ಮಡಿಕೇರಿ ಜು.7 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.9 ರಂದು ಹಮಾಲಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೊಡಗು ಜಿಲ್ಲಾ ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಹಾಗೂ ಕಾರ್ಯದರ್ಶಿ ಕೆ.ಎಸ್.ಶಾಜಿ ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದನ್ನು ವಿರೋಧಿಸಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗವುದೆಂದು ಹೇಳಿದ್ದಾರೆ. *ಬೇಡಿಕೆಗಳು* ಎಲ್ಲಾ ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ಸಮಗ್ರ ಕಲ್ಯಾಣ ಸೌಲಭ್ಯಗಳನ್ನು ಜಾರಿ ಮಾಡಬೇಕು, ಕೇರಳ, ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಲು ಕರ್ನಾಟಕ ರಾಜ್ಯದ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕು, ಎ.ಪಿ.ಎಂ.ಸಿ ಕಾಯಕ ನಿಧಿಯಿಂದ ನಿವೃತ್ತಿ ಪರಿಹಾರ ಮತ್ತು…
ಲೇಖಕ: admin
ಮಡಿಕೇರಿ ಜು.7 NEWS DESK : ಮಡಿಕೇರಿ ತಾಲ್ಲೂಕು ಬಂಟರ ಸಂಘದ ವತಿಯಿಂದ 2023-24 ಮತ್ತು 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ಬಂಟ ಸಮೂಹದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದೆಂದು ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲಾ ಬಂಟರ ಸಂಘದಿಂದ ನಡೆಸಲಾಗುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರವನ್ನು ಈ ಸಾಲಿನಿಂದ ಮಡಿಕೇರಿ ತಾಲ್ಲೂಕು ಬಂಟರ ಸಂಘ ನಡೆಸಲಿದೆ. ಈ ಪ್ರತಿಭಾ ಪುರಸ್ಕಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಂಟ ಸಮೂಹದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಸ್ಪಷ್ಟ ಪಡಿಸಿದರು. ಆಸಕ್ತ ಅರ್ಹ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ಅಂಕ ಪಟ್ಟಿಯ ನಕಲು, ದೂರವಾಣಿ ಸಂಖ್ಯೆ, ಪೋಷಕರ ಆಧಾರ್ ಕಾರ್ಡ್ನೊಂದಿಗೆ ಜು.30ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿ ಪುರಸ್ಕಾರ ಸಮಾರಂಭದ ದಿನಾಂಕವನ್ನು ಮುಂಬರುವ ದಿನಗಳಲ್ಲಿ ತಿಳಿಸಲಾಗುತ್ತದೆಂದು ಹೇಳಿದರು. ಅರ್ಜಿಗಳನ್ನು ಸದಾಶಿವ…
ಕುಶಾಲನಗರ ಜೂ.7 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ಮಳೆಯಿಂದಾಗಿ ಕೊಟ್ಟಿಗೆ ಹಾಗೂ ಮನೆಗೆ ಹಾನಿಯಾದ ಘಟನೆ ನಡೆದಿದ್ದು, ಸ್ಥಳಕ್ಕೆ ಸ್ಥಳೀಯ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವೇಶ್ವರ ಬಡಾವಣೆ ನಿವಾಸಿ ಲೋಕೇಶ್ ಅವರ ಮನೆಯ ಕೊಟ್ಟಿಗೆ ಹಾಗೂ ಮನೆ ಮಳೆಯಿಂದಾಗಿ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ನಿರಂತರ ಮಳೆಯಿಂದ ದನದ ಕೊಟ್ಟಿಗೆ ಹಾನಿಯಾಗಿರುವುದರ ಜೊತೆಗೆ ಮನೆಯ ಗೋಡೆ ದೊಡ್ಡದಾಗಿ ಬಿರುಕು ಬಿಟ್ಡಿದೆ. ತುಂಬಾ ಹಳೆಯ ಗೋಡೆಯಾದ್ದರಿಂದ ಮನೆಯಲ್ಲಿ ವಾಸಿಸದಂತೆ ಪಂಚಾಯಿತಿಂದ ಸೂಚನೆ ನೀಡಲಾಗಿದೆ. ಕೊಟ್ಟಿಗೆ ಹಾಗೂ ಮನೆಯ ಗೋಡೆಗೆ ಹಾನಿಯಾಗಿರುವುದರಿಂದ ಕಂದಾಯ ಇಲಾಖೆ ಸೂಕ್ತ ಪರಿಹಾರವನ್ನು ಒದಗಿಸಿಕೊಡಬೇಕು ಎಂದು ಕೆ.ಬಿ.ಶಂಶುದ್ಧೀನ್ ಒತ್ತಾಯಿಸಿದರು. ಈ ಸಂದರ್ಭ ಸ್ಥಳೀಯರು ಇದ್ದರು.
ಮಡಿಕೇರಿ ಜು.7 NEWS DESK : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎ.ಎಸ್.ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಕಾಶ್ ಆಚಾರ್ಯ ಅವರಿಗೆ ಆದೇಶ ಪತ್ರ ನೀಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಎಸ್.ಐ.ಮುನೀರ್ ಅಹಮ್ಮದ್, ನಗರಸಭಾ ನಾಮ ನಿರ್ದೇಶಿತ ಸದಸ್ಯ ಸದಾ ಮುದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.
