ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಾ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ವರಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಲಂಕಾರ ಸೇವೆಗಳನ್ನು ಕೈಗೊಳ್ಳಲಾಗಿತ್ತು. ಈ ಪುಣ್ಯಕರ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮದ ಭಾಗವಾಗಿ, ದೇವಸ್ಥಾನಕ್ಕೆ ಭೇಟಿ ನೀಡಿದ ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಬಳೆ ಮತ್ತು ರವಿಕೆ ವಸ್ತ್ರವನ್ನು ತಾಂಬೂಲದೊಂದಿಗೆ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು. ಈ ಧಾರ್ಮಿಕ ಸಮಾರಂಭದಲ್ಲಿ ವಿರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ನೂರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ಲೇಖಕ: admin
ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು ಪೊಲೀಸ್ ಉಪಾಧೀಕ್ಷಕರು ಹಾಗೂ ಮೂವರು ಪೊಲೀಸ್ ನಿರೀಕ್ಷಕರನ್ನು ಅಭಿನಂದಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಉತ್ತಮ ಕಾರ್ಯಕ್ಷಮತೆ, ಕರ್ತವ್ಯನಿಷ್ಠೆ ಹಾಗೂ ಜವಾಬ್ದಾರಿಯುತ ಸೇವೆಯನ್ನು ಪರಿಗಣಿಸಿ, ಆರು ಮಂದಿ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಇಂದು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಅಧಿಕಾರಿಗಳ ಉತ್ತಮ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ ಎಸ್‌ಪಿ ಬಿಂದುಮಣಿ, ಇದೇ ರೀತಿಯ ವೃತ್ತಿಪರತೆ ಮತ್ತು ಬದ್ಧತೆಯಿಂದ ಮುಂದೆಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರೋತ್ಸಾಹಿಸಿದರು. ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿರುವುದು ಇತರ ಪೊಲೀಸ್ ಸಿಬ್ಬಂದಿಗೂ ಮತ್ತಷ್ಟು ಉತ್ಸಾಹ ಹಾಗೂ ಪ್ರೇರಣೆ ನೀಡಲಿದೆ.
ಗೋಣಿಕೊಪ್ಪ, NEWS DESK ಆ.28: 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಒದಗಿಸಿರುವ ಒಂದು ಕೋಟಿ ರೂ. ಅನುದಾನದಲ್ಲಿ ದಶಮಂಟಪಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಭರವಸೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೀಡಿದ್ದಾರೆ. ದಶಮಂಟಪಗಳ ಸಮಿತಿ ಅಧ್ಯಕ್ಷ ಕಾಡ್ಯಮಾಡ ಚೇತನ್ ಹಾಗೂ ತಂಡವು ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಶಾಸಕರನ್ನು ಭೇಟಿ ಮಾಡಿ, ದಸರಾ ಆಚರಣೆಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕಾಡ್ಯಮಾಡ ಚೇತನ್ ಅವರು, ದಸರಾಕ್ಕೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಶಾಸಕರಿಗೆ ಸಲ್ಲಿಸಿದರು. ಪ್ರಮುಖವಾಗಿ ಪ್ರತಿ ಸಮಿತಿಗೆ ₹5 ಲಕ್ಷ ಅನುದಾನ ಒದಗಿಸಿಕೊಡಬೇಕೆಂದು ಮನವಿ ಮಾಡಲಾಯಿತು. ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ ಶಾಸಕರು, ಬೇಡಿಕೆಗೆ ಅನುಗುಣವಾಗಿ ಧನಸಹಾಯ ಒದಗಿಸುವ ಭರವಸೆ ನೀಡಿದರು. ಅರುವತೋಕ್ಲು ಕಾಡ್ಲಾಯಪ್ಪ ದಸರಾ ಸಮಿತಿ ಅಧ್ಯಕ್ಷ ಶಾಜಿ ಅಚ್ಚುತನ್ ಮಾತನಾಡಿ, ಕಳೆದ ಬಾರಿ ಬಂದ ₹75 ಲಕ್ಷ ಅನುದಾನದಲ್ಲಿ ಪ್ರತಿ ಸಮಿತಿಗೆ ₹2.30 ಲಕ್ಷ ನೀಡುವ ಭರವಸೆ ನೀಡಲಾಗಿತ್ತು. ಆದರೂ…
ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿಯಲ್ಲಿರುವ ಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಸಮಾರಂಭದಲ್ಲಿ ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಗಣೇಶ್, ಗೌರವಾಧ್ಯಕ್ಷ ಬಿ.ಆರ್. ರಾಜ, ಉಪಾಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಜನಾರ್ದನ್, ಖಜಾಂಚಿ ಬಿ.ಎಂ. ಸತೀಶ್, ಸಹ ಕಾರ್ಯದರ್ಶಿಗಳಾದ ಲಕ್ಷ್ಮಣ್ ಹಾಗೂ ಮಣಿ, ಮಹಿಳಾ ಘಟಕದ ಪ್ರಮುಖರಾದ ರೂಪ ಹಾಗೂ ಚಿತ್ರಾ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಆ.28 NEWS DESK : ಮಾನವ- ವನ್ಯಜೀವಿ ಸಂಘರ್ಷ ಹಾಗೂ ಅರಣ್ಯ ವಿಷಯಗಳ ಕುರಿತು ಸಾರ್ವಜನಿಕರ ಜತೆ ಸಮಾಲೋಚನಾ ಸಭೆಯು ಅರಣ್ಯ ಸಚಿವರಾದ ರಾಮಲಿಂಗ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯ ವಿಡಿಯೋ ಸಂವಾದ ಕೊಠಡಿಯಲ್ಲಿ ನಡೆಯಿತು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಎಂ.ಲಕ್ಷ್ಮಣ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣ ಅಧಿಕಾರಿ ಮೀನಾಕ್ಷಿ ನೇಗಿ, ಪಿಸಿಸಿಎಫ್ (ವನ್ಯಜೀವಿ ವಿಭಾಗ) ಪುಷ್ಕರ್, ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಇತರರು ಇದ್ದರು. ಅರಣ್ಯ…
ಮಡಿಕೇರಿ, NEWS DESK ಆ.28: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಬಿಟ್ಟು ಕೊಡಗಿನ ಜನರು ಹಾಗೂ ರೈತರ ಹಿತಾಸಕ್ತಿಗೆ ಅನುಗುಣವಾಗಿ ಸ್ಪಷ್ಟವಾದ ದಾಖಲೆ ಆಧಾರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಶಾಸಕರು ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇದು ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ರೈತರಿಗೆ ಸರಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು 2013ರಲ್ಲಿ ಅಂದಿನ ಕೇಂದ್ರ ಸರಕಾರ ಒಪ್ಪಿಕೊಂಡಿದ್ದು, ವರದಿ ಅಂಗೀಕಾರಗೊಂಡ ಬಳಿಕವೂ ಇದನ್ನು ಏಕೆ ಅನುಷ್ಠಾನಗೊಳಿಸಲಾಗಿಲ್ಲ ಎಂಬುದಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೇಂದ್ರ ಸರಕಾರವನ್ನು ಪ್ರಶ್ನಿಸುತ್ತಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ರಾಜ್ಯ ಸರಕಾರಕ್ಕೆ ಅವಕಾಶವಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ…
ಮಡಿಕೇರಿ ಆ.28 NEWS DESK : ಮಹಾನ್ ಚೇತನಗಳ ಜಯಂತಿಯನ್ನು ಆಚರಿಸುವುದರಿಂದ ದೇಶದ ಶ್ರೀಮಂತ ಇತಿಹಾಸ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಮರುಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ ಕುರಿತು ಉಪನ್ಯಾಸ ನೀಡಿದ ಮಕ್ಕಂದೂರು ಸಾಧ್ಯ ಟ್ರಸ್ಟಿ ಆಫ್ ಸೋಶಿಯಲ್ ಡೆವಲಪ್‍ಮೆಂಟ್ ಟ್ರಸ್ಟಿ ಬಿ.ಎನ್.ರಮೇಶ್ ಅವರು ಸಮಾಜದಲ್ಲಿ ಜಾತಿ, ಅಸ್ಪೃಶ್ಯತೆ ಹಾಗೂ ಅಸಮಾನತೆ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸಮಾನತೆಯ ಅರಿವು ಮೂಡಿಸಿದ ಮಹಾನ್ ಸಮಾಜ ಸುಧಾರಕರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರಮುಖರಾಗಿದ್ದಾರೆ ಎಂದರು. ದೇಶದ ಕೋಟ್ಯಾಂತರ ಜನರಲ್ಲಿ ಕೆಲವರು ಮಾತ್ರ ತಮ್ಮದೇ ಆದ…
ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಇಂದು ಸನ್ಮಾನಿಸಿ ಅಭಿನಂದಿಸಲಾಯಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು, ರಕ್ಷಾಬಂಧನದ ಅಂಗವಾಗಿ ಶಾಸಕರಿಗೆ ರಕ್ಷೆಯನ್ನು ಕಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾದ ಪೊನ್ನಕ್ಕಿ, ಪ್ರಧಾನ ಕಾರ್ಯದರ್ಶಿ ಕಾವೇರಮ್ಮ, ಟೀನಾ ಹಾಗೂ ಪ್ರಭಾ ಮುದ್ದಪ್ಪ ಉಪಸ್ಥಿತರಿದ್ದರು.
