ಮಡಿಕೇರಿ ಅ.6 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ನ ವತಿಯಿಂದ ಬೆಳ್ತಂಗಡಿ ತಾಲ್ಲೂಕಿನ ತುರ್ಕಳಿಕೆ ಎಂಬಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕೊಡಗಿನ ಬಿ.ಎ.ಆದಿಲ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಣಿಕೊಪ್ಪಲಿನ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿಲ್, ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನ ಅಶ್ರಫ್ ಹಾಗೂ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಮಾಸ್ಟರ್ ದಂಪತಿಯ ಪುತ್ರ.
ಲೇಖಕ: admin
ಮಡಿಕೇರಿ ಅ.6 NEWS DESK : ಕಳೆದ 12 ವರ್ಷಗಳಿಂದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಮೀಸಲಾಗಿದ್ದ ಕೊಡಗು ಜಿಲ್ಲಾ ಯುವ ಭವನ ಇದೀಗ ಜಿಲ್ಲಾ ಯುವ ಒಕ್ಕೂಟಕ್ಕೆ ಮರಳಿ ದೊರಕಿದೆ. ಹಿಂದಿನ ಸಾಲಿನಲ್ಲಿ ಮಂಜೂರಾಗಿ ಸುದರ್ಶನ ವೃತದಲ್ಲಿ ನಿರ್ಮಾಣಗೊಂಡಿದ್ದ ಜಿಲ್ಲಾ ಯುವ ಒಕೂಟದ ಜಿಲ್ಲಾ ಯುವ ಭವನವನ್ನು ಬಿಜೆಪಿ ಸರ್ಕಾರ ಜಿಲ್ಲೆಯ ಮೊದಲ ಮಹಿಳಾ ಕಾಲೇಜಿಗೆ ಸೂಕ್ತ ಕಟ್ಟಡ ಇಲ್ಲದ ಕಾರಣ 6 ತಿಂಗಳ ಮಟ್ಟಿಗೆ ಬಿಟ್ಟುಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ಮಹಿಳಾ ಕಾಲೇಜನ್ನು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಮಹಿಳಾ ಕಾಲೇಜಿನ ಕಟ್ಟಕ್ಕೆ ಸ್ಥಳಾಂತರಿಸಲಾಗಿದೆ. ಮಹಿಳಾ ಕಾಲೇಜು ಪಾಂಶುಪಾಲರಾದ ನಿರ್ಮಲ ಅವರು ಯುವ ಭವನದ ಕೀ ಗೊಂಚಲನ್ನು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷರಾದ ಪಿ.ಪಿ.ಸುಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ಯುವ ಒಕ್ಕೂಟದ ಕಾರ್ಯಧ್ಯಕ್ಷ ಕೂಡ0ಡ ಸಭಾ ಸುಬ್ರಮಣಿ, ಖಜಾಂಚಿ ಕುಂಜಿಲನ…
ಸಿದ್ದಾಪುರ ಅ.6 NEWS DESK : ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ಹೆಗ್ಗಳ ಶಾಖೆಯ ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ಅಧ್ಯಕ್ಷರಾದ ವಿ.ಕೆ.ಲೊಕೇಶ್ ಉದ್ಘಾಟಿಸಿ ಮಾತನಾಡಿ ಸಂಘಟನೆಯಿಂದ ಶಕ್ತರಾಗಲು ಹಾಗೂ ವಿಧ್ಯೆಯಿಂದ ಸ್ವತಂತ್ರ್ಯರಾಗುವಂತೆ ಗುರುಗಳು ಕರೆ ನೀಡಿದ್ದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಗುರುಗಳ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಎಸ್.ಎನ್.ಡಿ.ಪಿ ಶಾಖೆಗಳಿದ್ದು, ಸಂಘಟನೆಯು ಜಿಲ್ಲಾಧ್ಯಂತ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿ.ಪಂ ಮಾಜಿ ಸದಸ್ಯರಾದ ಮಹೇಶ್ ಗಣಪತಿ ಮಾತನಾಡಿ, ಕೇರಳದ ಜಾತಿ ವ್ಯವಸ್ಥೆಯ ವಿರುದ್ಧ ನಿಂತು, ಕೆಳ ವರ್ಗದ ಜನರಿಗೆ ದೇವಾಲಯವನ್ನು ನಿರ್ಮಿಸಿ, ಪೂಜೆಗೆ ಅನುವು ಮಾಡಿಕೊಟ್ಟಿದ್ದರು. ಗುರುಗಳ ಆದರ್ಶ ಅನುಕರಣೀಯ ಎಂದರು. ಎಸ್.ಎನ್.ಡಿ.ಪಿ ಹೆಗ್ಗಳ ಶಾಖೆಯ ಅಧ್ಯಕ್ಷರಾದ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎನ್.ಡಿ.ಪಿ ಯೂನಿಯನ್ ಕೌನ್ಸಿಲರ್ ಪಾಪಾಯ್ಯ ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ…
ಮಡಿಕೇರಿ ಅ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅ.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹಮದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ…
ಬೆಂಗಳೂರು ಅ.6 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಂತ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಅಭಿಮಾನ ಪೂರ್ವಕವಾಗಿ ಗೌರವಿಸಲಾಯಿತು.
