ಲೇಖಕ: admin

ಮಡಿಕೇರಿ ಆ.15 NEWS DESK : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ನೆರವೇರಿಸಿದರು. ಬಳಿಕ‌ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದ್ದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವುದು ವೈದ್ಯರ ಜವಾಬ್ದಾರಿ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ‌ಸಂಸ್ಥೆಯನ್ನು ಮೇಲ್ದರ್ಜೆಗೆರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ಆ ದಿಸೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಆರೋಗ್ಯ ಸೇವೆಗಳು ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು. ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳು ಸಕಾಲದಲ್ಲಿ ತಲುಪಿದಾಗ ಸರ್ಕಾರಕ್ಕೆ ಒಳ್ಳೆಯ…

Read More

ಕೂಡುಮಂಗಳೂರು ಆ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್., ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದ ಇತಿಹಾಸ ಹಾಗೂ ಸ್ವಾತಂತ್ರ್ಯ ವೀರರ ಹೋರಾಟ, ಅವರ ತ್ಯಾಗ, ಬಲಿದಾನ, ಅವರ ಹೋರಾಟ ಹಾಗೂ ಸೇವೆಯನ್ನು ಸ್ಮರಿಸುವುದರೊಂದಿಗೆ ಅವರ ಆದರ್ಶಗಳನ್ನು ಪರಿಪಾಲಿಸುವ ಮೂಲಕ ದೇಶದ ಐಕ್ಯತೆಯನ್ನು ಸಾರಬೇಕು ಎಂದರು. ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ಸದಾ ಎತ್ತರದಲ್ಲಿ ಹಾರುವಂತೆ ಮಾಡೋಣ. ದೇಶವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟೋಣ. ಸದೃಢ ದೇಶದ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಬದ್ಧರಾಗೋಣ ಎಂದರು. ಪ್ರವಾಸೋದ್ಯಮಿಯೂ ಶಿಕ್ಷಕರ ಸಂಘಟನೆಯ ಮುಖಂಡರೂ ಆದ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ದೇಶ ಸದೃಢವಾಗಿದ್ದರೆ…

Read More

ಕಾರ್ಕಳ ಆ.15 NEWS DESK : ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್.ಕಿರಣ್ ಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು  ಜನಕೇಂದ್ರಿತ ಸೇವೆಯ ಸಂಕೇತವಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ ಅಖಿಔ ಮಹೇಶ್ ಆರ್. ಶೆಣೈ. ಕೆ. ಇವರ ನೇತೃತ್ವದಲ್ಲಿ ಎನ್.…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ  79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ನಳಿನಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಮದೆ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಪಿ.ಎ.ಚಂದ್ರಾವತಿ, ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿತು.  ಸಿ ಮತ್ತು ಡಿ ಜಾಗದ ಸಮಸ್ಯೆಯಿಂದ ರೈತರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಸಭೆಯಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಹೋರಾಟಗಳು ನಡೆಯುತ್ತಿದ್ದು, ಈ ವಿಚಾರದ ಬಗ್ಗೆ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತಂಕವನ್ನು ದೂರ ಮಾಡುವಂತೆ ಉಸ್ತುವಾರಿ ಸಚಿವರು ಹಾಗೂ ಶಾಸಕದ್ವಯರಿಗೆ ರೈತರ ಪರವಾಗಿ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು…

Read More

ಮಡಿಕೇರಿ ಆ.15 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯ ಕೊಡವ ಮಂದ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸ್ವತಂತ್ರ್ಯ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಂವಿಧಾನದ ಆಶಯದಂತೆ ಕೊಡವರು ಪ್ರತಿಪಾದಿಸಬಹುದಾದ ಹಕ್ಕೊತ್ತಾಯಗಳನ್ನು ವಿವರಿಸಿದರು. ಆದಿಮಸಂಜಾತ ಅನಿಮಿಸ್ಟಿಕ್ ಏಕ ಜನಾಂಗೀಯ ಕೊಡವ ಸಮುದಾಯ ನಿಜಅರ್ಥದಲ್ಲಿ ಸ್ವಾತಂತ್ರ್ಯವನ್ನು ಅನುಭವಿಸಬೇಕಾದರೆ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವಆಡಳಿತ ಮತ್ತು ಸ್ವಯಂ ನಿರ್ಣಯದ ಹಕ್ಕುಗಳು ಸಾಕಾರಗೊಳ್ಳಬೇಕಾಗುತ್ತದೆ. ಭಾರತ ದೇಶ ಸ್ವಾತಂತ್ರ್ಯವನ್ನು ಸಾಧಿಸಿ 79 ವರ್ಷಗಳಾಗಿದೆ. ಆದರೆ ಸಂವಿಧಾನದ ವಿಧಿಗಳನ್ನು ಸಂಪೂರ್ಣವಾಗಿ ಜಾರಿಗೆ ತಂದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಲಭಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಆದಿಮಸಂಜಾತ ಅನಿಮಿಸ್ಟಿಕ್ ಏಕ ಜನಾಂಗೀಯ ಕೊಡವರು ಅತ್ಯಂತ ಸೂಕ್ಷ್ಮ ಸಮುದಾಯಕ್ಕೆ ಸೇರಿದವರಾಗಿದ್ದು, ಕೊಡವ ಭಾಷೆ, ಸಂಸ್ಕೃತಿ, ಸಂಪ್ರದಾಯ, ಪರಂಪರೆ, ಜಲ, ಪರಿಸರ ಮತ್ತು ಕೊಡವ ಭೂಮಿಯ ರಕ್ಷಣೆಗಾಗಿ ಸಿಎನ್‍ಸಿ ಸಂಘಟನೆ ಕಳೆದ 35 ವರ್ಷಗಳಿಂದ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು…

