ಮಡಿಕೇರಿ ಜು.11 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-25ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸುಳ್ಯ ಕೆವಿಜಿ ಐಟಿಐ ನಿವೃತ್ತ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ, ವಿದ್ಯಾರ್ಥಿಗಳಿಗೆ ಸಂಸ್ಥೆ ಬೆಳೆದು ಬಂದ ಬಗ್ಗೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳು ಗೌರವಯುತವಾಗಿ ಬಾಳಲು ಅನುಸರಿಸಬೇಕಾಗಿರುವ ಯಶಸ್ಸಿನ ಸೂತ್ರದ ಬಗ್ಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಕೆ.ವಿ.ಶ್ರೀಕಾಂತ್, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಪ್ರತಿಯೊಂದು ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಕಚೇರಿ ಅಧೀಕ್ಷಕ ಸಿ.ಕೆ.ವಿನೋದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಕೃಷ್ಣಮೂರ್ತಿ ಜೆ.ಸ್ವಾಗತಿಸಿದರು ಮತ್ತು ಕೆ.ಜಿ.ಜಯಪ್ರಕಾಶ್ ವಂದಿಸಿದರು.
ಲೇಖಕ: admin
ಮಡಿಕೇರಿ ಜು.11 NEWS DESK : ಕೊಡಗಿನ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ಶಾಸಕದ್ವಯರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಬೆಳೆಗಾರರ ನಿಯೋಗದೊಂದಿಗೆ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರನ್ನು ಭೇಟಿಯಾಗಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟನಷ್ಟದ ಬಗ್ಗೆ ಮನವಿ ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ. ಶಾಸಕರು ಮನವಿ ಸಲ್ಲಿಸುವುದನ್ನು ಬಿಟ್ಟು ಸರಕಾರದ ಮೇಲೆ ಒತ್ತಡ ಹೇರಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಜು.3ರಂದು ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರು ಚಿಕ್ಕಮಗಳೂರು, ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ, ಕಾಫಿ ಮಂಡಳಿಯ ಸದಸ್ಯರು ಹಾಗೂ ಮಂಡಳಿಯ ಸಿ.ಇ.ಒ ಕುರ್ಮರಾವ್ ಅವರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ…
ಮಡಿಕೇರಿ ಜು.11 NEWS DESK : ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು. ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಉದ್ಘಾಟಿಸಿದರು. ಮೀನು ವಿಜ್ಞಾನಿ ಹೀರಾಲಾಲ್ ಚೌಧರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ನಮಿಸಿದರು. ಮೀನು ತೊಟ್ಟಿಗೆ ಅಲಂಕಾರಿಕ ಮೀನುಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಬದುಕನ್ನು ಕಟ್ಟಿಕೊಡುವ ಉದ್ಯಮವಾಗಿ ಮೀನು ಕೃಷಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದುನಿಂತಿದೆ. ಬದಕನ್ನು ಹಸನಗೊಳಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಕೂಡ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆಯಂಗಳ, ಕೃಷಿ ಭೂಮಿಯಲ್ಲಿ ಮೀನು ಉತ್ಪಾದನೆ ಉದ್ದಿಮೆ ಸಾಹಸದೊಂದಿಗೆ ಲಾಭದಾಯಕ ಕೂಡ ಎಂದ ಅವರು, ಮೀನು ಕೃಷಿಯಲ್ಲಿ ತೊಡಗುವವರೊಂದಿಗೆ ಇಲಾಖೆ ಹಾಗೂ ಸರಕಾರ ಒತ್ತಾಸೆಯಾಗಿ ಸದಾ ಇರಬೇಕಿದೆ…
ಸೋಮವಾರಪೇಟೆ ಜು.11 NEWS DESK : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಯೋಜನಾ ಕಛೇರಿಯಲ್ಲಿ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ಒದಗಿಸಲಾಗಿದೆ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಹಾಗೂ ಕೇತ್ರದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 1 ಶಾಲೆಗೆ, ವಿರಾಜಪೇಟೆ ತಾಲೂಕಿನ 8 ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ 6 ಶಾಲೆಗಗಳಿಗೆ ಒಟ್ಟು 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು…
ಸೋಮವಾರಪೇಟೆ ಜು.11 NEWS DESK : ಕೊಡ್ಲಿಪೇಟೆಯ ಎಸ್.ಕೆ.ಎಸ್ ಕಲ್ಲುಮಠ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀ ಮಹಾಂತ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾರದಾಂಬೆಗೆ ಪೂಜೆ ಸಲ್ಲಿಸಿ, ಶಾಲೆಗೆ ನೂತನವಾಗಿ ದಾಖಲಾದ ಎಲ್.ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ನೆರವೇರಿತು. ನಂತರ ಮಾತನಾಡಿದ ಶ್ರೀ ಮಹಾಂತ ಸ್ವಾಮೀಜಿ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಆಶೀರ್ವದಿಸಿದರು. ಸಂಸ್ಥೆಯ ಮುಖ್ಯೋಪಾಧ್ಯರಾದ ಹೆಚ್.ಎಂ.ಅಭಿಲಾಶ್ ಮಾತನಾಡಿದರು. ಶಾಲೆಯ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 7ನೇ ತರಗತಿ ವಿದ್ಯಾರ್ಥಿನಿ ಅಮೃತ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಕೆ.ಜೆ.ಶೀಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೌಭಾಗ್ಯ ಸ್ವಾಗತಿಸಿ, ವಂದಿಸಿದರು.
