ಮಡಿಕೇರಿ ಸೆ.1 NEWS DESK : ನಾಪೋಕ್ಲು ಬ್ಲಾಕ್ ಚೆಂಬು ಗ್ರಾಮದ ಆನೆಹಳ್ಳ ಗಿರಿಜನ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಈ ಹಿಂದೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಇಲ್ಲಿನ ನಿವಾಸಿಗಳು ಶಾಸಕರಿಗೆ ಸಲ್ಲಿಸಿದ್ದರು. ಆ ಸಂದರ್ಭ ಶಾಸಕರು ಕಾಲೋನಿಗೆ ಭೇಟಿ ನೀಡಿ ಎಲ್ಲರೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದರು. ಕೊಟ್ಟ ಮಾತಿನಂತೆ ಗ್ರಾಮಕ್ಕೆ ಆಗಮಿಸಿದ ಶಾಸಕರು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಮೂಲಭೂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೇ ಸ್ಥಳದಲ್ಲೇ ಕಾಲೋನಿಯ ಸುಮಾರು 15 ಲಕ್ಷಕ್ಕೂ ಅಧಿಕದ ಮೊತ್ತದ ವಿವಿಧ ಕಾಮಗಾರಿಗಳಿಗೆ ಅನುದಾನ ಘೋಷಿಸಿದರು ಮತ್ತು ಮಳೆ ನಿಂತ ಕೂಡಲೇ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಸೆ.1 NEWS DESK : ಮದೆನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಟಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತರಾಗುವಂತೆ ತಿಳಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ, ಡಿಸಿಸಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮ ನಿರ್ದೇಶಕಿತ ಅಧ್ಯಕ್ಷರು/ಪದಾಧಿಕಾರಿಗಳು, ಮೇಕೇರಿ, ಹಾಕತೂರು, ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಚೇರಂಬಾಣೆ, ಭಾಗಮಂಡಲ, ಕುಂದಚೇರಿ, ಕರಿಕೆ ಹಾಗೂ ಸುತ್ತಮುತ್ತಲಿನ ವಲಯಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಸೆ.1 NEWS DESK : ಕೊಂಡಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಖೋ-ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ರನರ್ಸ್ ಟ್ರೋಫಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತಂಡದಲ್ಲಿ ಹುಮೈದ್ ಜುಕಾಕು, ಕೆ.ಎ.ಮೊಹಮ್ಮದ್ ಸಿನಾನ್, ಕೆ.ಕೆ.ಮೊಹಮ್ಮದ್ ಅಬಿನಾಸ್, ಎಂ.ಎಂ.ಮುಝಮಿಲ್, ಹೆಚ್.ಎನ್.ಸುಮನ್ ರಾಜ್, ವಿ.ಪಿ.ಯಶವಂತ್, ಪಿ.ಎಂ.ಮೊಹಮ್ಮದ್ ಅಪ್ಸರ್, ಕುಟ್ಟಂಡ ಚಿರಾಗ್ ಚಂಗಪ್ಪ, ಕೊಳುವಂಡ.ಬಿ.ಲವೀನ್ ಬೋಪಣ್ಣ, ಟಿ.ವಿ.ಅಕ್ಷಾನ್, ಚೇಂದಂಡ ಆರ್ ಸೋಹನ್ ಸೋಮಣ್ಣ, ಯು.ಪೊಟ್ಟಂಡ ಯಕ್ಷಿತ್ ಭಾಗವಹಿಸಿದ್ದರು. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಬಿ.ಎಸ್.