ಸೋಮವಾರಪೇಟೆ, ಸೆ.19 NEWS DESK : ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಸೋಮವಾರಪೇಟೆಯ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬೆಳಿಗ್ಗೆ ಆರಂಭವಾದ ಟ್ರಯಲ್ಸ್ನಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸಂದರ್ಭ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟ್ರೀಯ ಹ್ಯಾಂಡ್ಬಾಲ್ ಆಟಗಾರ ಗ್ರೀನಿಡ್ಜ್ ಡಿ.ಕುನ್ಹಾ ಟ್ರಯಲ್ಸ್ ಉದ್ಘಾಟಿಸಿ, ಆಟಗಾರರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೆವರೆಂಡ್ ಫಾದರ್ ಅವಿನಾಶ್ ಹಾಜರಿದ್ದರು. ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆಗೆ, ಗ್ರೀನಿಡ್ಜ್ ಡಿ . ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ BTCG ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರು ಪ್ರಸಾದ್, ಹಾಗೂ ಆತಿಥೇಯ ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಕೆ.ಆರ್ ಅವರನ್ನೊಳಗೊಂಡ ಸಮಿತಿಯು ನೇತೃತ್ವ ವಹಿಸಿತು. ಸುಮಾರು…
ಲೇಖಕ: admin
ಸೋಮವಾರಪೇಟೆ ಸೆ.19 NEWS DESK : ಕಾಗಡಿಕಟ್ಟೆ ಆರೋಗ್ಯ ಉಪಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸರ್ಕಾರ ಗರ್ಭಿಣಿಯರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆ ನಿವಾರಣೆ, ಸೀಮಂತ, ಅನ್ನಪ್ರಾಶನ ಮತ್ತು ಪೋಷಣಾ ಅಭಿಯಾನದ ಬಗ್ಗೆ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ದಿವ್ಯ ತಿಳಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ರಶೀದ, ಪಿಡಿಓ ಸ್ಮಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಪೂರ್ಣಿಮ, ಸಿಬ್ಬಂದಿಗಳಾದ ಮಧುಸೂದನ್, ವಿಶ್ವರೂಪಚಾರ್ಯ ಇದ್ದರು.
ವಿರಾಜಪೇಟೆ ಸೆ.20 NEWS DESK : ವಿರಾಜಪೇಟೆ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಸೆ.24 ರಂದು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಭಾರತೀಯ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಜಿಲ್ಲಾ ಪೋಲಿಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಗುವುದು ಎಂದು ಹೇಳಿದರು. ಕಾರ್ಯದರ್ಶಿ ಪುಗ್ಗೆರ ನಂದಾ ಮಾತನಾಡಿ, ಹುತಾತ್ಮರ ದಿನಾಚರಣೆಯಲ್ಲಿ ಅತಿಥಿಗಳಾಗಿ ಮುಖ್ಯಮಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಒಲಂಪಿಯನ್ ಲೆಪ್ಟಿನೆಂಟ್ ಕರ್ನಲ್ ಬಾಳೆಯಡ ಕೆ.ಸುಬ್ರಮಣಿ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಡಿ.ವೈ.ಎಸ್.ಪಿ ಮೋಹನ್ ಕುಮಾರ್, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ ಪಾಲ್ಗೊಳ್ಳಲಿದ್ದಾರೆ…
ಸೋಮವಾರಪೇಟೆ ಸೆ.20 NEWS DESK : ಮಾದಾಪುರ ಬಿ.ಚನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯು ಕಾಲೇಜಿನ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಸೋಮವಾರಪೇಟೆ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪಿಯು ಕಾಲೇಜು ತಂಡ ಮತ್ತು ಬಾಲಕರ ವಿಭಾಗದಲ್ಲಿ ಕುಶಾಲನಗರ ವಿವೇಕಾನಂದ ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಿಟಿಸಿಜಿ ಬಾಲಕಿಯರ ತಂಡ ಫೈನಲ್ನಲ್ಲಿ ಕೊಡ್ಲಿಪೇಟೆ ಪಿಯು ಕಾಲೇಜು ತಂಡದ ವಿರುದ್ಧ ಜಯಗಳಿಸಿತು. ವಿಜೇತ ತಂಡದ ಪರವಾಗಿ ಹೆಚ್.ಆರ್.ಜೀವಿತ, ಹೆಚ್.ಆರ್.ದಿಶಿತಾ, ಧನಲಕ್ಷ್ಮಿ, ವೈಭವಿ ಹಾಗೂ ಕೊಡ್ಲಿಪೇಟೆ ತಂಡದ ಪರವಾಗಿ ಯಮುನಾ, ಪುಷ್ಪಲತ ಆದಿಡದರು. ಬಾಲಕರ ವಿಭಾಗದಲ್ಲಿ ವಿವೇಕಾನಂದ ಕಾಲೇಜು ತಂಡ, ಕುಶಾಲನಗರ ಜ್ಞಾನಭಾರತಿ ಪಿಯು ಕಾಲೇಜು ತಂಡವನ್ನು ಮಣಿಸಿತು. ವಿಜೇತ ತಂಡದ ಪರವಾಗಿ ಹೇಮಂತ್, ಅರುನ್ ಇಬ್ರಾಹಿಂ, ಧಿರೇಂದ್ರಮೋದಿ, ಹರ್ಷ, ಉಮರ್ಸಾದ್, ಜ್ಞಾನಭಾರತಿ ತಂಡದ ಪರವಾಗಿ ಮಹಮ್ಮದ್ ಅನ್ವರ್, ರಾಕೇಶ್, ಅಕ್ಷಯ್, ಮೋಹಿತ್ ಆಟವಾಡಿದರು. ಮಾದಪುರ ಪ್ಲಾಂಟರ್ಸ್ ಕ್ಲಬ್ ಹಾಗೂ ಚನ್ನಮ್ಮ ಕಾಲೇಜಿನ ಒಳಂಗಣ ಕ್ರೀಡಾಂಗಣದಲ್ಲಿ ಪಂದ್ಯಾಟಗಳು…
