ಸೋಮವಾರಪೇಟೆ ಜು.8 NEWS DESK : ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇದ್ದರೆ ಗುರಿ ಸಾಧಿಸಬಹುದೆಂದು ಮಾಜಿ ಕ್ರೀಡಾಸಚಿವ ಎಂ.ಪಿ. ಅಪ್ಪಚುರಂಜನ್ ತಿಳಿಸಿದರು. ಯಡವನಾಡು ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಬಹಳ ಮುಖ್ಯ, ಶಿಕ್ಷಣವಿಲ್ಲದೆ ಬದುಕು ಕಷ್ಟಕರವೆಂದರು. ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯನ್ನು ಮೈಗೂಡಿಸಿಕೊಂಡರೆ ಎಂತಹ ಕಠಿಣ ಶಿಕ್ಷಣವಾದರೂ ಪಡೆದುಕೊಳ್ಳಬಹುದೆಂದರು. ಈ ಸಂದರ್ಭ ಶಾಲೆಯ 185ವಿದ್ಯಾರ್ಥಿಗಳಿಗೂ ರಂಜನ್ ಸ್ವೆಟರ್ ವಿತರಿಸಿದರು. ಐಗೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರುಗಳಾದ ಜಯಪ್ಪ, ಪ್ರಮೋದ್ ಪ್ರಮುಖರುಗಳಾದ ರಮೇಶ್, ವರದರಾಜ ಅರಸ್, ಮಲ್ಲಪ್ಪ, ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್ ಹಾಗೂ ಶಿಕ್ಷರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜು.18 NEWS DESK : ವಿರಾಜಪೇಟೆ ನಗರದ ಒಂದನೇ ವಾರ್ಡಿನಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಜನಸಾಮಾನ್ಯರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿತಿ ಕೇಂದ್ರದ ಮೂಲಕ ಶಾಸಕರ ಅನುದಾನ ರೂ.10 ಲಕ್ಷದಲ್ಲಿ ಕುಡಿಯುವ ನೀರು ಘಟಕಕ್ಕೆ ಮಂಜೂರಾತಿ ನೀಡಿದ್ದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಶುದ್ಧ ಕುಡಿಯುವ ನೀರು ಪ್ರತಿಯೊಬ್ಬನ ಅವಶ್ಯಕತೆಯಾಗಿದ್ದು, ಜನರು ಮಿತವಾಗಿ ನೀರನ್ನು ಬಳಸಿ ಎಂದು ಕರೆ ನೀಡಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು, ಹಿರಿಯ ಕಾಂಗ್ರೆಸ್ ಮುಖಂಡರು, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಪೊನ್ನಂಪೇಟೆ ತಾಲ್ಲೂಕು ಹಾತೂರು ಬಳಿ ಇರುವ ಪ್ರಸಿದ್ಧ ವನಭದ್ರ ಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಕಾಂಚನ್ ಪೊನ್ನಣ್ಣ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ಪ್ರಮುಖರು ಶಾಸಕರ ಹೆಸರಿನಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಿದ ಹಿನ್ನೆಲೆ ಶಾಸಕ ದಂಪತಿಗಳು, ದೇವಿಯ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಕೊಕ್ಕಂಡ ರೋಷನ್, ಬೂತ್ ಅಧ್ಯಕ್ಷ ಪುಲಿಯಂಡ ರೋಷನ್, ಅಜ್ಜಿಕುಟ್ಟಿರ ಗಿರೀಶ್, ವಿರಾಜಪೇಟೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಚಂಗಪ್ಪ, ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕುಂದಾಚೀರ ಮಂಜು ದೇವಯ್ಯ, ಹರೀಶ್, ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಆಚಾರ್ಯ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭ ಶಾಸಕರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಮಡಿಕೇರಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರುಗಳಾದ ಮುದ್ದುರಾಜು, ಸದಾ ಮುತ್ತಪ್ಪ, ಜಗದೀಶ್ ಹಾಗೂ ಹೆಚ್.ಎಲ್.ಯೋಗೇಶ್ ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಶ್ರೀ ಕೋದಂಡ ರಾಮ ದೇವಾಲಯದ 51ನೇ ವರ್ಷದ ದಸರಾ ಉತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ್ ಸುಬ್ರಮಣಿ, ಕಾರ್ಯಧ್ಯಕ್ಷರಾಗಿ ಮಿಥುನ್ ಶೆಟ್ಟಿ ನೇಮಕಗೊಂಡಿದ್ದಾರೆ. ಗೌರವಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಗಿರೀಶ್ ಸುಬ್ರಮಣಿ, ಜೈಕುಮಾರ್, ಸಿದ್ದಿಕ್, ಪ್ರದಾನ ಕಾರ್ಯದರ್ಶಿಯಾಗಿ ವಿಜು ಖಜಾಂಚಿಯಾಗಿ ಶೇಖರ್, ಕಾರ್ಯದರ್ಶಿಯಾಗಿ ವಿಶ್ವ, ಪವನ್, ಸಹ ಕಾರ್ಯದರ್ಶಿಯಾಗಿ ತೇಜ, ಹರ್ಷ, ಸಂಘಟನಾ ಕಾರ್ಯದರ್ಶಿಯಾಗಿ ವಿಗ್ನೇಶ್, ನವೀನ್, ಅಲಂಕಾರ ಸಮಿತಿಗೆ ಹರೀಶ್, ಜೀವನ್, ಉತ್ಸವ ಸಮಿತಿಗೆ ಅಜಿತ್ ಮತ್ತು ತಂಡ ಆಯ್ಕೆಗೊಂಡರು. ಸಮಿತಿಯ ರಚನೆ ಬಳಿಕ ಮಾತನಾಡಿದ ಅಧ್ಯಕ್ಷರಾದ ಆನಂದ್ ಮಡಿಕೇರಿ ದಸರಾದಲ್ಲಿ ಪ್ರತಿ ವರ್ಷ ವಿನೂತನ ರೀತಿಯಲ್ಲಿ ಮಂಟಪ ತಯಾರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಶ್ರೀ ಕೋದಂಡ ರಾಮ ದೇವಾಲಯವು ಈ ಬಾರಿಯೂ ಕೂಡ ಅದ್ದೂರಿ ದಸರಾ ಆಚರಿಸುವ ಮುಖಾಂತರ ಉತ್ತಮ ಮಂಟಪ ಹೊರತರುವಲ್ಲಿ ದೇವಾಲಯದ ಸರ್ವ ಸದಸ್ಯರು ಶ್ರಮಿಸಳಿದ್ದೇವೆ ಎಂದು ಅಭಿಪ್ರಾಯ ಹಂಚಿಕೊಂಡರು.
