ಲೇಖಕ: admin

ಕೂಡುಮಂಗಳೂರು ಸೆ.24 NEWS DESK :  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ-2025 ಕ್ಕೆ ಕೂಡಿಗೆ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ  ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿಕಚೇರಿಯಲ್ಲಿ  ಸಮೀಕ್ಷಾ ಕಾರ್ಯದ ಪೂರ್ವ ಸಿದ್ದತಾ ಸಮಾಲೋಚನಾ ಸಭೆ ನಡೆಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಂಚಾಯತಿ  ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ನಿಯೋಜನೆಗೊಂಡಿರುವ 30 ಕ್ಕೂ ಹೆಚ್ಚು ಶಿಕ್ಷಕರಿಗೆ ಸಮೀಕ್ಷೆ ನಡೆಸಲು ಬೇಕಾದ ಕೈಪಿಡಿ ಸೇರಿದಂತೆ ಪೂರಕ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಗಳನ್ನು ಕೂಡುಮಂಗಳೂರು ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸಂತೋಷ್ ಗಣತಿದಾರ ಶಿಕ್ಷಕರಿಗೆ ವಿತರಿಸಿದರು. ಈ ಸಂದರ್ಭ ಮಾತನಾಡಿದ ಪಿಡಿಓ ಸಂತೋಷ್, ಮಹತ್ವಾಕಾಂಕ್ಷೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಕರಿಗೆ ಮನವಿ ಮಾಡಿದರು. ಸಮೀಕ್ಷೆ ಸಂದರ್ಭದಲ್ಲಿ ಯಾವುದೇ ಮಾಹಿತಿ ಬೇಕಾದಲ್ಲಿ ಮತ್ತು ಏನಾದರೂ ಸಮಸ್ಯೆಗಳು ಎದುರಾದಲ್ಲಿ ಗ್ರಾಮ ಪಂಚಾಯತಿ ಗಮನಕ್ಕೆ…

Read More

ಕುಶಾಲನಗರ ಸೆ.24 NEWS DESK : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್‌.ಟಿ.) ಸುಧಾರಣಾ ನೀತಿಯು ಸೋಮವಾರ ಜಾರಿಗೆ ಬಂದು ಭಾರತೀಯ ಜೀವವಿಮಾ ನಿಗಮದ ಪಾಲಿಸಿದಾರರು ಪಾವತಿಸುವ ವಿಮಾ ಮೊತ್ತಕ್ಕೆ *ಜಿ.ಎಸ್.ಟಿ.ಸಂಪೂರ್ಣವಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಕುಶಾಲನಗರ ಎಲ್.ಐ.ಸಿ. ಉಪಗ್ರಹ ಕಚೇರಿಯಲ್ಲಿ ಜಿ.ಎಸ್.ಟಿ.ಇಳಿಕೆಯ ಸಂಭ್ರಮಾಚರಣೆ ಯನ್ನು ಆಚರಿಸಲಾಯಿತು. ಜಿ.ಎಸ್.ಟಿ.ಇಳಿಕೆಯ ಸಂಭ್ರಮಾಚರಣೆಯಲ್ಲಿ ಜಿ.ಎಸ್.ಟಿ. ತೆರಿಗೆಯು ಶೂನ್ಯ(0%) ಕ್ಕೆ ಕಡಿತಗೊಂಡ ಹಿನ್ನೆಲೆಯಲ್ಲಿ ಎಲ್.ಐ.ಸಿ. ಉಪಗ್ರಹ ಶಾಖಾ ಮೆನೇಜರ್ ಎಸ್.ಬಿ.ಶಿವಪ್ರಸಾದ್ ಸಿಹಿ ಹಂಚಿದರು. ಎಲ್.ಐ.ಸಿ. ಕಛೇರಿಯಲ್ಲಿ ಸಂಸ್ಥೆಯ ಅಭಿವೃದ್ಧಿ ಅಧಿಕಾರಿಗಳು, ಪ್ರತಿನಿಧಿಗಳು, ಕಛೇರಿಯ ಸಿಬ್ಬಂದಿ ಹಾಗೂ ಪಾಲಿಸಿದಾರರು ಜತೆಗೂಡಿ ಜಿ.ಎಸ್.ಟಿ. ಇಳಿಕೆಯ ಕುರಿತು ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದರು. ಜಿ.ಎಸ್.ಟಿ.ಇಳಿಕೆಯ ಮಾಹಿತಿ ನೀಡಿದ ಶಾಖಾ ಮೆನೇಜರ್ ಎಸ್.ಬಿ.ಶಿವಪ್ರಸಾದ್ , ಭಾರತೀಯ ಜೀವ ವಿಮಾ ಪಾಲಿಸಿಗಳಿಗೆ ಪಾಲಿಸಿದಾರರು ಪಾವತಿಸುವ ವಿಮಾ ಮೊತ್ತಕ್ಕೆ ಕೇಂದ್ರ ಸರ್ಕಾರವು ಜಿ.ಎಸ್.ಟಿ.ಯನ್ನು ಶೇಕಡಾ ಶೂನ್ಯ( 0%) ಕ್ಕೆ ಇಳಿಸಿರುವುದರಿಂದ ಪಾಲಿಸಿದಾರರಾದ ಗ್ರಾಹಕರು ತಮ್ಮ ಉಳಿತಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಎಲ್.ಐ.ಸಿ.ಯಲ್ಲಿ ಮಾಡಲು…