ಮಡಿಕೇರಿ ಜು.11 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವಿರಾಜಪೇಟೆ ಜು.11 NEWS DESK : ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ವತಿಯಿಂದ 17ನೇ ವರ್ಷದ ಸ್ಥಾಪನ ದಿನದ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳಿಗೆ ಹಾಗೂ ಕೆದಮುಳ್ಳೂರು ವಿನ ಕಥರಿನ ಚಿತ್ತದಿನಿ ಮಕ್ಕಳ ಮನೆಯ 16 ಶಾಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಸುಮೇಶ್ ಅವರ ನೇತೃತ್ವದಲ್ಲಿ ಉಚಿತ ಬ್ಯಾಗ್ ಮತ್ತು ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಬಿಂದು ಮಾತನಾಡಿ, ಮುತ್ತಪ್ಪನ್ ಮಲಯಾಳಿ ಸಮಾಜ ಕಳೆದ 16 ವರ್ಷಗಳಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಬರುತಿದೆ.ಯಾರು ಒಳ್ಳೆಯ ಮನಸ್ಸಿನಿಂದ ಅಲ್ಪವಾದರೂ ದಾನ ಮಾಡುತ್ತಾರೋ ಅವರಲ್ಲಿ ಐಶ್ವರ್ಯ ತುಂಬುತ್ತಾ ಬರುತ್ತದೆ. ನಾವು ಹೋದ ನಂತರವೂ ನಾವು ಮಾಡಿದ ಒಳ್ಳೆಯತನವನ್ನು ಸಮಾಜ ನೆನಪಿಸಿಕೊಳ್ಳುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷ ಸುಮೇಶ್ ಮಾತನಾಡಿ, ನಮ್ಮ ಸಮಾಜ ಇಂದಿಗೆ…
ಮಡಿಕೇರಿ ಜು.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗೌರವಿಸಲಾಯಿತು. ಶಾಸಕರ 51ನೇ ಹುಟ್ಟುಹಬ್ಬದ ಹಿನ್ನೆಲೆ ವೈದ್ಯಾಧಿಕಾರಿ ಹಾಗೂ ಸಮಾಜ ಸೇವಕರಾದಹೆಚ್.ವಿ.ದೇವರಾಸ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಶಾಲು ಹೊದಿಸಿ, ಬೆಳ್ಳಿ ಕಿರೀಟ ನೀಡಿ ಗೌರವಿಸಿದರು.
ಮಡಿಕೇರಿ ಜು.11 NEWS DESK : ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಸಭೆ ನಡೆಸಿದರು. ವಿರಾಜಪೇಟೆಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದಲ್ಲಿ ಇರುವ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ಷೇತ್ರದ್ಯಂತ ನಿರಂತರವಾಗಿ ಸಂಭವಿಸುತ್ತಿರುವ ಪ್ರಾಣಿ-ಮಾನವ ಸಂಘರ್ಷ, ಅರಣ್ಯ ಅಂಚಿನಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರು. ಈ ಸಂದರ್ಭ ರಾಜ್ಯ ವನ್ಯ ಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಹಿರಿಯ ಅರಣ್ಯ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಶಾಲನಗರ ಜು.11 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಅನಾಹತ ಯುನೈಟೆಡ್ ಎಫರ್ಟ್ ಫೌಂಡೇಶನ್ ಸಹ ಯೋಗದೊಂದಿಗೆ ಕೂಡಿಗೆ ಮೊರಾರ್ಜಿ ದೇಸಾತತ್ವಯಿ ವಸತಿ ಶಾಲೆಯಲ್ಲಿ ಎರಡು ದಿನಗಳ ವೃತ್ತಿ ಯೋಜನೆಯ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಮನ್ವಯ ಅಧಿಕಾರಿ ಭಾರತಿ ವೃತ್ತಿ ಯೋಜನೆ ಕಾರ್ಯಕ್ರಮ ಹಿಂದಿನ ವರ್ಷದಿಂದಲೂ ನಡೆಯುತ್ತಿದ್ದು, ಇದರ ಉಪಯೋಗ ಮಕ್ಕಳಿಗೆ ತಲುಪುತಿದ್ದು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿ ವಲಯಗಳು “ವಿದ್ಯಾರ್ಥಿಗಳನ್ನ ವೃತ್ತಿಯೆಡೆಗೆ (ಸ್ಟೂಡೆಂಟ್ಸ್ ಟು ಪ್ರೋಫೇಶನಲ್) ಎಂಬ ಅಂಶವನ್ನು ಆಧರಿಸಿ ವಿದ್ಯಾರ್ಥಿಗಳಲ್ಲಿ ಕೆಲಸದ ಆಸಕ್ತಿಗಳನ್ನು ಗುರುತಿಸುವುದು, ವೃತ್ತಿ ಆಯ್ಕೆಗಳನ್ನು ತಿಳಿದುಕೊಳ್ಳುವುದು ಅದಕ್ಕೆ ಸಂಬಂದಿಸಿದ ಶೈಕ್ಷಣಿಕ ಆಯ್ಕೆಗಳನ್ನು ಅಧ್ಯಯನ ಮಾಡುವಂತೆ ಹಾಗೂ ವೃತ್ತಿ ಯೋಜನೆಯನ್ನು ವಿದ್ಯಾರ್ಥಿಗಳು ತಾವೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಾಸ್ತವಿಕವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ,ಮಾತನಾಡಿ ಮಕ್ಕಳಿಗೆ…






