ಲೇಖಕ: admin

ವಿರಾಜಪೇಟೆ ಆ.16 NEWS DESK : ವಿರಾಜಪೇಟೆ ನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳನ್ನು ಹಾಗೂ 8 ನೂತನ ಬಸ್ ಸಂಚಾರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ನೂತನ ಬಸ್‍ಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಸ್ ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು. ಈ ಸಂದರ್ಭ  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ…

Read More

ಮಡಿಕೇರಿ ಆ.16 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾದಿಂದ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ವಿದ್ಯಾರ್ಥಿಗಳಿಗಾಗಿ ಕೊಡುಗೆಯಾಗಿ ನೀಡಿದ ಸ್ವೆಟರ್ ಅನ್ನು ಮದೆ ಗ್ರಾ.ಪಂ ವ್ಯಾಪ್ತಿಯ ತಾಳತ್ತಮನೆ, ಕಾಟಕೇರಿ, ಮೊಣ್ಣಂಗೇರಿ, ಜೋಡುಪಾಲ, ದೇವರಕೊಲ್ಲಿ ಗ್ರಾಮಗಳ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾ ಅಧ್ಯಕ್ಷರಾದ ಚೇತನ್ ಬಂಗೇರ ವಿತರಿಸಿದರು. ಈ ಸಂದರ್ಭ ಯುವ ಮೋರ್ಚಾದ ಸದಸ್ಯರಾದ ದೀಕ್ಷಿತ್ ಸುವರ್ಣ, ಗ್ರಾಮಗಳ ಪಕ್ಷದ ಪ್ರಮುಖರು, ಪಂಚಾಯತ್ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.16 NEWS DESK  : ಬೆಟೋಳಿ ಗ್ರಾಮದ ನಿವಾಸಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಶಾಂತಿ ಭೂಷಣ್ ಅವರ ತಂದೆ ಬಿ.ಎಸ್.ನಾಗೇಂದ್ರರಾವ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮೃತರ ಸ್ವಗ್ರಹದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಆ.15 NEWS DESK :  ವಿದ್ಯುತ್ ಸ್ಪರ್ಶಿಸಿ ಹಸುವನ್ನು ಕಳೆದುಕೊಂಡು ರೈತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಹಾರ ಚೆಕ್ ವಿತರಿಸಿದರು.ಕಾಕೋಟುಪರಂಬು ಪಂಚಾಯಿತಿಯ ಕುಂಜಲಗೇರಿ ಗ್ರಾಮದ ಚಿಯಂಡೀರ ಸುರೇಶ್ ಹಾಗೂ ಸುಬ್ರಮಣಿ ಎಂಬ ರೈತರ ಹಸುಗಳು, ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದು, ವಿಷಯ ತಿಳಿದೊಡನೆ ಸರ್ಕಾರ ಮಟ್ಟದಲ್ಲಿ ಮಾತನಾಡಿದ ಶಾಸಕರು ರೈತ ಕುಟುಂಬಕ್ಕೆ ರೂ.1.62ಲಕ್ಷ ಪರಿಹಾರ ಒದಗಿಸುವಲ್ಲಿ ಸಫಲರಾಗಿದ್ದರು. ಇಂದು ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ರೈತನಿಗೆ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭ ಪ್ರಮುಖರಾದ ಬಟ್ಟಕಾಳಂಡ ರಾಜ, ಮುಂಡಂಡ ಅನಿಲ್ ಬಿದ್ದಪ್ಪ, ಬಂಟ್ರ ದಯಾ ರೈ, ಬೋವೇರಿಯಂಡ ಅಜಿತ್, ಚೆಸ್ಕಾಂ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.16 NEWS DESK : ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರಾದ  ದೊಡ್ಡೇರ ಎಂ.ತಿಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ನೇತಾಜಿವಕ ಮಂಡಳದ ಅಧ್ಯಕ್ಷರಾದ ಕೊಂಡಿರ ಪಿ.ಕಾರ್ಯಪ್ಪ, ಯುವಕ ಮಂಡಲದ ಸಲಹಾ ಸಮಿತಿ ಮುಖ್ಯಸ್ಥರಾದ ಚೆಟ್ಟೊಳ್ಳಿರ ಗಿರೀಶ್ ಅಪ್ಪಯ್ಯ , ಯುವತಿಮಂಡಳಿ ಅಧ್ಯಕ್ಷರಾದ ಸಿಂಧು ಸುದೇವ, ಯುವಕ ಮಂಡಲದ ಉಪಾಧ್ಯಕ್ಷರಾದ ಸುರೇಶ್ ಕುಮಾರ್, ಮಾಜಿ ಸೈನಿಕರು, ಯುವಕ ಹಾಗೂ ಯವತಿ ಮಂಡಳಿಯ ಸದಸ್ಯರು, ನಾಗರಿಕರು ಹಾಜರಿದ್ದರು.

