ಮಡಿಕೇರಿ NEWS DESK ಸೆ.1 : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ (ಮಲ ಹೊರುವ ಕಾರ್ಮಿಕರು) ಸಮಗ್ರ ಸಮೀಕ್ಷೆ, ಗುರುತಿಸುವಿಕೆ, ಪುನರ್ವಸತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಆ.24ರಿಂದ ಸೆ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಜಾಥಾ ಇಂದು ಕೊಡಗು ಜಿಲ್ಲೆಯನ್ನು ತಲುಪಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಪಿ.ಇ.ಎಂ.ಎಸ್.ಆರ್. ಕಾಯ್ದೆ 2013ರಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ ಸಮಗ್ರ ಹಾಗೂ ಪಾರದರ್ಶಕ ಸಮೀಕ್ಷೆ ನಡೆಸಿ, ಗುರುತಿಸಲ್ಪಟ್ಟ ಪ್ರತಿಯೊಬ್ಬರಿಗೂ ಸಂಪೂರ್ಣ ಪುನರ್ವಸತಿ ಕಲ್ಪಿಸಬೇಕು ಎಂದು ಸಮಿತಿಯ ಪ್ರಮುಖರು ಒತ್ತಾಯಿಸಿದರು. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ಉಚಿತ ನಿವೇಶನ ಅಥವಾ ಪಕ್ಕಾ ಮನೆ, ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಶಾಶ್ವತ ಪರ್ಯಾಯ ಉದ್ಯೋಗ, ಸ್ವಯಂ ಉದ್ಯೋಗಕ್ಕೆ ಕೌಶಲ್ಯ ತರಬೇತಿ, ಉಪಕರಣ, ಬಂಡವಾಳ ಹಾಗೂ ಆರ್ಥಿಕ ನೆರವು ನೀಡಬೇಕು. ಗುರುತಿಸಲ್ಪಟ್ಟ ಕುಟುಂಬಗಳಿಗೆ ಆರೋಗ್ಯ ವಿಮೆ…
ಲೇಖಕ: admin
ಮಡಿಕೇರಿ ಆ.31 NEWS DESK : ಕುಶಾಲನಗರ ಪಟ್ಟಣಕ್ಕೆ ಒಳಚರಂಡಿ ಕಲ್ಪಿಸುವ ಪರಿಷ್ಕೃತ ಅಂದಾಜು ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ವಿವಿಧ ಬಡಾವಣೆಯಲ್ಲಿ ಒಳಚರಂಡಿ ಸಂಪರ್ಕಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಹಿಂದಿನ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿ, ಮುಳ್ಳುಸೋಗೆ ಗ್ರಾಮ ಮತ್ತು ಭಾಗಶಃ ಗುಮ್ಮನಕೊಲ್ಲಿ ಗ್ರಾಮಗಳಲ್ಲಿ ಒಟ್ಟು 76.0 ಕಿ.ಮೀ ಉದ್ದ ಒಳಚರಂಡಿ ಜಾಗವನ್ನು ಅಳವಡಿಸಲಾಗಿದ್ದು, 2 ಸಂಖ್ಯೆ ವೆಟ್‍ವೆಲ್‍ಗಳನ್ನು (ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಿಂಭಾಗ ಮತ್ತು ಹಳೆ ಮಾರ್ಕೆಟ್ ಹತ್ತಿರ) ನಿರ್ಮಾಣ ಮಾಡಿ ಪಂಪಿಂಗ್ ಮೆಷಿನರಿಗಳು, 4.5 ದಶ ಲಕ್ಷ ಲೀಟರ್ ಸಾಮಾಥ್ರ್ಯದ ಮಲಿನ ನೀರು ಶುದ್ದೀಕರಣ ಘಟಕ, ಮಲಿನ ನೀರು ಶುದ್ದೀಕರಣ ಘಟಕಕ್ಕೆ ವೆಟ್‍ವೆಲ್‍ಗಳಿಂದ ಏರು ಕೊಳವೆ ಸಾಲು ಅಳವಡಿಸುವ ಕಾಮಗಾರಿ ಪೂರ್ಣಗೊಂಡಿರುತ್ತದೆ. ಕುಶಾಲನಗರ ಪಟ್ಟಣದ ಈ ಕೆಳಕಂಡ ಪ್ರದೇಶಗಳಲ್ಲಿ ಬರುವ ಮನೆ/ ವಾಣಿಜ್ಯ ಮಳಿಗೆಗಳಿಂದ ಒಳಚರಂಡಿ ವ್ಯವಸ್ಥೆಗೆ ಸಂಪರ್ಕ ಮಾಡಬಹುದಾಗಿದೆ. 1) ಕಾರು ಮಾಲೀಕರ ಸಂಘ ಬಡಾವಣೆ, 2) ಗುಂಡುರಾವ್ ಬಡಾವಣೆ, 3) ನೆಹರು ಬಡಾವಣೆ,…
ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899 ಆಹಾರ ಮಾದರಿಗಳನ್ನು ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯದಲ್ಲಿ (Chief Food Analyst, Division Food Laboratory, Mysore) ವಿಶ್ಲೇಷಿಸಲಾಗಿದೆ. ಈ ಪೈಕಿ 4 ಆಹಾರ ಮಾದರಿಗಳು ಅಸುರಕ್ಷಿತ ಹಾಗೂ 2 ಆಹಾರ ಮಾದರಿಗಳು ಕಡಿಮೆ ಗುಣಮಟ್ಟದವು (Sub-standard) ಎಂದು ವರದಿಯಾಗಿದೆ. ಅಸುರಕ್ಷಿತ ಆಹಾರ ಪದಾರ್ಥಗಳನ್ನು ತಯಾರಿಸಿ ಅಥವಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಕಡಿಮೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಅಥವಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ-2011ರ ಸೆಕ್ಷನ್ 51ರಡಿ ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ನ್ಯಾಯ ನಿರ್ಣಾಯಾಧಿಕಾರಿಗಳ ಮುಂದೆ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟು ರೂ.10 ಸಾವಿರ ದಂಡ ವಿಧಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಮಸಾಲೆ ಪದಾರ್ಥಗಳು (ಸ್ಪೈಸಸ್) ಹಾಗೂ ಚಾಕೊಲೇಟ್‌ಗಳ ಮಾರಾಟ…
ಮಡಿಕೇರಿ ಆ.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಸೆಪ್ಟೆಂಬರ್, 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಅಧ್ಯಕ್ಷರಾದ ಜಿ.ಎಲ್.ದಾಸ, ಗೌರವಾಧ್ಯಕ್ಷರಾದ ಜಿ.ಎ.ಚಾಮಿ, ಜಿ.ವಿ.ರವಿಕುಮಾರ್, ಜಿ.ಜಿ.ಬಾಲಕೃಷ್ಣ, ಉಪಾಧ್ಯಕ್ಷರಾದ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿ…
ವಿರಾಜಪೇಟೆ, ಆ.31 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲೂಕಿನ ಮೂರ್ನಾಡು ವಲಯ, ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಮರಗೋಡು ಇವರ ಜಂಟಿ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ, ಗಾಲಿಕುರ್ಚಿ ಹಾಗೂ ವಾಟರ್ ಬೆಡ್ ವಿತರಣೆ ಮತ್ತು ಸಭಾ ಕಾರ್ಯಕ್ರಮವು ಮರಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಗೀತಾ ಕೆ.ಸಿ. ವಹಿಸಿದ್ದರು. ಮರಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಂಗಿರ ಎನ್. ಸತೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮರಗೋಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಿತ್ರ ಬಿ.ಪಿ. ಮಾತನಾಡಿ, ಜನಮಂಗಲ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಗೆ ವೀಲ್‌ಚೇರ್ ಹಾಗೂ ವಾಟರ್…
ವಿರಾಜಪೇಟೆ ಆ.31 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೆಡಿಕಲ್ ವಿಭಾಗ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಶೆ ಮುಕ್ತ ಭಾರತ ಅಭಿಯಾನ ಹಾಗೂ ಮಿಷನ್ ಸ್ಪಂದನ ಯೋಜನೆಯಡಿ ಆಯೋಜಿಸಲಾಗಿದ್ದ ಬೃಹತ್ ಜಾಗೃತಿ ಕಾರ್ಯಕ್ರಮಗಳು ವಿರಾಜಪೇಟೆ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಭಾರತದಾದ್ಯಂತ ಸುಮಾರು 7,000 ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾದ 10 ಕೋಟಿ ನಶೆ ಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನದ ಭಾಗವಾಗಿ ಈ ಜಾಗೃತಿ ತರಬೇತಿಗಳನ್ನು ನಡೆಸಲಾಯಿತು. ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ವಿವಿಧ ದುರಭ್ಯಾಸಗಳಿಂದ ಹೊರಬರಲು ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಧ್ಯಾತ್ಮಿಕ ಜ್ಞಾನ ಮತ್ತು ರಾಜಯೋಗ ಧ್ಯಾನದ ಕುರಿತು ವಿಶೇಷ ಮಾರ್ಗದರ್ಶನ ನೀಡಲಾಯಿತು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಕೆ. ಪದ್ಮಾ ಅವರ…
ವಿರಾಜಪೇಟೆ ಆ.31 NEWS DESK : ಜಮಾಅತೆ ಇಸ್ಲಾಮಿ ಹಿಂದ್ ಸಂಸ್ಥೆಯು ಆಯೋಜಿಸುವ ಪ್ರತಿಯೊಂದು ಕಾರ್ಯಕ್ರಮವೂ ಜನಮುಖಿಯಾಗಿದ್ದು, ಸಾಮುದಾಯಿಕ ಕಳಕಳಿಯಿಂದ ಕೂಡಿರುತ್ತದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನೋತ್ಸವದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ಸೀರತ್ ಅಭಿಯಾನ’ದ ಅಂಗವಾಗಿ ವಿರಾಜಪೇಟೆಯ ಶ್ರೀ ವಿರಕ್ತ ದೊಡ್ಡಮಠದಲ್ಲಿ ಆಯೋಜಿಸಲಾಗಿದ್ದ ಎರಡು ಪ್ರಮುಖ ಸಾಹಿತ್ಯ ಕೃತಿಗಳ ಬಿಡುಗಡೆ ಹಾಗೂ ಧಾರ್ಮಿಕ ಸೌಹಾರ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಹಿತ್ಯದ ಮೂಲಕ ಪ್ರವಾದಿ ಮುಹಮ್ಮದ್ (ಸ) ಅವರ ಉನ್ನತ ಚಿಂತನೆಗಳು ಮತ್ತು ಮಾನವೀಯ ಮೌಲ್ಯಗಳನ್ನು ಜನಮಾನಸಕ್ಕೆ ತಲುಪಿಸುವುದರ ಜೊತೆಗೆ, ಅವು ಜನರ ನೆನಪಿನಲ್ಲಿ ಸದಾ ಉಳಿಯುವಂತೆ ಮಾಡುವ ಉದ್ದೇಶದಿಂದ ಕೃತಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು. ಇತ್ತೀಚೆಗಷ್ಟೇ ನಿರಾಶ್ರಿತರಿಗೆ ಮನೆಗಳನ್ನು ಹಸ್ತಾಂತರಿಸುವಂತಹ ಉತ್ತಮ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ನಾವು ಕಂಡಿದ್ದೇವೆ. ಶಾಂತಿ ಪ್ರಕಾಶನ ಸಂಸ್ಥೆಯು ಕಳೆದ ಹಲವು…
ಸೋಮವಾರಪೇಟೆ, NEWS DESK ಆ.30: ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಒಕ್ಕಲಿಗರ 10ನೇ ವರ್ಷದ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಸೆ.6ರಂದು ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಗೂರು ಗ್ರಾಮದ ದೇವರಾಜು ಅವರ ಗದ್ದೆಯಲ್ಲಿ ಏರ್ಪಡಿಸಲಾಗಿದೆ ಎಂದು ವೇದಿಕೆಯ ಕ್ರೀಡಾಕೂಟ ಉಸ್ತುವಾರಿ ದಿವಾಕರ್ ಕೂತಿ ಹೇಳಿದರು. ಸೆ.6ರಂದು ದಿನವಿಡೀ ಕ್ರೀಡಾಕೂಟ ನಡೆಯಲಿದೆ. ಪ್ರತಿವರ್ಷವೂ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುತ್ತಿರುವ ವೇದಿಕೆ, ಈ ಬಾರಿ ದಶಮಾನೋತ್ಸವದ ಸಂಭ್ರಮದಲ್ಲಿ ಕ್ರೀಡಾಕೂಟವನ್ನು ಮತ್ತಷ್ಟು ವಿಶೇಷವಾಗಿ ಆಯೋಜಿಸುತ್ತಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದ ಕೆಸರುಗದ್ದೆ ಕ್ರೀಡೆಗಳು ಇತ್ತೀಚಿನ ವರ್ಷಗಳಲ್ಲಿ ಮರೆಯಾಗುತ್ತಿವೆ. ಇಂತಹ ಕ್ರೀಡೆಗಳನ್ನು ಉಳಿಸುವುದರೊಂದಿಗೆ ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಹಾಗೂ ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾಕೂಟದ ಪ್ರಮುಖ ಉದ್ದೇಶವಾಗಿದೆ. ಅಲ್ಲದೆ, ಯುವಕರು ಭತ್ತ ಕೃಷಿಯತ್ತ ಚಿತ್ತ ಹರಿಸಬೇಕು ಎಂಬ ಸಂದೇಶವನ್ನೂ ಕ್ರೀಡಾಕೂಟದ ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು. ಪುರುಷರ ವಿಭಾಗದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಕೆಸರುಗದ್ದೆ…
ಸುಂಟಿಕೊಪ್ಪ, NEWS DESK ಆ.31: ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸಿ, ಅವರಿಗೆ ಸಂಕಷ್ಟಗಳು ಎದುರಾದಾಗ ಪುರುಷ ಸಮಾಜ ಬೆಂಬಲವಾಗಿ ನಿಂತು, ಸಹೋದರಿಯರ ಸಮಸ್ಯೆಗಳನ್ನು ನಿವಾರಿಸಲು ಮುಂದಾದಾಗ ಮಾತ್ರ ರಕ್ಷಾಬಂಧನದ ಆಶಯ ಸಾರ್ಥಕವಾಗುತ್ತದೆ ಎಂದು ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಕೋಟ್ಯಾನ್ ಹೇಳಿದರು. ಮಂಜನಾಥಯ್ಯ–ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಾರಾಯಣ ಗುರು ಬಿಲ್ಲವ ಸೇವಾ ಸಂಘ, ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಆಯೋಜಿಸಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರಿಗೆ ಯಾವುದೇ ಸಮಸ್ಯೆ ಎದುರಾದರೂ ಅದನ್ನು ತಮ್ಮ ಮನೆಯ ಸಹೋದರಿಯ ಸಮಸ್ಯೆ ಎಂದು ಭಾವಿಸಿ, ಬಗೆಹರಿಸಲು ಎಲ್ಲರೂ ಸಿದ್ಧರಿರಬೇಕು. ಈ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸಾಧ್ಯ. ಪ್ರತಿಯೊಬ್ಬ ಸಹೋದರನು ತನ್ನ ಸಹೋದರಿಯ ರಕ್ಷಣೆಗೆ ಮುಂದಾದರೆ ರಾಮರಾಜ್ಯದ ಕಲ್ಪನೆ ನನಸಾಗಲಿದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಮಣಿಮುಖೇಶ್ ಮಾತನಾಡಿ,…
ಮಡಿಕೇರಿ NEWS DESK ಆ.31 : ಕಾವೇರಿ ನದಿ ನೀರಿನಿಂದ ಸಾಕಷ್ಟು ಲಾಭ ಮಾಡಿಕೊಳ್ಳುತ್ತಿರುವ ರಾಜ್ಯ ಸರಕಾರ ಕಾವೇರಿಯ ಜನ್ಮ ಸ್ಥಳ ಕೊಡಗಿನ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನವನ್ನು ನೀಡದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಬಾರಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಎಲ್ಲಾ ರಸ್ತೆಗಳನ್ನು ಪುನರ್ ಡಾಂಬರೀಕರಣ ಮತ್ತು ಕಾಂಕ್ರಿಟೀಕರಣ ಮಾಡುವ ಅನಿವಾರ್ಯತೆ ಇದೆ. ಆದ್ದರಿಂದ ಕೊಡಗಿನ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ರೂ.1 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಉತ್ತಮ ಮಳೆಯಾಗುವುದರಿಂದ ರಾಜ್ಯದ ಕೋಟ್ಯಾಂತರ ಜನ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನಡೆಯುತ್ತಿರುವ ಸಂಘರ್ಷ ಶಮನವಾಗಲು ಜಿಲ್ಲೆಯಲ್ಲಾಗಿರುವ ಮಳೆಯೇ ಕಾರಣವಾಗಿದೆ. ಮಳೆಗಾಗಿ ಪ್ರಾರ್ಥನೆ…






