ಕುಶಾಲನಗರ ಜು.26 NEWS DESK : ಕುಶಾಲನಗರ ಪುರಸಭೆ ಕಟ್ಟಡ ನಿರ್ಮಾಣ ಸೇರಿದಂತೆ 1.5 ಕೋಟಿ ರು.ಗಳ ಕಾಮಗಾರಿಗಳು ವಾರ್ಡ್ ಜನ ಪ್ರತಿನಿಧಿಗಳ ಗಮನಕ್ಕೆ ಬಾರದೆ ನಡೆದಿರುವ ಬಗ್ಗೆ ಸದಸ್ಯರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯಿತು. ಪುರಸಭೆಯ ನೂತನ ಕಟ್ಟಡ ನಿರ್ಮಾಣ ಸಂದರ್ಭ 1.25 ಕೋಟಿ ರೂ ವೆಚ್ಚದ ಬೃಹತ್ ಮೊತ್ತದ ಕಾಮಗಾರಿಗೆ ಅಧ್ಯಕ್ಷರು ಘಟನೋತ್ತರ ಅನುಮತಿ ನೀಡಿದ್ದು, ಈ ಬಗ್ಗೆ ಮತ್ತು ಕುಶಾಲನಗರ ಪಟ್ಟಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ 16.5 ಲಕ್ಷ ರೂಗಳ ಕಾಮಗಾರಿಗೆ ಸಭೆ ಅನುಮೋದನೆ ಪಡೆದಿಲ್ಲ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಯಿತು. ಸದಸ್ಯರಾದ ಅಮೃತರಾಜ್ ಮಾತನಾಡಿ, ತುರ್ತು ಸಂದರ್ಭ ಅಧ್ಯಕ್ಷರು ಸದಸ್ಯರ ಗಮನಕ್ಕೆ ತಾರದೆ ಕೆಲವು ಮಿತಿಯಲ್ಲಿ ಮಾತ್ರ ಕೆಲಸ ಮಾಡಬಹುದು. ಆದರೆ ವಾರ್ಡ್ ಸದಸ್ಯರ ಹಕ್ಕನ್ನು ಕಸಿಯುವುದು ಸರಿಯಲ್ಲ ಎಂದು ಆರೋಪಿಸಿದರು. ವಾರ್ಡ್ ಸದಸ್ಯರುಗಳ ಗಮನಕ್ಕೆ ತರದೆ…
ಲೇಖಕ: admin
ಮಡಿಕೇರಿ ಜು.26 NEWS DESK : ನಗರದ ವಿವಿಧ ಸಂಘಟನೆಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕೊಡಗು ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ನಗರದ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. ಈ ಸಂದರ್ಭ ಮಾಜಿ ಸೇನಾಧಿಕಾರಿಗಳು, ಹಿಂದು ಜಾಗರ ವೇದಿಕೆಯ ಪ್ರಮುಖರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾಜಿ ಸೇನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ದೇಶಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡಿದ್ದರು. ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು.
ಮಡಿಕೇರಿ ಜು.26 NEWS DESK : ಇದು ಭಾರತೀಯರ ಆತ್ಮಸ್ಮರಣೆಯ ದಿನ. ಇದು ಕೇವಲ ಒಂದು ಇತಿಹಾಸದ ಪುಟವಲ್ಲ; ದೇಶದ ಸಂವಿದಾನಿಕ ಸಮಗ್ರತೆಗಾಗಿ ಹೋರಾಡಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ ಪವಿತ್ರ ದಿವಸ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಗೆಲುವಿನ ಸಂಕೇತವಾಗಿ ಪ್ರತಿ ವರ್ಷದ ಈ ದಿನವನ್ನು ನಾವು ‘ಕಾರ್ಗಿಲ್ ವಿಜಯ ದಿವಸ’ ವಾಗಿ ಆಚರಿಸುತ್ತೇವೆ. ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ’ ದೇಶದ ಜನಮನದಲ್ಲಿ ಹೊಸ ಚೈತನ್ಯ ಮೂಡಿಸಿದರೂ, ಅದಕ್ಕೂ ಮುನ್ನ ಹಿಮಾಲಯದ ಎತ್ತರದ ಪರ್ವತಗಳಲ್ಲಿ ನಡೆದ ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶ್ರೇಷ್ಠತೆ, ಶೌರ್ಯ ಮತ್ತು ತ್ಯಾಗದ ಪ್ರತಿ ರೂಪವಾಗಿದೆ. 1999ರ ಮೇ ತಿಂಗಳಿನಲ್ಲಿ ಪಾಕಿಸ್ತಾನಿ ಸೇನೆಯ ಜೊತೆಗೂಡಿದ ಉಗ್ರರು ನಿಯಂತ್ರಣ ರೇಖೆ (ಐoಅ) ದಾಟಿ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಉಚ್ಚ ಪ್ರದೇಶಗಳನ್ನು ಆಕ್ರಮಿಸಿದರು. ಈ ಆಕ್ರಮಣವು ಭಾರತಕ್ಕೆ ಆಘಾತ ನೀಡುವಷ್ಟು ತೀವ್ರವಾಗಿತ್ತು. ಪರ್ವತ ಶಿಖರಗಳಲ್ಲಿ ಬೀಡು ಬಿಟ್ಟ ಪಾಕಿಸ್ತಾನಿ ಸೇನೆ, ಲಡಾಖ್ ಅನ್ನು ಉಳಿದ…