Read More

ಕುಶಾಲನಗರ ಆ.15 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸೈನಿಕ ಶಾಲೆಯ ಜನರಲ್ ತಿಮಯ್ಯ ಪರೇಡ್ ಮೈದಾನದಲ್ಲಿ ಶಾಲೆಯ ಪ್ರಾಂಶುಪಾರಾದ ಕರ್ನಲ್ ಅಮರ್ ಜೀತ್ ಸಿಂಗ್ ಧ್ವಜಾರೋಹಣ ನೆರವೇರಿ, ಗೌರವ ವಂದನೆ ಸ್ವೀಕರಿಸಿದರು. ನಂತರ ಶಾಲೆಯಲ್ಲಿನ ವೀರಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕರ್ನಲ್ ಅಮರ್ ಜೀತ್ ಸಿಂಗ್,  ಶಿಸ್ತು, ನಿಷ್ಠೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವಿತದ ಪ್ರತಿ ಕ್ಷಣದಲ್ಲಿಯೂ ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂದು ತಿಳಿಸಿದರು. ಶಾಲೆಯಲ್ಲಿನ ಸರ್ವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಆದರ್ಶ ನಾಗರೀಕರಾಗಬೇಕೆಂದು ತಿಳಿ ಹೇಳಿದರು. ಶಾಲೆ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲೆಯ ಪ್ರಥಮ ಮಹಿಳೆ ದಿವ್ಯಾಸಿಂಗ್, ಬೋಧಕ, ಬೋಧಕೇತರ…

Read More

ಸೋಮವಾರಪೇಟೆ ಆ.15 NEWS DESK : ಸುರಿಯುವ ಮಳೆಯ ನಡುವೆಯೂ ತಾಲ್ಲೂಕು ಆಡಳಿತದಿಂದ 79ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು,  ಮಹಾನಾಯಕರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಏಕತೆಗೆ ಭಂಗ ಬರಬಾರದು, ಸಾಮರಸ್ಯ ಒಡೆಯಬಾರದು, ಭಾತೃತ್ವ ಹಾಗೂ ಸಹೋದರತೆಯಿಂದ ಇರಬೇಕೆಂದರು. ಮೂಲಭೂತ ರಾಜಕೀಯ ಸಂಹಿತೆಗಳು, ಪ್ರಜೆಗಳ ಹಕ್ಕುಗಳು, ಅಧಿಕಾರ ಹಾಗೂ ಕರ್ತವ್ಯಗಳನ್ನು ನಿಗದಿಪಡಿಸಲು  ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲಕ ನಡೆಯುತ್ತಿರುವುದು ಗಮನಾರ್ಹವೆಂದರು.  ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಂ, ಚೌಡ್ಲು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ  ಜಯಂತಿ, ಉಪಾಧ್ಯಕ್ಷೆ ಮೋಹಿನಿ, ಚೌಡ್ಲು ಗ್ರಾಮ ಪಂಚಾಯತಿ ಸದಸ್ಯ…

Read More

ಮಡಿಕೇರಿ ಆ.15 NEWS DESK : ಮೊದಲ ಸ್ವಾತಂತ್ರ್ಯ ಹೋರಾಟಕ್ಕೂ ಮೊದಲು ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಆರಂಭವಾಗಿತ್ತು. ಅಂದು ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದ ಅಮರ ಸುಳ್ಯ ದಂಗೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತು ಎಂದು ನಿವೃತ್ತ ಸೇನಾಧಿಕಾರಿ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ತಿಳಿಸಿದ್ದಾರೆ. ನಗರದ ಸುದರ್ಶನ ವೃತ್ತದ ಬಳಿ ಇರುವ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯ ಆವರಣದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಅಂಗಸಂಸ್ಥೆಗಳ ವತಿಯಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹಿರಿಯರ ತ್ಯಾಗ ಬಲಿದಾನವನ್ನು ನಮ್ಮ ಇಂದಿನ ಪೀಳಿಗೆ ನೆನಪಿಸಿಕೊಳ್ಳಬೇಕು. ಅವರು ಹಾಕಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಹಿರಿಯರ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಇಂದಿನ ಯುವ ಜನತೆ ಜವಾಬ್ದಾರಿಯಿಂದ ನಾಡು ಮತ್ತು ದೇಶ ಕಟ್ಟುವ…

Read More