ಮಡಿಕೇರಿ NEWS DESK ಆ.15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಸಹಾಯಕ ಅಭಿಯಂತರರು ಹಾಗೂ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿಲಯದ ಪ್ರಸರಣ ಕಾರ್ಯ ನಿರ್ವಾಹಕರಾದ ಎಂ.ಶಕುಂತಲಾ, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಕೆ.ಪಿ.ಶಿವಾನಂದನ್, ಕೆ.ಟಿ.ನಾಗರಾಜ್, ಕೆ.ಎಸ್.ಉದಯಕುಮಾರ್, ಬಿ.ಕೆ. ಲೋಕೇಶ್, ಹೆಚ್.ಆರ್.ಜೀವನ್ ಕುಮಾರ್, ಗ್ರಂಥಪಾಲಕ ಪಂಕಜ್ ಕುಡ್ತರ್ಕರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.
ಲೇಖಕ: admin
ಮಡಿಕೇರಿ ಆ.15 NEWS DESK : ನಗರದ ಹಿಂದುಸ್ಥಾನ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮಸ್ತಾಫಾ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕಿ ಕೆ.ಬಿ.ವಿಮಲಾ, ಅಂಗನವಾಡಿ ಶಿಕ್ಷಕಿ ಕೆ.ಬಿ.ಸುಮತಿ, ಸಹಾಯಕಿ ಕೆ.ಎಂ.ಅಂಬಿಕಾ, ಹಳೆ ವಿದ್ಯಾರ್ಥಿಗಳಾದ ಕೆ.ಸಿ.ಜನಾರ್ಧನ, ಹಿರಿಯ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ಎಲ್ಲರಿಗೂ ಸಿಹಿ ಹಂಚಲಾಯಿತು.
ಮಡಿಕೇರಿ ಆ.15 NEWS DESK : ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯರಾದ ರಜ಼ಾಕ್ ಧ್ವಜಾರೋಹಣ ನೇರವೇರಿಸಿದರು. ಈ ಸಂದರ್ಭ ಯುವಕ ಸಂಘದ ಜಯಕುಮಾರ್, ಮನೋಜ್, ಜಾವೀದ್, ಶ್ರೀಕಾಂತ್, ಮಕ್ಕಳು ಗ್ರಾಮಸ್ಥರು ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ನೆರೆದಿದ್ದವರಿಗೆ ಸಿಹಿ ಹಂಚಲಾಯಿತು.
ಮಡಿಕೇರಿ ಆ.15 NEWS DESK : ಮೂಡ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂಡ ಅಧ್ಯಕ್ಷರಾದ ರಾಜೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸದಸ್ಯರಾದ ಚಂದ್ರಶೇಖರ್, ಕಾನೆಹಿತ್ಲು ಮೊಣ್ಣಪ್ಪ, ಸುದಯ್ ನಾಣಯ್ಯ, ಮೀನಾಜ್ ಪ್ರವೀಣ್, ಆಯುಕ್ತರಾದ ಹೇಮಾಮಾಲಿನಿ ಹಾಗೂ ಕಚೇರಿ ಸಿಬ್ಬಂದಿಗಳಾದ ಚೈತ್ರಾ, ಅನಿತಾ ಹಾಜರಿದ್ದರು.
