ಗೋಣಿಕೊಪ್ಪ ಜೂ.3 NEWS DESK : ಪೌರಕಾರ್ಮಿಕರ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ತಾಳವುದು ಸರ್ಕಾರದ ನಡೆಗೆ ಶೋಭೆಯಲ್ಲ ಎಂದು ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ನೆಲ್ಲಿರ ಚಲನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋಣಿಕೊಪ್ಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಪೌರಕಾರ್ಮಿಕರ ಕನಿಷ್ಠ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಡೆದಿದೆ. ಬಹಳಷ್ಟು ನೌಕರರ ಖಾಯಂಗೊಳಿಸಲಾಗಿದೆ. ವೇತನವನ್ನು ಹೆಚ್ಚಿಸಲಾಗಿದೆ. ಯಡಿಯೂರಪ್ಪ ಸರ್ಕಾರ ಮತ್ತು ಜಗದೀಶ್‍ಶೆಟ್ಟರ್ ಮುಖ್ಯ ಮಂತ್ರಿಗಳಾಗಿದ್ದಾಗ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವ ಎಲ್ಲ ಪ್ರಯತ್ನಗಳು ನಡೆದಿದೆ. ಆದರೆ, ಇಂದಿನ ಕಾಂಗ್ರೆಸ್ ಸರ್ಕಾರ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರ್ಲಕ್ಷ ಹೊಂದಿರುವುದು ಪೌರಕಾರ್ಮಿಕರ ಮೇಲೆ ಕಾಳಜಿ ಮತ್ತು ಗೌರವ ಇಲ್ಲ ಎಂಬುದನ್ನು ಸಾಬೀತುಪಡಿಸುವ ನಡೆಯಾಗಿದೆ ಎಂದು ಆರೋಪಿಸಿದರು. ವಿರಾಜಪೇಟೆಯಲ್ಲಿ ಪೌರಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ. ಅವರನ್ನು ಬೆದರಿಸಿ ಅವರ ಹೋರಾಟವನ್ನು ಮೋಟಕುಗೊಳಿಸುವ ಪ್ರಯತ್ನ ನಡೆದಿರುವುದು ವಿಪರ್ಯಾಸ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ…
ಲೇಖಕ: admin
ಸುಂಟಿಕೊಪ್ಪ ಜೂ.3 NEWS DESK : ಅತ್ತೂರು ನಲ್ಲೂರಿನಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪ ಹಾಗೂ ಸಿಹಿ ಹಂಚುವ ಮೂಲಕ ಶಿಕ್ಷಕರು ಸ್ವಾಗತಿಸಿದರು. ಶಾಲೆ ಆರಂಭೋತ್ಸವದ ಅಂಗವಾಗಿ ಗ್ರಾಮದ ಮುಖ್ಯ ಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯನಿ ನಯನ, ಗ್ರಾಮ ಪಂಚಾಯಿತಿ ಸದಸ್ಯ ಆರ್.ಆರ್.ಮೋಹನ್, ಶಾಲಾಭಿವೃದ್ಧಿ ಅಧ್ಯಕ್ಷ ಶಬೀರ್, ಎಸ್‍ಡಿಎಂಸಿ ಗೌರವಾಧ್ಯಕ್ಷ ಮುಸ್ತಾಫ, ಸದಸ್ಯರುಗಳಾದ ರಂಸೀನ, ಮಾಲ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.
