ಮಡಿಕೇರಿ ಆ.16 NEWS DESK : ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರಾದ ದೊಡ್ಡೇರ ಎಂ.ತಿಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ನೇತಾಜಿವಕ ಮಂಡಳದ ಅಧ್ಯಕ್ಷರಾದ ಕೊಂಡಿರ ಪಿ.ಕಾರ್ಯಪ್ಪ, ಯುವಕ ಮಂಡಲದ ಸಲಹಾ ಸಮಿತಿ ಮುಖ್ಯಸ್ಥರಾದ ಚೆಟ್ಟೊಳ್ಳಿರ ಗಿರೀಶ್ ಅಪ್ಪಯ್ಯ , ಯುವತಿಮಂಡಳಿ ಅಧ್ಯಕ್ಷರಾದ ಸಿಂಧು ಸುದೇವ, ಯುವಕ ಮಂಡಲದ ಉಪಾಧ್ಯಕ್ಷರಾದ ಸುರೇಶ್ ಕುಮಾರ್, ಮಾಜಿ ಸೈನಿಕರು, ಯುವಕ ಹಾಗೂ ಯವತಿ ಮಂಡಳಿಯ ಸದಸ್ಯರು, ನಾಗರಿಕರು ಹಾಜರಿದ್ದರು.
ಲೇಖಕ: admin
ಭಾಗಮಂಡಲ NEWS DESK ಆ.15 : ಭಾಗಮಂಡಲ ಪಂಚಾಯತ್ ವತಿಯಿಂದ 79ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬಳ್ಳಡ್ಕ ಅಪ್ಪಾಜಿ ಮತ್ತು ಅನುರವರ ಗದ್ದೆಯಲ್ಲಿ ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಹಗ್ಗಜಗ್ಗಾಟ, ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪುರುಷರ ಹಗ್ಗಜಗ್ಗಾಟ ಶ್ರೀಕೃಷ್ಣ ಯುವಕ ಸಂಘ, ಅಯ್ಯಂಗೇರಿ ಪ್ರಥಮ ಸ್ಥಾನ , ಶ್ರೀ ಭಗವತಿ ಕಾರುಗುಂದ ದ್ವಿತೀಯ ಸ್ಥಾನ, ಮಹಿಳೆಯರ ಹಗ್ಗಜಗ್ಗಾಟ ದಲ್ಲಿ ಮಹಾವಿಷ್ಣು ಯುವತಿ ಮಂಡಳಿ ಸಿಂಗತ್ತೂರು ಪ್ರಥಮ, ಭಗವತಿ ಯುವತಿ ಮಂಡಳಿ ತಣ್ಣಿಮಾನಿ ದ್ವಿತೀಯ ಸ್ಥಾನ ಪಡೆದುಕೊಂಡವು. ಮಳೆಯ ನಡುವೆಯೂ ಕ್ರೀಡಾಭಿಮಾನಿಗಳು ಚಪ್ಪಾಳೆ, ಸಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿ ಸಂಭ್ರಮಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಸತೀಶ್ ಜೋಯಪ್ಪ ಅವರು ಮಾತನಾಡಿ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವ ಕೆಲಸ ಮಾಡಿದ್ದಾರೆ. ನಮ್ಮ ಸೈನಿಕರು ತಮ್ಮ ಕುಟುಂಬವನ್ನು ತೊರೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ನಾವು…
ಮೂರ್ನಾಡು NEWS DESK ಆ.15 : ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಕಛೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ಎ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸರ್ವರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ನಂತರ ಮೂರ್ನಾಡುವಿನ ಅಂಗನವಾಡಿ ಕೇಂದ್ರಕ್ಕೆ ತೆರಳಿ ಸಂಘದ ವತಿಯಿಂದ ಮಕ್ಕಳಿಗೆ ಸಿಹಿ ಹಂಚಿ, ಕೇಂದ್ರಕ್ಕೆ ಅಗತ್ಯವಿದ್ದ ಬೆಡ್ ವಿತರಿಸಲಾಯಿತು.
