ಸುಂಟಿಕೊಪ್ಪ, NEWS DESK ಆ.31: ಸುಂಟಿಕೊಪ್ಪ ಮಾಲಯಾಳಿ ಸಮಾಜದ 2026-27ನೇ ಸಾಲಿನ ಅಧ್ಯಕ್ಷರಾಗಿ ಕೆ.ಕೆ. ವಾಸುದೇವ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ. ಕಮಲಾಸನ್ ಆಯ್ಕೆಯಾಗಿದ್ದಾರೆ. ಭಾನುವಾರ ಶ್ರೀ ಮುತ್ತಪ್ಪ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿ.ಕೆ. ರಾಜು, ಸಹ ಕಾರ್ಯದರ್ಶಿಗಳಾಗಿ ವೇಲಾಯುಧನ್, ಶಶಿಕುಮಾರ್ ಹಾಗೂ ಟಿ.ಕೆ. ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ಕೆ. ಕನೀಷ್ ಕುಮಾರ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕೆ.ಪಿ. ವಿನೋದ್, ಭಾಸ್ಕರನ್, ವಿ.ಎ. ಸಂತೋಷ್ ಕುಮಾರ್, ರಮೇಶ್ ಪಿಳ್ಳೆ ಹಾಗೂ ಪಿ.ಸಿ. ಮೋಹನ್ ಅವರನ್ನು ಆಯ್ಕೆ ಮಾಡಲಾಯಿತು. ಕ್ರೀಡಾ ಕಾರ್ಯದರ್ಶಿಯಾಗಿ ಪಿ.ಸಿ. ಸುರೇಶ್ ಆಯ್ಕೆಯಾಗಿದ್ದಾರೆ. ಮಹಿಳಾ ವಿಭಾಗದ ಅಧ್ಯಕ್ಷರಾಗಿ ವಿ. ಶೈಜಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಧಾ ಆಯ್ಕೆಯಾಗಿದ್ದು, ಸದಸ್ಯರಾಗಿ ತುಳಸಿ, ಶೋಭಾ, ಅಕ್ಷತಾ, ಸುಜಿತಾ, ಚಂದ್ರಿಕಾ, ರಂಜಿನಿ, ಗೀತಾದೇವಿ, ಕವಿತಾ, ಪ್ರಭಾಕರ್, ಮಂಜುಳಾ ಸುಕುಮಾರ್, ಸುಜಾತ, ಶ್ಯಾಮಲ ಹಾಗೂ ಸ್ವರ್ಣ ಅವರನ್ನು ಆಯ್ಕೆ ಮಾಡಲಾಯಿತು.
ಲೇಖಕ: admin
ಮಡಿಕೇರಿ, NEWS DESK ಆ 31- ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ *ಗೋಲ್ಡನ್ ಸಾರ್ಜೆಂಟ್ ಜೇಷ್ಟ ಸುಬ್ಬಯ್ಯ ಎಂ.ಹೆಚ್* ಅವರು ಪ್ರತಿಷ್ಠಿತ ಅಖಿಲ ಭಾರತ ತಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಈ ಶಿಬಿರವು 2026ರ ಆಗಸ್ಟ್ 31 ರಿಂದ ಸೆಪ್ಟೆಂಬರ್ 11 ರವರೆಗೆ ನವದೆಹಲಿಯಲ್ಲಿ ನಡೆಯಲಿದೆ. ಫೈರಿಂಗ್ (ಗ್ರೂಪಿಂಗ್) ವಿಭಾಗದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ 3 ಕೆಡೆಟ್‌ಗಳ ಮಾತ್ರ ಆಯ್ಕೆಯಾಗಿದ್ದು, ಅದರಲ್ಲಿ ಜೇಷ್ಟ ಸುಬ್ಬಯ್ಯ ಒಬ್ಬರಾಗಿದ್ದಾರೆ. ಕರ್ನಾಟಕದ ವಿವಿಧೆಡೆ ನಡೆದ 7 ಆಯ್ಕೆ ಶಿಬಿರಗಳಲ್ಲಿ ಜೇಷ್ಟ ಸುಬ್ಬಯ್ಯ ಭಾಗವಹಿಸಿ, ಗ್ರೂಪಿಂಗ್ ಶೂಟಿಂಗ್ ಸ್ಪರ್ಧೆಯಲ್ಲಿ 1.2 ಸೆಂ.ಮೀ ಗ್ರೂಪಿಂಗ್ ಸಾಧನೆ ಮಾಡುವ ಮೂಲಕ ಈ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾನೆ ಎಂದು ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ತಿಳಿಸಿದ್ದಾರೆ. ಜೇಷ್ಟ ಸುಬ್ಬಯ್ಯ ಮರಗೋಡುವಿನ ಕೃಷಿಕ ಮಂಡಿರ ಎಂ.ವಿ. ಹರೀಶ್ ಮತ್ತು ವಿಮಾ ದಂಪತಿಯ ಪುತ್ರನಾಗಿದ್ದು 19ನೇ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಯ ಕೆಡೆಟ್ ಆಗಿದ್ದಾನೆ.
