ಲೇಖಕ: admin

ಮಡಿಕೇರಿ ಜೂ.6 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು- 560002 ಈ ವಿಳಾಸಕ್ಕೆ ರಿಜಿಸ್ಟ್ರಾರ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ www.sahithyaacademy.karnataka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ  ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಜೂ.6 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಮತ್ತು ಕಾನ್‍ಬೈಲ್ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕಾನ್ ಬೈಲ್ ಶಾಲಾವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಗಿಡ ನೆಟ್ಟು ಮಾತನಾಡಿ, ಮುಂದಿನ ಪೀಳಿಗೆಗೆ ನೆಲ ಜಲ ಪರಿಶುದ್ಧವಾಗಿರಬೇಕೆಂದರೇ ಪ್ರತಿಯೊಬ್ಬರೂ ಪರಿಸರ ಸಂಕ್ಷರಣೆಯಲ್ಲಿ ತೊಡಗಿಸಿಕೊಳ್ಳಬೇಕು, ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವುದರಿಂದ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ಆರಂಭಗೊಳ್ಳಬೇಕಿದೆ ನಾವು ಆರೋಗ್ಯವಂತರಾಗಿ ಬದುಕಲು ಸಾಧ್ಯವಾಗಲಿದೆ ಎಂದು ಮಂದೋಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ರಮೇಶ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸ್ಮ, ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್, ಶಾಲಾ ಮುಖ್ಯೋಪಾದ್ಯಾಯಿನಿ ಶಾಂತಿರೈ, ಸಹ ಶಿಕ್ಷಕರುಗಳಾದ ಯಶೋಧ, ಕವಿತ, ಶ್ರೀ.ಕ್ಷೇ.ಧ.ಗ್ರಾ.ಯೋ.ಸೇವಾ ಪ್ರತಿನಿಧಿ ಯಶೋಧ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

Read More

ಮಡಿಕೇರಿ ಜೂ.6 NEWS DESK : ಸ್ನಾತಕೋತ್ತರ ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆಗಳಿಗೆ ಪೂರ್ವಭಾವಿಯಾಗಿ, ಆಸಕ್ತ ವಿದ್ಯಾರ್ಥಿಗಳಿಗಾಗಿ ಮೈಸೂರಿನ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ(ಎಂಐಟಿ)ದ ಕ್ಯಾಂಪಸ್‍ನಲ್ಲಿ ಮೂರು ದಿನಗಳ ತರಬೇತಿ ಮತ್ತು ಮಾಕ್ ಟೆಸ್ಟ್ ಆಯೋಜಿಸಲಾಗಿದೆಯೆಂದು ಎಂಐಟಿಯ ಎಂಸಿಯ ವಿಭಾಗದ ಹೆಚ್‍ಒಡಿ ಪ್ರೊ.ಮಂಜುನಾಥ್ ಬಿ. ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜೂ.9 ರಿಂದ 11 ರ ವರೆಗೆ ಎಂಸಿಎ ವಿದ್ಯಾರ್ಥಿಗಳಿಗೆ ಹಾಗೂ ಜೂ.16 ಮತ್ತು 17 ರಂದು ಎಂಬಿಎ ವಿದ್ಯಾರ್ಥಿಗಳಿಗೆ ಮೈಸೂರಿನ ಎಂಐಟಿ ಕ್ಯಾಂಪಸ್ಸಿನಲ್ಲಿ ಉಚಿತ ಪಿಜಿ ಪ್ರವೇಶ ಪರೀಕ್ಷೆ ತರಬೇತಿ ಮತ್ತು ಮಾಕ್ ಟೆಸ್ಟ್ ನಡೆಸಲಾಗುತ್ತದೆಂದು ವಿವರಗಳನ್ನಿತ್ತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇದೇ ಜೂ.22 ರಂದು ಎಂಬಿಎ ಮತ್ತು ಎಂಸಿಗೆ ಪ್ರವೇಶ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸುವ ಬಿಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಯೆಂದರು. ಮೂರು ದಿನಗಳ ತರಬೇತಿ ಸಂಪೂರ್ಣ ಉಚಿತವಾಗಿದ್ದು, ಇದರಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳ ವಾಸ್ತವ್ಯ,…

