ಲೇಖಕ: admin

ಮಡಿಕೇರಿ ಜು.14 NEWS DESK : ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಗೋಣಿಕೊಪ್ಪ ನಗರದಲ್ಲಿ ಚಾಲನೆ ನೀಡಲಾಯಿತು. ಗೋಣಿಕೊಪ್ಪ ಠಾಣಾಧಿಕಾರಿ ಬಿ.ಕೆ.ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣಿಗೆ ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.  ಮನೆ ಮನೆಗೆ ಪೊಲೀಸ್ ಎಂಬ ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ ಎಂದು ಹೇಳಿದರು. ನಂತರ ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿಗಳು ಎಂಟು ವಾರ್ಡ್ ಗಳಲ್ಲಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.…

Read More

ಮಡಿಕೇರಿ ಜು.14 NEWS DESK : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸ್ಥಾಪಕ ಸಂಪಾದಕ ಕಲ್ಯಾಟಂಡ ಗಣಪತಿ ಅವರ ನಿಧನಕ್ಕೆ ಕೊಡಗು ಪತ್ರಕತ೯ರ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. 48 ವಷ೯ಗಳ ಕಾಲ ಅಂಕಣಕಾರರಾಗಿ, ಪತ್ರಕತ೯ರಾಗಿ ಜನಮನದಲ್ಲಿ ನೆಲೆಯೂರಿದ ಪತ್ರಕತ೯ನ ಅಗಲಿಕೆಗೆ ಸಂಘದ ಮೂಲಕ ಪತ್ರಕತ೯ರು, ಸಂಘಸಂಸ್ಥೆಗಳ ಪ್ರಮುಖರು ನುಡಿನಮನ ಸಲ್ಲಿಸಿದರು. ನಗರದ ಪತ್ರಿಕಾಭವನದಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ನಡೆದ ದಿ.ಗಣಪತಿ ಅವರಿಗ ಸಂತಾಪ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕತ೯ ಜಿ.ರಾಜೇಂದ್ರ, ಮೇರು ವ್ಯಕ್ತಿತ್ವದ ಗಣಪತಿಯವರ ಅಗಲಿಕೆ ಪತ್ರಿಕೋದ್ಯಮ ಮಾತ್ರವಲ್ಲದೇ ಸಮಾಜಕ್ಕೂ ಸಾಕಷ್ಟು ನಷ್ಟ ಉಂಟು ಮಾಡಿದೆ. ಯಾರನ್ನೂ ದ್ವೇಷಿಸದ, ಯೂರನ್ನೂ ದೂಷಿಸದ ಗಣಪತಿ ಅವರಲ್ಲಿದ್ದ ಸದ್ಗುಣ ಇತರರಿಗೂ ಆದಶ೯ಪ್ರಾಯವಾದದ್ದು ಎಂದರಲ್ಲದೇ, ಪರಿಸರ ಕಾಳಜಿಯ ಜತೆಗೇ ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದ ಸುಸಂಸ್ಕೖತ ವ್ಯಕ್ತಿತ್ವದ ಮೇಧಾವಿಯಾಗಿದ್ದರು ಗಣಪತಿಯವರು ಎಂದು ಸ್ಮರಿಸಿಕೊಂಡರು. ಮಾಧ್ಯಮ ಮುಖ್ಯಸ್ಥರೋವ೯ನಿಗೆ ಅಗತ್ಯವಾಗಿದ್ದ ಎಲ್ಲಾ ಅಗತ್ಯ ಗುಣಗಳನ್ನೂ ಹೊಂದಿದ್ದ ಗಣಪತಿಯವರು ನಿಷ್ಪಾಕ್ಷಪಾತ ಧೋರಣೆ ಹೊಂದುವ ಮೂಲಕ ಜನಾನುರಾಗಿ ಪತ್ರಿಕೋದ್ಯಮಿಯಾಗಿ…

