ಮಡಿಕೇರಿ ಆ.19 NEWS DESK : ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಡಿಯೊ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಇನ್ನೂ 10-12 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಸಹ ಇರಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ನಿರ್ದೇಶನ ನೀಡಿದರು. ಹಳೆ ಮರಗಳನ್ನು ತೆರವುಗೊಳಿಸಲು ಜಿ.ಪಂ.ಸಿಇಒ ಅವರ ಮೂಲಕ ಅರಣ್ಯ ಇಲಾಖೆಗೆ ಪತ್ರ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ಮುಗಿದ ನಂತರ ರಾಜ್ಯ, ಜಿಲ್ಲಾ ಹಾಗೂ ಗ್ರಾಮೀಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್‍ಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ನಗರ, ಪಟ್ಟಣ ಪ್ರದೇಶದಲ್ಲಿಯೂ ರಸ್ತೆಗಳು…
ಲೇಖಕ: admin
ಕುಶಾಲನಗರ ಆ.19 NEWS DESK : ಮೊಬೈಲ್ ಫೋಟೋಗ್ರ್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರ ಗಾಹಕರಿಗಿದೆ.…
ಮಡಿಕೇರಿ ಆ.19 NEWS DESK : “ವಾಯ್ಸ್ ಆಫ್ ಕೊಡವ- (ವಿಒಕೆ)” ಮತ್ತು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಸಹಯೋಗದಲ್ಲಿ ” ನೆಪ್ಪುರ ನಳತ್ ಮಾಂಜತ ಮೊಟ್ಟ್” ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಕೇವ್ ಇನ್ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮವನ್ನು ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಮ್ಮ ಬೆಳ್ಯಪ್ಪ ಅವರ ಪುತ್ರಿ ಬುಟ್ಟಿಯಂಡ ಕುಸುಮ್ ಅಯ್ಯಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಾಡಿನ ಹಿರಿಯರ ತ್ಯಾಗ ಬಲಿದಾನಗಳನ್ನು ನೆನಪಿಸುವ, ಇತಿಹಾಸದ ಮಹತ್ವವನ್ನು ಸಾರುವ ಅದ್ಭುತ ಕಾರ್ಯಕ್ರಮ ಇದಾಗಿದೆ. ‘ಇತಿಹಾಸವನ್ನು ಅರಿಯದವರು ಇತಿಹಾಸವನ್ನು ಸೃಷ್ಟಿಸಲಾರ’ ಈ ನಿಟ್ಟಿನಲ್ಲಿ ಇಂತಹಾ ಅರ್ಥಪೂರ್ಣ ಹಾಗೂ ಭಾವನಾತ್ಮಕ ಕಾರ್ಯಕ್ರಮ ಆಯೋಜಿಸಿದ ‘ಯುಕೊ’ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು, ಯುಕೊ ತನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.ಅಖಿಲ…
ಮಡಿಕೇರಿ ಆ.19 NEWS DESK : ಕೊಡಗು ಜಿಲ್ಲೆಯ ಪ್ರಥಮ ‘ಕಾನೂನು ಕಾಲೇಜು’ ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಸೆಪ್ಟೆಂಬರ್‌ನಿಂದ ಆರಂಭಗೊಳ್ಳಲಿದ್ದು, ಈಗಾಗಲೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭಗೊಂಡಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಮಂಡೇಪಂಡ ಸುಗುಣ ಮುತ್ತಣ್ಣ ಅವರು, ಎಜುಕೇಷನ್ ಸೊಸೈಟಿಯ ವತಿಯಿಂದ ಬೆಂಗಳೂರಿನ ಕೆವಿವಿ ಎಜುಕೇಷನಲ್ ಟ್ರಸ್ಟ್ ನ ಸಹಕಾರದೊಂದಿಗೆ ಮೂರು ವರ್ಷಗಳ ‘ಕಾನೂನು ಕಾಲೇಜು’ ಆರಂಭಗೊಳ್ಳಲಿದೆ. ಯಾವುದೇ ಪದವಿ ಪಡೆದ ವಿದ್ಯಾರ್ಥಿಗಳು ಕಾನೂನು ವ್ಯಾಸಂಗಕ್ಕೆ ದಾಖಲಾಗಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ಸ್ಪಷ್ಟಪಡಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯ ಕಾನೂನು ಮಹಾ ವಿದ್ಯಾನಿಲಯದ ನಿರ್ದೇಶನ ಮತ್ತು ಷರತ್ತುಗಳಂತೆ ಪ್ರವೇಶಾತಿಗಳನ್ನು ನೀಡಲಾಗುತ್ತದೆ. ಹೀಗಿದ್ದೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಾನೂನು ವ್ಯಾಸಂಗಕ್ಕೆ ಆದ್ಯತೆಯನ್ನು ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿ, ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ‘ಕಾನೂನು ಕಾಲೇಜು’ ಆರಂಭಕ್ಕೆ ಪೂರಕವಾಗಿ ಪ್ರತ್ಯೇಕ ಬ್ಲಾಕ್‍ನ್ನೆ ವ್ಯವಸ್ಥೆ ಮಾಡಲಾಗಿದೆಯೆಂದು ಹೇಳಿದರು. ಎಜುಕೇಷನ್ ಸೊಸೈಟಿಯ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ.ಬೋಪಣ್ಣ ಮಾತನಾಡಿ, ಪ್ರಥಮ ವರ್ಷದ ಕಾನೂನು…
ವಿರಾಜಪೇಟೆ ಆ.19 NEWS DESK : ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ವತಿಯಿಂದ ಕೂಟದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಆ.24 ಪಟ್ಟಣದ ಪುರಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಕೂಟದ ತಾಲೂಕು ಅಧ್ಯಕ್ಷ ಶಬರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿರಾಜಪೇಟೆಯ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ. ವಿರಾಜಪೇಟೆ ಭಾಗದ ತುಳುವೆರೆ ಜನಪದ ಕೂಟದ ಸದಸ್ಯರು ಹಾಗೂ ಭಾಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9483840707 ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಮಡಿಕೇರಿ ಆ.19 NEWS DESK : ಮತಗಳ್ಳತನ ಪ್ರಕರಣದ ಕುರಿತು ಇತ್ತೀಚೆಗೆ ಕೇಳಿ ಬರುತ್ತಿರುವ ಆರೋಪವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸಿ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ವರ್ಷಗಳಲ್ಲಿ ಮತಗಳ್ಳತನ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ಚುನಾವಣಾ ಆಯೋಗವು ರಾಷ್ಟ್ರದ ಜನತೆಗೆ ನಿರಾಧಾರ ಎಂದು ನಿರೂಪಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕೆ ಹೊರತು ಅಸಂವಿಧಾನಿಕವಾಗಿ ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯಲ್ಲವೆಂದು ತಿಳಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯುತ್ತಿವೆಯೇ ಎನ್ನುವ ಕುರಿತು ಸತ್ಯಾಂಶ ಬಹಿರಂಗಪಡಿಸಲು ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರುಗಳ ಆಯೋಗವನ್ನು ರಚಿಸಿ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಯುವ ಪೀಳಿಗೆ ರಾಷ್ಟ್ರದ ಸಂವಿಧಾನ ಮತ್ತು ಮತದಾನ ಪ್ರಕ್ರಿಯೆಗಳಲ್ಲಿ ನಂಬಿಕೆಯನ್ನು…
ವಿರಾಜಪೇಟೆ ಆ.19 NEWS DESK : ಭವ್ಯ ರಾಷ್ಟ್ರದ ನಿರ್ಮಾಣದಲ್ಲಿ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ ಎಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಾಲ್ಡಾನ್ಹಾ ಅವರು ಅಭಿಪ್ರಾಯಪಟ್ಟರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನ್ ಎಸ್ ಎಸ್ ಸಮಾಜ ಸೇವೆಯನ್ನು ಕಲಿಸಿದರೆ, ಯುವ ರೆಡ್ ಕ್ರಾಸ್ ಆರೋಗ್ಯದ ಪಾಠವನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಪ್ರಾಮಾಣಿಕತೆ, ಜವಾಬ್ದಾರಿಯುತ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಅರಿತಾಗ ಮಾತ್ರ ನೈಜ ಸೇವೆಯು ಸಮಾಜಕ್ಕೆ ದೊರಕುತ್ತದೆ. ಆ ನಿಟ್ಟಿನಲ್ಲಿ ಭವಿಷ್ಯದ ಹಿತದೃಷ್ಟಿಯಿಂದ ಸರ್ವರೂ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಮುಂದಾಗಬೇಕು. ಯಂಗ್ ಇಂಡಿಯಾ ಬಲಿಷ್ಠವಾಗಬೇಕೆಂದರು. ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು, ಸೇವಾ ಮನೋಭಾವನೆ ಎಂಬುವುದು ಎಲ್ಲರಲ್ಲಿಯೂ ಬರಬೇಕು. ಪರರ ಹಿತಕ್ಕಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಬೇಕು. ಶಿಸ್ತನ್ನು ಪರಿಪಾಲಿಸುವುದರ…
ಮಡಿಕೇರಿ ಆ.19 NEWS DESK : ಕುಶಾಲನಗರದ ಜ್ಞಾನಗಂಗಾ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಹೆಚ್.ಪ್ರೇಕ್ಷಾಳಿಗೆ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ ಲಭಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ನೀಡುವ ನಾವೀನ್ಯತೆ ಕ್ಷೇತ್ರದ ಪ್ರಶಸ್ತಿಗೆ ಪ್ರೇಕ್ಷಾ ಭಾಜನಳಾಗಿದ್ದು, ರೂ.10 ಸಾವಿರ ನಗದು ಹಾಗೂ ಪಾರಿತೋಷಕ ಪಡೆದಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಹೆಸರು ದಾಖಲಿಸಿದ, ತಾಲೂಕು ಮಟ್ಟದ ಪ್ರಬಂಧ, ಅಬಾಕಸ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆಯ ಪ್ರೇಕ್ಷಾ, ಸೋಮವಾರಪೇಟೆ ಸಮೀಪದ ಅಬ್ಬೂರುಕಟ್ಟೆ ಗ್ರಾಮದ ಗುತ್ತಿಗೆದಾರ ಟಿ.ಕೆ.ಹರೀಶ್ ಹಾಗೂ ವಿ.ಎಸ್.ಸಿಂಧುಜ ದಂಪತಿಯ ಪುತ್ರಿ.
ನಾಪೋಕ್ಲು ಆ.19 NEWS DESK : 2024-25ರ ಸಾಲಿನ ವಾರ್ಷಿಕ ರೂ.61.77 ಲಕ್ಷ ಲಾಭ ಗಳಿಸಿದ್ದು ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ ರೂ1.50 ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಹೇಳಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2024-25ರ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರ ಕನಸಾದ ವಿಕಸಿತ ಭಾರತ ಸಂಕಲ್ಪಕ್ಕೆ ಸಹಕಾರ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಪಿ.ಎಂ.ಅಶೋಕ, ನಿರ್ದೇಶಕರುಗಳಾದ ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ, ದೀನರಾಜ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ವಿನೀತ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು. ಸಂಘದ…
ಮಡಿಕೇರಿ NEWS DESK ಆ.19 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 5 ರಿಂದ 6 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಅರ್ಜುನನಿಗೆ ಗೀತೋಪದೇಶ ಮಾಡುವ ಶ್ರೀಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.