ವಿರಾಜಪೇಟೆ ಜು.7 NEWS DESK : ಕೊಡಗು ವಿಶ್ವವಿದ್ಯಾಲಯದ ಸ್ನಾತಕೋತ್ತರ ತರಗತಿಗಳ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಗಳು ಪ್ರಕಟವಾಗಿದ್ದು, ವಿರಾಜಪೇಟೆಯ ಪ್ರತಿಷ್ಠಿತ ಸೆಂಟ್ ಆನ್ಸ್ ಎಂ.ಕಾಂ.ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಥಮ ಎಂ.ಕಾಂ.ಪ್ರಥಮ ಸೆಮಿಸ್ಟರ್ ನ ಒಟ್ಟು 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ರಷ್ಟು ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿಗಳಾದ ಪಿ.ಆರ್.ರೇಷ್ಮಾ ಶೇ.87 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನ ಹಾಗೂ ದಿಯಾ ದೇಚಮ್ಮ ಶೇ.85 ಅಂಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಥಮ ಎಂ.ಕಾಂ. ನಲ್ಲಿ 16 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಎಂ.ಕಾಂ.ತೃತೀಯ ಸೆಮಿಸ್ಟರ್ ನಲ್ಲಿ ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ದ್ವಿತೀಯ ಎಂ.ಕಾಂ. ನಲ್ಲಿ ವಿದ್ಯಾರ್ಥಿನಿ ತಂಶೀರ ಓ.ಎ. ಶೇ.86 ಅಂಕಗಳನ್ನು ಪಡೆದುಕೊಂಡು ತರಗತಿಗೆ ಪ್ರಥಮ ಸ್ಥಾನ ಹಾಗೂ ತಮ್ಮಯ್ಯ ಎ.ಪಿ.ಶೇ.84 ಅಂಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಕಾಲೇಜಿನ…
ಮಡಿಕೇರಿ ಜು.7 NEWS DESK : ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ. ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು ವಿವರಿಸಿದರು. ಅತಿ ಹೆಚ್ಚು ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಜನವರಿಯಿಂದ ಜೂನ್ ಅಂತ್ಯಕ್ಕೆ 70 ರಿಂದ 100 ಇಂಚಿನಷ್ಟು ಮಳೆಯಾಗಿದೆ. ಅತಿಯಾದ ಮಳೆಯಿಂದ ಸಕಾಲದಲ್ಲಿ ಕೃಷಿ ಚಟುವಟಿಕೆ ನಡೆಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಮೂರು ತಿಂಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಕಾಫಿ ಕೃಷಿಗೆ ಕೊಳೆರೋಗ ಎದುರಾಗುವ ಸಾಧ್ಯತೆ ಇದೆ. ಇದರಿಂದ ಮುಂದಿನ ವರ್ಷ ನಿರೀಕ್ಷಿಸಿದಷ್ಟು ಕಾಫಿ…
ಮಡಿಕೇರಿ ಜು.7 NEWS DESK : 26ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವೀರ ಯೋಧರ ಸ್ಮರಣಾರ್ಥ, 1999ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಮಣ್ಣಿನ ವೀರ ಪುತ್ರರು ಮಾಡಿದ ಅತ್ಯುನ್ನತ ತ್ಯಾಗಗಳನ್ನು ಗೌರವಿಸಲು ಮತ್ತು ಸ್ಮರಿಸಲು ಭಾರತೀಯ ಸೇನೆಯು ಘರ್ ಘರ್ ಶೌರ್ಯ ಸನ್ಮಾನ್ ವಿಶೇಷ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಮೂಲಕ ಕುಟುಂಬವನ್ನ ಗೌರವಿಸಿ ನಿಮ್ಮೊಂದಿಗೆ ಭಾರತೀಯ ಸೇನೆ ಸದಾ ಇರುತ್ತದೆ ಎಂಬ ಸಂದೇಶ ಸಾರುವ ಮೂಲಕ ಸೇನೆ ವತಿಯಿಂದ ಸ್ಮರಣಿಕೆ ಮತ್ತು ಕೃತಜ್ಞತಾ ಪತ್ರವನ್ನು ಪ್ರಧಾನ ಮಾಡುವ ಕಾರ್ಯಕ್ರಮ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದಲ್ಲಿ ನಡೆಯಿತು. ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಮತ್ತು ಮೂವರು ಇತರ ಶ್ರೇಣಿಗಳು (ಒಆರ್) ಒಳಗೊಂಡ ಸೇನಾ ನಿಯೋಗದ ಆರು ಮಂದಿ ತಂಡ ಕಾರ್ಗಿಲ್ ಯುದ್ಧ ವೀರರ ಕುಟುಂಬವನ್ನು ಭೇಟಿಯಾಗಿ ಹುತಾತ್ಮ ಯೋಧರ ಸೇವೆಯನ್ನ ಗೌರವಿಸಿ ಸೇನೆ ಸದಾ ಕುಟುಂಬದೊಂದಿಗೆ ಇರುತ್ತದೆ ಎಂಬ ಸಂದೇಶದೊಂದಿಗೆ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಕಾವೇರಪ್ಪನವರ…