ಮಡಿಕೇರಿ ಸೆ.20 NEWS DESK : ಉತ್ತರ ಪ್ರದೇಶದ ಲಕ್ನೋದ ಬಿಬಿಡಿ ಯು.ಪಿ. ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ನಡೆದ ಯೋನೆಕ್ಸ್ ಸನ್ ರೈಸ್ ಡಾ.ಅಕಿಲೇಶ್ ದಾಸ್ ಗುಪ್ತ ಮೆಮೋರಿಯಲ್ ಆಲ್ ಇಂಡಿಯಾ ಸೀನಿಯರ್ ರಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ದಿಯಾ ಭೀಮಯ್ಯ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ದಿಯಾ ಭೀಮಯ್ಯ ಕೇರಳದ ಜೊರ್ನ್ ಜೇಸನ್ ಜೊತೆಯಾಟ (ಮಿಶ್ರ ಡಬಲ್ಸ್ ) ನಲ್ಲಿ ಪ್ರಥಮ ಹಾಗೂ ಮಹಿಳೆಯರ ಡಬಲ್ಸ್ ನಲ್ಲಿ ಹರಿಯಾಣದ ಬಾರುನಿ ಪರುಸ್ವಾಲ್ ಜೊತೆಗೂಡಿ ತೃತೀಯ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ನಗರದ ದಸರಾ ಸಮಿತಿ ಕಚೇರಿಯಲ್ಲಿ ಅಲಂಕಾರ ಸಮಿತಿಯ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಎಂ.ಚೇತನ್, ಕಾರ್ಯದರ್ಶಿಯಾಗಿ ಜಿ.ಎನ್.ಭಾರತ್, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಚಿಯಾಗಿ ರಫೀಕ್ (ದಾದಾ), ಸಹ ಖಜಾಂಚಿಯಾಗಿ ಲಿಲ್ಲಿ ಗೌಡ, ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್, ಸಂಚಾಲಕರುಗಳಾಗಿ ಬಿ.ಕೆ.ನವೀನ್ ಹಾಗೂ ಕಲಿಲ್ ಭಾಷಾ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.19 NEWS DESK : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಜನರಲ್ ಜಿಲ್ಲಾ ತಿಮ್ಮಯ್ಯ ಕ್ರೀಡಾಂಗಣದ ಬಳಿ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ 60 ರಿಂದ 69 ವಯೋಮಿತಿಯ ಪುರುಷ ಹಾಗೂ ಮಹಿಳೆಯರಿಗೆ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೆಯೇ ಬಕೆಟಿಗೆ ಬಾಲ್ ಎಸೆಯುವ 70 ರಿಂದ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಬಕೇಟಿಗೆ ಬಾಲ್ ಹಾಕುವ ಕ್ರೀಡೆ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಏಕಪಾತ್ರ ಅಭಿನಯ ಗಾಯನ ಸ್ಪರ್ಧೆ ನಡೆಯಿತು. 60 ರಿಂದ 69 ವಯಸ್ಸು ಮತ್ತು 70 ರ ಮೇಲ್ಪಟ್ಟ ವಯಸ್ಸಿನ ವಿಭಾಗವಾರು ಪುರುಷ ಹಾಗೂ ಮಹಿಳೆಯರಿಗೆ…
ಮಡಿಕೇರಿ ಸೆ.20 NEWS DESK : ಪೋಷಣ್ ಮಾಸಾಚರಣೆ ಮತ್ತು ಸ್ವಾಸ್ಥನಾರಿ ಸಶಕ್ತ ಕುಟುಂಬ ಅಭಿಯಾನದಡಿ ಸ್ಟೋನ್ ಹಿಲ್ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಬಾಣಂತಿ, ಮಕ್ಕಳು, ಅಂಗನವಾಡಿ ಕಾರ್ಯಕತೆಯರು ಮತ್ತು ಸಹಾಯಕರಿಗೆ ಆರೋಗ್ಯ ತಪಾಸಣೆ ನಡೆಸಿ ಅನೀಮಿಯ, ಹೆಚ್ಬಿ, ಬಿಪಿ, ಶುಗರ್ ತಪಾಸಣೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಶಿಶು ಮತ್ತು ಬಾಲ್ಯ ಪೋಷಣ್ ಅಭ್ಯಾಸಗಳ ಬಗ್ಗೆ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ, ಪೋಷಣ್ ಬಿ ಪಡಾಯಿ ಬಿ ಕುರಿತು ಮಾಹಿತಿ ನೀಡಿದರು. ಅಪೌಷ್ಟಿಕತೆ ಹೋಗಲಾಡಿಸುವಲ್ಲಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಇಲಾಖೆಯ ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ನೆರೆದಿದ್ದ ಮಹಿಳೆಯರಿಗೆ ಆರೋಗ್ಯಕರ ಜೀವನ ಶೈಲಿ ಅಭ್ಯಾಸಗಳ ಕುರಿತು ಮಾರ್ಗದರ್ಶನ ನೀಡಿದರು. ಪ್ರಸವ ಪೂರ್ವ ಆರೈಕೆ,…
ಬೆಂಗಳೂರು NEWS DESK ಸೆ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು >>> ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ ವೇತನ” ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ. ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್…
ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರದ ಅಶೋಕಪುರ ಬಡಾವಣೆ ನಿವಾಸಿ ಅರ್ಜುನ್ (35) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.