ಮಡಿಕೇರಿ ಜು.8 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‍ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನಾಪೋಕ್ಲುವಿನಲ್ಲಿ ಏಳನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿವರಿಸಿದರು. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು.…
ಮಡಿಕೇರಿ NEWS DESK ಜು.7 : ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಸ್ವಚ್ಛತಾ ಮತ್ತು ಇತರೆ ಕಾರ್ಮಿಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.9 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ಹಾಗೂ ಕಾರ್ಯದರ್ಶಿ ಹೆಚ್.ಕೆ.ಜಾನಕಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬುಧವಾರ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರರ ಕಚೇರಿ ಎದುರು ಆಸ್ಪತ್ರೆಗಳ ಸ್ವಚ್ಛತಾ ಕಾರ್ಮಿಕರು ಪ್ರತಿಭಟನೆ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಸ್ವಚ್ಛತಾ ಮತ್ತು ಡಿ ಗ್ರೂಪ್ ನೌಕರರಿಗೆ ಮಾಸಿಕ ಕನಿಷ್ಟ ವೇತನ 31 ಸಾವಿರ ನೀಡಬೇಕು, ನೌಕರರನ್ನು ಗುತ್ತಿಗೆ, ಕಾಂಟ್ರೆಕ್ಟ್ ಪದ್ಧತಿಯಿಂದ ವಿಮೋಚನೆಗೊಳಿಸಿ ಆಸ್ಪತ್ರೆಗಳಲ್ಲೇ ವೇತನ ನೀಡುವಂತಾಗಬೇಕು, ಪ್ರತಿ 5ನೇ ತಾರೀಖಿನ ಒಳಗೆ ಕಾರ್ಮಿಕರ ವೇತನ ನೀಡಬೇಕು, ಹೆರಿಗೆ ಭತ್ಯೆ, ಇಎಸ್‌ಐ ಸೌಲಭ್ಯ, ಪಿ.ಎಫ್ ಹಣವನ್ನು ಸರಿಯಾದ…
ಮಡಿಕೇರಿ ಜು.7 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.9 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್‍ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.…
ಮಡಿಕೇರಿ ಜು.7 NEWS DESK : ಇತ್ತೀಚೆಗೆ ಬೆನ್ನು ಮೂಳೆಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಶೌರ್ಯ ವಿಪತ್ತು ಘಟಕದ ಸ್ವಯಂಸೇವಕರು, ತ್ಯಾಗರಾಜನಗರ ಒಕ್ಕೂಟದ ಅಧ್ಯಕ್ಷರು, ಪ್ರಸ್ತುತಿ ಸಂಘದ ಸದಸ್ಯರೂ ಆಗಿರುವ ಲೀಲಾ ಶೇಷಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರೂ.30 ಸಾವಿರ ಆರ್ಥಿಕ ನೆರವನ್ನು ನೀಡಿದ್ದಾರೆ. ತಾಲ್ಲೂಕು ಯೋಜನಾಧಿಕಾರಿಗಳು ಮಂಜೂರಾತಿ ಪತ್ರವನ್ನು ಲೀಲಾ ಶೇಷಮ್ಮ ಅವರಿಗೆ ಸಲ್ಲಿಸಿದರು. ಈ ಸಂದರ್ಭ ಸಂಘದ ಸದಸ್ಯರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಮಡಿಕೇರಿ ಜು.7 NEWS DESK : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‍ವೈ) (ಪ್ರತಿ ಹನಿ ನೀರಿಗೆ ಹೆಚ್ಚು ಉತ್ಪಾದನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡುವ ಯೋಜನೆ ಇದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಅವರು ಮಾಹಿತಿ ನೀಡಿದ್ದಾರೆ. ಅಡಿಕೆ, ತೆಂಗು, ಶುಂಠಿ, ಬಾಳೆ, ತಾಳೆ, ಕಾಳುಮೆಣಸು, ಬೆಣ್ಣೆಹಣ್ಣು, ಸಪೋಟ, ತರಕಾರಿ ಬೆಳೆಗಳು ಹಾಗೂ ಇತರೆ ತೋಟದ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಪದ್ದತಿಗಳಿಗೆ ಸಹಾಯಧನ. ಪರಿಶಿಷ್ಟ ಜಾತಿ/ ಪಂಗಡ /ಇತರೆ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡುವ ಯೋಜನೆ ಇದೆ ಎಂದರು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಬೆಣ್ಣೆ ಹಣ್ಣುಗಳ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಶೇ.40ರ ಸಹಾಯಧನ ನೀಡಲಾಗುತ್ತದೆ. ಪುನಶ್ಚೇತನ ಕಾರ್ಯಕ್ರಮದಡಿ ರೈತರಿಗೆ ಉಚಿತವಾಗಿ ಕಿತ್ತಳೆ, ಕಾಳುಮೆಣಸು ಸಸಿಗಳು ಹಾಗೂ ಜೈವಿಕ ಗೊಬ್ಬರ ವಿತರಿಸಲಾಗುತ್ತದೆ. ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಹಸಿರು…






