತೆಯನ್ನು ಪಡೆದಿದೆ ಎಂದು ಶಿಕ್ಷಕರಾದ ವಿ.ಟಿ. ವೆಂಕಟೇಶ್ ಹೇಳಿದರು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ವರ್ಷ ಇಡೀ ಜಗತ್ತು ಕೃಷ್ಟ ಜನ್ಮಾಷ್ಟಮಿ ಆಚರಿಸುತ್ತದೆ. ಮನೆ ಹಿರಿಯರನ್ನೂ ಮಕ್ಕಳೊಂದಿಗೆ ಮಕ್ಕಳಂತೆ ಸಂತೋಷ ಪಟ್ಟುಕ್ಕೊಳ್ಳಲು ಉತ್ತಮ ಅವಕಾಶವಾಗಿದೆ. ಮಕ್ಕಳಿಗೆ ಶಾಲೆಯ ವಿಷಯಗಳಿಂದ ಭಿನ್ನವಾಗಿ ತಮ್ಮನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಕಾರ್ಯಕ್ರಮ ಎಂದರು. ಸಾಹಿತಿಗಳು, ವಿರಾಜಪೇಟೆ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ರಜಿತ ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ವಿಚಾರಗಳು ಪ್ರಸ್ತುತ ಕೃಷ್ಣನ ಬದುಕಿನ ಕಥೆಗಳು ನಮ್ಮ ಜೀವನಕ್ಕೂ ಪ್ರೇರಣೆಯಾಗಲಿದೆ. ಇದರ ಸಾರವನ್ನು…
ನಾಪೋಕ್ಲು ಆ.19 NEWS DESK : ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಲ್. ಕೆ. ಜಿ ಹಾಗೂ ಯು. ಕೆ. ಜಿ. ತರಗತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣದ ಭಧ್ರ ಅಡಿಪಾಯವನ್ನು ಹಾಕಬೇಕಿದೆ.ಅದು ಅಂಗನವಾಡಿ ಕೇಂದ್ರಗಳ ಮುಖಾಂತರ ಆಗಬೇಕಿದ್ದು, ಎಳೆಯ ವಯಸ್ಸಿನಿಂದಲೇ ಮಕ್ಕಳು ಶಿಸ್ತನ್ನು ಕಲಿಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ತರಬೇತಿ ನೀಡಬೇಕು. ಆ ಮೂಲಕ ಶಿಸ್ತುಬದ್ಧ ಬದುಕನ್ನು ರೂಪಿಸುವಂತಾಗಬೇಕು ಎಂದರು. ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವುದು, ಸರ್ಕಾರದ ಆಶಯ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ,ಯುಕೆಜಿ ಅನ್ನು ಪ್ರಾರಂಭಿಸಲಾಗುವುದು .ವಿರಾಜಪೇಟೆ ತಾಲೂಕಿನ ಕೆಲವೆಡೆ ಎಲ್ ಕೆಜಿ,ಯುಕೆಜಿ ಅನ್ನು ಈಗಾಗಲೇ ಆರಂಭಿಸಲಾಗಿದೆ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಇದೀಗ…






