ಲೇಖಕ: admin

ಕುಶಾಲನಗರ ಸೆ.27 NEWS DESK : ಖ್ಯಾತ ಕಾದಂಬರಿಕಾರರೂ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರೂ ಆದ ಎಸ್.ಎಲ್.ಭೈರಪ್ಪ ಅವರ ಅಗಲುವಿಕೆಯ ಕುರಿತು ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಿರಿ ಬಳಗದ ವತಿಯಿಂದ ಕುಶಾಲನಗರ ಪಟ್ಟಣದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಕಾದಂಬರಿಕಾರ ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಒಂದು ನಿಮಿಷ ಕಾಲ ಮೌನಾಚರಣೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದ್ದ ಎಸ್.ಎಲ್.ಭೈರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ತಮ್ಮ ಕಾದಂಬರಿ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಎಸ್.ಎಲ್.ಭೈರಪ್ಪ ಅವರ ಕೃತಿಗಳು ಹಲವಾರು ಭಾಷೆಗಳಿಗೆಅನುವಾದವಾಗಿರುವುದು ಅವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿದೆ ಎಂದರು. ಜಿಲ್ಲಾ ಕಸಾಪ ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್ ಮಾತನಾಡಿ, ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ…

Read More

ಮಡಿಕೇರಿ ಸೆ.27 NEWS DESK  : ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಜೆ ಸೋಮಣ್ಣ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಸಾಲಿನ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಯಕರಾಗಬೇಕಾದರೆ ವಿನಯ ಬೆಳೆಸಿಕೊಳ್ಳಬೇಕು. ವಿಚಾರ ವಿನಿಮಯ ತಿಳಿದುಕೊಳ್ಳಬೇಕು. ಯುವ ಪೀಳಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಜವಾಬ್ದಾರಿ ಇದೆ. ಅದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು. ಮಾನವೀಯತೆಯ ಭದ್ರ ಬುನಾದಿ ಮೇಲೆ ನಮ್ಮ ಸಮಾಜ ಕಟ್ಟಲಾಗಿದೆ. ಅಂತಹ ಸಮಾಜ ಉಳಿಸಿಕೊಳ್ಳಬೇಕು. ಭಾರತ ಸಮಾಜವಾದಿ ರಾಷ್ಟ್ರವಾಗಿದೆ. ಭಾರತದ ಹೆಸರು ದೇಶ ವಿದೇಶದಲ್ಲಿ ಮೊಳಗುವಂತೆ ಯುವ ಪೀಳಿಗೆಯು ಸಾಧಿಸಬೇಕೆಂದು ತಿಳಿಸಿದರು. ಪಂಪ ಹೇಳಿದಂತೆ ಮಾನವ ಕುಲ ಒಂದೇ, ಭಾರತವು ಸಮಾಜವಾದಿ, ಸರ್ವಧರ್ಮ ರಾಷ್ಟ್ರ ವಿದ್ಯಾರ್ಥಿಗಳು ಇದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಸಂವಿಧಾನ ಉಳಿಯಬೇಕೆಂದರೆ ಯುವ ಪೀಳಿಗೆಯೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ರಾಜಕೀಯ,…

Read More

ಮಡಿಕೇರಿ NEWS DESK ಸೆ.26 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಭಾಗಮಂಡಲ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ…

Read More

ಮಡಿಕೇರಿ NEWS DESK ಸೆ.26 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ…

Read More

ಮಡಿಕೇರಿ NEWS DESK ಸೆ.26 : ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಟಿ.ಎಂ.ಶಾಹೀದ್ ಅವರು ನೇಮಕಗೊಂಡಿದ್ದಾರೆ.

Read More

ಮಡಿಕೇರಿ NEWS DESK ಸೆ.26 : ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅಂತರಾಷ್ಟ್ರೀಯ ಕರಾಟೆ ಪಟು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರು ನೇಮಕಗೊಂಡಿದ್ದಾರೆ.

Read More

ಸೋಮವಾರಪೇಟೆ NEWS DESK ಸೆ.26 : ಕರ್ನಾಟಕ ರಕ್ಷಣಾ ವೇದಿಕೆಯ ಹಾಲಿ ಕೊಡಗು ಜಿಲ್ಲಾದ್ಯಕ್ಷ ಸೇರಿದಂತೆ ಹಲವರು ಪ್ರವೀಣ್ ಶೆಟ್ಟಿ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ  ಸೇರಿದಂತೆ ಹಲವು ಮಂದಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಸೇರುವ ಮೂಲಕ ನಾರಾಯಣ ಗೌಡ ಬಣಕ್ಕೆ ಸಡ್ಡು ಹೊಡೆದಿದ್ದಾರೆ. ಇದೀಗ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ದೀಪಕ್ ನೇಮಕಗೊಂಡಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಧ್ಯಾ ಗಣೇಶ ನೇಮಕಗೊಂಡಿದ್ದಾರೆ.

