ಗೋಣಿಕೊಪ್ಪ ಆ.29 NEWS DESK : ಶಿಸ್ತುಬದ್ಧ ಶಿಕ್ಷಣ ನೀಡಲು ಸಾಧ್ಯವಾದರೆ ಮಾತ್ರ ಸಮಾಜದ ಯಶಸ್ಸು ಹಾಗೂ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರವು ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ, ಶಾಸಕಾಂಗ ಹಾಗೂ ಕಾರ್ಯಾಂಗದ ಪ್ರಮುಖ ಜವಾಬ್ದಾರಿಗಳಲ್ಲಿ ಶಿಕ್ಷಣ ನೀಡುವುದೂ ಒಂದಾಗಿದೆ. ಆದರೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಾವು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಇದರ ಪರಿಣಾಮವಾಗಿ ಖಾಸಗಿ ಶಾಲೆಗಳು ಗುಣಮಟ್ಟದ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿದವು. ಆದರೆ ಕಾಲಕ್ರಮೇಣ ಶಿಕ್ಷಣ ಕ್ಷೇತ್ರವು ವ್ಯಾಪಾರೀಕರಣದತ್ತ ಸಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು. ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೈಗೊಂಡಿರುವ…
ಲೇಖಕ: admin
ಮಡಿಕೇರಿ, NEWS DESK ಆ. 29: “ಶಿಸ್ತುಬದ್ಧ ಜೀವನವು ಸಾಧನೆಯ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು” ಎಂದು 19 ಸಿ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಅವರು ಕರೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡದ ಮನೋಭಾವ, ನಾಯಕತ್ವ ಗುಣ ಹಾಗೂ ಸಹಕಾರ ಮನೋಭಾವವನ್ನು ಬೆಳೆಸುವುದರ ಜೊತೆಗೆ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ್ ಬಿ. ಅವರು, “ಭಾರತವನ್ನು ಶಕ್ತಿಶಾಲಿ ಹಾಗೂ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದರು. ಆರೋಗ್ಯವಂತ…
ಮಡಿಕೇರಿ, NEWS DESK ಆ. 29: ಕೊಡಗು ವಿದ್ಯಾಲಯದ ಶ್ರೀ ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ–2026 ಅನ್ನು ಆಯೋಜಿಸಲಾಯಿತು. ಭರತನಾಟ್ಯ ಕಲಾವಿದೆ ಹಾಗೂ ಸಾಂಸ್ಕೃತಿಕ ರಾಯಭಾರಿ ಮುಕ್ಕಾಟಿರ ಶಿಲ್ಪಾ ನಂಜಪ್ಪ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಬ್ರಹ್ಮಗಿರಿ ಸಹೋದಯ ಸಿ.ಬಿ.ಎಸ್.ಇ. ಶಾಲೆಗಳ ವ್ಯಾಪ್ತಿಯ 7 ಶಾಲೆಗಳ 12 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಹಾಡು ಮತ್ತು ನೃತ್ಯ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಅಂಕುರ್ ಪಬ್ಲಿಕ್ ಶಾಲೆ, ನಾಪೋಕ್ಲು; ಎಸ್.ಎಂ.ಎಸ್. ಶಾಲೆ, ವಿರಾಜಪೇಟೆ; ಕೆ.ವಿ.ಜಿ. ಶಾಲೆ, ಸುಳ್ಯ; ಸೇಯಿಂಟ್ ಅನ್ಸ್ ಶಾಲೆ, ಸಿದ್ದಾಪುರ; ಎ.ಎಲ್.ಜಿ. ಕ್ರೇಸೆಂಟ್ ಶಾಲೆ, ಮಡಿಕೇರಿ; ನ್ಯಾಷನಲ್ ಅಕಾಡೆಮಿ, ಗೋಣಿಕೊಪ್ಪ ಹಾಗೂ ಕೊಡಗು ವಿದ್ಯಾಲಯ, ಮಡಿಕೇರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ಮನಮೋಹಕ ನೃತ್ಯ ಹಾಗೂ ಸುಮಧುರ ಗಾಯನ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಮುಖ್ಯ ಅತಿಥಿ ಮುಕ್ಕಾಟಿರ ಶಿಲ್ಪಾ ನಂಜಪ್ಪ ಮಾತನಾಡಿ, “ಸ್ಪರ್ಧೆಯಲ್ಲಿ ಗೆಲುವೊಂದೇ ಮುಖ್ಯವಲ್ಲ. ಸಾಕಷ್ಟು…
