ಬೆಂಗಳೂರು ಆ.30 NEWS DESK : ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ 4ನೇ ಕರಾಟೆ ಚಾಂಪಿಯನ್‍ಶಿಪ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭ ಆಹ್ವಾನಿತ ಗಣ್ಯರೊಂದಿಗೆ AKSKA president and JT chairman Technical commission KOI ಅರುಣ್ ಮಾಚಯ್ಯ, ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಲೇಖಕ: admin
ಸುಂಟಿಕೊಪ್ಪ ಆ.30 NEWS DESK : ಐಗೂರಿನ ಏಕದಂತ ಗೆಳೆಯರ ಬಳಗದ ವತಿಯಿಂದ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಗೌರಿ ಗಣೇಶ ಮೂರ್ತಿಗೆ ಮೂರು ದಿನಗಳ ಕಾಲ ಪೂಜೆ ಸಲ್ಲಿಸಲಾಯಿತು. ನಂತರ ಉತ್ಸವ ಸಮಿತಿ ವತಿಯಿಂದ ಭವ್ಯ ಮಂಟಪದಲ್ಲಿ ಗಣಪತಿ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ಚೋರನ ಹೊಳೆಯಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಈ ಸಂದರ್ಭ ಏಕದಂತ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಯತೀಶ್ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷರಾದ ಅನುಕುಮಾರ್, ಕಾರ್ಯದರ್ಶಿ ಯಶೀತ್, ಖಜಾಂಚಿ ನರಸಿಂಹ, ಪದಾಧಿಕಾರಿಗಳಾದ ಬಿ.ಅಭಿಜಿತ್, ಬಿ.ದರ್ಶಿತ್, ಮಣಿಕಂಠ, ಸಲಹೆಗಾರರಾದ ಮದನ್, ಆನಂದ,ವಿಶ್ವ ಪೂಜಾರಿ ಹಾಗೂ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ಮಡಿಕೇರಿ ಆ.30 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆ.1 ರಂದು ಬೆಳಗ್ಗೆ 11 ಗಂಟೆಗೆ ಕರಿಕೆ ಗ್ರಾಮದ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಶ್ರೀಧರ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟ ಕುರಿತು ವಿವಿಧ ಸಂಘ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕಾಗಿ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕೊಡಗು ಜಿಲ್ಲಾ ಪೊಲೀಸ್ ಘಟಕದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಕಣ್ಗಾವಲು ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಸೂರಜ್ ಪಿ.ಎ, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ., ಪಿಎಸ್‍ಐ ಅನ್ನಪೂರ್ಣ ಎಸ್.ಎಸ್.…
ವಿರಾಜಪೇಟೆ ಆ.30 NEWS DESK : ವಿರಾಜಪೇಟೆಯ ಗಣಪತಿ ದೇವಾಲಯದಲ್ಲಿ ಗೌರಿ-ಗಣೇಶೋತ್ಸವದ ಅಂಗವಾಗಿ ಗಣಪತಿ ಮೂರ್ತಿಗೆ ಪ್ರತಿದಿನ ಅಲಂಕಾರ ಪೂಜೆ ನಡೆಸಲಾಗುತ್ತಿದೆ.
ಕುಶಾಲನಗರ ಆ.30 NEWS DESK : ಇಂದಿರಾ ಬಡಾವಣೆಯ ಶ್ರೀ ಸಿದ್ದಿ ವಿನಾಯಕ ಸೇವಾ ಸಮಿತಿ ಹಾಗೂ ಗೋಲ್ಡನ್ ಗೆಳೆಯರ ಬಳಗದ ಆಶ್ರಯದಲ್ಲಿ 23ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು, ಕಿರಿಯರು-ಹಿರಿಯರು ಎನ್ನದೆ ಜಾತಿ ಭೇದ ಮರೆತು ಎಲ್ಲರೂ ಪಾಲ್ಗೊಂಡು ಸಂಭ್ರಮಿಸಿದರು. 2ನೇ ದಿನ ಸ್ಥಳೀಯ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಸಂಗೀತ ಕುರ್ಚಿ, ಪಾಸಿಂಗ್ ದ ಬಾಲ್, ಲೆಮೆನ್ ವಿತ್ ಸ್ಪೂನ್, ಕೆರೆ-ದಡ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಡಾವಣೆಯ ನಿವಾಸಿಗಳು ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡು ಆಡಿ ನಲಿದರು. ವಿದ್ಯುತ್ ದೀಪಾಲಂಕಾರ ಸೇರಿದಂತೆ ಹಲವು ಹೂಗಳಿಂದ ಗೌರಿ-ಗಣೇಶ ಮೂರ್ತಿಯ ಮಂಟವನ್ನು ಸಿಂಗರಿಸಲಾಗಿತ್ತು. ಬಡಾವಣೆಯ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪೂಜೆಸಲ್ಲಿಸಿದರು. ನಂತರ ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಗಣೇಶೋತ್ಸವದ ಅಂಗವಾಗಿ ಸ್ಥಳೀಯ ಶರಣ್ ಸಾರಥ್ಯದ ಡ್ರೀಮ್ ಸ್ಟಾರ್ ನೃತ್ಯ ಸಂಸ್ಥೆ ಹಾಗೂ ನಿಶಿ ಸಾರಥ್ಯದ ಡಿ.ಸಿ.ಡ್ಯಾನ್ಸ್ ಸ್ಟುಡಿಯೋ ವತಿಯಿಂದ ನಡೆದ…
ಮಡಿಕೇರಿ ಆ.30 NEWS DESK : 2025-26ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ಎಲ್ಲಾ ವರ್ಗದ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಟ್ಟಣ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಉತ್ಪಾದನಾ ಉದ್ದಿಮೆಗಳಿಗೆ ಗರಿಷ್ಠ 50 ಲಕ್ಷಗಳವರೆಗೆ ಹಾಗೂ ಸೇವಾ ಉದ್ದಿಮೆಗಳಿಗೆ ಗರಿಷ್ಠ ರೂ.20 ಲಕ್ಷಗಳವರೆಗೆ ಸಾಲವನ್ನು ಪಡೆದರೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್ ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್ ಲ್ಯಾಬ್, ಅಡಿಕೆ ತಟ್ಟೆ ತಯಾರಿಕೆ, ಪೇಪರ್ ಪ್ಲೇಟ್ಸ್ ಮತ್ತು ಕಪ್ಸ್, ಸೆಂಟ್ರಿಂಗ್…
ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ (1.3)ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ ಮೀನುಮರಿ ಪಾಲನೆಕೊಳಗಳು) ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ. ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ಸಿ.ಎಸ್. ಅವರು ತಿಳಿಸಿದ್ದಾರೆ.
ಮಡಿಕೇರಿ ಆ.30 NEWS DESK : ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಈ ಹಿಂದೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಫಲಾನುಭವಿಯೇ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಕಠಿಣ ಕ್ರ,ಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು. ಜಿಲ್ಲಾ ಮಟ್ಟದ…
ಬೆಂಗಳೂರು, ಆ.30 NEWS DESK : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜಭವನದ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು. :: ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು :: ಇಂದು ವಿಶಿಷ್ಠ…






