ಲೇಖಕ: admin

ಮಡಿಕೇರಿ ಜು.8 NEWS DESK : ಮಡಿಕೇರಿ ತಾಲೂಕಿನ ಮೇಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ  ಮೇಕೇರಿ- ಬಿಳಿಗೇರಿಯಿಂದ ತೋರಮಣ ಸಂಪರ್ಕ ರಸ್ತೆ ಹಾಗೂ ಬಿಳಿಗೇರಿ ಶಾದಿಯಾಲ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಚೂರಿಕಾಡು ರಸ್ತೆ 15 ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ‌ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಇತರರು ಇದ್ದರು.

Read More

ಮಡಿಕೇರಿ ಜು.8 NEWS DESK : ಐಗೂರು ಹಾಗೂ ಕಿರಂಗೂರು ಗ್ರಾಮಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಐಗೂರು ಗ್ರಾಮದ ವಿ.ಎಸ್.ಎಸ್.ಎನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಪಾಲ್ಗೊಂಡು, ಹಲವು ವಿಷಯಗಳ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿದರು.  ಬಳಿಕ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ  ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಮಹೇಶ್ ಜೈನಿ, ವಿ.ಕೆ.ಲೋಕೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಪ್ರಮೋದ್, ಸುದೀರ್, ಹಿರಿಯರಾದ ವಿ.ಎಂ.ವಿಜಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.8 NEWS DESK : ಹದವಾದ ನೆರಳಿನಲ್ಲಿ ಬೆಳೆಯುವ ಕೊಡಗಿನ ‘ಷೇಡ್ ಕಾಫಿ’ಯ ಸುವಾಸನೆ ಮತ್ತು ಸ್ವಾಧವನ್ನು ವಿಶ್ವ ಸ್ತರದಲ್ಲಿ ಪರಿಚಯಿಸುವ ವ್ಯಾಪಕ ಪ್ರಯತ್ನಗಳಿಂದು ನಡೆಯುತ್ತಿದೆ. ಇದರ ಭಾಗವಾಗಿ ಕೊಡಗಿನ ಕಾಫಿಗೆ ಸುದೂರದ ಆಸ್ಟ್ರೇಲಿಯಾದಲ್ಲಿ ಮಾರುಕಟ್ಟೆಯನ್ನು ದೊರಕಿಸಿಕೊಳ್ಳುವ ದೂರದೃಷ್ಟಿಯ ಚಿಂತನೆಯೊಂದಿಗೆ ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಆಸ್ಟ್ರೇಲಿಯಾದ ಬೆಂಗಳೂರಿನಲ್ಲಿರುವ ಡೆಪ್ಯೂಟಿ ಕೌನ್ಸಿಲ್ ಜನರಲ್‌ರಿಗೆ ಸ್ಥಳೀಯ ಕಾಫಿಯನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮ ನಡೆಯಿತು. ನಗರದ ಅಂಚಿನಲ್ಲಿರುವ ಬಿಗ್ ಕಪ್ ಹೋಟೆಲ್‌ನಲ್ಲಿ ‘ಬಯೋಟ ಕೂರ್ಗ್ ಫಾರ್ಮಿಂಗ್ ಪ್ರೊಡ್ಯೂಸರ್ ಕಂಪೆನಿಯಿಂದ’ ಕಾಫಿ ಕಪ್ ಟೇಸ್ಟ್ ಮತ್ತು ಸಂವಾದ ಕಾರ್ಯಕ್ರಮ ನಡೆಯಿತು. ಬಯೋಟ ಕೂರ್ಗ್ ಫಾರ್ಮರ್ ಪ್ರೊಡ್ಯೋಸರ್ ಕಂಪೆನಿ ಎನ್ನುವುದು ಜಿಲ್ಲೆಯ ಸುಮಾರು 120 ಕಾಫಿ ಬೆಳೆಗಾರರನ್ನು ಒಳಗೊಂಡ ಸಂಘಟನೆ. ಇದರ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ತೋಟಗಳಲ್ಲಿ ಬೆಳೆದ ಷೇಡ್ ರೋಬಸ್ಟಾ ಮತ್ತು ಅರೇಬಿಕಾ ಕಾಫಿಯ ಸ್ವಾಧವನ್ನು ಆಸ್ಟೇಲಿಯದ ಡೆಪ್ಯೂಟಿ ಕೌನ್ಸಿಲ್ ಜನರಲ್ ಸ್ಟೀವನ್ ಕನೋಲಿ ಮತ್ತು ಸ್ಟೆಫಿ ಚೆರಿಯನ್ ಅವರಿಗೆ ಪರಿಚಯಿಸಿದ್ದು ವಿಶೇಷ,…

