ಮಡಿಕೇರಿ ಆ.16 NEWS DESK : ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಆ.19 ರಂದು ಮಂಗಳವಾರ ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಯೋಜಿಸಲಾಗಿದೆ. ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ವಿಶ್ವಛಾಯಾಗ್ರಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ.,ಕೊಡಗು ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಉದ್ಯಮಿ ಹೆನ್ರಿಕ್ ಮಾರ್ಟಿನ್, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಹೇರೂರು, ಗುಡ್ಡೆಹೊಸೂರು ಪಂಚಾಯತ್ ಯೂತ್ ಮೂವ್ ಮೆಂಟ್ ಕಾರ್ಯದರ್ಶಿ ಎಂ.ಎಸ್. ರಂಜಿತ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾದ ಸಿ.ಎಂ.ಗಣಿಪ್ರಸಾದ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಬಿ.ಜಿ. ಅನಂತಶಯನ, ಭಾರತೀಯ ಕಾಫಿ ಮಂಡಳಿ ಮಾಜಿ…
ಲೇಖಕ: admin
ಮಡಿಕೇರಿ ಆ.16 NEWS DESK : ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿರುವ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ಘಟಕ (ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್) (ಎಂ.ಟಿ.ಯು) ವಾಹನಗಳನ್ನು ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಕೋμï ಟ್ರಸ್ಟ್, ಸ್ವಚ್ಛ ಭಾರತ್ ಮಿಷನ್ (ಗ್ರಾ.) ಮತ್ತು ಕೊಡಗು ಜಿಲ್ಲಾಪಂಚಾಯತ್ ಸಹಯೋಗದೊಂದಿಗೆ ಕಾರ್ಯಾರಂಭಿಸಲಿರುವ 3 ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ (ಎಂ.ಟಿ.ಯು) ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿದರು. :: ಏನಿದು ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ :: ಕೊಡಗು ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನಗಳನ್ನು ಪರಿಚಯಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ಮಡಿಕೇರಿ ತಾಲೂಕಿನ ಭಾಗಮಂಡಲ ಮತ್ತು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣಮಾಡಿ ಕಾರ್ಯಾರಂಭಿಸಲಾಗಿದೆ. ಮಲತ್ಯಾಜ್ಯ ಸಂಸ್ಕರಣಾ…
ಮಡಿಕೇರಿ ಆ.16 NEWS DESK : ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವ ಬಗ್ಗೆ ಅರಿವಾಗುತ್ತದೆ. ಆ ದಿಸೆಯಲ್ಲಿ ಶ್ರೀಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಚಿಂತಕರಾದ ಚಿ.ನಾ.ಸೋಮೇಶ್ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಶ್ರೀಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದು, ವಿಶ್ವದ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದು ಸೋಮೇಶ್ ಅವರು ನುಡಿದರು. ಜೀವನವು ನಿಂತ ನೀರಾಗದೆ…