ಚೆಟ್ಟಳ್ಳಿ, NEWS DESK ಆ.30: ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದ್ದು, ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದರು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪ್ರದೇಶದಲ್ಲಿ ಬರದ ಪರಿಸ್ಥಿತಿ ಇದ್ದರೂ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ವಿಷಾದನೀಯ ಎಂದರು. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಕುರಿತು ಸಂಘದ ವತಿಯಿಂದ ಸರ್ಕಾರಕ್ಕೆ ಪತ್ರ ಬರೆದು ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಲು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ಸಹಕಾರ ಸಂಘಗಳ ಆಡಳಿತ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಗಳ ಮಾದರಿಯಲ್ಲಿ ರೂಪಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಮಣಿ ಉತ್ತಪ್ಪ ಹೇಳಿದರು. ಹಿಂದಿನ…
ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ ಬಾಂದವ್ಯವನ್ನು ಗಟ್ಟಿಗೊಳಿಸುವ ಶಾಶ್ವತ ಬಂಧ ಎಂದು ಸೇವ ಭಾರತಿ ಜಿಲ್ಲಾಧ್ಯಕ್ಷರಾದ ಚಂದ್ರನ್ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ರಕ್ಷಾ ಬಂಧನವು ಇಂದು ರಕ್ತ ಸಂಬಂದವನ್ನು ಮೀರಿ ನಿಂತ ಹಬ್ಬವಾಗಿದ್ದು ಸಹೋದರತೆಯನ್ನು ಬಿತ್ತುವ ಹಬ್ಬ. ಸಹೋದರತೆಯಿಂದ ಸಾಮರಸ್ಯ , ಇವೆರಡು ಸೇರಿ ಸಂಘಟನೆ ನಂತರ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಇದು ಕೇವಲ ಹಬ್ಬ ಮಾತ್ರವಲ್ಲ. ಭಾವನೆಗಳನ್ನು ಬೆಸೆಯುವ ಹಬ್ಬವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಪರಸ್ಪರ ಬಬ್ಬರನ್ನೊಬ್ಬರು ರಕ್ಷಣೆ ಮಾಡುತ್ತ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಯುವಶಕ್ತಿ ದೇಶದ ಶಕ್ತಿ ಎಂಬಂತೆ ಉತ್ತಮ ಆದರ್ಶ ಪ್ರಾಯರಾಗಿ ಜೀವನ ನಡೆಸಿ ಎಂದರು . ರಕ್ಷಾ ಬಂಧನ ಆಚರಣೆಗೆ ಭಾರತೀಯ…
ಮಡಿಕೇರಿ ಆ.30 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳನ್ನು ಸಲ್ಲಿಸುವ ಅವಧಿಯನ್ನು ಒಂದು ವಾರ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಲೇಖಕರು ರಚಿಸಿರುವ ಉತ್ತಮ ಪುಸ್ತಕಕ್ಕೆ ಪ್ರಶಸ್ತಿ ಪ್ರದಾನಿಸುವ ಉದ್ದೇಶದಿಂದ ಪೇರಿಯಂಡ ಪಿ. ಪೆಮ್ಮಯ್ಯ ಹಾಗೂ ಜಿ.ಕೆ.ದೇವಕಿ ಪೆಮ್ಮಯ್ಯ ದಂಪತಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿದ್ದಾರೆ. ಈ ಹಿಂದೆ ಪ್ರಕಟಣೆಯಲ್ಲಿ ಕೃತಿಗಳನ್ನು ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನವೆಂದು ತಿಳಿಸಲಾಗಿತ್ತು. ಇದೀಗ ಒಂದು ವಾರದ ಅವಧಿ ವಿಸ್ತರಿಸಲಾಗಿದ್ದು, ಆಸಕ್ತರು ತಮ್ಮ ಕೃತಿಗಳನ್ನು ಸೆಪ್ಟೆಂಬರ್ 7, 2026ರೊಳಗೆ ತಲುಪಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಕೃತಿಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 94483 46276 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು…