ಮಡಿಕೇರಿ, NEWS DESK ಆ.28 : ಮಡಿಕೇರಿ ದಸರಾ ಸಮಿತಿ ನಗರದ ಇತಿಹಾಸ ಪ್ರಸಿದ್ಧ ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿಗೆ ನಾಂದಿ ಹಾಡಿತು. ಮಡಿಕೇರಿ ದಸರಾ ಉತ್ಸವ ಅ.11 ರಂದು ಆರಂಭಗೊಳ್ಳಲಿದ್ದು, 21 ರಂದು ವಿಜಯದಶಮಿಯ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಳ್ಳಲಿದೆ. ರಾಜ್ಯ ಸರಕಾರ ಈಗಾಗಲೇ ಮಡಿಕೇರಿ ದಸರಾ ಸಂಭ್ರಮಕ್ಕೆ 2 ಕೋಟಿ ರೂ. ಅನುದಾನವನ್ನು ಘೋಷಿಸಿದೆ. ದಸರಾ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಾಗಿ ದಸರಾ ಸಮಿತಿ ಹಾಗೂ ದಶಮಂಟಪ ಸಮಿತಿ ಕಾರ್ಯೋನ್ಮುಖವಾಗಿವೆ. ಪ್ರತಿವರ್ಷದ ಸಂಪ್ರದಾಯದAತೆ ದಸರಾ ಪೂರ್ವಭಾವಿ ಸಿದ್ಧತೆಗೂ ಮೊದಲು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಮಿತಿಗಳ ಪ್ರಮುಖರು ಜನೋತ್ಸವದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾಗಿರುವ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ದಶಮಂಟಪ ಸಮಿತಿ ಅಧ್ಯಕ್ಷ ಪಾಂಡೀರ ಪೂಣಚ್ಚ, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ಪದಾಧಿಕಾರಿಗಳಾದ ಚುಮ್ಮಿ…
ಮಡಿಕೇರಿ, NEWS DESK ಆ.28 : ಕಸ್ತೂರಿ ರಂಗನ್ ವರದಿ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ವರದಿ ಜಾರಿಯಿಂದ ಕೊಡಗಿನ ಕಾಫಿ ಬೆಳೆಗಾರರಿಗೆ ಯಾವುದೇ ತೊಂದರೆಗಳೂ ಇಲ್ಲ. ಈ ವರದಿಯಿಂದ ಕಾವೇರಿ ನೀರನ್ನು ಬಳಸುವ ರಾಜ್ಯದ ಎಲ್ಲಾ ಜನರಿಗೆ ಲಾಭವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರಕಾರ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನ ಭಾರತದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಕೇಂದ್ರ ಮತ್ತು ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಅಗತ್ಯವಿಲ್ಲದ ಅಂಶಗಳನ್ನು ಕೈಬಿಡಲು ಪ್ರಯತ್ನಿಸಬೇಕು. ಆ ಮೂಲಕ ಜನರ ಆತಂಕವನ್ನು ದೂರ ಮಾಡಬೇಕು ಎಂದರು. ಕಸ್ತೂರಿ ರಂಗನ್ ವರದಿಯಲ್ಲಿ ಕೊಡಗಿನ 53 ಗ್ರಾಮಗಳನ್ನು ಸೂಕ್ಷö್ಮ ಪರಿಸರ ವಲಯಕ್ಕೆ ಒಳಪಡಿಸಲಾಗಿದೆ. ಇದರಲ್ಲಿ ಮಡಿಕೇರಿ ತಾಲ್ಲೂಕಿನ…