Read More

ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಕ್ರಿಯೇಟಿವ್ ಅಕಾಡೆಮಿ ವಿದ್ಯಾಸಂಸ್ಥೆಗೆ ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ಭೇಟಿ ನೀಡಿದರು. ಶಾಲೆಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಆಡಳಿತ ಮಂಡಳಿ, ಶಿಕ್ಷಕರೊಂದಿಗೆ ಚರ್ಚಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಿ ಶುಭಹಾರೈಸಿದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಅಪಚ್ವು ರಂಜನ್, ಮಡಿಕೇರಿ ನಗರ ಬಿಜೆಪಿ ಪದಾಧಿಕಾರಿಗಳು, ಸೋಮವಾರಪೇಟೆ ಕಾರ್ಯಕರ್ತರು ಪಾಲ್ಗೊಂಡರು.

Read More

ಮಡಿಕೇರಿ ಜು.8 NEWS DESK : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಇಲಾಖೆ ವತಿಯಿಂದ ‘ಸಾಮಾಜಿಕ ಆಧಾರಿತ ಸಿವಿಲ್’ ಯೋಜನೆಯಲ್ಲಿ ದಿವ್ಯಾಂಗರಿಗೆ ಸಾಧನ ಸಲಕರಣೆಗಳನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿತರಿಸಿದರು. ನಗರದ ರೆಡ್‍ಕ್ರಾಸ್ ಭವನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಅವರು, ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರೂ.ವೆಚ್ಚದ 344 ಸಾಧನ ಸಲಕರಣೆ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಅವಲಂಬಿತರಾಗಿದ್ದಾರೆ. ಆ ನಿಟ್ಟಿನಲ್ಲಿ ವಿಕಲಚೇತನರಿಗೆ ಇನ್ನೂ ಹೆಚ್ಚಿನ ಅವಕಾಶ ನೀಡಬೇಕಿದೆ. ಆದ್ದರಿಂದ ಸರ್ಕಾರ ಅಗತ್ಯ ಸಾಧನ ಉಪಕರಣ ಕಲ್ಪಿಸುತ್ತಿದೆ ಎಂದು ತಿಳಿಸಿದರು. ರಾಷ್ಟ್ರದ ಅಭಿವೃದ್ಧಿಗೆ ವಿಕಲಚೇತನರು ಸಹ ಹಲವು ಕೊಡುಗೆ ನೀಡಿದ್ದು, ವಿಕಲಚೇತನರು ಇತರರಂತೆ ಬದುಕು ನಡೆಸುವಂತಾಗಲು ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ ಎಂದು ಸಂಸದರು ನುಡಿದರು. ಭಾರತ ಬಲಿಷ್ಠ ಹಾಗೂ ಆದರ್ಶ ಸಮಾಜ ನಿರ್ಮಾಣ ಮಾಡಲು ಎಲ್ಲರ ಕೊಡುಗೆ ಅಗತ್ಯ. ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ವಿಕಲಚೇತನರಿಗೆ…

Read More

ಮಡಿಕೇರಿ ಜು.8 NEWS DESK : ಬಿಳಿಗೇರಿ ಹಾಗೂ ಅರ್ವತ್ತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.12 ಮತ್ತು 13 ರಂದು 5ನೇ ವರ್ಷದ ಹಿಂದೂ ಕಪ್ ಮುಕ್ತ ಕೆಸರುಗದ್ದೆ ಕ್ರಿಕೆಟ್, ಓಟ, ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳು ನಡೆಯಲಿವೆ. ಬಿಳಿಗೇರಿ ಅರ್ವತ್ತೋಕ್ಲು ಗ್ರಾಮದ ತುಂತಾಜಿರ ಚಂದ್ರಶೇಖರ್, ರಂಜಿತ್, ದಯಾನಂದ, ತಿಮ್ಮಯ್ಯ ಹಾಗೂ ಧರ್ಮಾವತಿ ಅವರ ಗದ್ದೆಯಲ್ಲಿ ನಡೆಯಲಿರುವ ಸ್ಪರ್ಧೆಗಳು ಜು.12 ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿವೆ. ಜು.12 ರಂದು ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾವಳಿ, ಜು.13 ರಂದು ಹಗ್ಗಜಗ್ಗಾಟ, ಕೆಸರುಗದ್ದೆ ಓಟ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ವಿಶೇಷ ಸ್ಪರ್ಧೆಗಳು ನಡೆಯಲಿವೆ. ಹಿಂದೂ ಬಾಂಧವ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಲಬ್ ಆಡಳಿತ ಮಂಡಳಿ ಮನವಿ ಮಾಡಿದೆ. ಕ್ರಿಕೆಟ್, ವಾಲಿಬಾಲ್ ಹಾಗೂ ಹಗ್ಗಜಗ್ಗಾಟದಲ್ಲಿ ಭಾಗವಹಿಸುವ ಆಸಕ್ತ ತಂಡಗಳು ಮುಂಗಡ ಹಣವನ್ನು ಪಾವತಿಸಿ ಜು.10ರ ಒಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ಆಯೋಜಕರು…

