ಲೇಖಕ: admin

ಕುಶಾಲನಗರ ಜು.24 NEWS DESK : ಪತ್ರಕರ್ತರು ಸಮಾಜದ ಆಗುಹೋಗುಗಳ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಸಮಾಜದ ಕಣ್ಗಾವಲಾಗಿ ಕಾರ್ಯನಿರ್ವಹಿಸಬೇಕೆಂದು ಶಕ್ತಿ ಸಂಪಾದಕ ಜಿ.ಚಿದ್ವಿಲಾಸ್ ಕರೆ ನೀಡಿದರು. ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿವಿ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಯ ಹಾರಂಗಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗು ವಿವಿ ಉಳಿವಿನ ಬಗ್ಗೆ ಸರ್ಕಾರ ಇದೂವರೆಗೂ ತನ್ನ ನಿಲುವು ಪ್ರಕಟಪಡಿಸದ ಹಿನ್ನೆಲೆಯಲ್ಲಿ ಶಾಸಕರು ಈ ಬಗ್ಗೆ ವಿವಿಯೊಂದಿಗೆ ಗಟ್ಟಿಯಾಗಿ ನಿಲ್ಲುವ ಮೂಲಕ ಖಾಸಗಿ ಸಂಸ್ಥೆಗಳು ನೀಡಬಹುದಾದ ಅನುದಾನಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಸಾಮಾಜಿಕ ಜಾಲತಾಣಗಳು ಯಾವುದೇ ವ್ಯಕ್ತಿಯನ್ನು ಕಠಿನ ಶಬ್ಧಗಳಿಂದ ತೇಜೋವಧೆ ಮಾಡುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಕೆಲಸ ಆಗಬಾರದು. ಮಾಧ್ಯಮಗಳಿಂದಾಗಿ ಹೊಸ ಪ್ರತಿಭೆಗಳು ಹೊಸ ಚಿಂತನೆಗಳ ಉಗಮವಾಗುತ್ತಿದೆ ಎಂದು ಶ್ಲಾಘಿಸಿದರು. ಯುವ ಜನಾಂಗ ಇಂದು ಸಮಾಜದಲ್ಲಿ ಅನೈತಿಕ ಚಟುವಟಿಕೆಗಳು ಹಾಗೂ ಕ್ರೌರ್ಯದತ್ತ ಮುಖ ಮಾಡುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಚಿದ್ವಿಲಾಸ್, ಮೊಬೈಲ್ ಗಳ…

Read More

ನಾಪೋಕ್ಲು ಜು.24 NEWS DESK : ಕೊಡಗು ದಕ್ಷಿಣ ಕನ್ನಡದ ಜಿಲ್ಲೆಗಳ ಗಡಿ ಭಾಗವಾದ ಚೆಂಬು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಂಬಂಧಪಟ್ಟ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೆಲವು ತಿಂಗಳುಗಳಿಂದ ಕಾಡಾನೆಗಳ ಹಿಂಡು ನಿರಂತರ ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ರೈತರು ಕಷ್ಟಪಟ್ಟು ಬೆಳೆಸಿದ ಕೃಷಿ ಗಿಡ ಹಾಗೂ ಬೆಳೆಗಳು ನಾಶವಾಗಿದೆ. ಚೆಂಬು ಗ್ರಾಮದ ಸುತ್ತ ಮುತ್ತಲಿನ ಊರುಗಳಾದ ಊರುಬೈಲು, ದಬ್ಬಡ್ಕ ಆನೆಹಳ್ಳ, ಕಾಂತುಬೈಲುಗಳಲ್ಲಿ ಹಲವು ದಿನಗಳಿಂದ ಆನೆಗಳು ಕೃಷಿ ಜಾಗಕ್ಕೆ ನುಗ್ಗಿ ಹಾನಿ ಮಾಡುತ್ತಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೃಷಿಯನ್ನೇ ನಂಬಿ ಜೀವನ ಮಾಡುತ್ತಿರುವ ಗ್ರಾಮದಲ್ಲಿ ಈ ರೀತಿ ಆನೆಗಳ ಹಾವಳಿ ಯಿಂದ ಕೃಷಿಕರು ಬಾರಿ ನಷ್ಟ ಅನುಭವಿಸುತ್ತಿದ್ದು, ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆನೆಯನ್ನು ಕಾಡಿಗೆ ಅಟ್ಟುವ ಕೆಲಸ ಆಗಬೇಕಾಗಿದೆ. ಶಾಲಾ ಮಕ್ಕಳು ಹೋಗುವ ದಾರಿಯಲ್ಲಿ ಆನೆಗಳು…

