ವಿರಾಜಪೇಟೆ ಮೇ 31 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿಗೆ ಯುಜಿಸಿ ನ್ಯಾಕ್ ವತಿಯಿಂದ ಬಿ+ ಗ್ರೇಡ್ ನ ಮಾನ್ಯತೆ ಲಭಿಸಿದೆ. ಮೇ ತಿಂಗಳ 15, 16 ರಂದು ನ್ಯಾಕ್ ಸಮಿತಿಯು ಕಾಲೇಜನ್ನು ಸಂಪೂರ್ಣವಾಗಿ ಮೌಲ್ಯ0ಕನಕ್ಕೆ ಒಳಪಡಿಸಿ ಈ ಮಾನ್ಯತೆಯನ್ನು ನೀಡಿದೆ. ಈ ಕುರಿತು ಪತ್ರಿಕೆಗೆ ಮಾಹಿತಿಯನ್ನು ನೀಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು 2007 ರಲ್ಲಿ ಆರಂಭಗೊಂಡ ನಮ್ಮ ಪದವಿ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುತ್ತೇವೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಎನ್.ಎಸ್.ಎಸ್, ಉದ್ಯೋಗ ಹಾಗೂ ವೃತ್ತಿ ಕೌಶಲ್ಯ ಘಟಕ, ಯುವ ರೆಡ್ ಕ್ರಾಸ್ ಇನ್ನೂ ಮುಂತಾದ ಘಟಕಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡುತ್ತಾ ಬಂದಿರುತ್ತೇವೆ. ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಯ ಗುಣಮಟ್ಟದ ಶಿಕ್ಷಣಕ್ಕೆ ಅನುಗುಣವಾಗಿ ನುರಿತ ಉಪನ್ಯಾಸಕರು, ಸುಸಜ್ಜಿತ ಸೌಲಭ್ಯಗಳು, ಗ್ರಂಥಾಲಯ ವ್ಯವಸ್ಥೆಯು ಲಭ್ಯವಿದೆ. ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಾಧನೆಯನ್ನು ಹಲವು ಕ್ಷೇತ್ರಗಳಲ್ಲಿ…
ಲೇಖಕ: admin
ಮಡಿಕೇರಿ ಮೇ 31 NEWS DESK : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅವರನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜ್ ನ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜ್ ನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾಭಾಸ್ತಿ ಹಾಗೂ ಅವರ ಪತಿ ಚೆಟ್ಟೀರ ನಾಣಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅವರು ಮಾತನಾಡಿ, ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿನಿಯಾಗಿರುವ ದೀಪಾಭಾಸ್ತಿ ಅವರ ಸಾಧನೆಯನ್ನು ಜಗತ್ತೇ ಮೆಚ್ಚಿಕೊಂಡಿದೆ, ಇದೊಂದು ಹೆಮ್ಮೆಯ ಕ್ಷಣ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿನಲ್ಲಿ ರಾರಾಜಿಸುತ್ತಿರುವ ಕಾಲೇಜ್ ನ ಹಿರಿಮೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದು, ಕಾಲೇಜ್ ಗೆ ಮತ್ತೊಂದು ಗರಿ ಬಂದತಾಗಿದೆ. ಮುಂದಿನ ದಿನಗಳಲ್ಲೂ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ…
ಮಡಿಕೇರಿ ಮೇ 31 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 75ನೇ ವರ್ಷದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೆಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್‌ನ ಹೆಂಟ್ರಿಕ್ ಮಾರ್ಟಿನ್ ಜಿ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಯಿತು. ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ಸುರೇಶ್ ಎಂ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜೀರ ಬಿ.ಅಯ್ಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಕೈ ಜೋಡಿಸುತ್ತಿರುವುದು ಉತ್ತಮ…
ಪುತ್ತೂರು NEWS DESK ಮೇ 31 : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಶೇ.100 ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್- 100%, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್- 100%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ. ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು…
ಮಡಿಕೇರಿ ಮೇ 31 NEWS DESK : ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿ ಮಡಿಕೇರಿಯಲ್ಲಿಯೂ ಪೌರಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ. ನಗರಸಭೆಯ ಎದುರು ಧರಣಿ ನಡೆಸುತ್ತಿರುವ ಪೌರಸೇವಾ ನೌಕರರು ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಬೇಡಿಕೆಗಳ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಸತ್ಯನಾರಾಯಣ, ಕಳೆದ ಅನೇಕ ವರ್ಷಗಳ ಬೇಡಿಕೆಗಳನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ. ಹಲವು ಬಾರಿ ಮನವಿಗಳನ್ನು ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲೆಂದು ಆರೋಪಿಸಿದರು. ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ಪೌರಸೇವಾ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೆ ಮುಷ್ಕರ ನಡೆಸುವ ಕುರಿತು ಮುನ್ಸೂಚನೆ ನೀಡಲಾಗಿದೆ. ಆದರೆ ಆಡಳಿತ ನಡೆಸುತ್ತಿರುವವರು ಸಂಘದ ಸದಾಧಿಕಾರಿಗಳ ಸಭೆ ಕರೆಯದೆ, ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಜೂ.5ರ ವರೆಗೆ…
