ವಿರಾಜಪೇಟೆ ಜು.16 NEWS DESK : ವಿರಾಜಪೇಟೆ ಸಂತ ಅನ್ನಮ್ಮ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಹಾಗೂ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಹಾಗೂ ಈ.ಪಿ.ನೆಲ್ಸನ್ ಮುಂದಿನ ಐದು ವರ್ಷಗಳ ಅವಧಿಗೆ ಆಯ್ಕೆ ಯಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಇತರ ಸದಸ್ಯರುಗಳ ಒಪ್ಪಿಗೆಯೊಂದಿಗೆ ಸರ್ವಾನುಮತದಿಂದ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಸಂಘದ ನೂತನ ಅಧ್ಯಕ್ಷರಾದ ಚಾರ್ಲ್ಸ್ ಡಿಸೋಜಾ ಮಾತನಾಡಿ, ಸಂತ ಅನ್ನಮ್ಮ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವು ಪ್ರಸ್ತುತ 400ಕ್ಕೂ ಅಧಿಕ ಪಡಿತರದಾರರನ್ನು ಹೊಂದಿದ್ದು, ಅಕ್ಕಿಯನ್ನು ಪಡಿತರದಾರರಿಗೆ ಉಚಿತವಾಗಿ ವಿತರಿಸಲಾತ್ತಿದೆ. ಇನ್ನು ಮುಂದಿನ ದಿವಸಗಳಲ್ಲಿ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಸಗೊಬ್ಬರ, ಕೀಟ ನಾಶಕಗಳು, ಕೃಷಿ ಉಪಕರಣಗಳನ್ನು ಮಾರಾಟ ಮಾಡುವ ಯೋಜನೆ ಇದ್ದು, ರೈತಾಪಿ ವರ್ಗಕ್ಕೆ ಸಹಕರಿಸುವ ಕ್ರಿಯಾಯೋಜನೆಯನ್ನು ಹೊಂದಲಾಗಿದೆ ಎಂದು ಹೇಳಿದರು. ಸರ್ವ ಸದಸ್ಯರ ಹಾಗೂ ಪಡಿತರದಾರರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಈ ಸಂದರ್ಭ ಪ್ರಮುಖರಾದ ಮರ್ವಿನ್ ಲೋಬೋ,…
ಲೇಖಕ: admin
ಮಡಿಕೇರಿ ಜು.16 NEWS DESK : ಪ್ರಧಾನಮಂತ್ರಿ ಜನ್ ಜಾತೀಯ ಆದಿವಾಸಿ ಮಹಾ ಅಭಿಯಾನ (ಪಿಎಂ-ಜನ್‍ಮನ್) ಯೋಜನೆಯಡಿ ಜೇನುಕುರುಬ ಜನಾಂಗದವರಿಗೆ ಘಟಕ ವೆಚ್ಚ ರೂ.4.50 ಲಕ್ಷಗಳಲ್ಲಿ ಮನೆಯನ್ನು ಮಂಜೂರು ಮಾಡಲಾಗುತ್ತಿದ್ದು, ವಸತಿ ರಹಿತ ಜೇನುಕುರುಬ ಜನಾಂಗದ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ಕೋರಿದ್ದಾರೆ. ಜೇನುಕುರುಬ ಜನಾಂಗದವರನ್ನು ಹೊರತುಪಡಿಸಿ ಇತರೆ ಪರಿಶಿಷ್ಟ ಪಂಗಡದ ಜನಾಂಗದವರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.16 NEWS DESK : ಶಿಕ್ಷಣದ ಗುರಿ ಕೇವಲ ಯಶಸ್ಸನ್ನು ಸಾಧಿಸುವುದಲ್ಲ, ಜೀವನದಲ್ಲಿ ಎದುರಾಗುವ ಸೋಲುಗಳನ್ನು ಧೈರ್ಯದಿಂದ ಎದುರಿಸುವುದನ್ನು ಕಲಿಸುವುದೂ ಶಿಕ್ಷಣದ ಧ್ಯೇಯವಾಗಿದೆ ಎಂದು ಹಿರಿಯ ವಕೀಲ ಎಂ.