ಮೈಸೂರು NEWS DESK ಸೆ.22 : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಲೇಖಕ: admin
ಮಡಿಕೇರಿ. ಸೆ. 22 NEWS DESK : ಮಡಿಕೇರಿ ಜನೋತ್ಸವ ದಸರಾ ಕಾಯ೯ಕ್ರಮಗಳು ಆಯೋಜಿತವಾಗಿರುವ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ ಕಂಪು ಮೇಳೈಸಲಿದೆ. ಕಾಫಿ ದಸರಾದಲ್ಲಿ ಕಾಫಿ ಕೖಷಿಸಂಬಂಧಿತ ಮತ್ತು ಕೆಫೆ ಸೇರಿದಂತೆ 45 ಮಳಿಗೆಗಳು ಜನರ ಗಮನ ಸೆಳೆಯಲಿವೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವಷ೯ದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾ ಈ ಬಾರಿಯೂ ಉತ್ತಮ ಸ್ಪಂದನ ದೊರಕುವ ನಿರೀಕ್ಷೆಯಿದೆ. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗ ನೀಡಿರುವ ಕಾಫಿ ದಸರಾವನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಮಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜಾ,ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯…
ಮಡಿಕೇರಿ NEWS DESK ಸೆ.22 : ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮೂರ್ನಾಡು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಹರೀಶ್ ಅವರು ಬಹಳ ಹಿಂದಿನಿAದಲೂ ಕೊಡಗಿನ ಅರೆಭಾಷೆ ಗೌಡರ ಕಂದಾಯ, ಶೈಕ್ಷಣಿಕ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಿರುವುದರಿಂದ ಈಗ ಬದಲಾವಣೆ ಮಾಡಿದರೆ ತೊಂದರೆಯಾಗುವ ಸಾಧ್ಯತೆಗಳಿದೆ. ಆದ್ದರಿಂದ ಗಣತಿದಾರರು ಬಂದಾಗ ಅರೆಭಾಷೆ ಗೌಡ ಸಮುದಾಯ ಬಾಂಧವರು ಜಾತಿ ಕಾಲಂ ನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಭಾಷೆಯ ಕಾಲಂ ನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು…
ಮಡಿಕೇರಿ ಸೆ.22 NEWS DESK: ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸೋಮವಾರಪೇಟೆ NEWS DESK ಸೆ.22 : ಜಿ.ಎಸ್.ಟಿ. ಕಡಿತ ಜನಸಾಮಾನ್ಯರಿಗೆ ವರದಾನವೆಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಏರ್ಪಡಿಸಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲಾ ಸರ್ಕಾರಗಳು ಒಮ್ಮೆ ತೆರಿಗೆ ಏರಿಸಿದ ನಂತರ ಮುಂದಕ್ಕೆ ಹೆಚ್ಚಿಗೆ ಮಾಡಿಕೊಂಡೇ ಹೋಗುತ್ತಾರೆ, ಆದರೆ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಏರಿಸಿದ್ದ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ ಎಂದರು. ಕೇಂದ್ರ ಸರ್ಕಾರ 350 ಕ್ಕೂ ಅಧಿಕ ವಸ್ತುಗಳ ಮೇಲಿನ ಜಿ.ಎಸ್.ಟಿ ಯನ್ನು ಕಡಿತಗೊಳಿಸಿ ಜನ ಸಾಮಾನ್ಯರಿಗೆ ನೆರವಾಗಿದ್ದಾರೆ. ಕ್ಯಾನ್ಸರ್ ರೋಗಿಗಳ ಔಷಧಿಗಳನ್ನ ತೆರಿಗೆ ಇಲ್ಲದೆ ಖರೀದಿಸಬಹು ಹಾಗೆ ಶಿಕ್ಷಣದ ವಸ್ತುಗಳಿಗೂ ರಿಯಾಯಿತಿ ನೀಡಿ ಶೈಕ್ಷಣಿಕ ಬೆಳವಣಿಗೆಗೆ ಆದ್ಯತೆ ನೀಡಿದ್ದಾರೆಂದು ಹೇಳಿದರು. ವರ್ತಕರ ಸಂಘದ ಹಿರಿಯ ಸದಸ್ಯ ತಿಮ್ಮಶೆಟ್ಟಿ ಮಾತನಾಡಿ ಕೇಂದ್ರ ಸರ್ಕಾರ ವರ್ತಕರ ಹಿತಾಸಕ್ತಿಯನ್ನು ಗಮದಲ್ಲಿರಿಸಿಕೊಂಡು ಜಿ.ಎಸ್.ಟಿ. ಖಡಿತ ಗೊಳಿಸಿರುವುದು ಸ್ವಾಗತಾರ್ಹ.ಜನಸಾಮಾನ್ಯರಿಗೆ ಹೊರೆಯಾಗುವುದನ್ನು ತಪ್ಪಿಸಿದ್ದಾರೆಂದರು. ಕಾರ್ಯಕ್ರಮದಲ್ಲಿ ಸ್ಥಳೀಯ ವರ್ತಕರ ಸಂಘದ ಅಧ್ಯಕ್ಷ ಧನಂಜಯ್, ಜಿಲ್ಲಾ ಬಿಜೆಪಿ…