ಮಡಿಕೇರಿ, NEWS DESK ಆ.29 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕ ವಿಧಾನಗಳ ಮೂಲಕ ಸುಸ್ಥಿರವಾಗಿ ನಿರ್ವಹಿಸಲು ಹೆಚ್ಚಿನ ಒತ್ತು ನೀಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ನಗರಸಭೆ ಸಭಾಂಗಣದಲ್ಲಿ ದಕ್ಷಿಣ ಕೊಡಗಿನ ‘ಕ್ಲೀನ್ ಕೂರ್ಗ್ ಇನೀಷಿಯೇಟಿವ್’ ಸಂಸ್ಥೆ ವತಿಯಿಂದ ಹಸಿ ಕಸ ನಿರ್ವಹಣೆ ಕುರಿತು ನೀಡಿದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಬಳಿಕ ನಗರಸಭಾ ಆಡಳಿತ ಮಂಡಳಿಯೊAದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಯಾವುದೇ ಕಾರಣಕ್ಕೂ ನಗರದ ಅಂಚಿನ ಸ್ಟೀವರ್ಟ್ ಹಿಲ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಅಸಮರ್ಪಕ ತ್ಯಾಜ್ಯ ನಿರ್ವಹಣೆಯ ರೀತಿಯಲ್ಲಿ ಕಸ ವಿಲೇವಾರಿ ನಡೆಯಬಾರದು. ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ತ್ಯಾಜ್ಯ ನಿರ್ವಹಣೆಯನ್ನು ಕೋರಮಂಗಲದಲ್ಲಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಲಾಗುತ್ತಿದೆ. ನಗರಸಭಾ ಆಡಳಿತ ಮಂಡಳಿ ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿ, ಅಲ್ಲಿನ ಉತ್ತಮ ಅಂಶಗಳನ್ನು ಮಡಿಕೇರಿಯಲ್ಲೂ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಂತರ್ ಗೌಡ ಸಲಹೆ ನೀಡಿದರು. ದಕ್ಷಿಣ ಕೊಡಗಿನ ‘ಕ್ಲೀನ್…
ಮಡಿಕೇರಿ, NEWS DESK ಆ.29 : ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆಯು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಪಿ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತಿತರ ಸಂಬಂಧ ಕಳೆದ 8 ತಿಂಗಳಲ್ಲಿ 237 ಪ್ರಕರಣಗಳನ್ನು ದಾಖಲಿಸಲಾಗಿದ್ದು, 333 ಆರೋಪಿಗಳನ್ನು ಬಂಧಿಸಲಾಗಿದೆ. ಮಾದಕ ವ್ಯಸನಕ್ಕೆ ತುತ್ತಾಗದಂತೆ ಹಾಡಿ ಪ್ರದೇಶಗಳು ಸೇರಿದಂತೆ ಇತರೆ ಕಡೆಗಳಲ್ಲಿ ಜಾಗೃತಿ ಮೂಡಿಸಿ, ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಪೊಲೀಸ್ ಇಲಾಖೆಯಿಂದ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಪ್ರತೀ ತಿಂಗಳು ಪೊಲೀಸ್ ಠಾಣೆಗಳಲ್ಲಿ ಪ್ಲಾಂಟರ್ಸ್ ಮತ್ತು ಮಾಲೀಕರೊಂದಿಗೆ ಸಭೆ ನಡೆಸಲಾಗುತ್ತಿದ್ದು, ರಾಜ್ಯದ…
ಮಡಿಕೇರಿ, NEWS DESK ಆ 29: ಕೊಡಗು ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹೋದರ–ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಹಾಗೂ ಆಡಳಿತ ಮುಖ್ಯಸ್ಥ ರವಿ ಪಿ. ಉದ್ಘಾಟಿಸಿದರು. ರಕ್ಷಾ ಬಂಧನದ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ಸಹೋದರ–ಸಹೋದರಿಯರ ನಡುವಿನ ಬಾಂಧವ್ಯವನ್ನು ಬಿಂಬಿಸುವ ನಾಟಕವನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಕ್ಷಾ ಬಂಧನದ ಮಹತ್ವ, ಕುಟುಂಬ ಸಂಬಂಧಗಳ ಮೌಲ್ಯ ಮತ್ತು ಪರಸ್ಪರ ಪ್ರೀತಿ–ಗೌರವದ ಸಂದೇಶವನ್ನು ಸುಂದರವಾಗಿ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 8ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆರು ಗುಂಪುಗಳಾಗಿ ವಿಭಜಿಸಿಕೊಂಡು ಮಡಿಕೇರಿ ನಗರದ ಕೊಡಗು ವಿದ್ಯಾಲಯ ಆಪರ್ಚುನಿಟಿ ಶಾಲೆ ಮತ್ತು ಶಕ್ತಿ ವೃದ್ಧಾಶ್ರಮ, ಸಿ.ಎಂ.ಸಿ. ಹಾಗೂ ಜನತಾ ಬಜಾರ್, ಪೊಲೀಸ್ ಠಾಣೆ, ಹಾಪ್‌ಕಾಮ್ಸ್ ಮತ್ತು ಅಂಚೆ ಕಚೇರಿ,…