Read More

ಮಡಿಕೇರಿ ಜೂ.6 NEWS DESK : ಆರ್‌ಸಿಬಿ ವಿಜಯೋತ್ಸವದ ಸಂದರ್ಭ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಭೀಕರ ದುರಂತದ ಹೊಣೆ ಹೊತ್ತು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು, ಕರ್ನಾಟಕದ ಜನತೆ ಕನ್ನಡ ಭಾಷೆ, ಕನ್ನಡಿಗರ ಸಾಧನೆಗಳತ್ತ ಯಾವತ್ತೂ ಅಭಿಮಾನವನ್ನು ತೋರುತ್ತಲೆ ಬಂದಿದ್ದಾರೆ. ಅದೇ ರೀತಿ ಆರ್‍ಸಿಬಿ ಗೆಲುವಿನ ಸಂಭ್ರಮವನ್ನು ಬೆಂಗಳೂರಿನಲ್ಲಿ ಆಚರಿಸಲು ಉತ್ಸುಕರಾಗಿದ್ದರು. ಈ ಬಗ್ಗೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಇರುವುದೇ ದುರಂತಕ್ಕೆ ಕಾರಣವೆಂದು ಆರೋಪಿಸಿದರು. ಐಪಿಎಲ್‍ನಲ್ಲಿ ಗೆಲುವು ಸಾಧಿಸಿದ ಆರ್‍ಸಿಬಿಯನ್ನು ಅಭಿನಂದಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ, ಇಂತಹ ಅಭಿನಂದನಾ ಕಾರ್ಯಕ್ರಮಗಳು ಅತ್ಯಂತ ವ್ಯವಸ್ಥಿತವಾಗಿರಬೇಕು. ಇಲ್ಲಿ ಕಾರ್ಯಕ್ರಮವನ್ನು ಯಾವುದೇ ಪೂರ್ವ ಸಿದ್ಧತೆಗಳಿಲ್ಲದೆ ಹುಡುಗಾಡಿಕೆಯಂತೆ ನಡೆಸಿ ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ದುರದೃಷ್ಟಕರವೆಂದು ಬೇಸರ ವ್ಯಕ್ತಪಡಿಸಿದರು. ನೊಂದವರ ಪರ ಬೆಜೆಪಿ ಮಾತನಾಡಿದರೆ ಕಾಂಗ್ರೆಸ್…

Read More

ಮಡಿಕೇರಿ NEWS DESK ಜೂ.6 : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪ್ರಬಾರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶÀ ಬಿ.ಪರಮೇಶ್ವರ ಪ್ರಸನ್ನ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆಯ ಇಕೋ ಕ್ಲಬ್‌ಗಳು, ಅರಣ್ಯ ಇಲಾಖೆ, ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಮಡಿಕೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಾಭಿವೃದ್ಧಿ ಕೋಶ, ಭಾರತ್ ಸ್ಕೌಟ್ಸ್, ಗೈಡ್ಸ್ನ ಜಿಲ್ಲಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ’ ಎಂಬ ಧ್ಯೇಯ ವಾಕ್ಯದಡಿ ಗುರುವಾರ ನಗರದ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಗಾಂಧಿ…

Read More

ಮಡಿಕೇರಿ NEWS DESK ಜೂ.6 : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನ ಬಳಿಯ ತೋಟದಲ್ಲಿ ನವಜಾತ ಶಿಶುವಿನ ಕಳೇಬರ ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋಗಿದ್ದು, ನಾಯಿಗಳು ಎಳೆದಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅವರು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ತಾಲೂಕು ವೈದ್ಯಾಧಿಕಾರಿ ಇಂದೂಧರ್, ಕುಶಾಲನಗರ ವೃತ ನಿರೀಕ್ಷಕ ದಿನೇಶ್ ಕುಮಾರ್, ಗ್ರಾಮಾಂತರ ಠಾಣಾಧಿಕಾರಿ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ನಡೆಸಿದರು. ನಂತರ ಕಳೇಬರವನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಕ್ತ ತನಿಖೆ ನಡೆಸಿ ಶಿಶುವನ್ನು ಬಿಸಾಡಿ ಹೋದವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆರ್.ಕೆ.ಚಂದ್ರ ಒತ್ತಾಯಿಸಿದರು.

