ಲೇಖಕ: admin

ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ಆ.20 ರಂದು ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ್ ಅರಸು ಅವರ 110ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯರು ಹಾಗೂ ಅರಗು ಮತ್ತು ಬಣ್ಣದ ಕಾರ್ಖಾನೆ ನಿಗಮದ ಮಾಜಿ ಅಧ್ಯಕ್ಷ ಹೆಚ್.ಎ.ವೆಂಕಟೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಟಿ.ಪಿ.ರಮೇಶ್ ವಹಿಸಲಿದ್ದಾರೆ ಎಂದರು. ಸಾಹಿತಿ ಡಾ.ಬೆಸೂರು ಮೋಹನ್ ಪಾಳೇಗಾರ್ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಮೂರ್ನಾಡು ಕೊಡವ ಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ರಾಜ್ಯ ಅಹಿಂದ…

Read More

ಮಡಿಕೇರಿ ಆ.14 NEWS DESK : ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು  ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.16 ರಂದು ರಾತ್ರಿ 10 ಗಂಟೆಗೆ ದೇವಾಲಯದಲ್ಲಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ ಹಾಗೂ ಕೀರ್ತನೆಗಳು ನಡೆಯಲಿದ್ದು, ಮಧ್ಯರಾತ್ರಿ ಮಹಾಪೂಜೆ ಜರುಗಲಿದೆ.  ಭಕ್ತಾಧಿಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. :: ಮೊಸರು ಕುಡಿಕೆ ಒಡೆಯುವುದು, ಛದ್ಮವೇಷ ಸ್ಪರ್ಧೆ :: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.23 ರಂದು ಅಪರಾಹ್ನ 4 ಗಂಟೆಗೆ  ದೇವಾಲಯದಲ್ಲಿ ಮೊಸರು ಕುಡಿಕೆ ಒಡೆಯುವುದು ಮತ್ತು ಮಕ್ಕಳಿಗೆ ಶ್ರೀ ಕೃಷ್ಣ, ರಾಧೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿದೆ. ಭಾಗವಹಿಸುವ ಮಕ್ಕಳು ತಮ್ಮ ಹೆಸರನ್ನು 9482192248, 9731411523, 8095858864 ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

Read More

ವಿರಾಜಪೇಟೆ ಆ.14 NEWS DESK : ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಸಿಐಟಿಯುನ ನೂತನ ಕೊಡಗು ಜಿಲ್ಲಾ ಸಮಿತಿ ಸದಸ್ಯರಾಗಿ ಜಿಲ್ಲೆಯ ಐದು ತಾಲ್ಲೂಕಿನ ಸದಸ್ಯರನ್ನು ಒಳಗೊಂಡು 31 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದು ನೂತನ ಅಧ್ಯಕ್ಷರಾಗಿ ಎ.ಸಿ ಸಾಬು ಮರು ಆಯ್ಕೆಗೊಂಡಿದ್ದಾರೆ. ಗೌರವ ಅಧ್ಯಕ್ಷರಾಗಿ ವಕೀಲರಾದ ಪ್ರಮೋದ್, ಉಪಾಧ್ಯಕ್ಷರುಗಳಾಗಿ ಬೈಜು, ಹಮೀದ್, ಉಷಾ, ಮಂಗಳ, ಕೆ.ಯು.ಲಲಿತ ಕುಮಾರಿ, ಕಾರ್ಯದರ್ಶಿಗಳಾಗಿ ಕೆ.ಎಸ್ ರಮೇಶ್(ಶಾಜಿ), ಸಹ ಕಾರ್ಯದರ್ಶಿಗಳಾಗಿ ಕೆ.ಕೆ.ಹರಿದಾಸ್, ಮೊಣ್ಣಪ್ಪ, ಮಹೇಶ್, ಸುದರ್ಶನ್ ನೇಮಕಗೊಂಡಿದ್ದಾರೆ. ಖಜಾಂಚಿಯಾಗಿ ಕೆ.ಎ.ಖಾಶಿಂ ಅವರನ್ನು ಒಳಗೊಂಡು 13 ಸದಸ್ಯರನ್ನು ಪದಾಧಿಕಾರಿಗಳಾಗಿ ಮತ್ತು 18 ಸದಸ್ಯರ ನೂತನ ಜಿಲ್ಲಾ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಆ.14 NEWS DESK : ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೇಟಿ ನೀಡಿ ಪರಿಶೀಲಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಇತರರು ಇದ್ದರು.

