ಲೇಖಕ: admin

ಮಡಿಕೇರಿ ಸೆ.22 NEWS DESK : ಕೊಡವರು ಕೊಡವ ಧರ್ಮಕ್ಕೆ ಸೇರಿದವರಾಗಿರುವುದರಿಂದ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭ ಕೊಡವರು ತಮ್ಮ ಜಾತಿ, ಧರ್ಮವನ್ನು ‘ಕೊಡವ’ ಎಂದೇ ನಮೂದಿಸಬೇಕೆಂದು ಹಿರಿಯ ಕೊಡವ ಅಭಿಮಾನಿಗಳ ಸಂಘದ ಪ್ರಮುಖ ಉಳ್ಳಿಯಡ ಎಂ.ಪೂವಯ್ಯ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡವ ಧರ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕೊಡವ ಸಮಾಜದಿಂದ ಕರೆಯಲಾಗಿದ್ದ ಸಭೆಯಲ್ಲಿ, ಒಂದು ಗುಂಪಿನ ಕೆಲವರು ವಿನಾಕಾರಣ ಗದ್ದಲವೆಬ್ಬಿಸಿ ಸಭೆಯನ್ನೇ ನಡೆಯದಂತೆ ಮಾಡಿರುವುದು ಖಂಡನೀಯವೆಂದು ತಿಳಿಸಿದರು. ಕೊಡವರು ಮೂಲದಲ್ಲಿ ‘ಕೊಡವ ಧರ್ಮ’ದವರೇ ಆಗಿದ್ದಾರೆ. 15ನೇ ಶತಮಾನದವರೆಗೂ ಇತರೆ ಯಾವುದೇ ಧರ್ಮಗಳ ಚೌಕಟ್ಟಿಗೆ ಒಳಪಡದೆ ತಮ್ಮದೇ ಆದ ಬದುಕಿನ ಪದ್ಧತಿ, ರೀತಿ ರಿವಾಜುಗಳೊಂದಿಗೆ ಬದುಕುತ್ತಿದ್ದರು. 16ನೇ ಶತಮಾನದ ಮಧ್ಯಭಾಗ 1540ರಿಂದ ಇಕ್ಕೇರಿ ರಾಜವಂಶಸ್ಥ ಲಿಂಗಾಯಿತ ರಾಜರು 1834ರವರೆಗೆ ಕೊಡಗನ್ನಾಳಿದರು. ಈ ಹಂತದಲ್ಲಿ ಕೊಡಗಿನ ಕೊಡವರ ಕೊಡವ ಧರ್ಮದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದವು, ನಮ್ಮಲ್ಲಿ ಇಲ್ಲದ ಹಬ್ಬಗಳ ಆಚರಣೆಗಳನ್ನು ಅನುಸರಿಸಲಾರಂಭಿಸಿದರು ಎಂದು…

Read More

ಮಡಿಕೇರಿ ಸೆ.22 NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಪಪ್ಪ, ನಗರಸಭೆ ಸದಸ್ಯರಾದ ಸತೀಶ್ ಎಸ್.ಸಿ., ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಕವಿತಾ ಕೆ.ಆರ್. ಇತರರು ಇದ್ದರು. ಶಾಸಕರಾದ ಡಾ,ಮಂತರ್ ಗೌಡ ಅವರು ಮಾತನಾಡಿ ಸರ್ಕಾರ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದರು. ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿಗೆ ಸೇರುವಂತಾಗಬೇಕು. ಪ್ರಾಧ್ಯಾಪಕರು ಸಹ ಹೆಚ್ಚಿನ ಶ್ರಮವಹಿಸಿ ಪಾಠ ಪ್ರವಚನ ಮಾಡಬೇಕು ಎಂದು ಸಲಹೆ ನೀಡಿದರು. ಸರ್ಕಾರ ಈಗಾಗಲೇ…

