ಲೇಖಕ: admin

ಪುತ್ತೂರು ಸೆ.25 NEWS DESK : ರಾಷ್ಟ್ರೀಯ ಸೇವಾ ಯೋಜನೆಯು ವಿಫುಲ ಅವಕಾಶಗಳ ಆಗರವಾಗಿದೆ, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ತನ್ನನ್ನು ತಾನು ಎತ್ತರಿಸಿಕೊಳ್ಳುವ ಜತೆಯಲ್ಲಿ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬಹುದು ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ.ಕೆ.ಚಂದ್ರಶೇಖರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್ ಕ್ರಾಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಾವರ್ಕರ್ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಯುವಜನತೆ ಮತ್ತು ಸಾಮಾಜಿಕ ಸೇವೆ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಕುಸಿತಗಳಾದರೆ ರಾಷ್ಟ್ರದ ಬಲವೇ ಕಡಿಮೆಯಾದಂತೆ ಆದುದರಿಂದ ಮಕ್ಕಳಿಗಾಗಲೀ ವಿದ್ಯಾರ್ಥಿಗಳಿಗಾಗಲೀ ಸರಿಯಾದ ನೈತಿಕ ಶಿಕ್ಷಣವನ್ನು ನೀಡಬೇಕು ಎಂದರು. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಪೂರ್ವ ತಯಾರಿ ಅಗತ್ಯ. ಅದರ ಒಳಿತು ಕೆಡುಕುಗಳನ್ನು ತಿಳಿದುಕೊಂಡರೆ ಯಶಸ್ಸು ಗಳಿಸುವುದು ಸಾಧ್ಯ ಎಂದರು.…

Read More

ಸೋಮವಾರಪೇಟೆ ಸೆ.25 NEWS DESK : ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಪೌರಕಾರ್ಮಿಕರನ್ನು ಭೇಟಿ ಮಾಡಿ, ಪೌರಕಾರ್ಮಿಕರ ದಿನಾಚರಣೆಯ ಶುಭಾಶಯ ತಿಳಿಸಿ ಅವರ ಯೋಗಕ್ಷೇಮ ವಿಚಾರಿಸಿದರು.  ನಿಮ್ಮ ವೃತ್ತಿಯ ಬಗ್ಗೆ ಹೆಮ್ಮೆ ಇದೆ,ಕೀಳಿರಿಮೆ ಬೇಡ ಯಾಕೆಂದರೆ ಯಾರು ಮಾಡಲು ಮುಂದೆ ಬರದಂತಹ ಸೇವೆಯನ್ನು ನೀವು ಮಾಡುತ್ತಿದ್ದೀರಿ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಮಹೇಶ್ ಪೌರ ಕಾರ್ಮಿಕರಿಗೆ ಪ್ರತಿವರ್ಷದಂತೆ ಸಿಹಿ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್,ಅಭಿಯಂತರ ಹೇಮಂತ್ ಕುಮಾರ್, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ಸಿಬ್ಬಂದಿ ಜೀವನ್, ಪೌರಕಾರ್ಮಿಕ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಮುಂತಾದವರು ಹಾಜರಿದ್ದರು.

Read More

ಮಡಿಕೇರಿ ಸೆ.25 NEWS DESK : ಅತ್ಯಂತ ಪ್ರಭಾವಶಾಲಿಯಾದ ಸಾಹಿತ್ಯ ಕ್ಷೇತ್ರ ಸಾಮಾಜಿಕ ಬದಲಾವಣೆಗಳಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಸಮಾಜ ಸೇವಕ ಹಾಗೂ ಕರ್ನಾಟಕ ರಾಜ್ಯ ಒಕ್ಕಗಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆದ ‘ಬಹುಭಾಷಾ ಕವಿಗೋಷ್ಠಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಬಹು ಅಮೂಲ್ಯವಾದ ನೈಜ ವಿಚಾರಧಾರೆಗಳನ್ನು ಆಧರಿಸಿ ಯಾವುದೇ ಫಲಾಪೇಕ್ಷೆಗಳಿಲ್ಲದೆ ಸಾಹಿತ್ಯ ಸೃಷ್ಟಿಸಿ ಪುಸ್ತಕದ ರೂಪದಲ್ಲಿ ಹೊರತರುವುದು ಶ್ರೇಷ್ಠ ಕಾರ್ಯವಾಗಿದೆ. ಕವಿಗಳು ಸದಾ ಸಮಾಜದ ಭಾಗವಾಗಿದ್ದಾರೆ, ರಾಜಕೀಯ ರಹಿತವಾಗಿ, ಭ್ರಷ್ಟಾಚಾರದ ಸೋಂಕಿಲ್ಲದೆ, ಪ್ರಶಾಂತವಾದ ಮನಸ್ಸು ಮತ್ತು ಆಗಾಧವಾದ ಕಲ್ಪನಾಶೀಲತೆ ಹೊಂದಿದವರಾಗಿದ್ದಾರೆ. ನಮ್ಮ ಸುತ್ತಮುತ್ತಲ ಪ್ರಾಕೃತಿಕ ವೈಭವ ಮತ್ತು ಆಗುಹೋಗುಗಳನ್ನು ಅಕ್ಷರ ರೂಪಕ್ಕಿಳಿಸುವ ಸಾಹಿತ್ಯ ಕಲೆ ಅದ್ಭುತವೆಂದು ಬಣ್ಣಿಸಿದರು. ಸೈನಿಕರು, ಪತ್ರರ್ಕಕರ್ತರು, ಕವಿಗಳು ಹಾಗೂ ಆರಕ್ಷಕರು ತಮ್ಮದೇ ಆದ ಕಾರ್ಯಕ್ಷೇತ್ರದ ಮೂಲಕ ನಾಡಿನ ಅಖಂಡತೆಯನ್ನು ಕಾಯ್ದುಕೊಳ್ಳುತ್ತಿದ್ದಾರೆ.…

