ಮಡಿಕೇರಿ, NEWS DESK ಆ.30 – ಹೊಸ ತಂತ್ರಜ್ಯಾನದ, ನವನವೀನ ಆವಿಷ್ಕಾರದ ಇಂದಿನ ದಿನಗಳಲ್ಲಿ ನಮ್ಮ ಪ್ರಾಚೀನ ಸಂಸ್ಕೃತಿ, ಆಚರನೆಯನ್ನು ಮರೆಯದೇ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರದ ವೈದ್ಯ ಸಾಹಿತಿ ಡಾ.ನಡಿಬೈಲು ಉದಯಶಂಕರ್ ಕರೆ ನೀಡಿದ್ದಾರೆ. ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದಲ್ಲಿ ಶೖತಿಲಯ ತಂಡದಿಂದ ಕೊಡಗು ಕನ್ನಡ ಮತ್ತು ಸಂಸ್ಕೖತಿ ಇಲಾಖೆ, ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ಸಹಯೋಗದಲ್ಲಿ ಆಯೋಜಿತವಾದ ಶ್ರೀರಾಘವೇಂದ್ರ ಆರಾಧನೆ, ವಿಶ್ವಸಂಗೀತ ದಿನದ ಅಂಗವಾಗಿನ ದಾಸರ ಕೀತ೯ನೆ ಕಾಯ೯ಕ್ರಮವನ್ನು ಉದ್ಗಾಟನಾ ಕಾಯ೯ಕ್ರಮದಲ್ಲಿ ಡಾ.ಉದಯಶಂಕರ್ ಮಾತನಾಡಿದರು. , ದಾಸ ಪರಂಪರೆ ಈ ನಾಡಿನಲ್ಲಿ ಶ್ರೀಮಂತವಾಗಿದೆ. ಎಂಥ ಸಂಕಷ್ಟ, ಸವಾಲು ಎದುರಾದರೂ ದೇವರು ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾನೆ ಎಂಬ ನಂಬಿಕೆಯನ್ನು ದಾಸ ಪರಂಪರೆ ಸೃಷ್ಟಿಸಿದೆ ಎಂದೂ ಅವರು ಹೇಳಿದರು. ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿದಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಮಾತನಾಡಿ, ಕಲೆ, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿ ಇಂಥ ಕಾರ್ಯಕ್ರಮಗಳಿಗೆ ಸಹಯೋಗ ನೀಡುತ್ತದೆ ಎಂದರು.…
ಲೇಖಕ: admin
ಮಡಿಕೇರಿ, NEWS DESK ಆ.30: ಕೊಡಗು ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹೋದರ–ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಹಾಗೂ ಆಡಳಿತ ಮುಖ್ಯಸ್ಥ ರವಿ ಪಿ. ಉದ್ಘಾಟಿಸಿದರು. ರಕ್ಷಾ ಬಂಧನದ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ಸಹೋದರ–ಸಹೋದರಿಯರ ನಡುವಿನ ಬಾಂಧವ್ಯವನ್ನು ಬಿಂಬಿಸುವ ನಾಟಕವನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಕ್ಷಾ ಬಂಧನದ ಮಹತ್ವ, ಕುಟುಂಬ ಸಂಬಂಧಗಳ ಮೌಲ್ಯ ಮತ್ತು ಪರಸ್ಪರ ಪ್ರೀತಿ–ಗೌರವದ ಸಂದೇಶವನ್ನು ಸುಂದರವಾಗಿ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 8ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆರು ಗುಂಪುಗಳಾಗಿ ವಿಭಜಿಸಿಕೊಂಡು ಮಡಿಕೇರಿ ನಗರದ ಕೊಡಗು ವಿದ್ಯಾಲಯ ಆಪರ್ಚುನಿಟಿ ಶಾಲೆ ಮತ್ತು ಶಕ್ತಿ ವೃದ್ಧಾಶ್ರಮ, ಸಿ.ಎಂ.