Read More

ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತದೆ. ಇಂಥ ವಿಶೇಷ ಪದವಿಗಳೊಂದಿಗೆ ವಿಶೇಷ ಅಧಿಕಾರಿ  (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಕಾಮರ್ಸ್ ಪದವಿ ಓದಿದವರು, ಕೃಷಿ ಪದವಿ ಅಧ್ಯಯನ ಮಾಡಿದವರಿಗಷ್ಟೇ ಬ್ಯಾಂಕುಗಳಲ್ಲಿ ಉದ್ಯೋಗ ಎನ್ನುವಂತಿತ್ತು. ಆದರೆ, ಈಗ ಇವೆರಡರ ಜೊತೆಗೆ, ಕಾನೂನು, ಎಂಜಿನಿಯರಿಂಗ್, ಮಾರ್ಕೆಟಿಂಗ್, ಮ್ಯಾನೇಜ್ಮೆಂಟ್ ಸೇರಿದಂತೆ ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತಿದೆ. ಇಂಥ ವಿಶೇಷ ಪದವಿಗಳೊಂದಿಗೆ ವಿಶೇಷ ಅಧಿಕಾರಿ (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಇಂಥ ಸ್ಪೆಷಲ್ ಆಫೀಸರ್‍ಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈ ನ್ ಮೂಲಕ (https://www.ibps.in) ಅರ್ಜಿ…

Read More

ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಹೋಬಳಿ ಗರ್ವಾಲೆ ಗ್ರಾಮದ ಅಂಗನವಾಡಿ ಕೇಂದ್ರದ ಮೇಲೆ ತೀವ್ರ ಮಳೆಗಾಳಿಯಿಂದ ಮರ ಬಿದ್ದ ಪರಿಣಾಮ ಅಂಗನವಾಡಿಯ ಮೆಲ್ಚಾವಣಿ ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ.

Read More

ಮಡಿಕೇರಿ ಜು.8 NEWS DESK : ಕೆ ನಿಡುಗಣೆ ಗ್ರಾಮ ಪಂಚಾಯಿತಿಗೆ  ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ  ಗ್ರಾ.ಪಂ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಕೆ.ನಿಡುಗಣೆ ಗ್ರಾ.ಪಂ ನ 23 ಬಸವ ವಸತಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ( ಹೆಚ್ಚುವರಿ ) ಯೋಜನೆಯಡಿ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿದರು. ನಂತರ ಗೋ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ, ಸದಸ್ಯರಾದ ಜಾನ್ಸನ್ ಪಿಂಟೋ,  ಎಂ.ಡಿ.ಬೋಪಣ್ಣ , ಜಾನ್ಸಿ ಮಾದಪ್ಪ ಮತ್ತು ಮಡಿಕೇರಿ ತಾಲ್ಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಂದ್ರಿರ ಮೊಹನ್ ದಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಕ್ಕಲೇರ ಸುಜು ತಿಮ್ಮಯ್ಯ, ಬಗರ್ ಹುಕುಂ ಸದಸ್ಯರಾದ ರೂಪ ಮತ್ತು ಹರಿಪ್ರಸಾದ್, ತಾಲ್ಲೂಕು ಕಾರ್ಯನಿರ್ವಣಧಿಕಾರಿ ಶೇಕರ್, ತಹಶೀಲ್ದರ್ ಪ್ರವೀಣ್ ಮತ್ತು…

Read More

ಮಡಿಕೇರಿ NEWS DESK ಜು.8 : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಸುಮಾರು 50 ವರ್ಷದ ಮೃತ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥನೆಂದು ಹೇಳಲಾಗಿದೆ. ಕಾಡಾನೆ ಮೊದಲು ಸೈಕಲ್ ನಲ್ಲಿ ಬರುತ್ತಿದ್ದ ಸ್ಥಳೀಯ ಗ್ರಾಮಸ್ಥ ಅಜಯ್ ಎಂಬುವವರ ಮೇಲೆ ದಾಳಿ ಮಾಡಲು ಮುಂದಾಗಿದೆ. ಅಜಯ್ ಅವರು ಸೈಕಲ್ ನ್ನು ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಇದೇ ಸಂದರ್ಭ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. *ರಾಜೀನಾಮೆಗೆ ಆಗ್ರಹ* ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸರಣಿ ಸಾವುಗಳಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆಯ ವೈಫಲ್ಯವೇ ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಆರೋಪಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ,…

Read More