ನಾಪೋಕ್ಲು ಆ.14 NEWS DESK : ಕೊಟ್ಟಮುಡಿ ಕೆ.ಎಂ.ಜೆ, ಎಸ್.ವೈ.ಎಸ್, ಎಸ್.ಎಸ್.ಎಫ್ ಕೊಟ್ಟಮುಡಿ ಶಾಖೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ನಾಪೋಕ್ಲು, ಬೆಟ್ಟಗೇರಿ, ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕೊಟ್ಟಮುಡಿ ಮರ್ಕಝ್ ಸಂಸ್ಥೆಯಿಂದ ಕೊಟ್ಟಮುಡಿ, ಮೂರ್ನಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ತುಂಬಿಕೊಂಡಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ವಚ್ಚತಾ ಕಾರ್ಯದಲ್ಲಿ ಎಸ್‍ವೈಎಸ್ ಕೊಟ್ಟಮುಡಿ ಶಾಖೆ ಅಧ್ಯಕ್ಷ ಹುಸೈನ್ ಝುಹ್ರಿ, ಉಪಾಧ್ಯಕ್ಷ ಮೈಸಿ ಕತ್ತಣೀರ, ಕಾರ್ಯದರ್ಶಿ ರಫೀಕ್ ಅಝ್ಹರಿ, ಕೊಡಗು ಜಿಲ್ಲಾ ಇಸಾಬ ಕಾರ್ಯದರ್ಶಿ ಬಷೀರ್, ಮಡಿಕೇರಿ ಡಿವಿಷನ್ ಇಸಾಬ ಕಾರ್ಯದರ್ಶಿ ಅಶ್ಕರ್ ಸಖಾಫಿ, ಕೆ.ಎಂ.ಜೆ ಉಪಾಧ್ಯಕ್ಷ ಶಾದುಲಿ ಹಾಜಿ, ಆರ್.ಎಂ.ಹಸೈನಾರ್, ಸದಸ್ಯರುಗಳಾದ ಖಲೀಲ್ ಹಿಮಮಿ, ಹಮೀದ್ ಮಮ್ಮು, ಮೂಸಾನ್, ಅಬೂಬಕರ್, ಹಂಸ ಬೀಟಿಬಾಣೆ, ಬಸೀಪ, ಝಕರಿಯ್ಯ, ಹಮೀದ್ ಬಲಿಪುರ, ಬಷೀರ್, ಹಸೈನಾರ್ ಬಲಿಪುರ, ಸಿ.ಎ.ಹಸೈನಾರ್, ಆಬಿದ್ ಮತ್ತು ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಆ.14 NEWS DESK : ತುಮಕೂರಿನಲ್ಲಿ ಇನ್ಫನೈಟ್ ಡಾನ್ಸ್ ಸ್ಟುಡಿಯೋ ವತಿಯಿಂದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ 50,000/- ನಗದು ಹಾಗೂ ಟ್ರೋಫಿ ಯನ್ನು ತನ್ನದಾಗಿಸಿಕೊಂಡಿದೆ. ಸ್ಪರ್ಧೆಯ ತೀರ್ಪುಗಾರರಾಗಿ ಡಾನ್ಸ್ ಕರ್ನಾಟಕ ಡಾನ್ಸ್ ನಾ ಶಶಿ ಮಾಸ್ಟರ್, ಜಗ್ಗ ಮಾಸ್ಟರ್, ರಾಹುಲ್ ರಾವ್, ಶೋಭಿತ ಕಾರ್ಯನಿರ್ವಹಿಸಿದರು. ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್ ನಲ್ಲಿ ವಿ ಪಿ ನ್ ಹಾಗೂ ಯು ಸ್ ಏ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದೆ, ಇದರ ತೀರ್ಪುಗರರಾಗಿ ಡಿ ಕೆ ಡಿ ಯ ಅರುಣ್ ಮಾಸ್ಟರ್ ಕಾರ್ಯನಿರ್ವಹಿಸಿದರು. ಸತತ ಮೂರು ಪ್ರಥಮ ಸ್ಥಾನ ಪಡೆಯುವ ಮೂಲಕ ಕಿಂಗ್ಸ್ ವಿದ್ಯಾರ್ಥಿಗಳು ಹ್ಯಾಟ್ರಿಕ್ ವಿಜಯ ಪಡೆದಿದ್ದಾರೆ. ತಂಡದ ಕೊರಿಯೋಗ್ರಾಫರ್ ಮಹೇಶ್ ಹಾಗೂ ಕಿರಣ್ ನೇತೃತ್ವದಲ್ಲಿ ವರುಣವಿ, ಪ್ರಜ್ಞಾ, ಯಶ್ವಿತ, ದೀಪಿಕ್ಷಾ, ಹುಂಶಿಕ, ವರ್ಷಿಣಿ ಶೆಟ್ಟಿ, ತ್ರಿಶ, ಸೋನಾಕ್ಷಿ,…
ನಾಪೋಕ್ಲು ಆ.14 NEWS DESK : ಶಿಕ್ಷಣ ಇಲಾಖೆಯಲ್ಲಿ 31ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ.ಹಿ.ಪ್ರಾ.ಶಾಲೆ ಪಡಿಯಾಣಿಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕರಾದ ಕೆ.ಸಿ.ದಮೇಂದ್ರ ಅವರನ್ನು ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ., ವಿದ್ಯಾರ್ಥಿಗಳು, ಮಡಿಕೇರಿ ತಾಲೂಕಿನ ಶಿಕ್ಷಕರ ಸಂಘ, ಬಿ.