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಸೆ.1 NEWS DESK : ಮೇಕೇರಿ ಗ್ರಾಮದ ಮಡ್ಯನ ದೀಪಕ್ ಎಂಬವರ ಕಾರು ಶೆಡ್‍ನೊಳಗಿದ್ದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಕುಶಾಲನಗರ ಸೆ.1 NEWS DESK : ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಕೂಡಿಗೆ ಅಂಜೆಲಾ ವಿದ್ಯಾನಿಕೇತ ಶಾಲೆಯಲ್ಲಿ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಮನೋಭಾವನೆಯನ್ನು ಹುಟ್ಟುಹಾಕಲು ವಿಜ್ಞಾನ ವಿಚಾರ ಗೋಷ್ಠಿಗಳು ಸಹಕಾರಿಯಾಗಿವೆ. ವಿಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳು ಹಾಗೂ ವಿಜ್ಞಾನಿಗಳ ಜೀವನ ಚರಿತ್ರೆ, ವಿಚಾರಧಾರೆ ಮತ್ತು ಅವರ ವೈಜ್ಞಾನಿಕ ಸಾಧನೆಗಳನ್ನು ಅಧ್ಯಯನ ಮಾಡುವ ಮೂಲಕ ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ಹೆಚ್ಚಿನ ಜ್ಞಾನ ಹೊಂದಬೇಕು ಎಂದು ಬಿಇಓ ಕೃಷ್ಣಪ್ಪ ಸಲಹೆ ನೀಡಿದರು. ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯೊಂದಿಗೆ…
ಮಡಿಕೇರಿ ಸೆ.1 NEWS DESK : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27 ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ ವಾದ್ಯಗೋಷ್ಠಿ ಕಲಾತಂಡದ ಪುರುಷೋತ್ತಮ್, ಕವಿತಾ, ಸುಭಾಷ್, ಜನಾರ್ದನ್ ಭಕ್ತಿಗೀತೆ, ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಸ್ಥಳೀಯ ಪ್ರತಿಭೆಗಳು ಕೂಡಾ ಹಾಡು ಹಾಡಿ ಮೆಚ್ಚುಗೆ ಗಳಿಸಿದರು. ಆ.28 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು. ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 29ರಂದು ಮಧ್ಯಾಹ್ನ ಮಹಾಪೂಜೆ, ಅನ್ನದಾನ ನಡೆಯಿತು. ವಾರ್ಷಿಕ ಹುಂಡಿ ಹಣ ಸಂಗ್ರಹದಲ್ಲಿ ವಿಜೇತರಾದ…
ಮಡಿಕೇರಿ NEWS DESK ಆ.31 : ಕಾಡು ಕಡಿಯುವ ಯಂತ್ರಗಳ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದಂತೆ ಒಂದೇ ಬಿಲ್ ಗೆ ಎರಡು ಬಾರಿ ಹಣ ಪಾವತಿ ಮಾಡಿದ ಆರೋಪ ತನಿಖೆಯಿಂದ ಸಾಬೀತಾದ ಹಿನ್ನೆಲೆ ಮಡಿಕೇರಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಹಳ ವಿರುದ್ಧ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ಮಡಿಕೇರಿ ನಗರಸಭೆಯ ಹಿಂದಿನ ಪೌರಾಯುಕ್ತರಾದ ಪ್ರಸ್ತುತ ಚಾಮರಾಜನಗರ ನಗರಸಭೆಯಲ್ಲಿರುವ ಎಸ್.ವಿ.ರಾಮದಾಸ್, ಹಿಂದಿನ ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ) ಪ್ರಸ್ತುತ ಹುಣುಸೂರು ನಗರಸಭೆಯಲ್ಲಿರುವ ಸೌಮ್ಯ ಕೆ., ಹಿಂದಿನ ಲೆಕ್ಕಾದೀಕ್ಷಕರು, ಪ್ರಸ್ತುತ ವಿರಾಜಪೇಟೆ ಪುರಸಭೆಯ ಕಚೇರಿ ವ್ಯವಸ್ಥಾಪಕರಾದ ಕೆ.ಬಿ.ಸುಜಾತ, (ಪ್ರಬಾರ) ಹಾಗೂ ದ್ವಿತೀಯ ದರ್ಜೆ ಸಹಾಯಕರಾದ ಬಿ.ಆರ್.ಹರಿಣಿ ಅವರುಗಳ ಮೇಲಿನ ಆರೋಪವು ರುಜುವಾತು ಆಗಿರುತ್ತದೆ. ಆದುದರಿಂದ ಇವರುಗಳ ವಿರುದ್ಧ ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು 1957ರ ನಿಯಮ 8(iii)ರನ್ವಯ ಮುಂದಿನ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆಯೊಂದಿಗೆ ಒಂದೇ ಬಿಲ್ ಗೆ…