Read More

ಮಡಿಕೇರಿ ಸೆ.22 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಬೆಂಗಳೂರಿನಲ್ಲಿ ನಡೆದ ಆರ್‍ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಆದ ಘಟನೆ, ಹಾಗೆಯೇ ಇತ್ತೀಚೆಗೆ ಗಣಪತಿ ಉತ್ಸವದಲ್ಲಿ ಹಾಸನದಲ್ಲಿ ನಡೆದ ಅವಘಡದಿಂದ ತುಂಬಾ ಎಚ್ಚರ ವಹಿಸಬೇಕಿದ್ದು, ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜೊತೆ ನಗರಸಭೆ, ಸೆಸ್ಕ್, ಆರ್‍ಟಿಒ, ಇತರೆ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ನಿರ್ದೇಶನ ನೀಡಿದರು. ಮಂಟಪಗಳ ಮೆರವಣಿಗೆ ಮಾರ್ಗದಲ್ಲಿ ವಿದ್ಯುತ್ ಮಾರ್ಗ ಬಗ್ಗೆ ಇನ್ನಷ್ಟು ಎಚ್ಚರವಹಿಸುವುದು, ನಗರಸಭೆಯವರು ಸ್ವಚ್ಛತೆ ಜೊತೆಗೆ ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಹಲವು ಸಮನ್ವಯತೆ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮಂಟಪಗಳ ಎತ್ತರ, ವಿದ್ಯುತ್ ಮಾರ್ಗ ಮತ್ತಿತರ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಆರಂಭದಲ್ಲಿ ಮಾತನಾಡಿದ ನಗರಸಭೆ…

Read More

ಕಾರ್ಕಳ ಸೆ.22 NEWS DESK : ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು.ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ.ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Read More

ಮಡಿಕೇರಿ ಸೆ.22 NEWS DESK : ಛಾಯಾಚಿತ್ರ ಎನ್ನುವುದು ಅದ್ಭುತ ಕಲೆ. ಇಂದೊಂದು ಭಾಷೆಯಾಗಿದ್ದು, ಸಾವಿರ ಪದಗಳಿಗೆ ಸಮಾನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಉಪನ್ಯಾಸ ನೀಡಿದರು. ಒಂದು ಛಾಯಾಚಿತ್ರದ ಮೂಲಕ ಸಾವಿರ ಕಥೆಯನ್ನು ಹೇಳಬಹುದು. ಇದು ಒಂದು ಕ್ಷಣದಲ್ಲಿ ಭಾವನೆಗಳು, ನೆನಪುಗಳು ಮತ್ತು ಸಂದೇಶಗಳನ್ನು ದೃಶ್ಯ ರೂಪದಲ್ಲಿ ಸೆರೆಹಿಡಿಯುತ್ತದೆ. ಇದು ವಿಜ್ಞಾನ ಮತ್ತು ಸೃಜನಾತ್ಮಕತೆಯನ್ನು ಒಳಗೊಂಡಿದ್ದು, ಪ್ರಕೃತಿ, ಜನರು ಮತ್ತು ಘಟನೆಗಳ ಸೌಂದರ್ಯವನ್ನು ಸೆರೆಹಿಡಿದು ನೋಡುಗರ ಹೃದಯವನ್ನು ಸ್ಪರ್ಶಿಸುತ್ತದೆ ಎಂದು ಹೇಳಿದರು. ಛಾಯಾಗ್ರಹಣವು ಕೇವಲ ಚಿತ್ರಗಳನ್ನು ಸೆರೆಹಿಡಿಯುವುದಲ್ಲ, ಅದು…