Read More

ಮಡಿಕೇರಿ NEWS DESK ಜೂ.5 : ಖ್ಯಾತ ನಟ ಅನಿರುದ್ಧ್ ನಿರ್ಮಾಣದ, ಸಿಂಹಾದ್ರಿ ಪ್ರೊಡಕ್ಷನ್ಸ್ ನ, ಕೊಡಗಿನ ಪತ್ರಕರ್ತ ಪ್ರಶಾಂತ್ ಟಿ.ಆರ್ ನಿರ್ದೇಶನದ ‘ಅವಳ ಕಣ್ಣಲಿ’ ಕನ್ನಡ ಸಿನಿಮಾದ ಚಿತ್ರೀಕರಣ ಇಂದು ನಗರದಲ್ಲಿ ಆರಂಭಗೊಂಡಿತು. ನಗರದ ‘ಶಕ್ತಿ’ ದಿನಪತ್ರಿಕೆಯ ಕಚೇರಿ ಆವರಣದಲ್ಲಿ ಶಕ್ತಿಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಮಾತನಾಡಿದ ನಿರ್ದೇಶಕ ಪ್ರಶಾಂತ್ ಟಿ.ಆರ್, ಮಡಿಕೇರಿಯ ಬರಹಗಾರ್ತಿ ಸುನಿತಾ ಟಿ.ಆರ್ ಅವರು ರಚಿಸಿರುವ ‘ಸೌಪರ್ಣಿಕ’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ. ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ ಚಿತ್ರದ ಚಿತ್ರೀಕರಣ ಕೊಡಗು, ಮೈಸೂರು ಮತ್ತು ಮಂಗಳೂರಿನಲ್ಲಿ ನಡೆಯಲಿದೆ ಎಂದರು. ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ಚಿತ್ರದಲ್ಲಿ ಸಂಪಾದಕನ ಪಾತ್ರ ನಿರ್ವಹಿಸಿದ್ದು, ಇಂದು ಅವರ ಪಾತ್ರವನ್ನು ಚಿತ್ರೀಕರಿಸಲಾಯಿತು. ಶಕ್ತಿಯ ಉಪ ಸಂಪಾದಕರುಗಳಾದ ಕಾಯಪಂಡ ಶಶಿ ಸೋಮಯ್ಯ, ಜಿ.ಆರ್.ಪ್ರಜ್ವಲ್, ಹಿರಿಯ ಪತ್ರಕರ್ತ ಶ್ರೀಧರ್ ಹೂವಲ್ಲಿ, ನ್ಯೂಸ್ ಡೆಸ್ಕ್ ಸಂಪಾದಕ ಎಸ್.ಕೆ.ಲಕ್ಷ್ಮೀಶ್ ಮತ್ತಿತರ ಪ್ರಮುಖರು…

Read More

ಮಡಿಕೇರಿ NEWS DESK  ಜೂ.5 : ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2021–2025 ಬ್ಯಾಚ್ ನ ಪದವಿ ಪ್ರದಾನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ ಅವರು ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ ಹಾಗೂ ನಿರ್ದೇಶಕ ಡಾ.ಪೊನ್ನಮ್ಮ ಮಾಚಯ್ಯ ಅವರುಗಳು ವಿದ್ಯಾರ್ಥಿಗಳು ಜೀವನಪೂರ್ತಿ ಕಲಿಕೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಬದುಕನ್ನು ಬದಲಾಯಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಚಿಣ್ಣಪ್ಪ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಕೌಶಲ್ಯ ನೀಡುತ್ತಿರುವುದನ್ನು ಪ್ರಶಂಸಿಸಿದರು. ಮಹಾವಿದ್ಯಾಲಯವು ತನ್ನ ಶ್ರೇಷ್ಠತೆಯನ್ನೆರೆಯಿತು,…

Read More

ಮಡಿಕೇರಿ NEWS DESK ಜೂ.5 : ಕಳೆದ ಒಂದು ವರ್ಷದಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಿರೀಕ್ಷೆಗೂ ಮೀರಿ ಸ್ಪಂದಿಸಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಶ್ಲಾಘಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷಗಳನ್ನು ಪೂರೈಸಿದೆ. ಯದುವೀರ್ ಒಡೆಯರ್ ಅವರು ಸಂಸದರಾಗಿ ಒಂದು ವರ್ಷ ಪೂರೈಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಸಂಸದರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದ ಯದುವೀರ್ ಅವರು ಕೊಡಗಿನ ಬಗ್ಗೆ ಕಾಳಜಿ ವಹಿಸದೆ ಮೈಸೂರಿಗೆ ಸೀಮಿತವಾಗಿದ್ದಾರೆ ಎಂದು ಕೆಲವರು ನೀಡಿರುವ ಹೇಳಿಕೆ ಖಂಡನೀಯ. ಮುಂಬರುವ ಜಿ.ಪಂ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಹಾಗೂ ಪತ್ರಕರ್ತರ ಸೋಗಿನ ರಾಜಕಾರಣಿಗಳು ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ಸಂಸದರ ಕುರಿತು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸದರು ಕೊಡಗು…

Read More

ಮಡಿಕೇರಿ ಜೂ.4 NEWS DESK : ಪಿಂಚಣಿ ಅದಾಲತ್‍ನ ಮುಂದಿನ ಸಭೆಯು ಜೂ.9 ರಂದು ಮಧ್ಯಾಹ್ನ 12 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂನ್, 06 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂ.9 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More