Read More

ಮಡಿಕೇರಿ NEWS DESK ಸೆ.24 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದಿನ ವರ್ಷ ಕೇಂದ್ರ ಸರಕಾರ ನಡೆಸುವ ಜಾತಿ ಜನಗಣತಿ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಆಲೂರು ಸಿದ್ದಾಪುರ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಲೂರು ಸಿದ್ದಾಪುರ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಅವರು ರಾಜ್ಯ ಸರಕಾರದ ವತಿಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜನಗಣತಿಯ ಸಮೀಕ್ಷೆ ಆರಂಭಗೊಂಡಿದೆ. ಗಣತಿದಾರರು ಬಂದಾಗ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ…

Read More

ವಿರಾಜಪೇಟೆ ಸೆ.24 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಆತಂಕ ಪಡುವಂತಾಗಿದೆ. ಕೆದಮುಳ್ಳುರು, ಪಾಲಂಗಾಲ, ಕರಡ, ನರಿಯಂದಡ, ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕಾಡಾನೆಗಳ ಹಿಂಡು ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ದಾಂಧಲೆ ನಡೆಸಿ ಬೆಳೆಗಳನ್ನು ಹಾನಿಪಡಿಸಿದೆ. ಪಾಲಂಗಾಲ ಗ್ರಾಮದ ಬೆಳೆಗಾರರಾದ ಕರಿನೆರವಂಡ ಶಂಕರಿ ಹಾಗೂ ಇನ್ನಿತರರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ, ಅಡಿಕೆ, ತೆಂಗು, ಕಾಫಿ, ಕಾಳುಮೆಣಸು ಮತ್ತಿತರ ಕೃಷಿ ಗಿಡಗಳನ್ನು ತುಳಿದು ನಾಶ ಪಡಿಸಿ ಅಪಾರ ನಷ್ಟ ಉಂಟು ಮಾಡಿವೆ. ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದಲ್ಲಿ ಅಳವಡಿಸಲಾಗಿದ್ದ ಸ್ವಿಚ್ಚನ್ನು ಹಾನಿಗೊಳಿಸಿದೆ. ನಿರಂತರ ಕಾಡಾನೆಗಳ ಹಾವಳಿಯಿಂದ ಗ್ರಾಮದಲ್ಲಿ ಗ್ರಾಮಸ್ಥರು ನಡೆದಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎಂ. ಪರಮೇಶ್ವರ ಮಾತನಾಡಿ, ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕಾಡಾನೆ ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಶಾಶ್ವತ…

Read More

ನಾಪೋಕ್ಲು ಸೆ.24 NEWS DESK : ನಾಪೋಕ್ಲು ರೇಂಜ್ ಜಮಾಯತ್ ಮೌಲಮೀನ್ ಹಾಗೂ ಎಮ್ಮೆಮಾಡು ರೇಂಜ್ ಜಮಾಯತ್ ಮೌಲಮೀನ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಪಟ್ಟಣದಲ್ಲಿ ಈದ್ ಮಿಲಾದ್ ಸಂದೇಶ ಜಾಥಾ ಕಾರ್ಯಕ್ರಮ ನಡೆಯಿತು. ಮಹಮ್ಮದ್ ಹಾಜಿ ಕುಂಜಿಲ ಮಾತನಾಡಿ, ಪ್ರವಾದಿ ಮೊಹಮ್ಮದ್ ಅವರ 1500 ಜನ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯುತವಾಗಿ ಕಾಣುವಂತಹ ಸಂದೇಶವನ್ನು ಸಾರುವಂತಹ ಉದ್ದೇಶ, ದೃಷ್ಟಿಯಿಂದ ಪಟ್ಟಣದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮದರಸದ ವಿದ್ಯಾರ್ಥಿಗಳು ದಫ್ ಪ್ರದರ್ಶನ ಬಾವುಟಗಳೊಂದಿಗೆ ಹಳೆ ತಾಲ್ಲೂಕು ನಿಂದ ಪಟ್ಟಣವನ್ನು ಸಾಗಿ ಸಂತೆ ಮೈದಾನದಲ್ಲಿ ಮುಕ್ತಾಯಗೊಳಿಸಲಾಯಿತು. ಈ ಸಂದರ್ಭ ನಾಪೋಕ್ಲು ಜುಮ್ಮ ಮಸೀದಿ ಜಮಾಯತ್ ಅಧ್ಯಕ್ಷ ಹೆಚ್.ಹೆಚ್.ಅಬ್ದುಲ್ ರೆಹಮಾನ್, ಅಬುಬಕರ್ ಸಖಾಫಿ ಎಮ್ಮೆಮಾಡು, ಯಾಕುಬ್ ಮಾಸ್ಟರ್ ಕೊಳಕೇರಿ, ಅಬ್ದುಲ್ ಸಖಾಫಿ ಕೊಳಕೇರಿ, ಆರ್.ಎಂ.ಅಸೈನರ್ ಕೊಳಕೇರಿ, ಕೆ.ಕೆ.ಉಸ್ಮಾನ್ ಹಾಜಿ ಹಾಗೂ ವಿವಿಧ ಜಮಾಯತ್ ನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಜನಾಂಗಬಾಂಧವರು ಪಾಲ್ಗೊಂಡಿದ್ದರು. ವರದಿ :…