Read More

ಕೊಡ್ಲಿಪೇಟೆ ಸೆ.22 NEWS DESK : ವಿಶ್ವ ಗುರು ಬಸವಣ್ಣನವರ ಆದರ್ಶ ಹಾಗೂ ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು  ಮಠಾಧಿಪತಿಗಳ ಒಕ್ಕೂಟ ಮಾಡಿತ್ತಿದ್ದು, ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂದು ಗದಗ ಜಿಲ್ಲೆಯ ಡಂಬಳದ  ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠದ  ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿ  ಹೇಳಿದರು. ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿದರೆ ಸಾಲದು. ನಾಡಿನಾದ್ಯಂತ ಬಸವಣ್ಣನ ಆಶಯಗಳನ್ನು ಪ್ರಚಾರ ಪಡಿಸುವ ಕೆಲಸ ವಾಗಬೇಕಿದೆ. ಹೆಣ್ಣುಮಕ್ಕಳಿಗೆ  ಪ್ರಜಾಸತ್ತಾತ್ಮಕ ಧಾರ್ಮಿಕ ಸ್ವಾತಂತ್ರ್ಯ ತಂದುಕೊಟ್ಟ ಪರಿಣಾಮ ಹೆಣ್ಣುಮಕ್ಕಳು ಇಂದು  ವಿಶ್ವವ್ಯಾಪಿ ಸಾಧನೆಯ ಶಿಖರವೇರಲು ಸಾಧ್ಯ ವಾಗಿದೆ. ಹೆಣ್ಣು ಮಕ್ಕಳಿಗೆ ಸಂಸ್ಕಾರಗಳನ್ನು ತಂದುಕೊಟ್ಟು, ಅವರಲ್ಲಿ ಸರ್ವ ಸಮಾನತೆಯ ಮೌಲ್ಯಗಳನ್ನು ತಂದು ಕೊಟ್ಟ ವಿಶ್ವಗುರು ಬಸವಣ್ಣ ಸಮಾಜದಲ್ಲಿ ಮೇಲು ಕೀಳು ಬೇಧಗಳನ್ನು  ದೂರ ಮಾಡಿದ ಸತ್ಪುರುಷ ಎಂದರು.  ಬಸವೇಶ್ವರರ ಆದರ್ಶಗಳನ್ನು ಶಾಲಾ…

Read More

ಪುತ್ತೂರು ಸೆ.22 NEWS DESK : ಮಕ್ಕಳು ಕಿಶೋರಾವಸ್ಥೆಯಿಂದ ತಾರುಣ್ಯಾವಸ್ಥೆಗೆ ಬರುವ ಸಂದರ್ಭದಲ್ಲಿ ಆಗುವ ದೈಹಿಕ ಬದಲಾವಣೆ ಮತ್ತು ಮಾನಸಿಕ ಬದಲಾವಣೆಗಳನ್ನು ಸರಿಯಾಗಿ ತಿಳಿಹೇಳದಿದ್ದರೆ ಅವರು ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಪುತ್ತೂರಿನ ಪ್ರಜ್ಞಾ ಮಾನಸಿಕ ಆರೋಗ್ಯ ಕೇಂದ್ರದ ತಜ್ಞ ಡಾ.ಗಣೇಶ್ ಪ್ರಸಾದ್ ಮುದ್ರಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗ, ಕಾಲೇಜು ಆಂತರಿಕ ದೂರು ಸಮಿತಿ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಬಾಭವನದಲ್ಲಿ ನಡೆದ ತಾರುಣ್ಯಾವಸ್ಥೆಯಲ್ಲಿ ಎದುರಿಸುವ ಮಾನಸಿಕ ತುಮುಲಗಳು ಮತ್ತು ಪರಿಹಾರ ಎನ್ನುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಈ ವಯಸ್ಸಿನಲ್ಲಿ ಉಂಟಾಗುವ ಶಾರೀರಿಕ ಬದಲಾವಣೆ ಇದರಿಂದಾಗುವ ಮನೋಕಾಮನೆಗಳು ಇದನ್ನು ಪರಿಹರಿಸುವ ರೀತಿ ಇವುಗಳ ಬಗ್ಗೆ ಹೆಚ್ಚು ಯೋಚಿಸುವುದರ ಜತೆಯಲ್ಲಿ ಸಾಮಾಜಿಕ ಜವಾಬ್ಧಾರಿಗಳಿಂದ ಉಂಟಾಗುವ ತುಮುಲಗಳು ಅವರನ್ನು ಒತ್ತಡಕ್ಕೆ ಸಿಲುಕಿಸುತ್ತದೆ. ಇದನ್ನು ನಿವಾರಿಸುವುದಕ್ಕೆ ಇದರ ಬಗ್ಗೆ ಸೂಕ್ತ ತಿಳುವಳಿಕೆಯನ್ನು ಪಡೆದುಕೊಳ್ಳುವುದು, ಸರಿಯಾದ ನಿದ್ರೆ, ಉತ್ತಮ ಆಹಾರಾಭ್ಯಾಸಗಳು, ಲಘು…