ಎಂ. ನಿರಂಜನ್ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಪದಗ್ರಹಣ ಸಮಾರಂಭ’ದಲ್ಲಿ, ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಕ್ಕಳನ್ನು ಕೇವಲ ಅಂಕಗಳಿಸುವ ಯಂತ್ರಗಳನ್ನಾಗಿ ಮಾಡದೆ, ಮೌಲ್ಯಗಳನ್ನು ಮೈಗೂಡಿಸಿಕೊಂಡ ಸಹಾನುಭೂತಿಯುಳ್ಳ ಮನುಷ್ಯರನ್ನಾಗಿ ರೂಪಿಸುವುದು ಪೋಷಕರು ಮತ್ತು ಶಿಕ್ಷಕರ ಪ್ರಮುಖ ಕರ್ತವ್ಯ,” ಎಂದು ಅವರು ಹೇಳಿದರು. ಇಂದಿನ ಸಮಾಜದಲ್ಲಿನ ಸೂಕ್ಷ್ಮತೆಯ ಕೊರತೆಯ ಬಗ್ಗೆ ಮಾತನಾಡಿದ ನಿರಂಜನ್, ಹಿಂದಿನ ದಿನಗಳಲ್ಲಿ ಅಪಘಾತ ಸಂಭವಿಸಿದಾಗ ತತ್ ಕ್ಷಣ ಜನರು ಸಹಾಯ ಮಾಡಲು ಧಾವಿಸುತ್ತಿದ್ದರು, ಆದರೆ ಇಂದು ಘಟನೆ ನಡೆದ ಕೂಡಲೇ ಮೊಬೈಲ್ ತೆಗೆದು ವಿಡಿಯೋ ಮಾಡುವ ಮನಸ್ಥಿತಿ ಹೆಚ್ಚಾಗಿದೆ. ಕಾನೂನಿನ ಭಯ ಕಡಿಮೆಯಾಗುತ್ತಿರುವುದು ಈ ರೀತಿಯ ಅಮಾನವೀಯ ವರ್ತನೆಗೆ ಕಾರಣ,” ಎಂದು ವಿಷಾದಿಸಿದರು. ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯ ಬಗ್ಗೆ ಎಚ್ಚರಿಸಿದ ಅವರು, “ಮೊಬೈಲ್ ಫೋನ್ ಯುವಜನರ…
ಕುಶಾಲನಗರ ಜು.16 NEWS DESK : ಕುಶಾಲನಗರ ಕ್ಲಸ್ಟರ್ ವ್ಯಾಪ್ತಿಯ ಪಟ್ಟಣದ ಸರಹದ್ದಿನ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮದ ಒಂದನೇ ತರಗತಿ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದ ಸಿ.ಆರ್.ಪಿ., ಟಿ.ಈ.ವಿಶ್ವನಾಥ್, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುತ್ತಿದೆ ಎಂದರು. ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಮಾತನಾಡಿ, ತಮ್ಮ…
ಮಡಿಕೇರಿ ಜು.15 NEWS DESK : ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ ಸಂಬಂಧ ವರದಿ ಬಂದ ನಂತರ ಪುಟಾಣಿ ರೈಲು ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಿಶೇಷ ಆಹ್ವಾನಿತರಾದ ಜಿ.ಚಿದ್ವಿಲಾಸ್ ಅವರು ರಾಜಾಸೀಟಿನಲ್ಲಿ ಮಕ್ಕಳ ರೈಲು ಸ್ಥಗಿತವಾಗಿ ಹಲವು ವರ್ಷಗಳಾಗಿದ್ದು, ಈ ಬಗ್ಗೆ ತುರ್ತು ಕ್ರಮವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು. ನಗರದ ಅಜ್ಜಮಾಡ ದೇವಯ್ಯ…