ವಿರಾಜಪೇಟೆ, NEWS DESK ಆ.30: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪರೀಕ್ಷೆಗಳಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆ ಮಾಡಿದ ವಿರಾಜಪೇಟೆಯ ಪ್ರತಿಷ್ಠಿತ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ರೆ. ಫಾ. ಮದಲೈ ಮುತ್ತು, ಕಾಲೇಜು ಪ್ರತಿವರ್ಷವೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಜೊತೆಗೆ ಆಡಳಿತ ಮಂಡಳಿಯ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್, ಡಿಡಿಪಿಯು ಗಣಪತಿ, ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಹಾಗೂ…
ವಿರಾಜಪೇಟೆ, NEWS DESK ಆ.30: ಅಮ್ಮತಿಯ ಗುಡ್ ಶೆಫರ್ಡ್ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. 400 ಮೀಟರ್ ಓಟದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಕರ್ನಂದ ಕೃತಿಕಾ ಅಕ್ಕಮ್ಮ ಪ್ರಥಮ ಹಾಗೂ 9ನೇ ತರಗತಿಯ ಕರ್ನಂದ ಶತಕ ಕಾವೇರಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ. 200 ಮೀಟರ್ ಓಟದಲ್ಲಿ 10ನೇ ತರಗತಿಯ ಬೋವ್ವೆರಿಯಂಡ ಹನ್ಸಿಕ ಪೊನ್ನಪ್ಪ ಪ್ರಥಮ ಸ್ಥಾನ ಗಳಿಸಿದ್ದಾರೆ. 800 ಮೀಟರ್ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಚಬಂಡ ವಿಬಿನ್ ದ್ವಿತೀಯ ಹಾಗೂ 400 ಮೀಟರ್ ಓಟದಲ್ಲಿ 9ನೇ ತರಗತಿಯ ಕುಟ್ಟಂಡ ಚಿರಾಗ್ ಎಲ್. ದ್ವಿತೀಯ ಸ್ಥಾನ ಪಡೆದಿದ್ದಾರೆ. ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ಗುಡ್ದಂಡ ಮುತ್ತಮ್ಮ ಟಿ. ತೃತೀಯ ಸ್ಥಾನ ಗಳಿಸಿದ್ದಾರೆ. 4×100 ಮೀಟರ್ ರಿಲೇ ಬಾಲಕಿಯರ ವಿಭಾಗದಲ್ಲಿ ಹನ್ಸಿಕ ಪೊನ್ನಪ್ಪ, ಕುಲ್ಲಚಂಡ ಭೂಮಿಕ ಭೋಜಮ್ಮ, ಕರ್ನಂದ ಶತಕ ಕಾವೇರಮ್ಮ ಹಾಗೂ…
ಮಡಿಕೇರಿ, NEWS DESK ಆ. 30 – ನಗರದ ರೋಟರಿ ವುಡ್ಸ್ ಸಂಸ್ಥೆ ವತಿಯಿಂದ ನಮ್ಮ ಹಬ್ಬ ನಮ್ಮ ಸೇವೆ ಯೋಜನೆಯ ಅಂಗವಾಗಿ ರಕ್ಷಾ ಬಂಧನ್ ಕಾಯ೯ಕ್ರಮವನ್ನು ಆಯೋಜಿಸಲಾಗಿತ್ತು. ಮಡಿಕೇರಿ ನಗರ ಪೊಲೀಸ್ ಠಾಣೆ, , ನಗರ ಮಹಿಳಾ ಪೊಲೀಸ್ ಠಾಣೆ ಮತ್ತು ಮಡಿಕೇರಿ ಮಹಿಳಾ ಕಾಲೇಜ್ ನಲ್ಲಿರಕ್ಷಾ ಬಂಧನ್ ಆಚರಿಸಲಾಯಿತು. ರಕ್ಷಾ ಸೂತ್ರವು ಕೇವಲ ಹಬ್ಬದ ದಿನ ಕ್ಯೆಗೆ ಕಟ್ಟುವ ದಾರವಲ್ಲ, ಅದು ರಕ್ಷಣೆ, ನಂಬಿಕೆ ಮತ್ತು ಶುಭಾಶಯಗಳನ್ನು ಸದಾ ಸಾರುವ ಪವಿತ್ರ ಸಂಕೇತವಾಗಿದೆ, ವೇದ ಕಾಲದಿಂದಲೂ ಯಜ್ಞ, ಪೂಜೆ ಮತ್ತು ಶುಭ ಕಾರ್ಯಗಳ ವೇಳೆ ಪವಿತ್ರ ಮಂತ್ರಗಳಿಂದ ಅಭಿಮಂತ್ರಿಸಿದ ರಕ್ಷಾಸೂತ್ರವನ್ನು ಕಟ್ಟುವ ಸಂಪ್ರದಾಯವಿದೆ… ಈ ದಾರವು ದುಷ್ಟಶಕ್ತಿಗಳಿಂದ ರಕ್ಷಿಸಿ ದ್ಯೆರ್ಯ, ಶುಭ ಮತ್ತು ಪವಿಕ ಕ್ರಪೆಯನ್ನು ನೀಡುತ್ತದೆ ಎಂಬ ನಂಬಿಕೆ ಇತ್ತು..