Read More

ಮಡಿಕೇರಿ NEWS DESK ಸೆ.26 : ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ ಸಂಸ್ಥೆಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಸಮಾಜ ಸೇವೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಅನುದಾನ ಮತ್ತು ಲಯನ್ಸ್ ಜಿಲ್ಲೆ 317-ಆ ಇದರ ಸಹಯೋಗದೊಂದಿಗೆ ಮಡಿಕೇರಿ ಲಯನ್ಸ್ ಸಂಸ್ಥೆ ಸಮಾಜಮುಖಿ ಸೇವಾ ಕಾರ್ಯಕ್ರಮದ ಭಾಗವಾಗಿ ಬಡವರಿಗೆ ದಿನಸಿ ಕಿಟ್ ಮತ್ತು ಕಂಬಳಿಗಳನ್ನು ವಿತರಿಸಿತು. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಾಧಿಕಾರಿಗಳು ಲಯನ್ಸ್ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಕೆಲವು ವರ್ಷಗಳ ಹಿಂದೆ ಕೊಡಗಿನಲ್ಲಿ ಅತಿವೃಷ್ಟಿಯಿಂದ ಅನಾಹುತಗಳು ಸಂಭವಿಸಿದಾಗ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ನೀಡಿದ ಸೇವೆ ಶ್ಲಾಘನೀಯ. ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆ ಮತ್ತು ಸಂಕಷ್ಟ ಎದುರಾದಾಗ ಸರಕಾರದೊಂದಿಗೆ ಸೇವಾಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಪರಿಹಾರೋಪಾಯಗಳು ಯಶಸ್ವಿಯಾಗಲು ಸಾಧ್ಯ ಎಂದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲಯನ್ ಡಾ.ಪಂಚಮ್ ತಿಮ್ಮಯ್ಯ ಅವರು…

Read More

ಮಡಿಕೇರಿ ಸೆ.29 NEWS DESK : ಮಡಿಕೇರಿಯ ದಸರಾ ಜನೋತ್ಸವದ ಸಂಭ್ರಮಗಳ ನಡುವೆಯೇ, ಕ್ರೀಡ ಪ್ರತಿಭೆಗಳ ಉತ್ತೇಜನಕ್ಕೆ ದಸರಾ ಕ್ರೀಡಾ ಸಮಿತಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಶುಕ್ರವಾರದಂದು ನಡೆದ ‘ಚದುರಂಗ ಸ್ಪರ್ಧೆ’ಯಲ್ಲಿ ನೂರಾರು ಮಕ್ಕಳು, ಸಾರ್ವಜನಿಕರು ಪಾಲ್ಗೊಂಡುದು ವಿಶೇಷ. ನಗರದ ಗಾಂಧಿ ಮೈದಾನದ ಬಳಿಯ ರಾಜದರ್ಶನದ ಸಭಾಂಗಣದಲ್ಲಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷರಾದ ಪ್ರದೀಪ್ ಕರ್ಕೆರ ಅವರ ಆಸಕ್ತಿ ಮತ್ತು ಮುತುವರ್ಜಿಯಿಂದ ಆಯೋಜಿತ ಚದುರಂಗ ಸ್ಪರ್ಧೆ ವಿವಿಧ ವಿಭಾಗಗಳಲ್ಲಿ ಸಂಜೆಯವರೆಗು ನಡೆಯಿತು. ಸ್ಪರ್ಧೆಯಲ್ಲಿ ವಿವಿಧ ಶಾಲಾ ಕಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಸೇರಿದಂತೆ 300 ಕ್ಕೂ ಹೆಚ್ಚಿನ ಸ್ಪರ್ಧೆಗಳು ಪಾಲ್ಗೊಂಡಿದ್ದರು. :: ಕ್ರೀಡೆಯನ್ನು ಕಡೆಗಣಿಸದಿರಿ ::  ಚದುರಂಗ ಸ್ಪರ್ಧೆಯನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರು ಮಾತನಾಡಿ, ಶೈಕ್ಷಣಿಕ ಹಂತದಲ್ಲಿ ಮಕ್ಕಳಿಗೆ ವ್ಯಾಸಂಗ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಕ್ರ್ರೀಡಾಚಟುವಟಿಕೆಗಳಾಗಿದೆ. ಆರೋಗ್ಯಕರವಾದ ಚಿಂತನೆಗೆ ದೈಹಿಕ ಸ್ವಾಸ್ಥ್ಯವು ಅತ್ಯಂತ ಪ್ರಮುಖ. ಈ ಹಿನ್ನೆಲೆಯಲ್ಲಿ ದೈಹಿಕವಾದ ಉತ್ತಮ ಆರೋಗ್ಯಕ್ಕಾಗಿ ಕ್ರೀಡಾಚಟುವಟಿಕೆಗಳತ್ತ ಆಸಕ್ತರಾಗಬೇಕೆಂದರು.…

Read More

ಮಡಿಕೇರಿ ಸೆ.26 NEWS DESK : ಬೆಂಗಳೂರಿನ ವಸಂತನಗರದಲ್ಲಿ ಮಾನ್ಯ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ ವಸತಿ ಸಚಿವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ  ವಸತಿ ಸಚಿವರು  ಎ.ಎಸ್ ಪೊನ್ನಣ್ಣ ಅವರ ಕಾರ್ಯ ವೈಕರಿಯನ್ನು ಮುಕ್ತ ಕಂಠದಿಂದ ಹೊಗಳಿದರಲ್ಲದೆ, ಶಾಸಕರನ್ನು  ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಅಧ್ಯಕ್ಷ ಡಾ.ಎಸ್ ಜಾಫೆಟ್ ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆಂಟೋನಿ ಮಾರಿಯ ಇಮ್ಯಾನ್ಯುಎಲ್, ವಿರಾಜಪೇಟೆ ತಾಲೂಕಿನ ಧರ್ಮ ಗುರುಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ, ರಫೀಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More