Read More

ವಿರಾಜಪೇಟೆ ಜು.12 NEWS DESK : ವಿರಾಜಪೇಟೆ ಕಾವೇರಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಗಾಗಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ [ಇವಿಎಂ] ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಚುನಾವಣೆಯ ಮತಗಟ್ಟೆ ಅಧಿಕಾರಿಯಾಗಿ ಮುಖ್ಯ ಶಿಕ್ಷಕಿ ಪಿ.ಯು.ಪಾರ್ವತಿ, ಸಹ ಅಧಿಕಾರಿಯಾಗಿ ಬಿ.ಪಿ.ಉಷಾ ಹಾಗೂ ಬಿ.ಡಿ.ಭಾಗ್ಯ ಕಾರ್ಯನಿರ್ವಹಿಸಿದ್ದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಕನ್ನಂಬಿರ ಜಿ.ಭೀಮಯ್ಯ, ಉಪ ನಾಯಕಿಯಾಗಿ ಬೋವ್ವೇರಿಯಂಡ ಹನ್ಸಿಕ ಪೊನ್ನಪ್ಪ, ಕ್ರೀಡಾ ನಾಯಕಿ ತನ್ಯ ರೈ ಬಿ.ಎಸ್, ಉಪ ನಾಯಕಿಯಾಗಿ ಕರ್ನಂದ ಎಸ್.ಕೃತಿಕಾ ಅಕ್ಕಮ್ಮಾ, ಸಾಂಸ್ಕೃತಿಕ ನಾಯಕಿಯಾಗಿ ಬೊಳ್ಳೆಪಂಡ ಬಿ.ದೀಪ್ತಿ ತಂಗಮ, ಉಪ ನಾಯಕಿಯಾಗಿ ಕುಲ್ಲಚಂಡ ಎಸ್.ಭೂಮಿಕಾ ಬೋಜಮ್ಮ, ಆರೋಗ್ಯ ನಾಯಕಿಯಾಗಿ ಪುಚ್ಚಿಮಂಡ ಯು.ತನಿಶ, ಉಪ ಆರೋಗ್ಯ ನಾಯಕಿಯಾಗಿ ರಾನೀಯ ಟಿ.ಎಫ್.ತಸ್ಲೀನ್, ಸನಾ ಕೆ.ಎಸ್, ಶಿಸ್ತಿನ ನಾಯಕಿಯಾಗಿ ಸುಹಾನಿ ರಾಜ್ ಪುರೋಹಿತ್, ಉಪ ಶಿಸ್ತಿನ ನಾಯಕಿಯಾಗಿ ಕೆ.ಹೆಚ್.ನಿಧಾ, ಅಂಕುರ್ ಹೌಸ್ ಕ್ಯಾಪ್ಟನ್…

Read More

ಬೆಂಗಳೂರು, ಜು.14 NEWS DESK : ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. :: ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ:: ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ…

Read More

ಪುತ್ತೂರು ಜು.14 NEWS DESK : ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು 2001ನೇ ಇಸವಿಯಲ್ಲಿ ಪ್ರಾರಂಭಗೊಂಡಿದ್ದು 25ನೇ ವರ್ಷದತ್ತ ದಾಪುಗಾಲಿಡುತ್ತಿದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ  ಶಿಕ್ಷಣವನ್ನು ನೀಡುವ ಮಹತ್ವಾಕಾಂಕ್ಷಿ ಯೋಜನೆಯೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಕರಾವಳಿ ಭಾಗದ ಪ್ರತಿಷ್ಟಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ನಡೆದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎಲ್ಲರೂ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶೇ.100 ರಷ್ಟು ಫಲಿತಾಂಶವನ್ನು ಗಳಿಸಿಕೊಂಡಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಇದುವರೆಗೆ ಒಟ್ಟು 27 ರ್ಯಾಂಕುಗಳನ್ನು ಗಳಿಸಿಕೊಂಡಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಡಾಟಾ ಸೈನ್ಸ್ ವಿಭಾಗದ 4 ವಿದ್ಯಾರ್ಥಿಗಳು, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 2 ವಿದ್ಯಾರ್ಥಿಗಳು ಹಾಗೂ ಆರ್ಟಿಫೀಷಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಓರ್ವ ವಿದ್ಯಾರ್ಥಿ ಅತ್ಯುನ್ನತ ಸಾಧನೆಯೊಂದಿಗೆ ಒಟ್ಟು 7 ರ್ಯಾಂಕ್‍ಗಳನ್ನು…