Read More

ಭಾಗಮಂಡಲ NEWS DESK ಆ.15 : ಭಾಗಮಂಡಲ ಪಂಚಾಯತ್ ವತಿಯಿಂದ 79ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬಳ್ಳಡ್ಕ ಅಪ್ಪಾಜಿ ಮತ್ತು ಅನುರವರ ಗದ್ದೆಯಲ್ಲಿ ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಹಗ್ಗಜಗ್ಗಾಟ, ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.  ಪುರುಷರ ಹಗ್ಗಜಗ್ಗಾಟ ಶ್ರೀಕೃಷ್ಣ ಯುವಕ ಸಂಘ, ಅಯ್ಯಂಗೇರಿ  ಪ್ರಥಮ ಸ್ಥಾನ , ಶ್ರೀ ಭಗವತಿ  ಕಾರುಗುಂದ ದ್ವಿತೀಯ ಸ್ಥಾನ, ಮಹಿಳೆಯರ ಹಗ್ಗಜಗ್ಗಾಟ ದಲ್ಲಿ ಮಹಾವಿಷ್ಣು ಯುವತಿ ಮಂಡಳಿ ಸಿಂಗತ್ತೂರು ಪ್ರಥಮ, ಭಗವತಿ ಯುವತಿ ಮಂಡಳಿ ತಣ್ಣಿಮಾನಿ ದ್ವಿತೀಯ ಸ್ಥಾನ ಪಡೆದುಕೊಂಡವು. ಮಳೆಯ ನಡುವೆಯೂ ಕ್ರೀಡಾಭಿಮಾನಿಗಳು ಚಪ್ಪಾಳೆ, ಸಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿ ಸಂಭ್ರಮಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಸತೀಶ್ ಜೋಯಪ್ಪ ಅವರು ಮಾತನಾಡಿ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಆಪರೇಷನ್  ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವ ಕೆಲಸ ಮಾಡಿದ್ದಾರೆ. ನಮ್ಮ ಸೈನಿಕರು ತಮ್ಮ ಕುಟುಂಬವನ್ನು ತೊರೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ನಾವು…

Read More

ಮೂರ್ನಾಡು NEWS DESK  ಆ.15 : ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಕಛೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ಎ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸರ್ವರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ನಂತರ ಮೂರ್ನಾಡುವಿನ ಅಂಗನವಾಡಿ ಕೇಂದ್ರಕ್ಕೆ ತೆರಳಿ ಸಂಘದ ವತಿಯಿಂದ ಮಕ್ಕಳಿಗೆ ಸಿಹಿ ಹಂಚಿ,  ಕೇಂದ್ರಕ್ಕೆ ಅಗತ್ಯವಿದ್ದ ಬೆಡ್ ವಿತರಿಸಲಾಯಿತು.

Read More

ಕುಶಾಲನಗರ NEWS DESK ಆ.15 : ನಮ್ಮ ಭಾರತ ದೇಶದ ಸ್ವಾತಂತ್ರ್ಯದ ದಿನವು ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು, ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ದೇಶವು ವಿಮೋಚನೆಯನ್ನು ಹೊಂದಿದ ಸರ್ವ ಶ್ರೇಷ್ಠ ದಿನವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ  ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತಹ ಅದಮ್ಯ ಚೈತನ್ಯಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಸಾರುವಂತಹ ವೈವಿಧ್ಯಮಯ ಭಾರತೀಯ ಜನಸಂಖ್ಯೆಯನ್ನು ಒಂದುಗೂಡಿಸುವ ಶಕ್ತಿಯಾಗಿದೆ.  ಪ್ರಾದೇಶಿಕ, ಭಾಷಾ ಮತ್ತು ಸಾಂಸ್ಕೃತಿಕ ಭಿನ್ನತೆಗಳನ್ನು ಮೀರಿ, ದೇಶಭಕ್ತಿಯ ಉತ್ಸಾಹದಲ್ಲಿ ಜನರನ್ನು ಒಟ್ಟುಗೂಡಿಸುತ್ತದೆ. ತ್ರಿವರ್ಣ ಧ್ವಜ, ರಾಷ್ಟ್ರಗೀತೆ, ಮತ್ತು ಸಾಮೂಹಿಕ ಆಚರಣೆಗಳು ಭಾರತೀಯರಲ್ಲಿ ಹೆಮ್ಮೆಯ ಭಾವನೆಯನ್ನು ಬೆಳೆಸುತ್ತವೆ ಮತ್ತು ಅಖಂಡ ರಾಷ್ಟ್ರದ ಕಲ್ಪನೆಯನ್ನು ಬಲಪಡಿಸುತ್ತವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್…

Read More

ಮೂರ್ನಾಡು NEWS DESK ಆ‌.15 : ಶ್ರೀ ಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಮೂರ್ನಾಡಿನ ಬಲಿಜ ಸಮಾಜದ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶಿಷ್ಟವಾದ ಸಂಸ್ಕೃತಿ ಭಾರತದ್ದು, ನಮ್ಮ ಹಿರಿಯರು ತ್ಯಾಗ ಬಲಿದಾನಗಳಿಂದ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಖಜಾಂಚಿ ಪ್ರಕಾಶ್, ನಿರ್ದೇಶಕರಾದ ಲೋಕನಾಥ್, ಎಲ್ಐಸಿ ಗಣೇಶ್, ಯಶ್ವಂತ್ ಮೂರ್ನಾಡು, ರಮಿತಾ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.15 : ಮಡಿಕೇರಿ ನಗರ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಅಧ್ಯಕ್ಷ ಎಂ.ಸಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅತಿಥಿಗಳಾಗಿ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಎಂ.ವಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೊಡಗು ಜಿಲ್ಲಾ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ, ಕಾರ್ಯದರ್ಶಿ ಟಿ.ಎಂ.ಪ್ರಸನ್ನ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಹಾಗೂ ಚಾಲಕರು ಪಾಲ್ಗೊಂಡಿದ್ದರು. ನಿವೃತ್ತಿಯ ನಂತರ ಆಟೋ ಚಾಲಕರ ವೃತ್ತಿಯನ್ನು ಆಯ್ದುಕೊಂಡ ಐವರು ಮಾಜಿ ಸೈನಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Read More