ಸುಂಟಿಕೊಪ್ಪ ಜು.16 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ 2025-26ನೇ ಸಾಲಿನ ದ್ವಿತೀಯ ಬಾರಿಗೆ ಅಧ್ಯಕ್ಷರಾಗಿ ಕೆ.ವಿ.ಕಿಟ್ಟಣ್ಣ ರೈ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕಂಬಿಬಾಣೆ, ಖಜಾಂಚಿಯಾಗಿ ಅಜೀಜ್ ಕೊಡರಗರಹಳ್ಳಿ ಆಯ್ಕೆಯಾಗಿದ್ದಾರೆ. ಸಂಘದ ಸಾರ್ವಜನಿಕ ಸಂಭಾಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಕಿಟ್ಟಣ್ಣ ರೈ ವಹಿಸಿದ್ದರು. ಸಭೆಯಲ್ಲಿಕಳೆದ ಸಾಲಿನ ಲೆಕ್ಕಪತ್ರ ಮಂಡನೆ ಮಾಡಲಾಯಿತು. 2025-26ರ ಸಾಲಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಅಬ್ದುಲ್ಲಕುಟ್ಟಿ, ಬಿ.ಎ.ಕೃಷ್ಣಪ್ಪ, ಸಹಕಾರ್ಯದರ್ಶಿಯಾಗಿ ಪಟ್ಟೆಮನೆ.ಎಸ್.ರಕ್ಷಿತ್ ರೀನು, ಸಂಘಟನಾ ಕಾರ್ಯದರ್ಶಿಯಾಗಿ ರಿಜ್ವಾನ್, ಕಾರ್ಯಕಾರಿಸಮಿತಿ ಗೆ ಸಿ.ಎ.ಬಸಪ್ಪ, ರಾಜ, ಇನಾಸ್ ಡಿಸೋಜ, ಕೆ.ರವಿ, ಸಂದೀಫ್‍ಬಿ.ಎಸ್., ಬಿ.ಕೆ.ಸುರೇಶ್, ಅಸೀಸ್‍ಹೊಸಕೋಟೆ, ಅಸ್ಕರ್, ಜೈನುದ್ದೀನ್, ಶಕ್ತಿವೇಲು, ರಫೀಕ್ ಮೊನು ಮಣಿ ರಾಜ್ ತಂಬಿ, ಎಂ.ಎ.ದೇವಯ್ಯ, ಕುಮಾರ ಜಿ., ಎಂ.ಎಸ್.ಶಾಜಿ., ಸಲೀಂ ಗದ್ದೆಹಳ್ಳ, ಸಲಹಾ ಸಮಿತಿ ಸದಸ್ಯರುಗಳಾಗಿ ಆರ್.ರಾಜ, ಇಸ್ಮಾಯಿಲ್ ಕಾಕು ನೇಮಕಗೊಂಡರು. ಇದೇ ಸಂದರ್ಭ ಕಳೆದ ಬಾರೀ ಸಂಘವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದ ಸಂಘದ ಅಧ್ಯಕ್ಷ ಕೆ.ವಿ.ಕಿಟ್ಟಣ್ಣ ರೈ ಹಾಗೂ ಚಾಲಕ ಸಿ.ಎ.ಬಸಪ್ಪ ಅವರನ್ನು ನೂತನ…
ಸುಂಟಿಕೊಪ್ಪ ಜು.15 NEWS DESK : ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಯಿತು. ಸರ್ಕಾರದ ಸೂಚನೆ ಮೇರೆಗೆ ಕಾನ್‍ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಕ್ಲಸ್ಟರ್ ಅಧಿಕಾರಿ ಸೀಮಾ ಅವರು ಚಾಲನೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯನಿ ಶಾಂತಿ ರೈ, ಸಹಶಿಕ್ಷಕರುಗಳಾದ ಕವಿತ, ಯಶೋಧ, ಪ್ರಸನ್ನ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಯಶೋಧ ಉಪಸ್ಥಿತರಿದ್ದರು.