Read More

ಮಡಿಕೇರಿ ಜು.14 NEWS DESK : ಸ್ಟಾರ್ ಆಫ್ ಮೈಸೂರು, ಮೈಸೂರು ಮಿತ್ರ ಪತ್ರಿಕೆಗಳ ಸಂಪಾದಕ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‍ಸಿ) ಸಂತಾಪ ಸೂಚಿಸಿದೆ. ಗಣಪತಿಯವರ ಅಗಲಿಕೆ ಕುಟುಂಬಕ್ಕೆ ದೊಡ್ಡ ನಷ್ಟವನ್ನು ಭರಿಸಲು ಶಕ್ತಿ ಮತ್ತು ಧೈರ್ಯವನ್ನು ನೀಡಲಿ ಎಂದು ಸಿಎನ್‌ಸಿ ಸರ್ವಶಕ್ತ ಗುರು-ಕಾರೋಣ ಮತ್ತು ತಾಯಿ ಕಾವೇರಿಯಲ್ಲಿ ಪ್ರಾರ್ಥಿಸಿದೆ. ಗಣಪತಿ ಅವರು ಕೊಡವ ಸ್ವ-ನಿರ್ಣಯ ಹಕ್ಕುಗಳ ಹೋರಾಟದ ಸಹಾನುಭೂತಿಯ ಬೆಂಬಲಿಗರಾಗಿದ್ದರು ಮತ್ತು ಸಮುದಾಯದ ಕಾನೂನುಬದ್ಧ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು 1980 ರ ದಶಕದಲ್ಲಿ “ಕೊಡಗು ಮೂಲನಿವಾಸಿಗಳ ಹಕ್ಕು ಸಂರಕ್ಷಣಾ ಸಮಿತಿ”ಯನ್ನು ಹುಟ್ಟುಹಾಕಿದ್ದರು. ಸಿಎನ್‍ಸಿ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಮತ್ತು ಅವರ ನಿಧನವು ರಾಜ್ಯದ ಜನರಿಗೆ, ವಿಶೇಷವಾಗಿ ಕೊಡವ ಸಮುದಾಯಕ್ಕೆ ಉಂಟುಮಾಡಿದ ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ ಮತ್ತು ಅವರ ಮಕ್ಕಳು ಅವರ ಉದಾತ್ತ ಪರಂಪರೆಯನ್ನು ಮುಂದುವರಿಸಲಿ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದರು.

Read More

ಸೋಮವಾರಪೇಟೆ ಜು.14 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು. ಬಾಲ್ಯದಲ್ಲಿ ತಂದೆ-ತಾಯಿಗಳು ಮೊದಲ ಗುರುಗಳು; ನಂತರ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ದಾರಿ ತೋರಿಸುವ ದೀಪದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುತ್ತಾರೆ ಎಂದು ಶಾಸಕ ಮಂತರ್ ಗೌಡ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ವತಿಯಿಂದ ನಡೆದ 2024-25ನೇ ಸಾಲಿನ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಸಂಸ್ಥೆಗಳು ಏರ್ಪಡಿಸುವ ಸಾಧಕರ ಸನ್ಮಾನ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಬಲ ನೀಡಬೇಕು ಎಂದೂ ಹೇಳಿದರು. “ಧೈರ್ಯ ಮತ್ತು ದೃಢ ನಿರ್ಧಾರದಿಂದ ಯಾವುದೇ ಗುರಿಯನ್ನು ಸಾಧಿಸಬಹುದು. ಆಸೆ ಮತ್ತು ಕನಸುಗಳಿಲ್ಲದೆ ಯಶಸ್ಸು ಸಾಧ್ಯವಿಲ್ಲ. ಪತ್ರಿಕೆಗಳು ಮತ್ತು ಮಾಧ್ಯಮಗಳ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಬಿಂಬಿಸಿದರೆ, ನಾವು ಅವುಗಳ ಪರಿಹಾರಕ್ಕೆ ಬದ್ಧರಾಗಿದ್ದೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಿದ್ಧಲಿಂಗಪುರದ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದ ಪ್ರಧಾನ ಗುರು ರಾಜೇಶ್ ನಾಥ್ ಜೀ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. “ಪತ್ರಿಕಾ ಮಾಧ್ಯಮಗಳು…