ಮಡಿಕೇರಿ ಆ.15 NEWS DESK : ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾಡಿನ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಪೋಷಕರು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿಶೇಷ ಸಂದೇಶ ನೀಡಲಾಯಿತು. ಜೊತೆಗೆ, ಸ್ವಚ್ಛ ಮತ್ತು ನಿರ್ಮಲ ಸಮಾಜ ನಿರ್ಮಾಣದ ಬಗ್ಗೆಯೂ ಸಭಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ.ಬಿ.ಸೂರ್ಯ ಕುಮಾರ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ವೇದಿಕೆಯ ಅಧ್ಯಕ್ಷರಾದ ಮಹೇಶ್ ಆರ್ (ಅಪ್ಪು) ವಹಿಸಿದ್ದರು. ಗೌರವ ಅತಿಥಿಗಳಾಗಿ ನಿವೃತ್ತ ಸೇನಾನಿ ನಂದಿರ ಅಯ್ಯಪ್ಪ, ಪ್ರದೀಪ್ ಪಾಯಸ್, ಸಾಧಿಕ್ ಪಾಷಾ ಹಾಗೂ ನಗರಸಭಾ ಸದಸ್ಯರಾದ ಕೆ. ಎಸ್. ರಮೇಶ್ ಅವರು ಉಪಸ್ಥಿತರಿದ್ದರು. ವೇದಿಕೆಯ ಮಹಿಳಾ ಘಟಕದ ಸದಸ್ಯರು ದೇಶಭಕ್ತಿ ಗೀತೆಗಳನ್ನು ಹಾಡಿ ಎಲ್ಲರ ಗಮನ ಸೆಳೆದರು. ಅಲ್ಲದೆ, ದೇಶಕ್ಕಾಗಿ ವೀರ ಮರಣ ಹೊಂದಿದ ಯೋಧರಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ವಿವಿಧ ಸಂಘ…
ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರಾದ ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂಸ್ಥೆಯ ಬೋಧಕ ಆಸ್ಪತ್ರೆಯ ನೂತನ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಆರ್ಥಿಕ ಸಲಹೆಗಾರರಾದ ಸೈಯದ್ ಸಮೀಉಲ್ಲಾ, ಡಾ.ಕಾರ್ಯಪ್ಪ ಕೆ.ಬಿ. ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು.
ಮಡಿಕೇರಿ ಆ.15 NEWS DESK : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿಶ್ವಮಾನವ ಉದ್ಯಾನವನದಲ್ಲಿ ಅಹಿಂದ ಮಾಜಿ ಅಧ್ಯಕ್ಷರಾದ ಮುದ್ದಯ್ಯ ಧ್ವಜಾರೋಹಣ ನೆರವೇರಿಸಿದರು. ಸಮಾಜ ಸೇವಕರಾದ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪುರಸಭೆ ಮಾಜಿ ಉಪಾಧ್ಯಕ್ಷರಾದ ಟಿ.ಎಂ.ಅಯ್ಯಪ್ಪ ಮಾತನಾಡಿ, ಸ್ವಾತಂತ್ರ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ರವಿಗೌಡ, ಮಹಿಳಾ ಅಧ್ಯಕ್ಷರಾದ ಕವಿತಾ ಪ್ರಸಾದ್, ಕಾರ್ಮಿಕ ಘಟಕದ ಅಧ್ಯಕ್ಷರಾದ ದಿವ್ಯ, ರೂಪ, ಮಡಿಕೇರಿ ನಗರ ಅಧ್ಯಕ್ಷರಾದ ಭರತ್, ಸಮಾಜ ಸೇವಕರಾದ ಕಲೀಲ್ ಭಾಷಾ, ರಾಷ್ಟ್ರೀಯ ಅಪರಾಧ ಮಾಹಿತಿ ವಿಭಾಗದ ಕರ್ನಾಟಕ ಡೆಪ್ಯೂಟಿ ಡೈರೆಕ್ಟರ್ ರಾಧಾ ಡಾ.ಜಾನ್ಸನ್, ಫೀಲ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿ ಸಂಘದ ಅಧ್ಯಕ್ಷ ಮುನೀರ್ ಮಾಚರ್, ವೇದಿಕೆ ಸದಸ್ಯರುಗಳಾದ ಪುನೀತ್ ಜಿ.ಎನ್., ಹರ್ಷಿತ್ ಕುಮಾರ್, ಸೈಮನ್, ಎಂ.ಹೆಚ್.ಹಫೀಜ್ ಹಾಗೂ ಮತ್ತಿತರ ಸದಸ್ಯರು ಪಾಲ್ಗೊಂಡಿದ್ದರು. ವೇದಿಕೆ ಮಡಿಕೇರಿ ತಾಲ್ಲೂಕು ಕಾರ್ಯದರ್ಶಿ ಅಕ್ಷಿತ್ ಸ್ವಾಗತಿಸಿದರು. ತಾಲ್ಲೂಕು ಉಪಾಧ್ಯಕ್ಷ…
ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸೇರಿದಂತೆ ಹಲರನ್ನು ಸ್ಮರಿಸಿದ್ದು…
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.