Read More

ಮಡಿಕೇರಿ ಆ.14 NEWS DESK : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವಂತೆ ಗೌರಿ- ಗಣೇಶೋತ್ಸವ ಸಂದರ್ಭ ‘ಡಿಜೆ’ ಬಳಸಕೂಡದು. ಸಮುದಾಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಗಣೇಶೋತ್ಸವ ಸಮಿತಿಗಳು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದರು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ‘ಗೌರಿ-ಗಣೇಶೋತ್ಸವ ಆಯೋಜಕರ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಜೆಯ ಅತೀ ಹೆಚ್ಚಿನ ಶಬ್ದ ಮಟ್ಟದಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಜವಾಬ್ದಾರಿ. ಇದನ್ನು ಉತ್ಸವ ಆಯೋಜಕರು ಗಮನದಲ್ಲಿರಿಸಿಕೊಳ್ಳಬೇಕು ಮತ್ತು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲೆ ಬೇಕಾಗುವುದರಿಂದ ನಮ್ಮ ನಿಮ್ಮಗಳ ಸಂಬಂಧ ಹಾಳಾಗಬಹುದೆಂದು ಸೂಕ್ಷ್ಮವಾಗಿ ನುಡಿದರು. ಪ್ರೆಶರ್ ಮಿಡ್ ಬಳಕೆ ಅಪಾಯಕಾರಿ- ಉತ್ಸವಗಳ ಸಂದರ್ಭ ಬಳಸುವ ಸ್ಪೀಕರ್‍ಗಳಲ್ಲಿ ‘ಪ್ರ್ರೆಶರ್ ಮಿಡ್’ಗಳನ್ನು ಬಳಸುವುದು ಅತ್ಯಂತ ಅಪಾಯಕಾರಿ. ಒಂದು ಪ್ರ್ರೆಶರ್ ಮಿಡ್‍ನಿಂದ 110 ಡೆಸಿಬಲ್ ಪ್ರಮಾಣದ…

Read More

ವಿರಾಜಪೇಟೆ ಆ.14 NEWS DESK : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ತಿತಿಮತಿ (ಪಂಜರ ಪೇಟೆ)ವಿರಾಜಪೇಟೆ ತಾಲೂಕು ಕೊಡಗು ಜಿಲ್ಲೆ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (PCMB)ಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಪ್ರಾಂಶುಪಾಲರು 9448874562 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಆ.14 NEWS DESK : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಉಚಿತವಾಗಿ ತ್ರಿವರ್ಣ ಧ್ವಜ ವಿತರಣೆ ಮಾಡಲಾಗುತ್ತಿದ್ದು, ಆಸಕ್ತರು ಸಂಪರ್ಕಿಸುವಂತೆ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ. ಹರ್ ಘರ್ ತಿರಂಗ ಎನ್ನುವ ಭಾರತೀಯ ಅಂಚೆ ಕಚೇರಿಯ ಪರಿಕಲ್ಪನೆಯಡಿಯಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು ಅವರು ಅಂಚೆ ಕಛೇರಿಯಿಂದ 100 ( ನೂರು )ತ್ರಿವರ್ಣ ಧ್ವಜಗಳನ್ನು ಖರೀದಿಸಿ ಅದನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತರು ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕದ ಪ್ರಧಾನ ಸಂಚಾಲಕರಾದ ಜಯಲಕ್ಷ್ಮಿ ಕೆ ಇವರಿಂದ ಪಡೆದುಕೊಳ್ಳಬೇಕಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವಿನಂತಿಸಿಕೊಂಡಿದೆ.

Read More

ಮಡಿಕೇರಿ ಆ.14 NEWS DESK : 41 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಡಿಕೇರಿಯ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಆ.15 ರಂದು ಕಾಮಗಾರಿಯ ಶಿಲಾನ್ಯಾಸ ನಡೆಯಲಿದೆ.  ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಧನ್ಯವಾದ ಸಲ್ಲಿಸಿದರು.

Read More

ನಾಪೋಕ್ಲು ಆ.14 NEWS DESK : ವಿದ್ಯಾರ್ಥಿ ಜೀವನದಲ್ಲಿ, ಚಂಚಲ ಮನಸ್ಸನ್ನು ನಿಯಂತ್ರಿಸಲು ಏಕಾಗ್ರತೆ ಮತ್ತು ಶಿಸ್ತು ಬಹಳ ಮುಖ್ಯ ಎಂದು ಬೆಟ್ಟಗೇರಿ ಉದಯ ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಭಾರತ ಸರ್ಕಾರ ಕಾಫೀ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ, ವಲಯ ಮತ್ತು ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಬೆಟ್ಟಗೇರಿ ಉದಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯ ಕುರಿತಂತೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ…

Read More

ನಾಪೋಕ್ಲು ಆ.14 NEWS DESK : ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತವಾಗಿ ಸಂಘಟನೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಸಂಘಟನೆಯ ಸ್ವಯಂಸೇವಕರಾದ ಧನಂಜಯ ಅಗೋಳಿಕಜೆ ಮಾತನಾಡಿ, ರಕ್ಷಾ ಬಂಧನದ ಮಹತ್ವವನ್ನು ವಿವರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗೂ ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆಯಾಗಿದ್ದು, 27 ಸೆಪ್ಟೆಂಬರ್ 1925ರ ವಿಜಯ ದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು. ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ. ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿಸಿ ಸಾಮಾನ್ಯವಾಗಿ “ಸಂಘ ಪರಿವಾರ” ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಸ್ವಯಂಸೇವಕ…

Read More