Read More

ಮಡಿಕೇರಿ ಸೆ.25 NEWS DESK : ಸೆಪ್ಟೆಂಬರ್ 22 ರಿಂದ ಅ.2 ರವರೆಗೆ 2025 ನೇ ಸಾಲಿನ ದಸರಾ ಉತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದಾರೆ. ಪ್ರವಾಸಿಗರು ತಂಗುವ ಹೋಂ-ಸ್ಟೇ/ ರೆಸಾರ್ಟ್/ ಹೋಟೆಲ್-ಲಾಡ್ಜ್ ಗಳಲ್ಲಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರೆಸಾರ್ಟ್/ ಹೋಟೆಲ್/ ಹೊಂ-ಸ್ಟೇ ಮಾಲೀಕರಿಗೆ ಸೂಚಿಸುವಂತೆ ಉಲ್ಲೇಖಿತ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲ ರೆಸಾರ್ಟ್/ ಹೋಟೆಲ್/ ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸಾ ಪಾಸ್ ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ…

Read More

ವಿರಾಜಪೇಟೆ ಸೆ.25 NEWS DESK : ವಿರಾಜಪೇಟೆಯ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ವಿಶೇಷ ಪೂಜೆ ನಡೆಯಿತು. ಉತ್ಸವದ ಅಂಗವಾಗಿ ರಾತ್ರಿ ದೇವರ ನೃತ್ಯಬಲಿ, ಹಾಗೂ ಪ್ರದಕ್ಷಿಣೆ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ವತಿಯಿಂದ ನೆರೆದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.

Read More

ಮಡಿಕೇರಿ NEWS DESK ಸೆ.25 : ಕರ್ನಾಟಕ ರಾಜ್ಯ ಸರಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ ಸರ್ವ ಅರೆಭಾಷೆ ಗೌಡರು GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೇಕಡ ನಾಣಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ ಗೌಡ ಎಂದು ನಮೂದಿಸಬೇಕು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ…

Read More

ಸೋಮವಾರಪೇಟೆ NEWS DESK ಸೆ.25 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ ಎಂದು ಹೊಸಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕಲ್ಲುಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ವಿವಿಧ ಇಲಾಖಾ ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದರು. ತಾಲ್ಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ, ವಿವಿಧ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹೊಸಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ, ಕಲ್ಲುಗಣಿಗಾರಿಕೆಯ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿವೆ. ಇಲ್ಲಿನ ಜನರ ಬದುಕು ದುಸ್ತರವಾಗಿದೆ ಎಂದು ಗ್ರಾಮಸ್ಥರು ಅಧಿಕಾರಿಗಳೆದುರು ಅಳಲು ತೋಡಿಕೊಂಡರು. ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕಳೆದ ಹಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ…

Read More

ಮಡಿಕೇರಿ NEWS DESK ಸೆ.25 : ಬ್ರೇಕ್ ವಿಫಲಗೊಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು ಓಮ್ನಿ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪ ತಾಳತ್ಮನೆ ತಿರುವಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಇಳಿಜಾರಿನಲ್ಲಿ ಬ್ರೇಕ್ ವಿಫಲಗೊಂಡು ಮಡಿಕೇರಿ ಕಡೆಗೆ ಬರುತ್ತಿದ್ದ ಓಮ್ನಿಗೆ ಡಿಕ್ಕಿಯಾಗಿ ನಂತರ ಮಗುಚಿಕೊಂಡಿದೆ. ಓಮ್ನಿಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳೂರು ಮೂಲದ ಗಾಯಾಳುಗಳು ದಸರಾ ವ್ಯಾಪಾರಕ್ಕೆಂದು ಮಡಿಕೇರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಲ್ಟಿಯಾದ ಬಸ್ ನ್ನು ಕ್ರೇನ್ ಮೂಲಕ ಮೇಲೆತ್ತಲಾಗಿದೆ. ಅಪಘಾತದಿಂದ ಓಮ್ನಿ ಜಖಂಗೊಂಡಿದೆ.

Read More

ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯಲ್ಲಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ಎಲ್ಲಾ ಅರೆಭಾಷೆ ಗೌಡರು ನಮೂದಿಸಬೇಕೆಂದು ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಚರ್ಚಿಸಿ ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ…

Read More

ಮಡಿಕೇರಿ ಸೆ.25 NEWS DESK  : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ನಾಲ್ಕನೇ ದಿನವಾದ ಇಂದು ಕೊಲ್ಲೂರು ಶ್ರೀ ಮುಕಾಂಬಿಕೆ ದೇವಿಯ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ.

Read More