ಮಡಿಕೇರಿ ಆ.16 NEWS DESK : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸದಸ್ಯರಾದ ಭೋಜಮ್ಮ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಹಳೇ ವಿದ್ಯಾರ್ಥಿ, ಭೂಸೇನೆಯ ನಿವೃತ್ತ ಸೇನಾನಿ ಹೆಚ್ ಆರ್ ಲಿಂಗರಾಜು ಧ್ವಜಾರೋಹಣವನ್ನು ನೆರವೇರಿಸಿ ಮಕ್ಕಳಿಗೆ ಸೇನೆಗೆ ಸೇರಿ ದೇಶಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿದ್ವಾನ್ ಬಿ ಸಿ ಶಂಕರಯ್ಯ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ನಟರಾಜ ಸಂಗೀತ ನೃತ್ಯ ಕಲಾ ಕೇಂದ್ರ ಇವರಿಂದ ನೃತ್ಯ ವೈಭವ , ವಿದೂಷಿ ಪ್ರಗತಿ ಅವರಿಂದ ಭರತನಾಟ್ಯ, ಮೈಸೂರಿನ ಧರ್ಮವೀರ್ ಮೆಲೋಡಿ ತಂಡದವರಿಂದ ಸಂಗೀತ ವೈಭವ ಕಾರ್ಯಕ್ರಮವು ಮನಸೂರೆಗೊಂಡಿತು. ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಸಂಸ್ಥೆ ವಿದ್ಯಾರ್ಥಿಗಳಿಂದ ಭಾಷಣ ನೃತ್ಯ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸಿ ಜಿ ಮಂದಪ್ಪ ವಹಿಸಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ…
ಮಡಿಕೇರಿ ಆ.16 NEWS DESK : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ, 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು. ತಾಳತ್ತಮನೆಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು ಸಂಘಕ್ಕೆ ಸೇರಿದ ನೂತನ ಕಟ್ಟಡದ ಮುಂದಿನ ಕಾಮಗಾರಿಗೆ ಅನುದಾನ ಕ್ರೋಢೀಕರಿಸುವ ಕುರಿತು ಚರ್ಚಿಸಿದರು. ಕಟ್ಟಡದ ಮೇಲ್ಛಾವಣಿ ನಿರ್ಮಾಣಕ್ಕೆ ಸುಮಾರು 18 ಲಕ್ಷ ರೂ.ಗಳ ಅಗತ್ಯವಿದೆ. ಈ ಮೊತ್ತವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಮೂಲಕ ಪಡೆಯಲು ಮನವಿಪತ್ರ ಸಲ್ಲಿಸಲು ನಿರ್ಧಾರ ಕೈಗೊಂಡರು. *ಸಂಘಟನಾ ಭೇಟಿ* ಮುಂದಿನ ಮಾಸಿಕ ಸಭೆಗೂ ಮೊದಲು ಕರಿಕೆ ಉಪಸಮಿತಿ ಮತ್ತು ಕುಂಡಾಡು ಉಪಸಮಿತಿಗೆ ಸಂಘದ ಆಡಳಿತ ಮಂಡಳಿಯ ಸದಸ್ಯರು ಸಂಘಟನಾ ಭೇಟಿ ನೀಡುವುದು, 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ನಡೆಸಲು ಯಾವುದೇ ಉಪಸಮಿತಿ ಮುಂದೆ ಬಂದಲ್ಲಿ ಕ್ರೀಡಾಕೂಟವನ್ನು ಆಯೋಜನೆಗೊಳಿಸುವುದು, ಸಂಘದ ಸದಸ್ಯರಿಗೆ ಆರೋಗ್ಯ ನಿಧಿ ಮತ್ತು ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ನೀಡುವ ಬಗ್ಗೆ…
ಮಡಿಕೇರಿ ಆ.16 NEWS DESK : ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಮಳೆಯ ನಡುವೆಯು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರು ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿ ನವೀನ್ ರಾವ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಾ ಅವರಿಗೆ ಗೌರವ ಸೂಚಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ನಾವೆಲ್ಲರೂ ಇಂದು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹಲವು ಮಹಾನ್ ನಾಯಕರ ಹೋರಾಟ ಮತ್ತು ತ್ಯಾಗ ಬಲಿದಾನಗಳಿಂದ ಬಂದಿದೆ. ಸ್ವಾತಂತ್ರ್ಯಕ್ಕಾಗಿ ಭಾರತೀಯರು ನಡೆಸಿದ ಹೋರಾಟ ಮತ್ತು ಅನುಭವಿಸಿದ ಸಂಕಷ್ಟಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ವಿವರಿಸಿದರು. ವಿದ್ಯಾರ್ಥಿಗಳು ನಕಾರಾತ್ಮಕ ಭಾವನೆಗಳನ್ನು ಕಿತ್ತೊಗೆದು ಸಕಾರಾತ್ಮಕ ಭಾವನೆಯನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯದ ಗುರಿಯ ಕಡೆಗೆ ಸಾಗಬೇಕು. ಆ ಮೂಲಕ ಭಾರತದ ಅಮೂಲ್ಯ ರತ್ನಗಳಾಗಬೇಕೆಂದು ಕರೆ ನೀಡಿದರು. ಮಾಜಿ ಸೈನಿಕ ಸಿ.ಕೆ.ಪ್ರಭಾಕರ್ ಅವರು ಮಾತನಾಡಿ, ವಿದ್ಯಾರ್ಥಿಗಳು ನಿಷ್ಠೆ, ಪ್ರಾಮಾಣಿಕತೆ ಸಂಯಮವನ್ನು ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಎಂಬುವುದು ಒಂದು ದಿನದ ಸಂಭ್ರಮಾಚರಣೆಯಲ್ಲ. ಪ್ರತಿಯೊಬ್ಬರು…
ಮಡಿಕೇರಿ ಆ.16 NEWS DESK : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ನಡೆಯಲಿದೆ ಎಂದರು. ಬೆಳಿಗ್ಗೆ 9 ಗಂಟೆಗೆ ಪತ್ರಕರ್ತರು ಮತ್ತು ಆಯೋಜಕರ ನಡುವೆ ವಾಲಿಬಾಲ್ ಪ್ರದರ್ಶನ ಪಂದ್ಯ ನಡೆಯುವ ಮೂಲಕ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ ಎಂದರು. ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರ (7 ಮಂದಿಯ ತಂಡ) ವಿಭಾಗಕ್ಕೆ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ (4 ಮಂದಿಯ ತಂಡ) ಮತ್ತು ಮಹಿಳೆಯರಿಗೆ ಥ್ರೋಬಾಲ್…
ಮಡಿಕೇರಿ ಆ.16 NEWS DESK : ನಗರದ ರಾಜರಾಜೇಶ್ವರಿ ಪದವಿಪೂರ್ವ ಕಾಲೇಜ್ ನ ರೋಟರಿ ಮಡಿಕೇರಿಯಿಂದ ಪ್ರಾಯೋಜಿಸಲ್ಪಟ್ಟ ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕ್ಲಬ್ ನ ನೂತನ ಅಧ್ಯಕ್ಷೆಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗೌತಮಿ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಪೆಮ್ಮಯ್ಯ ಪದಗ್ರಹಣ ಮಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರೋ.ಪಿಹೆಚ್‍ಎಫ್ 1 ಸಿಎ ಎಂ.ಈಶ್ವರ ಭಟ್ ಅವರು ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಪದಗ್ರಹಣ ಮಾಡಿಸಿದರು. ನಂತರ ಮಾತನಾಡಿದ ಅವರು ಎಳೆ ವಯಸ್ಸಿನಲ್ಲಿಯೇ ದೊರೆತ ನಾಯಕತ್ವದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಂದಿನ ಜೀವನವನ್ನು ಉಜ್ವಲಗೊಳಿಸುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಸಂದೇಶ ನೀಡಿದರು. ರೋಟರಿ ಮಡಿಕೇರಿಯ ಅಧ್ಯಕ್ಷರಾದ ರೋ. ಲಲಿತ ರಾಘವನ್ ಮಾತನಾಡಿ 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವವನ್ನು ಬೆಳೆಸುವ ಸದುದ್ದೇಶದಿಂದ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಇಂಟರಾಕ್ಟ್ ಕ್ಲಬ್ ನ್ನು ರಚಿಸಿದ್ದು, ಇದರ ಧ್ಯೇಯೋದ್ದೇಶಗಳನ್ನು ಅರಿತುಕೊಳ್ಳಬೇಕೆಂದು ವಿವರಿಸಿದರು. ರೋಟರಿ ಕಾರ್ಯದರ್ಶಿ ರೋ. ಅದರ್ಶ್ ಸೋಮಣ್ಣ,…