ಸಿ. ಹಾಗೂ ಜನತಾ ಬಜಾರ್, ಪೊಲೀಸ್ ಠಾಣೆ, ಹಾಪ್‌ಕಾಮ್ಸ್ ಮತ್ತು ಅಂಚೆ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ಮಡಿಕೇರಿ NEWS DESK ಆ.30 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಗತಿ ಕುರಿತು ಮಾಹಿತಿ ನೀಡಿದ ಸುಮನ್ ಅವರು 2025-26 ನೇ ಸಾಲಿನಲ್ಲಿ ಸಂಘವು ರೂ.35,20,997 ನಿವ್ವಳ ಲಾಭವನ್ನು ಪಡೆದಿದ್ದು ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದರು. ಸಂಘದಲ್ಲಿ ರೂ.1,25,77,047 ಷೇರು ಬಂಡವಾಳವಿದ್ದು, ಒಟ್ಟು ರೂ.15.86 ಕೋಟಿ ಸಾಲವನ್ನು ವಿತರಿಸಲಾಗಿದೆ. ರೂ.9.45 ಕೋಟಿ ಕೆಸಿಸಿ ಫಸಲು ಸಾಲವನ್ನು ನೀಡಲಾಗಿದೆ. ಒಟ್ಟು ರೂ.6,15,42,000 ಠೇವಣಿಯನ್ನು ಸಂಗ್ರಹಿಸಲಾಗಿದೆ. ಆಡಿಟ್ ವರ್ಗೀಕರಣದಲ್ಲಿ ಸಂಘ “ಎ” ದರ್ಜೆಯಲ್ಲಿ ಮುಂದುವರೆದಿದೆ. 1976ರಲ್ಲಿ ಸಂಘ ಸ್ಥಾಪನೆಗೊಂಡಿದ್ದು ಪ್ರಸ್ತುತ ವರ್ಷ 50ನೇ ವರ್ಷದ ಸಂಭ್ರಮದಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಮಹಾಸಭೆಯಲ್ಲಿ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಯಿತು. ಸಂಘದ ಉಪಾಧ್ಯಕ್ಷ ಪೊಡೊನೋಳನ ಶ್ರೀನಿವಾಸ್, ನಿರ್ದೇಶಕರುಗಳಾದ ಅಯ್ಯಂಡ ಬೆಳ್ಳಿಯಪ್ಪ, ಕೇಕಡ…
ಮಡಿಕೇರಿ ಆ.30 : ಶ್ರುತಿ ಲಯ ತಂಡ ಹಾಗೂ ಮಡಿಕೇರಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಇವರ ಸಹಯೋಗದಲ್ಲಿ ವಿಶ್ವ ಸಂಗೀತ ದಿನ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ಮಹೋತ್ಸವದ ಪ್ರಯುಕ್ತ ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ದಾಸರ ಕೀರ್ತನೆ ಗಾಯನ ಕಾರ್ಯಕ್ರಮದಲ್ಲಿ ಮಡಿಕೇರಿಯ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳು ಮನೋಜ್ಞ ಗೀತಗಾಯನದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಪ್ರಜ್ಞಾ ಕಲಾ ಕೇಂದ್ರದ ಗುರುಗಳಾದ ಶ್ರೀಮತಿ ಜಯಲಕ್ಷ್ಮಿ ಅವರ ಮಾರ್ಗದರ್ಶನ ಹಾಗೂ ತರಬೇತಿಯಲ್ಲಿ ಮಕ್ಕಳು ವಿವಿಧ ದಾಸರ ಕೀರ್ತನೆಗಳನ್ನು ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದರು. ಮಕ್ಕಳ ಸುಮಧುರ ಗಾಯನಕ್ಕೆ ಕಾರ್ಯಕ್ರಮದಲ್ಲಿ ನೆರೆದಿದ್ದ ಸಂಗೀತಾಸಕ್ತರಿಂದ ಉತ್ತಮ ಪ್ರಶಂಸೆ ವ್ಯಕ್ತವಾಯಿತು. ಸಾಂಪ್ರದಾಯಿಕ ದಾಸ ಸಾಹಿತ್ಯ ಹಾಗೂ ಭಕ್ತಿ ಸಂಗೀತವನ್ನು ಪುಟಾಣಿಗಳ ಮೂಲಕ ಪರಿಚಯಿಸುವ ಮೂಲಕ ಕಾರ್ಯಕ್ರಮವು ವಿಶೇಷ ಮೆರುಗು ಪಡೆದುಕೊಂಡಿತು. ಮಕ್ಕಳ ಗಾಯನ ಪ್ರತಿಭೆಯನ್ನು ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ, ಪ್ರಜ್ಞಾ ಕಲಾ ಕೇಂದ್ರದ ಗುರುಗಳಾದ ಜಯಲಕ್ಷ್ಮಿ ಅವರ ತರಬೇತಿಯನ್ನು ಅಭಿನಂದಿಸಿದರು.
