ಮಡಿಕೇರಿ ಸೆ.24 NEWS DESK : ನಿರ್ಲಕ್ಷಿಸಲ್ಪಟ್ಟ ಮತ್ತು ಅಳಿವಿನಂಚಿನ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ ಹೊಣೆಯಾಗಬೇಕು ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಕತ್ತೂರು ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಹಲವು ಸಮುದಾಯಗಳು ಇಂದು ಅಳಿವಿನಂಚಿಗೆ ಬಂದು ತಲುಪಿದ್ದು, ಅದರಲ್ಲಿ ಅರಮನೆಪಾಲೆ ಸಮುದಾಯವು ಒಂದು. ಇದು ಕೊಡಗಿನಲ್ಲಿ ತನ್ನದೇ ಆದ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಕೊಡಗಿನ ಕೊಡವ ಸಂಸ್ಕೃತಿಯ ಮೂಲ ಬೇರುಗಳನ್ನು ಹೊಂದಿರುವ ಈ ಸಮುದಾಯವನ್ನು ಸರಕಾರ ಇಲ್ಲಿಯವರೆಗೆ ಗುರುತಿಸದೆ ಇರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು. ನಿರ್ಲಕ್ಷ್ಯಕ್ಕೆ ಒಳಗಾಗುವ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಕೊಡವ ಭಾಷಿಕ ಸಮುದಾಯಗಳ ಕೂಟ ಎಲ್ಲಾ ರೀತಿಯ ಸಲಹೆ, ಸಹಕಾರ ನೀಡಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಸದಾ ಸಿದ್ಧವಿದೆ ಎಂದು ಡಾ.ಸುಭಾಷ್ ನಾಣಯ್ಯ…
ಲೇಖಕ: admin
ಮಡಿಕೇರಿ ಸೆ.24 NEWS DESK : ಕೊಡಗು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ) ಹಾಗೂ ಆಯುಷ್ ಇಲಾಖೆ ವತಿಯಿಂದ ಹತ್ತನೆಯ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಮೇಕೇರಿಯಲ್ಲಿ ಆಚರಿಸಲಾಯಿತು. ಕೇಂದ್ರ ಸರ್ಕಾರ ಈ ವರ್ಷ ಆರೋಗ್ಯಕ್ಕಾಗಿ ಆಯುರ್ವೇದ ಎಲ್ಲರಿಗೂ ಆಯುರ್ವೇದ ಎಂಬ ಧ್ಯೇಯದೊಂದಿಗೆ ಪ್ರತಿ ಮನೆಯಲ್ಲಿಯೂ ಮದ್ದಿನ ಗಿಡದ ಪ್ರಾಮುಖ್ಯತೆ ತಿಳಿಸುವ ಯೋಜನೆಗೆ ಪೂರಕವಾಗಿ “ನೀಮಾ-ಕೊಡಗು” ವತಿಯಿಂದ ಕೊಡಗಿನ ಅಳಿವಿನಂಚಿನಲ್ಲಿರುವ ಹಾಗೂ ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ “ಮೂಲಿಕಾ ವನ” ವನ್ನು ನಿರ್ಮಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಗಜರಾಜ ನಾಯ್ಡು ಅವರು ಸಂಘಕ್ಕೆ ಒಂದು ಎಕರೆಗೂ ಮೀರಿದ ಜಾಗವನ್ನು ಉದಾರವಾಗಿ ಹಸ್ತಂತರಿಸಿದರು. ಮುಂದಿನ ದಿನಗಳಲ್ಲಿ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ತಜ್ಞರಿಗೆ, ಪ್ರಕೃತಿ ಪ್ರಿಯರಿಗೆ ಸಹಕಾರಿ ಆಗುವಂತೆ ಈ ಜಾಗವನ್ನು ಮೂಲಿಕಾ ವನವಾಗಿ ಬೆಳೆಸುವ ಯೋಜನೆಯನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು “ನೀಮಾ” ಅಧ್ಯಕ್ಷ ಡಾ.ರಾಜಾರಾಮ್ ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಜ್ಯೋತಿ, ಡಾ. ಸಾವಿತ್ರಿ, ಡಾ.ರಾಜಗೋಪಾಲ್.ಹೆಚ್.ಆರ್, ಆಯುಷ್ ಇಲಾಖೆಯ ಡಾ.ಅರುಣ್, ಡಾ.ಶೋಭಾ, ಆಯುಷ್…
ಬೆಂಗಳೂರು ಸೆ.24 NEWS DESK: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ (94) ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ. ಮೈಸೂರಿನಲ್ಲಿ ವಾಸವಿದ್ದ ಎಸ್.ಎಲ್.ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 20-08-1931 ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.