ಮಡಿಕೇರಿ ಅ.6 NEWS DESK : ಕುಶಾಲನಗರ ತಾಲ್ಲೂಕು ಕೊಡವ ಸಮಾಜದ ವತಿಯಿಂದ ಆಯೋಜಿಸಲಾದ ಕೈಲ್ ಪೋಳ್ದ್ ಸಂತೋಷ ಕೂಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕೊಡಗಿನ ಹಾಗೂ ವಿಶೇಷವಾಗಿ ಕೊಡವರ ಐತಿಹಾಸಿಕ ಪರಂಪರೆ, ಸಂಸ್ಕೃತಿ ಹಾಗೂ ಆಚರಣೆಗಳನ್ನು ಜೀವಂತವಾಗಿರಿಸುವಲ್ಲಿ ಕೊಡವ ಸಮಾಜಗಳು ವಿಶೇಷ ಪಾತ್ರ ನಿಭಾಯಿಸುತ್ತಾ ಬಂದಿವೆ. ಸಮಾಜದ ಬಾಂಧವರಲ್ಲಿ, ಯುವ ಪೀಳಿಗೆಯಲ್ಲಿ ನಮ್ಮ ಸಂಸ್ಕೃತಿ ಹಾಗೂ ಆಚರಣೆಗಳನ್ನು ಅನುಸರಿಸುತ್ತಾ ಬೆಳೆಸುವ ಗುರುತರ ಜವಾಬ್ದಾರಿಯನ್ನು ಕೊಡವ ಸಮಾಜದವರು ವಹಿಸಿಕೊಳ್ಳಬೇಕು. ಒಂದು ಸಮಾಜ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲು ಅದರ ಸಂಸ್ಕೃತಿ, ಭಾಷೆ ಹಾಗೂ ಆಚರಣೆಗಳನ್ನು ಪೋಷಿಸಿ ಬೆಳೆಸುವುದು ಅತ್ಯಂತ ಅವಶ್ಯಕವಾಗಿದೆ. ಆಧುನಿಕ ಜಗತ್ತಿಗೆ ಹೊಂದಿಕೊಳ್ಳುತ್ತಾ ನಮ್ಮ ಆಚರಣೆಗಳನ್ನು ಜಗತ್ತಿಗೆ ಪರಿಚಯಿಸುವುದರಲ್ಲಿ ನಾವು ಇಂದಿಗೂ ಹಿಂದೆ ಬೀಳಬಾರದು ಎಂದು ಕರೆ ನೀಡಿದರು. ತಾನು ಹಾಗೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ‘ಕೊಡಗರು’ ಎಂದು ಸಂಬೋಧಿಸಲ್ಪಡುತ್ತಿದ್ದ ಶಬ್ದವನ್ನು “ಕೊಡವ”…
ವಿರಾಜಪೇಟೆ ಅ.6 NEWS DESK : ಕಾಲೇಜು ಶಿಕ್ಷಣ ಪಠ್ಯೇತರ ಚಟುವಟಿಕೆಗಳನ್ನು ತಿಳಿಸಿಕೊಡುತ್ತದೆ. ಪಾಠ ಪ್ರವಚನದೊಂದಿಗೆ ಸಾಮಾಜಿಕ ಮೌಲ್ಯಗಳಿಗೆ ಗೌರವಸೂಚಿಸಿ ಉತ್ತಮ ಸಮಾಜ ರೂಪಿಸುವಲ್ಲಿ ವಿದ್ಯಾರ್ಥಿಗಳು ಮುಂದಾಗುವಂತೆ ನರಿಯಂದಡ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅವರು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಆಶ್ರಯದಲ್ಲಿ ಕಡಂಗ ಅರಪಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಯುವ ಸಮೂಹವು ಪೂರಕವಾಗಿ ಪ್ರತಿಸ್ಪಂದಿಸಬೇಕು. ಕಾಲೇಜು ಶಿಕ್ಷಣದಲ್ಲಿ ಪಠ್ಯ ಪುಸ್ತಕದಲ್ಲಿರುವ ತಿರುಳು ಮತ್ತು ಮಾಹಿತಿ ತಿಳಿದುಕೊಂಡಲ್ಲಿ ಸಾಲದು. ಬಾಹ್ಯವಾದ ಚಿಂತನೆಗಳ ಬಗ್ಗೆ ಪರಿಜ್ಞಾನದ ಅರಿವು ಹೊಂದುವುದು ಮುಖ್ಯ. ಪೋಷಕರು ಮತ್ತು ಶಿಕ್ಷಕರ ಒತ್ತಡಕ್ಕೆ ಮಣಿದು ಓದುವುದು ಮುಖ್ಯವಾಗಬಾರದು. ಬದಲಿಗೆ ಆತ್ಮಗೌರವ ಶಿಕ್ಷಣದ ಹಂಬಲದೊಂದಿಗೆ ಓದುವುದು ಮುಖ್ಯವಾಗಬೇಕು. ಪ್ರಸ್ತುತ ಕಾಲಗಟ್ಟದಲ್ಲಿ ಯುವ ಸಮೂದಾಯವು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ. ಇದರಲ್ಲಿ ಒಳ್ಳೆಯದು ಕೆಟ್ಟದ್ದು…