ಸುಂಟಿಕೊಪ್ಪ ಜು.15 NEWS DESK : ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ 2025-26ನೇ ಸಾಲಿಗೆ ಶೈಕ್ಷಣಿಕ ಸಂಸತ್ ಮಂತ್ರಿ ಮಂಡಲ ಶಾಲಾ ನಾಯಕನಾಗಿ ಅಜಿತ್, ಉಪನಾಯಕಿ ವೈಷ್ಣವಿ, ಆಹಾರ ಮಂತ್ರಿಯಾಗಿ ರಿದಾ ಮರಿಯಮ್, ಆಹಾರ ಉಪಮಂತ್ರಿಯಾಗಿ ನಿಶ್ಮಿತಾ, ರಂಜಿತ, ಆರೋಗ್ಯ ಮಂತ್ರಿಯಾಗಿ ಮೊಹಮ್ಮದ್ ಶಹಬಾಸ್, ಆರೋಗ್ಯ ಉಪಮಂತ್ರಿಯಾಗಿ ರೆಹನತ್, ಸ್ಚಚ್ಚತಾ ಮಂತ್ರಿ ಹಾಗೂ ಶಾಲಾ ಭದ್ರತಾ ಸಮಿತಿ ಮಂತ್ರಿಯಾಗಿ ಲೇಖಿಕ್, ಉಪ ಮಂತ್ರಿಯಾಗಿ ಅರ್ಪಿತ ರಾಡ್ರಿಗಸ್, ಕ್ರೀಡಾಮಂತ್ರಿಯಾಗಿ ಶಶಿಕಾಂತ, ಉಪಮಂತ್ರಿಯಾಗಿ ಸೃಜನ, ಸಾಂಸ್ಕೃತಿಕ ಮತ್ತು ವಾರ್ತಾ ಮಂತ್ರಿಯಾಗಿ ದೀಕ್ಷಾ, ವಾರ್ತಾ ಉಪಮಂತ್ರಿಯಾಗಿ ನೌಶಿನ ಅವರುಗಳಿಗೆ ಪ್ರಮಾಣ ವಚನ ಬೋಧಿಸುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಇದೇ ಸಂದರ್ಭ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಸಿ.ಟಿ.ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಬಾಲಕೃಷ್ಣ, ಶಾಲಾಭಿವೃದ್ಧಿ…
ನ್ಯೂಯಾರ್ಕ್ ಜು.15 NEWS DESK : ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. “ನಾವು ಮನೆಗೆ ಮರಳಿದ್ದೇವೆ” ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಡ್ರ್ಯಾಗನ್ ಎಂದು ಕರೆಯಲ್ಪಡುವ ಬಾಹ್ಯಾಕಾಶ ನೌಕೆ ಇಳಿದ ಸ್ವಲ್ಪ ಸಮಯದ ನಂತರ, ಮಧ್ಯಾಹ್ನ 3.02 ಕ್ಕೆ ಆಕ್ಸಿಯಮ್ ಸ್ಪೇಸ್‌ನ ಕಮಾಂಡ್ ಕಂಟ್ರೋಲ್ ಸೆಂಟರ್‌ಗೆ ತಿಳಿಸಿದ ಸಂದೇಶ ಇದಾಗಿದೆ. ಪೆಗ್ಗಿ ವಿಟ್ಸನ್ ಸಂದೇಶಕ್ಕೆ ಕಮಾಂಡ್ ಕೇಂದ್ರ “ಮನೆಗೆ ಸ್ವಾಗತ” ಎಂದು ಉತ್ತರಿಸಿದೆ. ಇದಕ್ಕೆ ಪೆಗ್ಗಿ ಉತ್ತರಿಸುತ್ತಾ, “ಮಹಾ ಸವಾರಿ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಧನ್ಯವಾದಗಳು.” ಗ್ರೇಸ್‌ನಲ್ಲಿರುವ ಸಿಬ್ಬಂದಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಆಕ್ಸಿಯಮ್ -4 ವಾಣಿಜ್ಯ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಕಳೆದ 21 ದಿನಗಳ ನಂತರ, ಮಿಷನ್ ಪೈಲಟ್…
ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ ಆಯೋಜಿಸಲಾಗಿದೆ. ಆ.3 ರಂದು ಭಾನುವಾರ ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ಹೆಸರನ್ನು ಜು.25 ರೊಳಗಾಗಿ 9353531976, 917760908774 ಸಂಖ್ಯೆಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳ ಬಹುದಾಗಿದೆ.