ಮಡಿಕೇರಿ NEWS DESK ಆ.31 : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಚೆನ್ನೈನಲ್ಲಿ ನಡೆದ 46ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2025ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಭಾಗವಹಿಸಿದ್ದ ಎಲ್ಲಾ 28 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿದ್ದು, 18 ಚಾಂಪಿಯನ್ ಟ್ರೋಫಿ, 7 ಚಿನ್ನದ ಪದಕ ಮತ್ತು 3 ಬೆಳ್ಳಿಯ ಪದಕಗಳನ್ನು ಗೆದ್ದಿದ್ದಾರೆ. ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ಒಟ್ಟು 28 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಭಾರತದ 340 ಕೇಂದ್ರಗಳಿಂದ ಒಟ್ಟು 8000 ಮಕ್ಕಳು ಭಾಗವಹಿಸಿದ್ದು, ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 28ವಿದ್ಯಾರ್ಥಿಗಳು ಪದಕಗಳನ್ನು ತಮ್ಮದಾಗಿಸಿಕೊಂಡರು. ಈ ಸಾಧನೆಯ ಹೆಗ್ಗಳಿಕೆಯು ಕಠಿಣ ಪರಿಶ್ರಮ ವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು. ಪದಕಗಳನ್ನು ಗೆದ್ದ ಅದ್ಭುತ ಯಶಸ್ಸಿಗೆ ಕಾರಣಕರ್ತರಾದ ವಿದ್ಯಾರ್ಥಿಗಳು ಹಾಗೂ ಕಾಳಜಿ…
ಮಡಿಕೇರಿ NEWS DESK ಆ.31 : ಕೇಂದ್ರ ಮತ್ತು ರಾಜ್ಯ ಸರಕಾರದ ಮೂಲಕ ನಡೆಯುವ ಜನಗಣತಿ ಹಾಗೂ ಜಾತಿ ಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರ ನಿಖರ ನೋಂದಣಿಗಾಗಿ ಮಾಹಿತಿ ಒದಗಿಸುವ ಕಾರ್ಯಾಗಾರ ಮತ್ತು ಸಭೆ ಸೆ.4 ರಂದು ನಡೆಯಲಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಗೌಡ ಸಮುದಾಯದ ಆಸಕ್ತರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ NEWS DESK ಆ.30 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಕೇರಳದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕೊಟ್ಟಾಯಂ ನಿವಾಸಿ ಮುರಳಿ(48) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಬಸವಹಳ್ಳಿ ನಿವಾಸಿ ತೀರ್ಥ (25) ಎಂಬಾತನನ್ನು ಬಂಧಿಸಲಾಗಿದೆ. ಸ್ಥಳೀಯ ಕೃಷಿಕರೊಬ್ಬರ ಶುಂಠಿ ಕೃಷಿಯ ಮೇಲ್ವಿಚಾರಣೆ ಕೆಲಸಕ್ಕೆಂದು ನೇಮಿಸಲ್ಪಟ್ಟಿದ್ದ ಮುರಳಿ ಹಾಗೂ ತನ್ನ ಪತ್ನಿಯ ನಡುವಿನ ಸಂಬಂಧದ ಬಗ್ಗೆ ಸಂಶಯಗೊಂಡಿದ್ದ ತೀರ್ಥ ಮುರಳಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಶುಕ್ರವಾರ ರಾತ್ರಿ ತೀರ್ಥ ಪತ್ನಿಯ ಮೇಲೆ ಹಲ್ಲೆ ಮಾಡಿರುವುದಲ್ಲದೆ ದೊಣ್ಣೆಯಿಂದ ಮುರಳಿಯನ್ನು ಕೂಡ ಹಲ್ಲೆ ಮಾಡಿದ್ದಾನೆ. ಈ ಸಂದರ್ಭ ಮುರಳಿ ಸಾವನ್ನಪ್ಪಿರುವುದಾಗಿ ದೂರಲಾಗಿದೆ. ಕುಶಾಲನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಆರೋಪದಡಿ ತೀರ್ಥನನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿದರು. ನಂತರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ವಿವರಿಸಿದರು. ತೀರ್ಥನ ಪತ್ನಿ ಜ್ಯೋತಿಯನ್ನು…