ಮಡಿಕೇರಿ ಜೂ.3 NEWS DESK : ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅವರು ಅತಿಯಾದ ಮಳೆ ಮತ್ತು ವನ್ಯಜೀವಿಗಳ ದಾಳಿಯಿಂದ ಕೊಡಗಿನ ಜನರಿಗೆ ಆಗುತ್ತಿರುವ ಕಷ್ಟನಷ್ಟದ ಕುರಿತು ವಿವರಿಸಿದರು. ರಾಜಕೀಯ, ನೈಸರ್ಗಿಕ ಮತ್ತು ಆಡಳಿತಾತ್ಮಕ ಎಂಬ ಮೂರು ರೀತಿಯ ಸಮಸ್ಯೆಗಳು ಕೊಡಗು ಜಿಲ್ಲೆಯನ್ನು ಅತಿಯಾಗಿ ಕಾಡುತ್ತಿವೆ. ಹಿಂದೆ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದ ಜಿಲ್ಲೆ ಇಂದು ಕೇವಲ ಎರಡು ಕ್ಷೇತ್ರಗಳಿಗೆ ಸೀಮಿತಗೊಂಡು ಒಂದು ಕ್ಷೇತ್ರದಿಂದ ವಂಚಿತಗೊಂಡಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಮತ್ತೆ ಮೂರು ವಿಧಾನಸಭಾ ಕ್ಷೇತ್ರಗಳನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು. ಗುಡ್ಡಗಾಡು, ನದಿತೊರೆಗಳ ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಅತಿವೃಷ್ಟಿಯಿಂದ ಭೂಕುಸಿತ ಮತ್ತು ಪ್ರವಾಹ ಸಂಭವಿಸಿ ಸಾಕಷ್ಟು ಹಾನಿಯಾಗುತ್ತಿದೆ. ರಸ್ತೆಗಳೆಲ್ಲವೂ ಹದಗೆಟ್ಟು ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತಿದೆ. ಇದರೊಂದಿಗೆ ವನ್ಯಜೀವಿಗಳ ದಾಳಿ ನಿರಂತರವಾಗಿದೆ. ಹುಲಿ, ಆನೆ,…
ಚೆಟ್ಟಳ್ಳಿ ಜೂ.3 NEWS DESK : ಕೊಡಗಿನ ಪ್ರಸಿದ್ಧ ಬೇಡು ಹಬ್ಬಗಳಲ್ಲಿ ಒಂದಾಗಿರುವ ‘ಪಾರಣ ನಮ್ಮೆ’ ಕೊಡಗಿನ ಕೊನೆಯ ಬೋಡ್ ನಮ್ಮೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೇರಳ್ಳಿನಾಡಿನ ಪಾರಣಮಾನಿ ಎಂಬಲ್ಲಿ ಕೃತಕ ಕುದುರೆ, ಆನೆಯನ್ನು ಸಂಹರಿಸುವ ಮೂಲಕ ಐತಿಹಾಸಿಕ ಪಾರಣ ಬೇಡು ಹಬ್ಬಕ್ಕೆ ಅಂತಿಮ ತೆರೆ ಎಳೆಯಲಾಯಿತು. ಪ್ರತಿವರ್ಷದಂತೆ ಈ ಬಾರಿಯೂ ಸಂಪ್ರದಾಯಿಕವಾಗಿ ಹಬ್ಬವನ್ನು ಆಚರಿಸಲಾಯಿತು. ಬೋಡ್ ನಮ್ಮೆಯ ಸಂದರ್ಭದಲ್ಲಿ ಬೇರಳಿನಾಡಿನ ಜನತೆ ದೇಶದ ಯಾವುದೇ ಭಾಗದಲ್ಲಿದ್ದರೂ ತಮ್ಮ ಊರಿಗೆ ಹಿಂತಿರುಗಿ ವಯಸ್ಸಿನ ಮಿತಿ ಇಲ್ಲದೆ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸುವುದೇ ಇಲ್ಲಿನ ವಿಶೇಷ. ಮೇ 26ರ ಮಧ್ಯಾಹ್ನ 3 ಗಂಟೆಗೆ ನಾಡ್ ತಕ್ಕಮುಖ್ಯಸ್ಥರು, ಊರಿನವರು ರುದ್ರಗುಪ್ಪೆಯ ಜೋಡು ಭಗವತಿ ದೇವಾಲಯದಲ್ಲಿ ಸೇರಿ ಅಂಬಲದಲ್ಲಿ ದೋಳ್ ತೆಗೆದು ಪಾರಂಪರಿಕ ಪಾರಣನಮ್ಮೆಯ ಹಾಡನ್ನು ಹಾಡುವ ಮೂಲಕ ಹಬ್ಬಕಟ್ಟು ಬೀಳಲಾಯಿತು. ಹಬ್ಬಕಟ್ಟು ಬಿದ್ದ ದಿನದಿಂದ 9 ಕೇರಿಗಳೊಳಗೊಂಡಿರುವ ಬೇರಳಿನಾಡಿನಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. ಕಂಡಂಗಾಲ, ಪೊದಕೇರಿ, ಮರೋಡಿ, ಬಾಡಗ ಗ್ರಾಮದ ಅಂಬಲದಲ್ಲಿ ಆಯಾಯ ಊರಿನವರು ಪಾರಂಪರಿಕ ದೋಳ್‌ಹಾಡನ್ನು ಹಾಡಿದರು.…