ಮಡಿಕೇರಿ NEWS DESK ಮೇ 31 – ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಮಡಿಕೇರಿಯ ಲೇಖಕಿ ದೀಪಾಭಾಸ್ತಿಯವರ ಸಾಹಿತ್ಯ ಸಾಧನೆ ಕೊಡಗಿನ ಜನತೆಗೇ ಹೆಮ್ಮೆ ತಂದಿದ್ದು, ಭವಿಷ್ಯದಲ್ಲಿಯೂ ಲೇಖಕಿಯ ಯಾವುದೇ ಸಾಹಿತ್ಯ ಪರ ಚಟುವಟಿಕೆಗಳಿಗೆ ಸಕಾ೯ರದ ವತಿಯಿಂದ ಅಗತ್ಯ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಭರವಸೆ ನೀಡಿದ್ದಾರೆ. ಬೂಕರ್ ಪ್ರಶಸ್ತಿಯು ಅನುವಾದ ಸಾಹಿತ್ಯದ ನಿಜವಾದ ಶಕ್ತಿಯನ್ನು ನಿರೂಪಿಸಿದೆ ಎಂದೂ ಶಾಸಕರು ಹೇಳಿದರು. ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ತೆರಳಿದ ಡಾ.ಮಂಥರ್ ಗೌಡ, ಕಾಫಿ ಹಾರದ ಮೂಲಕ ಗೌರವ ಸನ್ಮಾನವನ್ನು ನೆರವೇರಿಸಿದರಲ್ಲದೇ ದೀಪಾಭಾಸ್ತಿ ಅವರು ಈ ಸಂದಭ೯ ನೀಡಿದ ಪ್ರಶಸ್ತಿ ವಿಜೇತ ಕೖತಿ ಹಾಟ್೯ ಲ್ಯಾಂಪ್ ನ್ನು ಗೌರವಪೂವ೯ಕವಾಗಿ ಸ್ವೀಕರಿಸಿದರು. ದೀಪಾಭಾಸ್ತಿಯವರ ಸಾಹಿತ್ಯ ಸಾಧನೆಯನ್ನು ಶ್ಲಾಘಿಸಿದ ಶಾಸಕ ಡಾ.ಮಂಥರ್ ಗೌಡ, ಬೂಕರ್ ಪ್ರಶಸ್ತಿಯಂಥ ಜಗತ್ತಿನಲ್ಲಿ ಸಾಹಿತ್ಯಕ್ಕಾಗಿನ ಶ್ರೇಷ್ಟ ಪ್ರಶಸ್ತಿಯನ್ನು ಮಡಿಕೇರಿಯ ಲೇಖಕಿ ಪಡೆದುಕೊಳ್ಳುವ ಮೂಲಕ ಕೊಡಗು, ಕನಾ೯ಟಕ ಮಾತ್ರವೇ ಅಲ್ಲದೇ ಭಾರತವೇ ಮಡಿಕೇರಿಯತ್ತ ಗಮನ ಹರಿಸುವಂತೆ ದೀಪಾಭಾಸ್ತಿ ಮಾಡಿದ್ದಾರೆ.…
ಬೆಂಗಳೂರು NEWS DESK ಮೇ 31 : DC, CEO ಗಳ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು >>> ಜಿಲ್ಲಾಧಿಕಾರಿಗಳು ಡೈರಿ ಬರೆಯಬೇಕು, ಡೈರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಲುಪಬೇಕು. ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಬೇಕು, ಕುರಿಗಾಹಿಗಳಿಗೆ ಅರಣ್ಯ ಇಲಾಖೆಯ ಸಿಬ್ಬಂದಿ ಕೊಡುತ್ತಿರುವ ಕಿರುಕುಳ ತಕ್ಷಣ ನಿಲ್ಲಬೇಕು. ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು, ಆ ಡೈರಿಯಲ್ಲಿ ಫೀಲ್ಡ್ ವರ್ಕ್ ಅನುಭವಗಳು, ಸಮಸ್ಯೆಗಳು, ಪರಿಹಾರ ಎಲ್ಲದರ ಬಗ್ಗೆಯೂ ಉಲ್ಲೇಖವಿರಬೇಕು ಎಂದು ಕಳೆದ ವರ್ಷದ ಸಭೆಯಲ್ಲಿ ಮತ್ತು ಎಲ್ಲಾ ಕೆಡಿಪಿ ಸಭೆಗಳಲ್ಲಿ ನಾನು ಸೂಚನೆ ನೀಡಿದ್ದೆ. ಇನ್ನೂ ಕೆಲವರು…
ಮಡಿಕೇರಿ ಮೇ 31 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಗೋಣಿಕೊಪ್ಪ ಮೇ 31 NEWS DESK : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅಪರಿಚಿತ ವೃದ್ಧ ಸಾವಿಗೀಡಾಗಿದ್ದು, ವಾರಸುದಾರರು ಗೋಣಿಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ. ಸುಮಾರು 70 ವರ್ಷ ಎಂದು ಅಂದಾಜಿಸಲಾಗಿದೆ. ಗೋಣಿಕೊಪ್ಪ ಶವಗಾರದಲ್ಲಿ ಇರಿಸಲಾಗಿದೆ. ಅತ್ತೂರು ಗ್ರಾಮದ ಕರ್ನಲ್ ಮುತ್ತಣ್ಣ ಅವರ ತೋಟದಲ್ಲಿ ನಿತ್ರಾಣಗೊಂಡು ಬಿದ್ದಿದ್ದ ಇವರನ್ನು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿಲಾಗಿತ್ತು. ಮಾಹಿತಿ ಇರುವವರು ಗೋಣಿಕೊಪ್ಪ ಪೊಲೀಸ್ ಠಾಣೆಗೆ 08274247333 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಮೇ 31 NEWS DESK : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಭಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜೂ.2 ರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ನಗರದ ದೀಪಾ ಭಾಸ್ತಿ ಅವರ ನಿವಾಸಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಪತ್ರ ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು. ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರ ಹಾಗೂ ಇಲಾಖೆಯ ನಿರ್ದೇಶಕರ ಪತ್ರವನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಚೆಟ್ಟಿರ ನಾಣಯ್ಯ ಹಾಗೂ ಸುಬೇದಾರ್ ಗೌಡಂಡ ತಿಮ್ಮಯ್ಯ ಇದ್ದರು.