ಕುಶಾಲನಗರ NEWS DESK ಆ.15 : ನಮ್ಮ ಭಾರತ ದೇಶದ ಸ್ವಾತಂತ್ರ್ಯದ ದಿನವು ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು, ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ದೇಶವು ವಿಮೋಚನೆಯನ್ನು ಹೊಂದಿದ ಸರ್ವ ಶ್ರೇಷ್ಠ ದಿನವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತಹ ಅದಮ್ಯ ಚೈತನ್ಯಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಸಾರುವಂತಹ ವೈವಿಧ್ಯಮಯ ಭಾರತೀಯ ಜನಸಂಖ್ಯೆಯನ್ನು ಒಂದುಗೂಡಿಸುವ ಶಕ್ತಿಯಾಗಿದೆ. ಪ್ರಾದೇಶಿಕ, ಭಾಷಾ ಮತ್ತು ಸಾಂಸ್ಕೃತಿಕ ಭಿನ್ನತೆಗಳನ್ನು ಮೀರಿ, ದೇಶಭಕ್ತಿಯ ಉತ್ಸಾಹದಲ್ಲಿ ಜನರನ್ನು ಒಟ್ಟುಗೂಡಿಸುತ್ತದೆ. ತ್ರಿವರ್ಣ ಧ್ವಜ, ರಾಷ್ಟ್ರಗೀತೆ, ಮತ್ತು ಸಾಮೂಹಿಕ ಆಚರಣೆಗಳು ಭಾರತೀಯರಲ್ಲಿ ಹೆಮ್ಮೆಯ ಭಾವನೆಯನ್ನು ಬೆಳೆಸುತ್ತವೆ ಮತ್ತು ಅಖಂಡ ರಾಷ್ಟ್ರದ ಕಲ್ಪನೆಯನ್ನು ಬಲಪಡಿಸುತ್ತವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್…
ಮೂರ್ನಾಡು NEWS DESK ಆ.15 : ಶ್ರೀ ಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಮೂರ್ನಾಡಿನ ಬಲಿಜ ಸಮಾಜದ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶಿಷ್ಟವಾದ ಸಂಸ್ಕೃತಿ ಭಾರತದ್ದು, ನಮ್ಮ ಹಿರಿಯರು ತ್ಯಾಗ ಬಲಿದಾನಗಳಿಂದ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಖಜಾಂಚಿ ಪ್ರಕಾಶ್, ನಿರ್ದೇಶಕರಾದ ಲೋಕನಾಥ್, ಎಲ್ಐಸಿ ಗಣೇಶ್, ಯಶ್ವಂತ್ ಮೂರ್ನಾಡು, ರಮಿತಾ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಆ.15 : ಮಡಿಕೇರಿ ನಗರ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಅಧ್ಯಕ್ಷ ಎಂ.ಸಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅತಿಥಿಗಳಾಗಿ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಎಂ.ವಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೊಡಗು ಜಿಲ್ಲಾ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ, ಕಾರ್ಯದರ್ಶಿ ಟಿ.ಎಂ.ಪ್ರಸನ್ನ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಹಾಗೂ ಚಾಲಕರು ಪಾಲ್ಗೊಂಡಿದ್ದರು. ನಿವೃತ್ತಿಯ ನಂತರ ಆಟೋ ಚಾಲಕರ ವೃತ್ತಿಯನ್ನು ಆಯ್ದುಕೊಂಡ ಐವರು ಮಾಜಿ ಸೈನಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಾಪಂ ರವಿ ಕಾಳಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಸಭಾಧ್ಯಕ್ಷೆ ಪಿ.ಕಲಾವತಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು ನಗರಸಭಾ ಸದಸ್ಯರು, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಮತ್ತು ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾಡಳಿತದ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. *ಸಚಿವರ ಸಂದೇಶ* ಸ್ವಾತಂತ್ರ‍್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಾವೆಲ್ಲ ಒಂದಾಗಿ ನಡೆಯಬೇಕಿದೆ. ಸ್ವಾತಂತ್ರ‍್ಯದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿಕೊಂಡು ಯಾವುದೇ ತಾರತಮ್ಯ ಇಲ್ಲದೆ ಎಲ್ಲರೂ ಒಟ್ಟುಗೂಡಿ ಪ್ರಗತಿಯತ್ತ ಚಿಂತನೆ ಮಾಡೋಣವೆಂದು ಸಚಿವ ಎನ್.ಎಸ್.ಭೋಸರಾಜು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಕಳೆದ ಎರಡು ವರ್ಷಗಳಲ್ಲಿ…
ಕೆರಾಡಿ ಆ.15 NEWS DESK : ಕೆರಾಡಿಯಲ್ಲಿನ ತಾವು ಓದಿದ ಶಾಲೆಯನ್ನೇ ರಿಷಬ್ ಶೆಟ್ಟಿ ದತ್ತು ಪಡೆದಿದ್ದು, ಇಂದು ಅದೇ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಡಿವೈನ್ ಸ್ಟಾರ್ ಆಚರಿಸಿದ್ದಾರೆ. ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಬ್ ಶೆಟ್ಟಿ ಧ್ವಜಾರೋಣ ನೆರವೇರಿಸಿದ್ದಾರೆ.
ಮಡಿಕೇರಿ, ಆ.15 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಪತ್ರಿಕಾ ಭವನದಲ್ಲಿ ತ್ರ್ರಿವರ್ಣ ಧ್ವಜಾರೋಹಣ ನಡೆಸುವ ಮೂಲಕ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಅವರು ಧ್ವಜಾ ರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಹಿರಿಯ ಟ್ರಸ್ಟಿಗಳಾದ ವಿ.ಪಿ.ಸುರೇಶ್, ಕೊಡಗು ಪತ್ರಕರ್ತರ ಸಂಘದ ಸದಸ್ಯರಾದ ಶಿವಪ್ಪ, ಪತ್ರಿಕಾ ಭವನದ ಸಿಬ್ಬಂದಿಗಳಾದ ರಾಜೇಶ್, ಶೈನಿ ಮೊದಲಾದವರು ಪಾಲ್ಗೊಂಡಿದ್ದರು.