ಗೋಣಿಕೊಪ್ಪ ಜೂ.3 NEWS DESK : ‘ಕೊಡವ ತಕ್ಕ್ ಎಳ್ತ್‍ಕಾರಡ ಕೂಟ’, ‘ಕಾವೇರಿ ಎಜುಕೇಷನ್ ಸೊಸೈಟಿಯ’ ಆಶ್ರಯದಲ್ಲಿ ಗೋಣಿಕೊಪ್ಪ ಕಾವೇರಿ ವಿದ್ಯಾಸಂಸ್ಥೆಯಲ್ಲಿ ನಡೆದ ‘ಕೂಟ’ದ ಕೊಡವ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೂರು ಪುಸ್ತಕ ಬಿಡುಗಡೆಗೊಂಡಿತು. ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಕೊಡವ ಸಾಹಿತ್ಯ ಮಾಲೆ” ಯೋಜನೆಯ 190ನೇ ಹೆಜ್ಜೆಯ ಪುಸ್ತಕವಾಗಿ ಉಳುವಂಗಡ ಕಾವೇರಿ ಉದಯ ಬರೆದ ‘ಕಾಂಗತಾನ ಚುಳಿ’, 191ನೇ ಹೆಜ್ಜೆಯ ಪುಸ್ತಕವಾಗಿ, 17 ಲೇಖಕರು ಬರೆದ ‘ಕಕ್ಕಡ ಕಥೆ’, 192ನೇ ಹೆಜ್ಜೆಯ ಪುಸ್ತಕವಾಗಿ ಕೊಟ್ಟಂಗಡ ಕವಿತ ಬೋಜಮ್ಮ ಬರೆದ ‘ನಾ ಬಯಂದ ಪೂ’ ಎಂಬ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸುಗುಣ ಮುತ್ತಣ್ಣ, ಕೊಡವ ಭಾಷೆ, ಸಾಹಿತ್ಯ, ಕಲೆ ಸೇರಿದಂತೆ ಕೊಡವ ಸಂಸ್ಕೃತಿಯ ಬೆಳವಣಿಗೆಗೆ ಅತೀ ಹೆಚ್ಚು ಕೊಡುಗೆ ನೀಡಿರುವ ಕೊಡವ ತಕ್ಕ್ ಎಳ್ತ್‍ಕಾರಡ ಕೂಟ ನಮ್ಮ ಕಾಲೇಜಿನಲ್ಲಿ ಕಾರ್ಯಕ್ರಮ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕೊಡವ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸಲು ಪ್ರಯತ್ನಿಸುತ್ತಿರುವುದು ಉತ್ತಮ…
ನಾಪೋಕ್ಲು ಜೂ.3 NEWS DESK : ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂಗುಚ್ಚ ನೀಡಿ, ಸಿಹಿ ಹಂಚಿ ಬರಮಾಡಿಕೊಂಡರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಆಡಳಿತ ಮಂಡಳಿ ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿದರು. ಬೆಟ್ಟಗೇರಿ ಉದಯ ಪ್ರೌಢಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪೆನ್ನು ಹಾಗೂ ಸಿಹಿ ಹಂಚಿ ಸ್ವಾಗತಿಸಿದರು. ಸಮೀಪದ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಆಂಗ್ಲ ಮಾದ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಒರಿಯಂಟೇಷನ್ ಕಾರ್ಯಕ್ರಮ ಜರುಗಿತು. ಶಾಲೆಯ ಪ್ರಾಂಶುಪಾಲರಾದ ಕವಿತಾ ಎಂ.ಎಂ ಹತ್ತನೇ ತರಗತಿಯಲ್ಲಿ ಪ್ರಥಮ ಅಂಕ ಗಳಿಸಿದ ಅಫ್ರಾ ಪರ್ವೀನ್ ಳನ್ನು ಅಭಿನಂದಿಸಿ. ಬಳಿಕ ಮಾತನಾಡಿ ಅಂದು ಮಾಡಿದಂತಹ ಪಾಠಗಳನ್ನು ಅಂದೇ ಓದಿ, ಬರೆದು, ಕಲಿಯಲು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಬಹು ಮುಖ್ಯ. ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಯನ್ನು…
ಸುಂಟಿಕೊಪ್ಪ ಜೂ.3 NEWS DESK : ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ಸಿಹಿ ಹಂಚಿ ಸಂಭ್ರಮದಿಂದ ಸ್ವಾಗತಿಸಿದರು. ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಸಂತ ಮೇರಿ ಆಂಗ್ಲಮಾದ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಹಾಗೂ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹಬ್ಬದ ವಾತವರಣ ಕಂಡು ಬಂತು. ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಗೀತಾ, ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಸಂತಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕರಾದ ರೇ.ಪಾ. ವಿಜಯಕುಮಾರ್, ಮುಖ್ಯೋಪಾದ್ಯಾಯರಾದ ಸೇಲ್ವರಾಜ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್ ಹಾಗೂ ಗದ್ದೆಹಳ್ಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಹೇಮಾಕುಮಾರಿ ಇತರೆ ಶಾಲೆಗಳ ಸಹ ಶಿಕ್ಷಕರು ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಬರಮಾಡಿಕೊಂಡರು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶೇ.75 ರಷ್ಟು ಮಕ್ಕಳು ಶಾಲೆಗೆ ಹಾಜರಾಗಿದ್ದರು ಎಂದು ಶಾಲಾ ಮುಖ್ಯೋಪಾದ್ಯರಾದ ಸೇಲ್ವರಾಜ್ ತಿಳಿಸಿದರು.
ಸುಂಟಿಕೊಪ್ಪ ಜೂ.3 NEWS DESK : ಬಕ್ರೀದ್ ಹಬ್ಬದ ಹಿನ್ನಲೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕುಶಾಲನಗರ ಉಪವಿಭಾಗದ ಡಿವೈಎಸ್‍ಪಿ ಪಿ.ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹರ್ಧತೆಯನ್ನು ಕಾಪಾಡಿಕೊಳಲು ಸಲಹೆ ನೀಡಲಾಯಿತು. ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪಾಲಿಸಬೇಕಾದ ಮತ್ತು ತೆಗೆದುಕೊಳ್ಳಬೇಕಾದ ಮುಜಾಗೃತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ಠಾಣಾಧಿಕಾರಿ ಭಾರತಿ ಹಾಗೂ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ವಿವಿಧ ಮಸೀದಿಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.
ಕುಶಾಲನಗರ ಜೂ.3 NEWS DESK : ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಬೇಡಿಕೆಗಳನ್ನು ಸರಕಾರ ಇದುವರೆಗೆ ಈಡೇರಿಸುವಲ್ಲಿ ವಿಫಲವಾಗಿರುವ ಕಾರಣ ಕುಶಾಲನಗರ ಪುರಸಭೆಯ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಕುಶಾಲನಗರ ಪುರಸಭೆ ಕಚೇರಿ ಮುಂಭಾಗ ಸ್ಥಳೀಯ ಸಂಘದ ಅಧ್ಯಕ್ಷ ಎಸ್.ಆರ್.ಗಣೇಶ್ ಅವರ ನೇತೃತ್ವದಲ್ಲಿ ಸುಮಾರು ಐವತ್ತಕ್ಕೂ ಅಧಿಕ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಎಸ್.ಆರ್.ಗಣೇಶ್, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಣೆ ಮಾಡಬೇಕು ಸೇರಿದಂತೆ ಸುಮಾರು ಏಳು ಬೇಡಿಕೆಗಳನ್ನು ಸರಕಾರದ ಮಂದಿಡಲಾಗಿದೆ. ಇದುವರೆಗೂ ಯಾವುದೇ ಸ್ಪಂದನೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಕರೆಯಂತೆ ಕುಶಾಲನಗರ ಪುರಸಭೆ ವ್ಯಾಪ್ತಿಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದರು. ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಈ ಅವಧಿಯಲ್ಲಿ ಉಂಟಾಗುವ ಅನಾನುಕೂಲತೆ ಸಮಸ್ಯೆಗಳಿಗೆ ತಾವು ಕ್ಷಮೆ…
ಮಡಿಕೇರಿ ಜೂ.3 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.