Read More

ಮಡಿಕೇರಿ NEWS DESK ಸೆ.22 : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಟಿಕೊಪ್ಪ ಪಟ್ಟಣದ ಫ್ಯಾಷನ್ ಜ್ಯುವೆಲ್ಲರಿಯಲ್ಲಿ ಇತ್ತೀಚೆಗೆ ನಡೆದಿದ್ದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಅಲ್ಪನಾ (37), ಬಬಿತಾ (47) ಹಾಗೂ ಪೂಜಾ (29) ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 22.180 ಗ್ರಾಂ ತೂಕದ 2 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸೆ.14 ರಂದು ಅಪರಿಚಿತ ಮೂವರು ಮಹಿಳೆಯರು ಚಿನ್ನಾಭರಣ ಖರೀದಿಯ ನೆಪದಲ್ಲಿ ಸುಂಟಿಕೊಪ್ಪದ ಫ್ಯಾಷನ್ ಜ್ಯುವೆಲ್ಲರಿಗೆ ಬಂದಿದ್ದರು. ಯಾರ ಗಮನಕ್ಕೂ ಬಾರದ ಹಾಗೆ ಅಂದಾಜು 22 ಗ್ರಾಂ ತೂಕದ 2 ಚಿನ್ನದ ಸರವನ್ನು ಕಳವು ಮಾಡಿರುವ ಕುರಿತು ಅಂಗಡಿ ಮಾಲೀಕರು ಸುಂಟಿಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಚಂದ್ರಶೇಖರ್.ಪಿ, ಕುಶಾಲನಗರ ವೃತ್ತದ ಸಿಪಿಐ ದಿನೇಶ್ ಕುಮಾರ್, ಪಿಎಸ್‌ಐ…

Read More

ಸೋಮವಾರಪೇಟೆ ಸೆ.22 NEWS DESK : ಮುಕೊಡ್ಲು ಆಸ್ತಿ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವಜಾಗೊಳಿಸಲು ಒತ್ತಾಯಿಸಿ ಸೆ.26 ರಂದು ಮಡಿಕೇರಿಯಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ. ಸೋಮವಾರಪೇಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಕೊಡ್ಲು ಗ್ರಾಮದ ಕಾಳಚಂಡ ನಾಣಿಯಪ್ಪ ಎಂಬುವರ ಜಮೀನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮ ಪ್ರವೇಶ ಮಾಡಿ ಕಾಫಿ, ಎಲಕಿ ಗಿಡಗಳನ್ನು ಕಡಿದು ಸಂಪೂರ್ಣ ತೋಟವನ್ನು ನಾಶಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಸಂತ್ರಸ್ತರಿಗೆ 30 ಲಕ್ಷ ಪರಿಹಾರ ಕೊಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಆದರೆ ಇಲಾಖೆ ಇದಕ್ಕೆ ಸ್ಪಂದಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ಈ ಧೋರಣೆಯನ್ನು ವಿರೋದಿಸಿ ಸೆ.26 ರಂದು ಮಡಿಕೇರಿಯ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಕ್ಕಲಿಗರ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು ವಿವಿಧ ಗ್ರಾಮಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡು…

Read More

ಮೈಸೂರು NEWS DESK ಸೆ.22 : ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಆರಾಧಿಸಿ, ಸಂಭ್ರಮಿಸುವ ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಿದ್ದು, ಸಮಸ್ತ ಕನ್ನಡಿಗರ ಬಾಳು ಹಸನಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದರು.

Read More