ಕಾಲಕ್ರಮೇಣ ಇದೇ ಸಂಪ್ರದಾಯ ಕುಟುಂಬಗಳಲ್ಲಿಯೂ ಬೆಳೆದು, ಪರಸ್ಪರರ ಒಳಿತು, ಕ್ಷೇಮ ಮತ್ತು ಜವಾಬ್ದಾರಿಯನ್ನು ನೆನಪಿಸುವ ಪವಿತ್ರ ಬಂಧನವಾಯಿತು, ಆದ್ದರಿಂದ ರಕ್ಷಾ ಸೂತ್ರದ ಮಹತ್ವ ಅದನ್ನು…
ಕುಶಾಲನಗರ, NEWS DESK ಆ. 30: ಮೈಸೂರಿನ ಸೇವಾ ಭಾರತಿ ಸಂಸ್ಥೆಯ ವತಿಯಿಂದ ನಿರಂತರ ಮಿತ್ರ ವೃಂದ ಹಾಗೂ ಭವಿಷ್ಯ ಚಾರಿಟೇಬಲ್ ಟ್ರಸ್ಟ್‌ನ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಶಿಕ್ಷಣ ತಜ್ಞರೂ ಆದ ಶೈಕ್ಷಣಿಕ ಸಮಾಲೋಚಕ ಡಾ. ಜಿ. ಅಚ್ಯುತನ್ ಅವರು, ಸಂಪನ್ಮೂಲಗಳ ಕೊರತೆಯಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಹಾಗೂ ಅವರ ಕಲಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ ನೋಟ್ ಪುಸ್ತಕಗಳ ವಿತರಣೆ ಅತ್ಯುತ್ತಮ ಮತ್ತು ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಈ ಸಾಮಾಜಿಕ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಹಲವಾರು ದಾನಿಗಳು ಸಹಕರಿಸಿದ್ದಾರೆ ಎಂದರು. ಸಮಾಜ ಸೇವೆಯ ಒಂದು ಭಾಗವಾಗಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಬರವಣಿಗೆ ಪುಸ್ತಕಗಳು, ಪೆನ್, ಪೆನ್ಸಿಲ್,…
ಮಡಿಕೇರಿ, NEWS DESK ಆ.30: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕಾರಿ ಮಂಡಳಿ ಸಭೆಯು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಿದ್ದರು. ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಳೆದ ಸಾಲಿನಲ್ಲಿ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳು, ವಿಶೇಷ ಆಹ್ವಾನಿತರು ಮತ್ತು ಸದಸ್ಯರ ಸಭೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕಾರಿ ಸಮಿತಿಯ 6 ಸಭೆಗಳು, ಪದಾಧಿಕಾರಿಗಳ 12 ಸಭೆಗಳು, ಜಿಲ್ಲಾ ಸಮ್ಮೇಳನ ಹಾಗೂ ಮೂರು ತಾಲೂಕು ಸಮ್ಮೇಳನಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಇದರೊಂದಿಗೆ ಸಂಸ್ಥಾಪನಾ ದಿನಾಚರಣೆ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದಿನಾಚರಣೆ, ಸರ್ ಎಂ. ವಿಶ್ವೇಶ್ವರಯ್ಯ ದಿನಾಚರಣೆ ಹಾಗೂ ಮಿರ್ಜಾ ಇಸ್ಮಾಯಿಲ್ ದಿನಾಚರಣೆಗಳನ್ನು ಆಚರಿಸಲಾಗಿದ್ದು, 37 ದತ್ತಿನಿಧಿ ಕಾರ್ಯಕ್ರಮಗಳು ಮತ್ತು 15 ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಗೌರವ ಕಾರ್ಯದರ್ಶಿ…