ವಿರಾಜಪೇಟೆ ಅ.6 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂ ಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡಿದರು. ಅಧಿಕಾರಿಗಳು ಗಣತಿಗೆ ಬರುವಂತಹ ಸಂದರ್ಭದಲ್ಲಿ ಇರಬೇಕಾದಂತಹ ದಾಖಲೆಗಳು, ಕೇಳುವ ಮಾಹಿತಿಗಳ ಕುರಿತು ವಿವರಿಸಿದರು. ಈ ಸಂದರ್ಭ ಕಾಲೇಜಿನ ಎನ್ಎಸ್ಎಸ್ ಘಟಕದ ನಾಯಕರುಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಅ.5 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಸಮಾಜದ ಹುಣಸೂರು ಅಧ್ಯಕ್ಷ ಕಾಳೇರಮ್ಮನ ಪೂಣಚ್ಚ(ಸೋನಾ) ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು…
ಮಡಿಕೇರಿ NEWS DESK ಅ.5 : ಲಕ್ಡಿಕೋಟೆಯಲ್ಲಿ 18ನೇ ಶತಮಾನದಲ್ಲಿ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿ ಹುತಾತ್ಮರಾದ ಧೈರ್ಯಶಾಲಿ ಕೊಡವ ಯೋಧರಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ನಮನ ಸಲ್ಲಿಸಿತು. ಕೊಡವ ಯೋಧರಿಗೆ ಗೌರವ ಅರ್ಪಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆಂಗ್ಲೋ-ಮೈಸೂರು ಯುದ್ಧಗಳು ಭಾರತೀಯ ಇತಿಹಾಸದಲ್ಲಿ ಮಹತ್ವದ ಘಟನೆಗಳಾಗಿದ್ದು, ಕೊಡವ ಯೋಧರ ಕೊಡುಗೆಯನ್ನು ಗುರುತಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಪ್ರಾರ್ಥನೆ ಮತ್ತು ನಮನ ಸಲ್ಲಿಸುವ ಕಾರ್ಯವು ಕೊಡವ ಯೋಧರ ಶೌರ್ಯ, ತ್ಯಾಗ ಹಾಗೂ ಪರಂಪರೆಯನ್ನು ಗೌರವಿಸುವ ಒಂದು ಸಂಪ್ರದಾಯವಾಗಿದೆ. ಸಮುದಾಯದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕ ಸಾಧಿಸಲು ಇದು ಅರ್ಥಪೂರ್ಣ ಮಾರ್ಗವಾಗಿದೆ. ಶೌರ್ಯ ಮತ್ತು ಸಮರ ಕೌಶಲ್ಯಗಳಿಗೆ ಹೆಸರುವಾಸಿಯಾದ ಕೊಡವ ಯೋಧರು, ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಮಿಲಿಟರಿ ಮೈತ್ರಿಯನ್ನು ರಚಿಸಿಕೊಂಡರು. ಆಂಗ್ಲೋ-ಮೈಸೂರು ಯುದ್ಧಗಳ ಸಂದರ್ಭದಲ್ಲಿ ಈ ಮೈತ್ರಿ ಮಹತ್ವದ್ದಾಗಿತ್ತು ಎಂದು ತಿಳಿಸಿದರು. ಜನರಲ್ ಸರ್ ಆರ್ಥರ್ ವೆಲ್ಲೆಸ್ಲಿ ನೇತೃತ್ವದಲ್ಲಿ…