ಮಡಿಕೇರಿ ಜು.7 NEWS DESK : ಕರ್ನಾಟಕ ಮುಸ್ಲಿಂ ಯೂನಿಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮುಸ್ಲಿಂ ಜಾಗೃತಿ ಸಮಾಲೋಚನಾ ಸಭೆ ನಡೆಯಿತು. ಮುಸಲ್ಮಾನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ವಿವಿಧ ಹಕ್ಕೊತ್ತಾಯಗಳನ್ನು ಸಭೆ ಮಂಡಿಸಿತು. ಕುಶಾಲನಗರ ಸಮೀಪ ಗುಡ್ಡೆಹೊಸೂರಿನ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಮುಸ್ಲಿಂ ಯೂನಿಟಿಯ ರಾಜ್ಯಾಧ್ಯಕ್ಷ ಜಬ್ಬರ್ ಕಲ್ಬುರ್ಗಿ ಅವರು ಮುಸಲ್ಮಾನರು ಇಂದು ಸಮಾಜಿಕ ಮತ್ತು ರಾಜಕೀಯವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದು, ಸಂವಿಧಾನಾತ್ಮಕ ಹಕ್ಕುಗಳನ್ನು ಪಡೆಯಲು ನಾವೆಲ್ಲರು ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದರು. ಐಕ್ಯತೆಯ ಕೂಗಿನೊಂದಿಗೆ ಮುಸಲ್ಮಾನರ ಏಳಿಗೆಗಾಗಿ ಪ್ರಮುಖ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಬೇಕಾಗಿದೆ ಎಂದು ಸಭೆಯ ಒಪ್ಪಿಗೆ ಪಡೆದರು. *ಹಕ್ಕೊತ್ತಾಯಗಳು* 2ಬಿ ಯ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ರಾಜ್ಯದ ಈ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕೈಬಿಟ್ಟು ಮೀಸಲಾತಿಯನ್ನು ಯಥಾಸ್ಥಿತಿ ಮುಂದುವರಿಸಬೇಕು ಮತ್ತು ಜನಸಂಖ್ಯೆಯನ್ನು ಆಧರಿಸಿ ಶೇ.4 ರಷ್ಟಿರುವ ಮೀಸಲಾತಿಯನ್ನು ಶೇ.8 ಕ್ಕೆ ಏರಿಕೆ ಮಾಡಬೇಕು. ಸ್ಥಳಿಯ ಸಂಸ್ಥೆಗಳಲ್ಲಿರುವ ಓಬಿಸಿಯ…
ಕುಶಾಲನಗರ ಜು.7 NEWS DESK : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸಂಪಾಜೆ ಪ್ರೌಢಶಾಲೆಯ ಶಿಕ್ಷಕ ಹೆಚ್.ಜೆ.ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ಎಸ್.ಮಹೇಂದ್ರ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣೆಯಾಧಿಕಾರಿಯಾಗಿ ಚೇರಂಬಾಣೆ ಅರುಣ ಪದವಿ ಪೂರ್ವ ಪಿಯೂ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ರಮೇಶ್ ಕಾರ್ಯನಿರ್ವಹಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಹಿಂದಿನ ಅವಧಿಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಟಿ. ಸೋಮಶೇಖರ್ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.
ಕುಶಾಲನಗರ ಜು.7 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಎ.ಭೋಜಮ್ಮ ಅವರನ್ನು ಶಾಲೆಯ ಸಿಬ್ಬಂದಿ ಹಾಗೂ ಎಸ್.ಡಿ.ಎಂ.ಸಿ.ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಿವೃತ್ತಗೊಂಡ ಶಿಕ್ಷಕಿ ಭೋಜಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದ ಸಂಪಾಜೆ ಕಂದಾಯ ಹೋಬಳಿಯ ಪ್ರಭಾರ ಉಪ ತಹಶೀಲ್ದಾರ್ ಬಿ.ಜೆ.ವೆಂಕಟೇಶ್, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಪ್ರಗತಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು ಎಂದರು. ಶಾಲೆಯಲ್ಲಿ ಅವರು ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಶಿಕ್ಷಕಿ ಭೋಜಮ್ಮ ಅವರು ಪಾತ್ರರಾಗಿರುವುದು ಹೆಮ್ಮೆಯ ಸಂಗತಿ ಎಂದರು. ಕೂಡಿಗೆ ಕ್ಲಸ್ಟರ್ ನ ಸಿ.ಆರ್.ಪಿ. , ಕೆ.ಶಾಂತಕುಮಾರ್ ಮಾತನಾಡಿ, ಶಿಕ್ಷಕಿ ಭೋಜಮ್ಮ ಅವರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದು, ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಿದೆ ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ಉತ್ತಮ ಸೇವೆ…