ಮಡಿಕೇರಿ ಜು.26 NEWS DESK : ರಾತ್ರಿ ಸುರಿದ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬವರ ಪತ್ನಿ ಸುಷ್ಮಾ (37) ಹಾಗೂ 3 ಮಕ್ಕಳು ವಾಸವಿದ್ದರು. ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಸುಷ್ಮಾ ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಡಿಕೇರಿ ಜು.25 NEWS DESK : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ದೂರವಾಣಿ ಸಂಖ್ಯೆ 9482894676 ಇವರನ್ನು ಅಥವಾ ಮುಖ್ಯ ಶಿಕ್ಷಕರು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ದೂರವಾಣಿ ಸಂಖ್ಯೆ: 8618546009 ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜು.25 NEWS DESK : ‘ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕು ಘೋಷಣೆಯಾಗಿ 7 ವರ್ಷ ಕಳೆದಿದೆ. ಆ ದಿಸೆಯಲ್ಲಿ ಸರ್ಕಾರ ಪ್ರಜಾಸೌಧ ಹೆಸರಿನಲ್ಲಿ ಎರಡು ಆಡಳಿತ ಸೌಧ ನಿರ್ಮಾಣಕ್ಕೆ ತಲಾ 8.65 ಕೋಟಿ ರೂ.ವನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆಯೂ ಸಹ ಆಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.’ ಕೊಡಗು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ ಪೊನ್ನಂಪೇಟೆಯ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ಮಾತನಾಡಿದರು. ಸರ್ಕಾರ ಭೂಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆ ತಹಶೀಲ್ದಾರರ ಕಚೇರಿಯಲ್ಲಿ ಯಾವ ರೀತಿ ಅಪ್‍ಡೇಟ್ ಮಾಡಿದ್ದಾರೆ ಎಂಬ ಬಗ್ಗೆ ಸಚಿವರು ಮಾಹಿತಿ ಪಡೆದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ತಂದಿದ್ದು, ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ…
ಮಡಿಕೇರಿ ಜು.25 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜು.26 ರಂದು 09.30 ರಿಂದ ಸಂಜೆ 5.00 ಗಂಟೆಯವರೆಗೆ ಸದರಿ ಫೀಡರ್‍ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಆರ್ಜಿ, ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜು.25 NEWS DESK : ಕೊಡಗಿನ ಮೂಲ ನಿವಾಸಿ ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅಗತ್ಯ ಆರ್ಥಿಕ ನೆರವು ಒದಗಿಸಬೇಕೆಂದು ಕೋರಿ ಕೊಯವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇಂದು ಶಾಸಕರ ಸೋಮವಾರಪೇಟೆಯ ನಿವಾಸದ ಕಚೇರಿಯಲ್ಲಿ ಭೇಟಿಯಾದ ಕೊಯವ ಸಮಾಜದ ಪ್ರಮುಖರು ಮೂರ್ನಾಡಿನಲ್ಲಿ ಕಟ್ಟಡ ನಿರ್ಮಿಸಲು ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಲಾಗಿದೆ. ಸಣ್ಣ ಸಮುದಾಯದ ಅಭ್ಯುದಯಕ್ಕಾಗಿ ಆರ್ಥಿಕ ನೆರವು ನೀಡುವಂತೆ ಕೋರಿದರು. ಮನವಿ ಸ್ವೀಕರಿಸಿದ ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರಲ್ಲದೆ ಸರಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಕೊಡಗಿನಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಬೆಳವಣಿಗೆ ಹೊಂದಬೇಕು, ಸಮುದಾಯಗಳ ಅಭಿವೃದ್ಧಿಗೆ ಸರಕಾರದ ನೆರವು ಸದಾ ಇರುತ್ತದೆ. ಕಟ್ಟಡದ ಭೂಮಿ ಪೂಜೆಗೆ ಖುದ್ದು ಬರುವುದಾಗಿ ಹೇಳಿದರು. ಕೊಡವ ಭಾಷಿಕ ಕೊಯವ ಸಮಾಜದ ಅಧ್ಯಕ್ಷ ಜಿಲ್ಲಂಡ ದಾದು ಮಾದಪ್ಪ, ಉಪಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ,…
ಕುಶಾಲನಗರ ಜು.25 NEWS DESK : ಕುಶಾಲನಗರ ಮಾಜಿ ಸೈನಿಕರ ಸಂಘ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜು.26 ರಂದು “ಕಾರ್ಗಿಲ್ ವಿಜಯೋತ್ಸವ” ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮುಳ್ಳುಸೋಗೆಯ ಮಾಜಿ ಸೈನಿಕರ ಸಂಘದ ಕಛೇರಿಯ ಆವರಣದಲ್ಲಿ ವಿಜಯೋತ್ಸವದಲ್ಲಿ ವೀರ ಮರಣ ಹೊಂದಿದ ಸೈನಿಕರ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಗುವುದು. ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬೇದಾರ್ ಮೇಜರ್ ಎಸ್.ಆರ್.ಮಾದಪ್ಪ, ಕೋಶಾಧಿಕಾರಿ ಹವಾಲ್ದಾರ್ ಎನ್.ಎಸ್.ನರೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಇದೇ ವೇಳೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.
ಮಡಿಕೇರಿ ಜು.26 NEWS DESK : ಕರ್ನಾಟಕ ನಾಟಕ ಅಕಾಡೆಮಿಯ 2025-26ನೇ ಸಾಲಿನ ಎಚ್. ವಿ.ವೆಂಕಟಸುಬ್ಬಯ್ಯ ದತ್ತಿ ಪುರಸ್ಕಾರವು ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮದ ಪಿ.ಎ.ಮಂಜಪ್ಪ (ಮಂಜು ಕೊಡಗು) ಅವರಿಗೆ ಲಭಿಸಿದೆ. ಐತಪ್ಪ ಮತ್ತು ಲೀಲಾ ಅವರ ಪುತ್ರರಾದ ಇವರು 1994-95ರಲ್ಲಿ ನೀನಾಸಂನ ರಂಗಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದರು. ಬಳಿಕ, ನೀನಾಸಂ ತಿರುಗಾಟದಲ್ಲಿ 2 ವರ್ಷ ನಟರಾಗಿ, ತಂತ್ರಜ್ಞರಾಗಿ ಕೆಲಸ ಮಾಡಿದರು. ಬೆಂಗಳೂರಿನ ಸಮುದಾಯ ತಂಡದಲ್ಲಿ, ಚಿತ್ರದುರ್ಗದ ಕಲಾಶಾಲೆ ಜಮುರಾ ಕಲಾವೇದಿಕೆಯಲ್ಲಿ ಅಧ್ಯಾಪಕರಾಗಿಯೂ ಕೆಲಸ ಮಾಡಿದ್ದ ಇವರು ಏಕಲವ್ಯ, ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇನ್ನೂ ಮೊದಲಾದ ಸ್ವಯಂಸೇವಾ ಸಂಸ್ಥೆಗಳಲ್ಲಿ ಸುಮಾರು 5 ವರ್ಷಗಳ ಕಾಲ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ. 2002ರಿಂದ ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಜು ಕೊಡಗು ವಿನ್ಯಾಸಕ್ಕೆ ಸಂಬಂಧಿಸಿದಂತೆ ಇವರು ಬರೆದಿರುವ ‘ಆಹಾರ್ಯ-ಅಭಿನಯ’ ಪುಸ್ತಕವು ಹಂಪಿ ವಿಶ್ವವಿದ್ಯಾನಿಲಯದಿಂದ ಪ್ರಕಟಗೊಂಡು ಅಲ್ಲಿನ ಮತ್ತು ಇತರ ರಂಗಶಿಕ್ಷಣ ಕೇಂದ್ರಗಳಿಗೆ ಪಠ್ಯವಾಗಿರುವುದು ವಿಶೇಷ. ಒಟ್ಟು 37 ನಾಟಕಗಳನ್ನು ಅವರು…