ಕಾರ್ಕಳ ಸೆ.23 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಹೇಳುತ್ತಾ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ಧೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು. ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಡಿಕೇರಿ ಸೆ.24 NEWS DESK : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದಿನ ವರ್ಷ ಕೇಂದ್ರ ಸರಕಾರ ನಡೆಸುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಆದಿದ್ರಾವಿಡ ಸಮುದಾಯದವರು ಜಾತಿಯ ಕಾಲಂನಲ್ಲಿ ಪರಿಶಿಷ್ಟ ಜಾತಿ ಮತ್ತು ಉಪಜಾತಿಯ ಕಾಲಂನಲ್ಲಿ ಆದಿದ್ರಾವಿಡ ಎಂದು ನಮೂದಿಸುವಂತೆ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದ್ದು, ಎರಡೂ ಗಣತಿಯಲ್ಲೂ ಆದಿದ್ರಾವಿಡ ಸಮಾಜ ಬಾಂಧವರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆದಿದ್ರಾವಿಡರು ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿಯ ಕಾಲಂನಲ್ಲಿ ಪರಿಶಿಷ್ಟ ಜಾತಿ, ಉಪಜಾತಿ ಕಾಲಂನಲ್ಲಿ ಆದಿದ್ರಾವಿಡ ಮತ್ತು ಉಪಜಾತಿಗೆ ಪರ್ಯಾಯ ಹೆಸರು ಕಾಲಂನಲ್ಲಿ ಮೂಲದ್ರಾವಿಡರು ಎಂದು ನಮೂದಿಸುವಂತೆ ತಿಳಿಸಿದ್ದಾರೆ. ಸರಕಾರ ನಡೆಸುತ್ತಿರುವ ಜಾತಿ ಜನಗಣತಿ ಮುಂದಿನ ಭವಿಷ್ಯದ…
ಮಡಿಕೇರಿ ಸೆ.24 NEWS DESK : ಕೊಡಗಿನ ಕಾಳಿದಾಸ ಎಂದೇ ಪ್ರಖ್ಯಾತರಾಗಿರುವ ಕೊಡವ ಭಾಷಾ ಸಾಹಿತಿ ‘ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ’ಗಳ 158ನೇ ಜನ್ಮದಿನಾಚರಣೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಅಪ್ಪನೆರವಂಡ ಮನೋಜ್ ಮಂದಪ್ಪ ಅಪ್ಪಚ್ಚ ಕವಿಯ ಭಾವ ಚಿತ್ರಕ್ಕೆ ಜ್ಯೋತಿಯನ್ನು ಬೆಳಗಿ, ‘ಮೀದಿ’ಯನ್ನಿರಿಸಿ ಉದ್ಘಾಟಿಸಿದರು. ಕೊಡವ ‘ನಾಟಕ ಪ್ರದರ್ಶನ ಕೇಂದ್ರ’ದ ಸ್ಥಾಪನೆಯಾಗಲಿ :: ಕಾರ್ಯಕ್ರಮ ಉದ್ಘಾಟಿಸಿದ ಅಪ್ಪನೆರವಂಡ ಮನೋಜ್ ಮಂದಪ್ಪ ಮಾತನಾಡಿ, ಕೊಡವ ಭಾಷಾ ಸಂಸ್ಕೃತಿ, ನಾಟಕಗಳ ಪ್ರದರ್ಶನ ಸಾಹಿತ್ಯಿಕವಾದ ಕಾರ್ಯಕ್ರಮಗಳಿಗಾಗಿ ಕೊಡವ ನಾಟಕ ಪ್ರದರ್ಶನ ಕೇಂದ್ರ (ಡ್ರಾಮಾ ಸೆಂಟರ್) ಸ್ಥಾಪನೆ ಅತ್ಯವಶ್ಯಕವಾಗಿ ಆಗಬೇಕಿದೆಯೆಂದು ಅಭಿಪ್ರಾಯಿಸಿದರು. ಶತಮಾನಗಳ ಹಿಂದೆ ಅತ್ಯಂತ ಸಂಕಷ್ಟದ ಬದುಕಿನ ನಡುವೆಯೂ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಕೊಡವ ಭಾಷೆಯಲ್ಲಿ ಸಾಕಷ್ಟು ಹಾಡುಗಳನ್ನು, ನಾಟಕಗಳನ್ನು ರಚಿಸುವ ಮೂಲಕ ಕೊಡವ ಭಾಷಾ ಆದಿ ಕವಿಯಾಗಿ ಗುರುತಿಸಿಕೊಂಡಿದ್ದಾರೆ.…
ಮಡಿಕೇರಿ ಸೆ.24 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷ್ಲೆ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಮೈಸೂರು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೈಸೂರು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ…