ಸೋಮವಾರಪೇಟೆ ಸೆ.22 NEWS DESK : ಸೋಮವಾರಪೇಟೆ ಪಟ್ಟಣದಲ್ಲಿ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಪಟ್ಟಣದ ಸೋಮೇಶ್ವರ ಹಾಗೂ ಬಸವೇಶ್ವರ ದೇವಾಲಯಗಳಲ್ಲಿ ದೇವಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿವೆ. ಈ ಭಾರಿ ನವರಾತ್ರಿ ಉತ್ಸವ ಹನ್ನೊಂದು ದಿನ ನಡೆಯಲಿರುವುದು ವಿಶೇಷ. ಸೋಮೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆನೆಕೆರೆಯಲ್ಲಿ ಗಂಗಾಪೂಜೆ ನೆರವೇರಿಸಿ, ಮಂಗಳ ವಾಧ್ಯಘೋಷಗಳೊಂದಿಗೆ ಮೆರವಣಿಗೆಯ ಮೂಲಕ ದೇವಾಲಯಕ್ಕೆ ತಂದು ಅರ್ಚಕ ಚಿತ್ರಕುಮಾರ ಭಟ್ ಪುರೋಹಿತ್ವದಲ್ಲಿ ಪ್ರತಿಷ್ಠಾಪನೆಯ ವಿಧಿವಿಧಾನಗಳ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಬಸವೇಶ್ವ ದೇವಾಲಯದ ಪ್ರತಿಷ್ಠಾಪನೆಯ ಲೋಹದ ದೇವಿ ಮೂರ್ತಿಯನ್ನು ಆನೆಕೆರೆಯಲ್ಲಿ ಗಂಗೆ ಪೂಜೆಯೊಂದಿಗೆ ದೇವಾಲಯಕ್ಕೆ ತಂದು ಅರ್ಚಕ ಶೇಕಯ್ಯ ಪುರೋಹಿತ್ವದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇಂದಿನಿಂದ ಅ.2ರ ವರೆಗೆ ಪ್ರತಿನಿತ್ಯ ದೇವಿಗೆ ವಿವಿಧ ಅಲಂಕಾರ, ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕುಶಾಲನಗರ, ಸೆ.22 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಕೊಡಗು ಜಿಲ್ಲಾ ಪಂಚಾಯ್ತಿಯ ಸ್ವಚ್ಛತಾ ಅಭಿಯಾನ ಯೋಜನೆ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಸ್ವಚ್ಚತಾ ಹೀ ಸೇವಾ*ಪಾಕ್ಷಿಕ *ಅಭಿಯಾನ 2025 ಕ್ಕೆ ಶ್ರಮದಾನದ ಮೂಲಕ ಚಾಲನೆ ನೀಡಲಾಯಿತು. ಸ್ವಚ್ಛತಾ ಹೀ ಸೇವಾ ಅಭಿಯಾನ ಹಾಗೂ ಶ್ರಮದಾನದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ‘ಸ್ವಚ್ಛ ಭಾರತ್ ಮಿಷನ್ ಮೂಲಕ ದೇಶದ ಜನರಲ್ಲಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಾವು ಸ್ವಚ್ಛ , ಸುಂದರ ಮತ್ತು ಹಸಿರು ಪರಿಸರಕ್ಕೆ ಆದ್ಯತೆ ನೀಡುವ ಮೂಲಕ ನಮ್ಮ…
ಮಡಿಕೇರಿ ಸೆ.22 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣ ಆಗಲಿರುವ ತಾಲ್ಲೂಕು ಕಚೇರಿ ಕಟ್ಟಡ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಈ ಸಂದರ್ಭವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ತಹಶೀಲ್ದಾರ್ ಮೋಹನ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಉಪಾಧ್ಯಕ್ಷರು ಅಲೀರ ರಶೀದ್, ಪಕ್ಷದ ಪ್ರಮುಖರು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಸೆ.22 : ರಾಜ್ಯ ಸರಕಾರದ ಮೂಲಕ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಲ್ಲಿ ಅರೆಭಾಷೆ ಗೌಡರು ಜಾತಿಯನ್ನು GOWDA (ಗೌಡ) ಎಂದು ನಮೂದಿಸುವಂತೆ ಕೊಡಗು ಗೌಡ ವಿದ್ಯಾ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ ಅವರು ರಾಜ್ಯ ಸರಕಾರ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ‘ಅರೆಭಾಷೆ ಗೌಡ’ ಹಾಗೂ ಮಾತೃಭಾಷೆ ಕಾಲಂನಲ್ಲಿ ‘ಅರೆಭಾಷೆ’ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ GOWDA (ಗೌಡ) ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು…
ಮಡಿಕೇರಿ ಸೆ.22 NEWS DESK : ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ಸ್ವಾತಂತ್ರ ಹೋರಾಟಗಾರರ ಭವನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಆಯೋಜಿಸಿದ ಶ್ರೀ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು ನಾಡಿನ ಸಮಸ್ತ ಜನರಿಗೆ ಆ ತಾಯಿಯ ಕೃಪಾಶೀರ್ವಾದ ದೊರೆಯುವಂತಾಗಲಿ ಎಂದು ಹಾರೈಸಿದರು. ನಮ್ಮ ಪುರಾತನ ಆಚರಣೆ ಹಾಗೂ ನಂಬಿಕೆಯಂತೆ, ಈ ನವರಾತ್ರಿಯ ಸಂದರ್ಭವು ಎಲ್ಲಾ ದುಷ್ಟ ಶಕ್ತಿಗಳನ್ನು ಹೋಗಲಾಡಿಸುವ ದೇವಿಯ ಅವತಾರವನ್ನು ಪೂಜಿಸುವ ದಿನವಾಗಿದೆ. ಆ ಶಕ್ತಿ ಮಾತೆಯು ನಾಡಿನ ಎಲ್ಲರಿಗೂ ಒಳಿತನ್ನು ಮಾಡಿ ದುಷ್ಟತನವನ್ನು ದೂರ ಮಾಡಿ ಸಮಾಜವು ಉತ್ತಮ ಬಾಂಧವ್ಯದೊಂದಿಗೆ ಮುಂದುವರೆಯುವಂತೆ ಹರಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರು ಅರುಣ್ ಮಾಚಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ…