Read More

ನಾಪೋಕ್ಲು ಜು.14 NEWS DESK : ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಡಿಕೇರಿ ವಿಧಾನಸಭೆ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಹೇಳಿದರು. ಹೊದ್ದೂರು ಗ್ರಾಮ ಪಂಚಾಯಿತಿಯ ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ಸುಮಾರು 2.10 ಕೋಟಿರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಪಾಲೆಮಾಡುವಿನಲ್ಲಿ ಸುಮಾರು 230 ಕುಟುಂಬಗಳಿಗೆ 9.00 ಸೆಂಟ್ ನ ಅಳತೆಯ ಮನೆ ನಿವೇಶನದ ಹಕ್ಕು ಪತ್ರವನ್ನು ವಿತರಿಸಿದ್ದು ಖುಷಿ ತಂದಿದೆ. ಅಧಿಕಾರಿಗಳ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯ ಕಾರ್ಯ ಶ್ಲಾಘನೀಯ ಎಂದರು. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯರಹಿತವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಅತೀ ಮುಖ್ಯ ಎಂದ ಅವರು, ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ಇನ್ನು ಅಂಬೇಡ್ಕರ್ ಭವನವನ್ನು ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ರಾಜ್ಯದ ಸಚಿವರನ್ನು ಮತ್ತು ಮನೆ ಹಕ್ಕು ಪತ್ರ ನೀಡಲು ಸಹಕರಿಸಿದ ವಸತಿ ಸಚಿವ ಜಮೀರ್ ಅಹ್ಮದ್…

Read More

ನಾಪೋಕ್ಲು ಜು.14 NEWS DESK : ಮಾದಕ ವಸ್ತು, ದುಶ್ಚಟಗಳಿಂದ ದೂರವಿರಿ ಕಾನೂನನ್ನು ಪಾಲಿಸಿ ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಬಿ.ಜಿ.ರಾಘವೇಂದ್ರ ಹೇಳಿದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲಮುರಿ ಗ್ರಾಮದ ಕೂಡುಪರಂಬು ಕಾಲೋನಿಯಲ್ಲಿ  ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಸಭೆಯಲ್ಲಿ ಪೋಸ್ಕೋ ಕಾಯ್ದೆ, ಅಟ್ರಾಸಿಟಿ ಕಾಯ್ದೆ, ಅಪ್ರಾಪ್ತ ವಯಸ್ಕರ ಮಾಡುವ ವಾಹನ ಚಾಲನೆ ಬಗ್ಗೆ, ಮಾದಕವಸ್ತು ಸೇವನೆ ಬಗ್ಗೆ ತಿಳಿಸಿ ಅದರಿಂದ ಸಮಾಜಕ್ಕೆ ಆಗುವ ಹಾನಿಯ ಬಗ್ಗೆ ವಿವರಿಸಿದರು. ಕಾನೂನು ತಿಳುವಳಿಕೆ ನೀಡಿ ಎಲ್ಲರೂ ಕಾನೂನನ್ನು ತಪ್ಪದೆ ಪಾಲಿಸಬೇಕು ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯರು ಕುಂದು ಕೊರತೆಗಳನ್ನು ಗಮನಕ್ಕೆ ತಂದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಕಾಲೋನಿ  ನಿವಾಸಿಗಳು, ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜು.14 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸಿದ್ದಾಪುರದ ಅನಾಥಾಶ್ರಮ ವಿದ್ಯಾರ್ಥಿಗಳಿಗೆ ಸ್ವೆಟರ್, ಫ್ರೀ ಕೆ.ಜಿ ಮಕ್ಕಳಿಗೆ ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಡಯಾಲಿಸಿಸ್ ಸಂತ್ರಸ್ತರಿಗೆ ಒಂದು ತಿಂಗಳ ಔಷಧಿ ಕಿಟ್ಟುಗಳನ್ನ ವಿತರಿಸಲಾಯಿತು. ಹುಟ್ಟು ಹಬ್ಬದ ಅಂಗವಾಗಿ ಸಿದ್ದಾಪುರ ಮದರಸ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಸ್ವೆಟರ್, ಪುಟಾಣಿ ವಿದ್ಯಾರ್ಥಿಗಳ ಕಲಿಕೆಗೆ ಅವಶ್ಯಕತೆ ಇರುವ ಸ್ಮಾರ್ಟ್ ಟಿವಿ, ಡೈಲಿಸಸ್ ತಂತ್ರಸ್ಥರಿಗೆ ಒಂದು ತಿಂಗಳ ಔಷಧಿ ಕಿಟ್ ಗಳನ್ನ ವಿತರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಅಲ್ಪಸಂಖ್ಯಾತ ಘಟಕ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಸಮುದಾಯ ಬಾಂಧವರು ಸರ್ಕಾರದ ಎಲ್ಲಾ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರ ಹಲವಾರು ಯೋಜನೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಕಾಂಗ್ರೆಸ್ ಅಲ್ಪಸಂಖ್ಯಾತ…

Read More