Read More

ನಾಪೋಕ್ಲು ಸೆ.24 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನರಿಯಂದಡ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಪೂಕ್ಕುಳಂಡ್ರ ಧನೋಜ್ ಆಯ್ಕೆಯಾಗಿದ್ದಾರೆ. ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಧನೋಜ್ ಅವರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಸೆ.24 NEWS DESK :  ನಾಪೋಕ್ಲು ನಾಡು ಗ್ರಾಹಕರ ಸಂಘವು 2024-25 ರ ಸಾಲಿನಲ್ಲಿ 93.600 ಸಾವಿರ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪಟ್ರಪಂಡ ಮೋಹನ್ ಮುದ್ದಪ್ಪ ಹೇಳಿದರು. ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ  ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ,  ಸಂಘದಲ್ಲಿ 639 ಮಂದಿ ಸದಸ್ಯರಿದ್ದು ದುಡಿಯುವ ಬಂಡವಾಳ  65 ಲಕ್ಷ ರೂ.ಗಳಾಗಿವೆ  ಎಂದರು. ಸಂಘವು ಸುಸಜ್ಜಿತವಾದ ಕಟ್ಟಡ ಹೊಂದಿದ್ದು ಸಂಘದ ಮಳಿಗೆಯಲ್ಲಿ ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರದು. ಸರ್ಕಾರದ ನ್ಯಾಯಬೆಲೆ ಅಂಗಡಿಯನ್ನು ಹೊಂದಿದೆ. ಕಾಡುದಾರರಿಗೆ ಪಡಿತರವನ್ನು ವಿತರಿಸಲಾಗುತ್ತಿದೆ. ಸಂಘದ ಸಮಗ್ರ ಮಾಹಿತಿಯನ್ನು ನೀಡಿ ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭ ಸಭೆಯಲ್ಲಿ ಸಂಘದ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ಬಳಿಕ ಎಲ್ಲರ ಒಪ್ಪಿಗೆ ಪಡೆದು  ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ…

Read More

ಮಡಿಕೇರಿ ಸೆ.23 NEWS DESK : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ…

Read More

ಮಡಿಕೇರಿ ಸೆ.24 NEWS DESK : ನಾಡಹಬ್ಬ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸಲು ವಿದ್ಯುತ್ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನ ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್ ಆದ್ಯತೆ ನೀಡುತ್ತಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆಗೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ…

Read More

ಮಡಿಕೇರಿ ಸೆ.24 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವು ಅಕ್ಟೋಬರ್, 07 ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸುಗಮವಾಗಿ ನಿರ್ವಹಣೆ ಮಾಡುವ ಹಾಗೂ ಸಾರ್ವಜನಿಕರಿಂದ ಬರುವ ಮಾಹಿತಿ/ದೂರು/ ಆಕ್ಷೇಪಣೆ/ಸಲಹೆ ಇತ್ಯಾದಿ ಬಗ್ಗೆ ಸ್ವೀಕರಿಸಲಾಗುತ್ತಿರುವ ಕರೆಗಳಿಗೆ ಸೂಕ್ತ ಉತ್ತರವನ್ನು ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡಂತೆ ಸಹಾಯವಾಣಿ ತಂಡವನ್ನು ರಚಿಸಿ ಆದೇಶಿಸಿದೆ. ಈ ತಂಡವು ಕಚೇರಿಯ ಅವಧಿಯಲ್ಲಿ ಕಚೇರಿಯ ಕೆಲಸದೊಂದಿಗೆ ಸಹಾಯವಾಣಿಯ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದೆ. :: ಕೊಡಗು ಜಿಲ್ಲಾ ಮಟ್ಟದ ಸಹಾಯವಾಣಿ ಕೇಂದ್ರ :: ಶಿವಶಂಕರ, ಕಚೇರಿ ವ್ಯವಸ್ಥಾಪಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ. ದೂ.ಸಂ. 9845041338, ಕುಮಾರಿ.ಅಮೃತ ಡೇಟಾ ಎಂಟ್ರಿ ಆಪರೇಟರ್ (ಹೊ.ಸಂ) ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ ದೂ.ಸಂ. 7483864190. ::…

Read More