ಮಡಿಕೇರಿ ಆ.29 NEWS DESK : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಜಾಗ್ರತೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಇತ್ತೀಚೆಗೆ ರಾಜ್ಯ ಆರೋಗ್ಯ ಸಚಿವರು ನಡೆಸಿದ ವಿಡಿಯೊ ಕಾನ್ಫರೆನ್ಸ್ ನಿರ್ದೇಶನದಂತೆ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲಾಗಿದೆ. ರಾಜ್ಯದಲ್ಲಿ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ತೀವ್ರ ಸ್ವರೂಪದ ಜ್ವರ ಕೆಮ್ಮು, ಶೀತ, ಹಳದಿ ಕಫ, ಗಂಟಲು ಕೆರೆತ ಹಾಗೂ ಅತಿಯಾದ ಮೈ ಕೈ ನೋವು, ಉಸಿರಾಟದ ತೊಂದರೆ ಮತ್ತು ಕೋವಿಡ್-19 ಮಾದರಿಯ ಲಕ್ಷಣಗಳು ಸಾಮಾನ್ಯವಾಗಿ ಕಂಡುಬರುತ್ತಿವೆ. ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಸುಮಾರು 3762 ಸಾಮಾನ್ಯ ಶೀತ, ಕೆಮ್ಮು ಹಾಗೂ ಜ್ವರದ ಪ್ರಕರಣ ದಾಖಲಾಗಿವೆ. ತೀವ್ರ ಉಸಿರಾಟದ ಸಮಸ್ಯೆಯ 11 ಪ್ರಕರಣ ಪತ್ತೆಯಾಗಿದ್ದು ಇವುಗಳಲ್ಲಿ 4…
ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ. ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಸುಳ್ಯ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಕೋಡಿ ಕುಶಾಲಪ್ಪ ಗೌಡರ ನೆಂಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರೆಭಾಷೆಯನ್ನು ಕೇವಲ ಆಡುಭಾಷೆ ಎಂದು ಪರಿಗಣಿಸದೆ, ಅದರ ಭಾಷಿಕ ಸ್ವರೂಪ ಹಾಗೂ ವೈಶಿಷ್ಟ್ಯಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕೆಂಬ ದೃಷ್ಟಿಕೋನವನ್ನು ಬೆಳೆಸಿದವರಲ್ಲಿ ಕೋಡಿ ಕುಶಾಲಪ್ಪ ಗೌಡರು ಪ್ರಮುಖರು. ಕನ್ನಡದ ಸಹೋದರ ಭಾಷೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮಾತನಾಡಿ,…
ಮಡಿಕೇರಿ, NEWS DESK ಆ.29: ಮಡಿಕೇರಿ ತಾಲೂಕು ಮಟ್ಟದ ಅಂತರ ಶಾಲಾ ಅಂಡರ್–14 ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಯಶಸ್ ಮಂದಣ್ಣ, ಶೋಧನ್, ಅಕ್ಷಯ್ ಹಾಗೂ ಜೀವಿತ್ ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು. ಇದೇ ವೇಳೆ ಅಂಡರ್–17 ವಿಭಾಗದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಎರಡೂ ತಂಡಗಳು ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿವೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಆ.29 NEWS DESK : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕಕ್ಕೆ ಜಿಲ್ಲೆಯ ವಿವಿಧೆಡೆಯ ಪ್ರಮುಖರು ಸ್ವಯಂಪ್ರೇರಿತರಾಗಿ ಸೇರ್ಪಡೆಗೊಂಡರು. ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ನೆಲ, ಜಲ ಹಾಗೂ ಭಾಷೆಯ ಹಿತರಕ್ಷಣೆಗಾಗಿ ಸಂಘಟನೆ ನಡೆಸುತ್ತಿರುವ ಕಾರ್ಯದಿಂದ ಪ್ರೇರಿತರಾಗಿ ಇಸರ್ ಅಹ್ಮದ್, ಮಹಮದ್ ಹನೀಫ್, ಜಗದೀಶ್, ನಿತಿನ್ ಕುಮಾರ್, ಜೈರುದ್ದೀನ್, ಶ್ರೀನಿವಾಸ್, ಆಶಾ, ರವೀಂದ್ರ ಕುಮಾರ್, ಪ್ರಶಾಂತ್, ಮಮದ್ ಶರೀಫ್ ಹಾಗೂ ಕ್ಲಿಫರ್ಡ್ ರಾಡ್ರಿಗಸ್ ಅವರು ಅಧಿಕೃತವಾಗಿ ಸಂಘಟನೆಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು, ಸ್ವಯಂಪ್ರೇರಿತರಾಗಿ ಸಂಘಟನೆಗೆ ಸೇರ್ಪಡೆಗೊಂಡ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗೂಡಿ ಕನ್ನಡ ನಾಡು-ನುಡಿಯ ಸೇವೆ ಮಾಡುವುದರೊಂದಿಗೆ ನೆಲ, ಜಲ ಹಾಗೂ ಭಾಷೆಯ ರಕ್ಷಣೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಹೊಸ ಸದಸ್ಯರ ಸೇರ್ಪಡೆಯಿಂದ ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಸಂಘಟನಾ ಶಕ್ತಿ ಮತ್ತಷ್ಟು…
ಮಡಿಕೇರಿ, ಆ.29 NEWS DESK : ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಐಇಸಿ ಅಭಿಯಾನದ ಅಂಗವಾಗಿ ಮ್ಯಾರಥಾನ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವು ಶನಿವಾರ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಾ ಚಕ್ರವರ್ತಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್ ಉದ್ಘಾಟಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್ ಮಾತನಾಡಿ, ಮ್ಯಾರಥಾನ್‌ನಂತಹ ಕ್ರೀಡಾ ಚಟುವಟಿಕೆಗಳ ಮೂಲಕ ಯುವಜನರಲ್ಲಿ ಎಚ್‌ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಸೋಂಕು ಹರಡುವುದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಎಚ್‌ಐವಿ/ಏಡ್ಸ್ ಸಂಬಂಧಿತ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ನೀಡುವುದು ತೀವ್ರಗೊಳಿಸಿದ ಐಇಸಿ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ತರಬೇತುದಾರ ಆಂಟನಿ ಡಿಸೋಜಾ ಮಾತನಾಡಿ, ಯುವಜನರಲ್ಲಿ ಎಚ್‌ಐವಿ ತಡೆಗಟ್ಟುವಿಕೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಯುವಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು, ಎಚ್‌ಐವಿ/ಏಡ್ಸ್…
ಮಡಿಕೇರಿ, ಆ.29 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶನಿವಾರ ನಡೆಯಿತು. ರಾಜ್ಯ ಸರ್ಕಾರದ ಐದು ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಆರ್ಥಿಕ ನೆರವು ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿರುವ ಹಾಗೂ ಸಾಮಾಜಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಸಂಬಂಧ ಗೃಹಲಕ್ಷ್ಮಿ ಯೋಜನೆಯ ಧನಸಹಾಯವನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಯಾಗಿ ಸಮಾಜದಲ್ಲಿ ಸಕ್ರಿಯರಾಗಿರುವ ಫಲಾನುಭವಿಗಳ ಯಶೋಗಾಥೆಗಳ ವರದಿ, ವಿಡಿಯೋ ಚಿತ್ರೀಕರಣ, ಛಾಯಾಚಿತ್ರ, ಅವರ ಅನಿಸಿಕೆಗಳು ಹಾಗೂ ಸ್ವಯಂ ವಿವರಗಳನ್ನು ಕಚೇರಿಗೆ ಸಲ್ಲಿಸಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿ, ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆಯವರೆಗೆ ಧನಸಹಾಯ ಪಾವತಿಯಾಗಿದ್ದು, ಪ್ರಸ್ತುತ ಜೂನ್ ಮಾಹೆಯವರೆಗಿನ ಧನಸಹಾಯವನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.…






