ಲೇಖಕ: admin

ಮಡಿಕೇರಿ ಆ.15 NEWS DESK : ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾಡಿನ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಪೋಷಕರು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿಶೇಷ ಸಂದೇಶ ನೀಡಲಾಯಿತು. ಜೊತೆಗೆ, ಸ್ವಚ್ಛ ಮತ್ತು ನಿರ್ಮಲ ಸಮಾಜ ನಿರ್ಮಾಣದ ಬಗ್ಗೆಯೂ ಸಭಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ.ಬಿ.ಸೂರ್ಯ ಕುಮಾರ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ವೇದಿಕೆಯ ಅಧ್ಯಕ್ಷರಾದ ಮಹೇಶ್ ಆರ್ (ಅಪ್ಪು) ವಹಿಸಿದ್ದರು. ಗೌರವ ಅತಿಥಿಗಳಾಗಿ ನಿವೃತ್ತ ಸೇನಾನಿ ನಂದಿರ ಅಯ್ಯಪ್ಪ, ಪ್ರದೀಪ್ ಪಾಯಸ್, ಸಾಧಿಕ್ ಪಾಷಾ ಹಾಗೂ ನಗರಸಭಾ ಸದಸ್ಯರಾದ ಕೆ. ಎಸ್. ರಮೇಶ್ ಅವರು ಉಪಸ್ಥಿತರಿದ್ದರು. ವೇದಿಕೆಯ ಮಹಿಳಾ ಘಟಕದ ಸದಸ್ಯರು ದೇಶಭಕ್ತಿ ಗೀತೆಗಳನ್ನು ಹಾಡಿ ಎಲ್ಲರ ಗಮನ ಸೆಳೆದರು. ಅಲ್ಲದೆ, ದೇಶಕ್ಕಾಗಿ ವೀರ ಮರಣ ಹೊಂದಿದ ಯೋಧರಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ವಿವಿಧ ಸಂಘ…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಿಧಾನಪರಿಷತ್ ಮಾಜಿ  ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರಾದ ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್‌ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂಸ್ಥೆಯ ಬೋಧಕ ಆಸ್ಪತ್ರೆಯ ನೂತನ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಆರ್ಥಿಕ ಸಲಹೆಗಾರರಾದ  ಸೈಯದ್ ಸಮೀಉಲ್ಲಾ, ಡಾ.ಕಾರ್ಯಪ್ಪ ಕೆ.ಬಿ.‌ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು.

Read More

ಮಡಿಕೇರಿ ಆ.15 NEWS DESK :  ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿಶ್ವಮಾನವ ಉದ್ಯಾನವನದಲ್ಲಿ ಅಹಿಂದ ಮಾಜಿ ಅಧ್ಯಕ್ಷರಾದ ಮುದ್ದಯ್ಯ ಧ್ವಜಾರೋಹಣ ನೆರವೇರಿಸಿದರು. ಸಮಾಜ ಸೇವಕರಾದ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪುರಸಭೆ ಮಾಜಿ ಉಪಾಧ್ಯಕ್ಷರಾದ ಟಿ.ಎಂ.ಅಯ್ಯಪ್ಪ ಮಾತನಾಡಿ, ಸ್ವಾತಂತ್ರ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ರವಿಗೌಡ, ಮಹಿಳಾ ಅಧ್ಯಕ್ಷರಾದ ಕವಿತಾ ಪ್ರಸಾದ್, ಕಾರ್ಮಿಕ ಘಟಕದ ಅಧ್ಯಕ್ಷರಾದ ದಿವ್ಯ, ರೂಪ, ಮಡಿಕೇರಿ ನಗರ ಅಧ್ಯಕ್ಷರಾದ ಭರತ್, ಸಮಾಜ ಸೇವಕರಾದ ಕಲೀಲ್ ಭಾಷಾ, ರಾಷ್ಟ್ರೀಯ ಅಪರಾಧ ಮಾಹಿತಿ ವಿಭಾಗದ ಕರ್ನಾಟಕ ಡೆಪ್ಯೂಟಿ ಡೈರೆಕ್ಟರ್ ರಾಧಾ ಡಾ.ಜಾನ್ಸನ್,  ಫೀಲ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿ ಸಂಘದ ಅಧ್ಯಕ್ಷ ಮುನೀರ್ ಮಾಚರ್, ವೇದಿಕೆ ಸದಸ್ಯರುಗಳಾದ ಪುನೀತ್ ಜಿ.ಎನ್., ಹರ್ಷಿತ್ ಕುಮಾರ್, ಸೈಮನ್, ಎಂ.ಹೆಚ್.ಹಫೀಜ್ ಹಾಗೂ ಮತ್ತಿತರ ಸದಸ್ಯರು ಪಾಲ್ಗೊಂಡಿದ್ದರು. ವೇದಿಕೆ ಮಡಿಕೇರಿ ತಾಲ್ಲೂಕು ಕಾರ್ಯದರ್ಶಿ ಅಕ್ಷಿತ್  ಸ್ವಾಗತಿಸಿದರು. ತಾಲ್ಲೂಕು ಉಪಾಧ್ಯಕ್ಷ…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ಸೇರಿದಂತೆ ಹಲರನ್ನು ಸ್ಮರಿಸಿದ್ದು…