ನಾಪೋಕ್ಲು ಸೆ.24 NEWS DESK : ಮೈಸೂರು ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ಜಿಲ್ಲೆಯ ಬಹುತೇಕ ಗೌಡ ಜನಾಂಗದ ಕುಟುಂಬದವರು ಈ ಭಾಗದಲ್ಲಿ ನೆಲೆಸಿದ್ದಾರೆ. ಅವರು ಗೌಡ ಕ್ಷೇಮಾಭಿವೃದ್ಧಿ ಸಂಘ ಎರಡು ವರ್ಷಗಳಿಗೊಮ್ಮೆ ಆಡಳಿತ ಮಂಡಳಿಯ ಚುನಾವಣೆ ನಡೆಸಿ ನೂತನ ಮಂಡಳಿಯನ್ನು ರಚಿಸಲಾಗುತ್ತಿದೆ ಎಂದರು. ಸಂಘದಲ್ಲಿ ಕೊಡಗಿನ ಸಂಪ್ರದಾಯದ ಹಬ್ಬ ಆಚರಣೆ, ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಪರಸ್ಪರ ಸಹಬಾಳ್ವೆ ಹಾಗೂ ಸಮಾನತೆ, ಆರೋಗ್ಯಕರ ಚಟುವಟಿಕೆಯಿಂದ ಕೊಡಗು ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ ಕೊಡಗು ಮೈಸೂರು ಭಾಗದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಮಹಾಸಭೆಯಲ್ಲಿ ನಡೆದ ನೂತನ ಆಡಳಿತ ಮಂಡಳಿಗೆ ಹಾಲಿ ಅಧ್ಯಕ್ಷರಾಗಿದ್ದ ಪೊನ್ನಚ್ಚನ ಅಪ್ಪಯ್ಯ ಹಾಗೂ ತಂಡದವರು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪೊನ್ನಚ್ಚನ ಅಪ್ಪಯ್ಯ, ಉಪಾಧ್ಯಕ್ಷ ಚೆರುಕನ ಲವ, ಗೌರವ ಕಾರ್ಯದರ್ಶಿ ಮುಕ್ಕಾಟಿ ಅರುಣ ಕುಮಾರ್, ಸಹಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಚಾಂಚಿ…
ವಿರಾಜಪೇಟೆ ಸೆ.24 NEWS DESK : ಕೆದಮುಳ್ಳುರು ಗ್ರಾಮದ ತೆರ್ಮೆಮೊಟ್ಟೆಯ ಶ್ರೀ ಆದಿಶಕ್ತಿ ಮತ್ತು ಧರ್ಮದೈವ ಹಾಗೂ ಪಾಷಾಣ ಮೂರ್ತಿ ಪರಿವಾರ ದೈವಗಳ ಧರ್ಮ ಚಾವಡಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನವರಾತ್ರಿಯ ಮೊದಲ ದಿನ ನವದುರ್ಗೆಯರ ಬಿಂಬವನ್ನು ಕುಳ್ಳಿರಿಸಲಾಯಿತು. ಉತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಪುನಸ್ಕಾರಗಳು, ನವದುರ್ಗೆಯರ ಆರಾಧನೆ ನಡೆಯಲಿದ್ದು, ಅ.1ರಂದು ನವ ದುರ್ಗೆಯರ ಬಿಂಬವನ್ನು ವಿಸರ್ಜನೆ ಮಾಡಲಾಗುತ್ತದೆ. ಪೂಜಾ ಕೈಂಕರ್ಯದಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ಸೆ.24 : ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ವತಿಯಿಂದ ನಡೆಯುವ ಜಾತಿ ಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಗುಡ್ಡೆಹೊಸೂರು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಗುಡ್ಡೆಹೊಸೂರು ಗೌಡ ಸಮಾಜದ ಅಧ್ಯಕ್ಷ ಗುಡ್ಡೆಮನೆ ವಿಶ್ವ ಅವರು ಬಹಳ ಹಿಂದಿನಿಂದಲೂ ಕೊಡಗಿನ ಅರೆಭಾಷೆ ಗೌಡರ ಕಂದಾಯ, ಶೈಕ್ಷಣಿಕ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಿರುವುದರಿಂದ ಈಗ ಬದಲಾವಣೆ ಮಾಡಿದರೆ ತೊಂದರೆಯಾಗುವ ಸಾಧ್ಯತೆಗಳಿದೆ. ಆದ್ದರಿಂದ ಗಣತಿದಾರರು ಬಂದಾಗ ಅರೆಭಾಷೆ ಗೌಡ ಸಮುದಾಯ ಬಾಂಧವರು ಜಾತಿ ಕಾಲಂ ನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಭಾಷೆಯ ಕಾಲಂ ನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ…