Read More

ಮಡಿಕೇರಿ ಜು.24 NEWS DESK : ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಅರಕಲಗೂಡು ಶಾಸಕ ಎ.ಮಂಜು, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Read More

ಕುಶಾಲನಗರ ಜು.24 NEWS DESK : ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 4000 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ…

Read More

ಕುಶಾಲನಗರ ಜು.24 NEWS DESK : ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಹಿತರಕ್ಷಣಾ ಬಳಗದ ಸಂಯುಕ್ತಾಶ್ರಯದಲ್ಲಿ ವಿವಿ ಕಾವೇರಿ ಸಭಾಂಗಣದಲ್ಲಿ  ಮಾಧ್ಯಮ ದಿನಾಚರಣೆ  ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಮಾಧ್ಯಮ ನಮ್ಮ ಜೀವನದಲ್ಲಿ ಒಂದು ಭಾಗವಾಗಿ ಹೋಗಿದೆ. ಮಾಧ್ಯಮಗಳಲ್ಲಿ ಯಾವುದೇ ವಿಚಾರ ಬಂದರೆ ಮಾತ್ರ ನಾವು ನಂಬುತ್ತೇವೆ. ಆದ್ದರಿಂದ ಸುದ್ದಿ ಕೊಡುವ ಭರದಲ್ಲಿ ಅಪೂರ್ಣ ಹಾಗೂ ಅಸತ್ಯವಾದ ಮಾಹಿತಿ ಜನತೆಗೆ ತಲುಪಬಾರದು. ಅದರಿಂದ ಜನರ ಮೇಲಷ್ಟೇ ಅಲ್ಲದೇ ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸುದ್ದಿಯ ಸತ್ಯಾಸತ್ಯತೆ ಅರಿತು ಪ್ರಕಟಿಸಿದಾಗ ಮಾತ್ರ ಸಮಾಜಕ್ಕೂ ಹಾಗೂ ಮಾಧ್ಯಮಗಳ ವಿಶ್ವಾಸರ್ಹತೆಗೂ ಅನುಕೂಲವಾಗಲಿದೆ ಎಂದರು. ಕೊಡಗು ಶಕ್ತಿ ಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳನ್ನು ಓದುವವರ ಸಂಖ್ಹೆ ಕಡಿಮೆಯಾಗುತ್ತಿದೆ.ಯುವಜನಾಂಗ ಅನ್ಲೈನ್ ನಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಅನ್ಲೈನ್, ಸಾಮಾಜಿಕ ಜಾಲತಾಣಗಳಿಂದ ಅರಾಜಕತೆ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಿಂದ ಹೊಸ ಪ್ರತಿಭೆ, ಹೊಸ…

Read More

ಮೈಸೂರು ಜು. 24 NEWS DESK : ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ದಿವಾಳಿಯತ್ತ ಸಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗ ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಬ್ರಹ್ಮಾಸ್ತ್ರ ಬಿಟ್ಟಿದೆ. ಜಿಎಸ್‌ಟಿ ನೋಟಿಸ್‌ ನೀಡುವ ಮೂಲಕ ವ್ಯಾಪಾರಿಗಳ ಹೊಟ್ಟೆ ಮೇಲೆ ಪೆಟ್ಟು ನೀಡುವ ಯೋಜನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಎಂದು ದೂರಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದರು, ವಾಣಿಜ್ಯ ಇಲಾಖೆಯ ಈ ನಡೆ ಖಂಡನೀಯ, ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ವ್ಯಾಪಾರಿಗಳಿಗೆ ನೀಡಿದ ಜಿಎಸ್ಟಿ ತೆರಿಗೆ ನೋಟಿಸ್ ನೀಡುವ ನಿರ್ಧಾರ ಕೇಂದ್ರ ಸರ್ಕಾರದ್ದಲ್ಲ. ಇದು ರಾಜ್ಯ ಸರ್ಕಾರದ ತೀರ್ಮಾನ. ಬೇಕರಿ, ಕಾಂಡಿಮೆಂಟ್ ಸೇರಿದಂತೆ ಸಣ್ಣ ವ್ಯಾಪಾರಿಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರುವ ಮೂಲಕ ಏಕಾಏಕಿಯಾಗಿ ಲಕ್ಷಾಂತರ ರೂ. ತೆರಿಗೆ ಸಂಗ್ರಹಿಸುವ ಇರಾದೆ ರಾಜ್ಯ ಸರ್ಕಾರದ್ದಾಗಿದೆ. ಈ ರೀತಿಯ ನೋಟಿಸು ಜಾರಿ ಮಾಡಿ ವ್ಯಾಪಾರಿಗಳನ್ನ ಆತಂಕಕ್ಕೆ ದೂಡಿರುವ ವಾಣಿಜ್ಯ ತೆರಿಗೆ ಇಲಾಖೆಯ ನಡೆ ಖಂಡನಾರ್ಹ ಎಂದು ಹೇಳಿದ್ದಾರೆ.…

Read More

ಮಡಿಕೇರಿ ಜು.24 NEWS DESK : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ.ಎಸ್.ಹರೀಶ್ ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು” ಕುರಿತು ಆಯೋಜಿಸಿದ್ದ ರೈತರ ತರಬೇತಿ, ಸಂವಾದ ಹಾಗೂ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಶುಂಠಿ ಬೆಳೆಯಲ್ಲಿ ಈಗಾಗಲೆ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ. ಸರಿಯಾದ ನಿರ್ವಹಣೆ ಕ್ರಮ ಅನುಸರಿಸಿದರೆ ರೋಗವನ್ನು ನಿಯಂತ್ರಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ವಿಷಯ ತಜ್ಞರ ಸಲಹೆ ಪಡೆದು ರೋಗ ಬಂದಿರುವ ಮಳೆ ಹೆಚ್ಚಿರುವ ಪ್ರದೇಶದಲ್ಲಿ 6 ರಿಂದ…

Read More

ಬೆಂಗಳೂರು ಜು.24 NEWS DESK : ಬೆಲ್ಜಿಯಂ ದೇಶದ ರಾಯಭಾರಿಯವರಾದ H.E. ಡಿಡ್ಯಾರ್ ವ್ಯಾಂಡೆರ್ ಹಾಸ್ಸೇಲ್ಟ್ ಅವರೊಂದಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು. ತಮ್ಮ  ನಿವಾಸ ಕಾವೇರಿಯಲ್ಲಿ  ತಮ್ಮ ದೇಶದ ನಿಯೋಗದೊಂದಿಗೆ  ಬೆಲ್ಜಿಯಂ ರಾಯಭಾರಿ ಹಲವು ಪ್ರಮುಖ ದ್ವಿಪಕ್ಷೀಯ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಟ್ರಸ್ಟ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್.ಸಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಸ್.ಪ್ರಕಾಶ್, ಉಪಾಧ್ಯಕ್ಷರಾಗಿ ಎಂ.ವಿ.ಲೋಕೇಶ್ ಹಾಗೂ ಖಜಾಂಚಿಯಾಗಿ ಪೂಜಾರಿ ಉಮೇಶ್ ಆಯ್ಕೆಯಾಗಿದ್ದಾರೆ.

Read More

ಸೋಮವಾರಪೇಟೆ ಜು.23 NEWS DESK : ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಗಳಿಗೆ ಗುರುಪೂರ್ಣಿಮೆ ಹಾಗೂ ಜನ್ಮ ವರ್ಧಂತಿ ಅಂಗವಾಗಿ ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. 63ನೇ ಸಂವತ್ಸರಕ್ಕೆ ಸಿದ್ಧಲಿಂಗ ಸ್ವಾಮೀಜಿ ಕಾಲಿರಿಸುತಿರುವ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು, ಭಕ್ತರಲ್ಲಿ ಸಂತಸ ಮನೆ ಮಾಡಿತ್ತು. ಮುಂಜಾನೆಯೇ ನಾಡಿನ ಹಲವು ಮಠಾಧೀಶರುಗಳು ಆಗಮಿಸಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿ, ಪುಷ್ಪಾರ್ಚನೆಗೈದು ಶುಭಹಾರೈಸಿ, ಆಶೀರ್ವಾದ ಪಡೆದರು. ರಾಜ್ಯದ ಮಂತ್ರಿಗಳು ವಿವಿಧ ಗಣ್ಯರು ಮಠಕ್ಕೆ ಆಗಮಿಸಿ ಶುಭಕೋರಿದರು. ಕೊಡಗು ಜಿಲ್ಲೆಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಂಡ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ಧಲಿಂಗ ಸ್ವಾಮೀಜಿಗಳಿಗೆ ಕೊಡಗಿನ ಜೇನು, ಕಾಫಿಪುಡಿ, ಕಾಳುಮೆಣಸು ನೀಡಿ ಶುಭಕೋರುವುದರೊಂದಿಗೆ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಕೊಡಗಿನ ಮಳೆ, ಬೆಳೆ ಹಾಗೂ ಇಲ್ಲಿನ ಪರಿಸ್ಥಿತಿಯ ಬಗ್ಗೆ ಕೇಳಿ ತಿಳಿದುಕೊಂಡರು. ಬಿಡುವಿಲ್ಲದ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತಾಪಿ ವರ್ಗದ ಬಗ್ಗೆ ಮರುಕ…

Read More