Read More

ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲೆ ಕ್ರೀಡಾ ಚಟುವಟಿಕೆಗಳಿಗೆ ಹೆಸರು ವಾಸಿಯಾಗಿದೆ. ಈ ಹಿನ್ನೆಲೆ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರೊಂದಿಗೆ ಕೊಡಗು ವಿವಿಯಲ್ಲಿ ‘ಸೆಂಟರ್ ಆಫ್ ಸ್ಪೋಟ್ಸ್ ಎಕ್ಸಲೆನ್ಸ್’ ಕೇಂದ್ರವನ್ನು ತೆರೆಯುವ ಚಿಂತನೆ ಇರುವುದಾಗಿ ವಿವಿ ಕುಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ಇತ್ತೀಚೆಗೆ ನವದೆಹಲಿಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆಗಳನ್ನು ನಡೆಸಲಾಗಿದೆಯೆಂದು ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Read More

ಮಡಿಕೇರಿ ಆ.14 NEWS DESK : ಕೊಡಗಿನಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ರಾಜ್ಯದ ಶೇಕಡವಾರು ಪ್ರಮಾಣಕ್ಕಿಂತ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯ ಪ್ರತಿ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಪಡೆಯಬೇಕೆನ್ನುವ ಉದ್ದೇಶ ಕೊಡಗು ವಿಶ್ವವಿದ್ಯಾನಿಲಯದ್ದಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ಕೊಡಗು ವಿವಿ ಕಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕರ್ನಾಟಕದಲ್ಲಿ ಶೇ.33 ಇದ್ದರೆ, ಕೊಡಗಿನಲ್ಲಿ ಇದರ ಪ್ರಮಾಣ ಕೇವಲ ಶೇ.18. ಈ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೊಡಗು ವಿವಿ ಶ್ರಮಿಸುತ್ತಿದ್ದು, ವಿವಿಯ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆಯಬೇಕೆಂದು ವಿನಂತಿಸಿಕೊಂಡರು. :: ಮೂರು ಹೊಸ ವಿಷಯಗಳ ಪಿಜಿ ಆರಂಭ :: ಚಿಕ್ಕಅಳುವಾರದ ಕೊಡಗು ವಿವಿಯಲ್ಲಿ ಪ್ರಸಕ್ತ ಸಾಲಿನಿಂದ ವಿಜ್ಞಾನ ವಿಭಾಗದಲ್ಲಿ ‘ಸಸ್ಯ ಶಾಸ್ತ್ರ’, ‘ಪರಿಸರ ವಿಜ್ಞಾನ’ ಹಾಗೂ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ’ ಹೊಸ ವಿಷಯಗಳ ಸ್ನಾತಕೋತ್ತರ ಪದವಿಗೆ ಅವಕಾಶವನ್ನು ಒದಗಿಸಲಾಗಿದೆಯೆಂದು…

Read More

ಮಡಿಕೇರಿ ಆ.14 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಆಗಸ್ಟ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯುವ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ವತಿಯಿಂದ ಆಯೋಜಿಸಿರುವ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಲಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ವರುಣ್ ಕುಮಾರ್ ಬಿ. ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಆ.14 NEWS DESK : ಭಾರತದ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮ ದಿನದ ಪ್ರಯುಕ್ತ ಕೊಡಗಿನ ವಿವಿಧ ಗ್ರಂಥಾಲಯಗಳಲ್ಲಿ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿ ಹಾಗೂ ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಶಾಖಾ ಗ್ರಂಥಾಲಯಗಳು, ಮೇಲ್ಜರ್ಜೆಗೇರಿದ ಮುಳ್ಳುಸೋಗೆ ಗ್ರಂಥಾಲಯ, ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ, ಅಲೆಮಾರಿ ಸಮುದಾಯ ಗ್ರಂಥಾಲಯ, ಜಿಲ್ಲಾ ಕಾರಾಗೃಹ ವಾಚನಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಪುಸ್ತಕ ಪ್ರದರ್ಶನ ಏರ್ಪಡಿಸುವ ಮೂಲಕ ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ಕಚೇರಿಯಲ್ಲಿ ಪುಸ್ತಕ ಪ್ರದರ್ಶನವನ್ನು ವಿಶ್ರಾಂತ ಆಕಾಶವಾಣಿ ಉದ್ಘೋಷಕರು ಹಾಗೂ ಸಾಹಿತಿ ಸುಬ್ರಾಯ ಸಂಪಾಜೆ ಅವರು ಉದ್ಘಾಟಿಸಿ ಮಾತನಾಡಿ, ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮ ದಿನಾಚರಣೆಯ ಈ ಸುಸಂದರ್ಭದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದರು. ‘ಗ್ರಂಥಾಲಯವು ಅಕ್ಷರದ ಮೂಲಕ ತಿಳುವಳಿಕೆಯನ್ನು ಜ್ಞಾನ ಸಂಪತ್ತನ್ನು ಲೋಕದ ಮನಸ್ಸು ಮನಸ್ಸುಗಳಿಗೆ ಪಸರಿಸುವಂತಹ ಕೆಲಸ ಮಾಡುತ್ತಿದೆ. ಅಕ್ಷರ ಎನ್ನುವುದೇ ಒಂದು…

Read More