ಮಡಿಕೇರಿ, NEWS DESK ಆ.29: ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷ ಮಂದೀರ ತೇಜಸ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಇದೇ ಸಂದರ್ಭ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಪ್ರೋತ್ಸಾಹಿಸಲಾಯಿತು. ಹಾಕತ್ತೂರಿನ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 95.68 ಅಂಕ ಪಡೆದ ಬಿಳಿಗೇರಿ ಗ್ರಾಮದ ದೇವಜನ ಎಂ. ಬಾಲಕೃಷ್ಣ ಅವರ ಪುತ್ರ ಮನಿಶ್ ಡಿ.ಬಿ. ಅವರಿಗೆ ಪ್ರಥಮ ಹಾಗೂ ಹಾಕತ್ತೂರಿನ ಅಮ್ಮಾಟಂಡ ಎಂ. ಮಾದಪ್ಪ ಅವರ ಪುತ್ರಿ ಅಧಿತಿ ಎ.ಎಂ. (ಶೇ. 90.08) ಅವರಿಗೆ ದ್ವಿತೀಯ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಗ್ಗೋಡ್ಲು ಗ್ರಾಮದ ಹೊನ್ನುಕೋಟಿ ಎಸ್. ಸಂಗೀತ ಅವರ ಪುತ್ರ ಭವಿಷ್ ಪಿ.ಎ. (ಶೇ. 97.50 ಅಂಕ) ಅವರಿಗೆ ಪ್ರಥಮ ಹಾಗೂ ಕಗ್ಗೋಡ್ಲುವಿನ ಸತೀಶ್ ಸಿ.ಎಸ್. ಅವರ ಪುತ್ರ ಸಂದೀಪ್ ಶರ್ಮ ಸಿ.ಎಸ್. (ಶೇ. 97.17) ಅವರಿಗೆ ದ್ವಿತೀಯ ಬಹುಮಾನವನ್ನು ಪ್ರದಾನ ಮಾಡಲಾಯಿತು.…
ಮಡಿಕೇರಿ NEWS DESK ಆ.29 : ಅಮ್ಮತ್ತಿಯ ಸಂತ ಅಂತೋನಿಯವರ ದೇವಾಲಯದ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66 ಕೆವಿ ಸಾಮರ್ಥ್ಯದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಅಮ್ಮತ್ತಿ ದೇವಾಲಯದ ಹಾಗೂ ವಿರಾಜಪೇಟೆ ತಾಲ್ಲೂಕು ಘಟಕದ ಸದಸ್ಯರು ಇಂದು ಶಾಸಕರ ಗೃಹ ಕಚೇರಿಯಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನೂತನ ದೇವಾಲಯ ನಿರ್ಮಿಸಲು ಭಕ್ತಾದಿಗಳು ನಿರ್ಧರಿಸಿದ್ದು, ಪ್ರಸ್ತಾವಿತ 66 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ದೇವಾಲಯದ ಕಾಮಗಾರಿಗೆ ತೊಡಕು ಉಂಟಾಗಲಿದೆ. ಆದ್ದರಿಂದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಪ್ರಮುಖರು ಕೋರಿದರು. ಮನವಿಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿದ್ಯುತ್ ಇಲಾಖೆಯ ಎಇ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಮಗಾರಿಯ ಸ್ಥಳ ಬದಲಾವಣೆಗೆ ಸಂಬ0ಧಿಸಿದ0ತೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಭೇಟಿಯ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್, ವಿರಾಜಪೇಟೆ…
ಮಡಿಕೇರಿ NEWS DESK ಆ.29 : ಪರಿಷ್ಕರಣೆ ಮಾಡಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಜಿಲ್ಲಾ ಅಧ್ಯಕ್ಷ ದಿನೇಶ್ ಜಿ.ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೇಶ್ ಎಚ್.ಎಸ್. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್‌ಗಳು, ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಅತಿಥಿ ಶಿಕ್ಷಕರಾಗಿ…
ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಶಿಕಾರಿಪುರದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ವಾಹನಗಳಿಗೆ ಹಾನಿ ಮಾಡಲಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗೋರಕ್ಷಕರ ಮೇಲೆ ದಾಳಿ ನಡೆಸಿದ ಎಲ್ಲಾ ಆರೋಪಿಗಳನ್ನು ಹಾಗೂ ಘಟನೆಯ ಹಿಂದಿರುವ ಸಂಚುಕೋರರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020ರ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳು ಹಾಗೂ ಪರವಾನಗಿ ಇಲ್ಲದ ಮಾಂಸದ…