ಮಡಿಕೇರಿ ಆ.16 NEWS DESK : ಮುಸಲ್ಮಾನರನ್ನು ಕೇವಲ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಯಾವುದೇ ಅಧಿಕಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ಮುಸಲ್ಮಾನ ಸಮುದಾಯದವರು ಒಗ್ಗೂಡಿ ಶೇ.99 ರಷ್ಟು ಕಾಂಗ್ರೆಸ್‍ಗೆ ಮತಹಾಕಿ ಇಬ್ಬರು ಶಾಸಕರನ್ನು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಜಿಲ್ಲೆಯ ಮುಸಲ್ಮಾನ ಸಮುದಾಯವನ್ನು ಎರಡನೇ ದರ್ಜೆಯ ಕೆಲಸಗಾರರಂತೆ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡಿದ್ದರೂ ಅಧ್ಯಕ್ಷ ಸ್ಥಾನವನ್ನು ಕೇಳುವ ನೈತಿಕತೆ ನಮ್ಮ ಸಮುದಾಯದ ನಾಯಕರಿಗಿಲ್ಲದಂತಾಗಿದೆ. ಮತಗಳಿಕೆಗೆ ಮಾತ್ರ ಮುಸಲ್ಮಾನರಿಗೆ ಯೋಜನೆಗಳನ್ನು ಘೋಷಿಸಲಾಗುತ್ತಿದೆ, ಮುಸಲ್ಮಾನ ಗುತ್ತಿಗೆದಾರರಿಗೆ ಯಾವುದೇ ಕೆಲಸಗಳನ್ನು ನೀಡುತ್ತಿಲ್ಲ. ಮುಸಲ್ಮಾನರಲ್ಲಿ ಶೇ.5 ರಷ್ಟು ಮಂದಿ ಮಾತ್ರ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡರೆ ಶೇ.99 ರಷ್ಟು ಮಂದಿ ಮತದಾರರಿದ್ದಾರೆ. ಆದರೂ ಸಮುದಾಯದ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಕಾಂಗ್ರೆಸ್…
ಮಡಿಕೇರಿ ಆ.16 NEWS DESK : ನಾರ್ತ್‌ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ಕೊಡಗು ಜಿಲ್ಲೆಯ ಯದೀಶ್ ರಮೇಶ್, ಹಾರ್ವರ್ಡ್ ಪ್ರಾಜೆಕ್ಟ್ ಫಾರ್ ಏಷ್ಯನ್ ಅಂಡ್ ಇಂಟರ್‌ನ್ಯಾಷನಲ್ ರಿಲೇಶನ್ಸ್ (HPAIR) 2025 ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಗಳಲ್ಲಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ. ಮಡಿಕೇರಿ ನಗರಸಭಾ ಸದಸ್ಯ ಕೆ.ಎಸ್.ರಮೇಶ್ ಮತ್ತು ಕೆ.ಆರ್.ರಮ್ಯಾ ಅವರ ಪುತ್ರರಾಗಿರುವ ಯದೀಶ್ ರಮೇಶ್ ಏಷ್ಯಾದಿಂದ ಆಯ್ಕೆಯಾದ ಕೆಲವೇ ಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದಾರೆ. ಈ ಪ್ರತಿಷ್ಠಿತ ಜಾಗತಿಕ ಸಮ್ಮೇಳನವು ಈ ವರ್ಷ ಆ.20 ರಿಂದ 24ರವರೆಗೆ ಜಪಾನ್‌ನ ಟೋಕಿಯೋ ನಗರದಲ್ಲಿ ನಡೆಯಲಿದೆ. ಇದೇ ವರ್ಷ 2025ರಲ್ಲಿ, ಯದೀಶ್ ರಮೇಶ್ ಅವರು ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರತಿನಿಧಿಯಾಗಿ ಹಲವಾರು ಪ್ರಮುಖ ಸಮಾವೇಶಗಳಲ್ಲಿ ಪಾಲ್ಗೊಂಡಿದ್ದರು ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಮುಖ್ಯ ಕಚೇರಿಯಲ್ಲಿ ನಡೆದ ಸಂಯುಕ್ತ ರಾಷ್ಟ್ರಗಳ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ (ECOSOC) ಯುವ ಸಮ್ಮೇಳನದಲ್ಲಿ MGCY ಭಾರತವನ್ನು ಪ್ರತಿನಿಧಿಸಿದ್ದಾರೆ. , ಲಾಸ್ ಏಂಜಲೀಸ್‌ನಲ್ಲಿ ನಡೆದ 11ನೇ ಆವೃತ್ತಿಯ ಅಂತರಾಷ್ಟ್ರೀಯ ಯುವ ಸಮ್ಮೇಳನ 2025ರಲ್ಲಿ ಕೂಡ…