ಆರ್.ಸಿ. ವತಿಯಿಂದ ಕೆ.ಸಿ.ದಮೇಂದ್ರ ದಂಪತಿಗಳಿಗೆ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ನಿವೃತ್ತಿ ಹೊಂದಿದ ಕೆ.ಸಿ.ದಮೇಂದ್ರ ಶಾಲೆಗೆ ಮರದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಸಮಾರಂಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಬೋಜಮ್ಮ, ಸಹ ಶಿಕ್ಷಕಿಯರಾದ ಕೆ.ಎ.ಹೇಮಮಾಲಿನಿ, ಕೆ.ಜೆ.ರಾಧಾ, ಕೆ.ಎಂ.ಬುಶೀರ, ನಿವೃತ್ತ ದೈಹಿಕ ಶಿಕ್ಷಕಿ ಎಂ.ಬಿ.ಭಾರತಿ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮತ್ತು ಸದಸ್ಯರು, ಬಿ.ಆರ್.ಸಿ ಮಂಜುಳಾ ಚಿತ್ರಾಪುರ, ಪ್ರಸಾದ್, ಎಸ್.ಡಿ.ಎಂ.ಸಿ ಪದಾಧಿಕಾರಿ ಸದಸ್ಯರು, ಶಿಕ್ಷಕರು, ಪೋಷಕರು ಹಾಜರಿದ್ದರುರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಹೆಬ್ಬಾಲೆ ಕೆನರಾ ಬ್ಯಾಂಕ್, ಹೆಬ್ಬಾಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಆರ್ಥಿಕ ಸಲಹೆಗಾರರದ ನಬಿ ಮಾತನಾಡಿ, ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ…
ಸಿದ್ದಾಪುರ ಆ.14 NEWS DESK : ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಯ್ಕೆಗೆ ನಡೆದ ಚುನಾವಣೆಯಲ್ಲಿ ಪ್ರತಿಸರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರುಗಳಿರುವ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷೆ ಆಕಾಂಕ್ಷಿಯಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರ ಆಕಾಂಕ್ಷಿಯಾಗಿ ಎಂ.ಎನ್.ವಿಜು ನಾಮಪತ್ರ ಸಲ್ಲಿಸಿದರು. ನಾಮಪತ್ರ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು ಪ್ರತಿಸ್ಪರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವರನ್ನ ಅವಿರೋಧವಾಗಿ ಆಯ್ಕೆಯ ಘೋಷಣೆ ಮಾಡಿದರು. 17 ಸದಸ್ಯರ ಪೈಕಿ ಓರ್ವ ಸದಸ್ಯೆ ಗೈರಾಜರಾಗಿದ್ದರು. ವಿರಾಜಪೇಟೆ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿದ್ದ ಪಿ.ಸಿ.ಪ್ರವೀಣ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳಾದ ಗಣೇಶ್, ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಶ್ರೀಕಾಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನೂತನ ಅಧ್ಯಕ್ಷೆ ಜಯಲಕ್ಷ್ಮಿ ಮಾತನಾಡಿ 2…
ಮಡಿಕೇರಿ ಆ.14 NEWS DESK : ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತಡೆಯಲು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕುಗಳ ಕೈಗಾರಿಕ ಪ್ರದೇಶಗಳಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರ ಬಳಸುತ್ತಿರುವ ಕಾರ್ಖಾನೆ/ ಕೈಗಾರಿಕೆಗಳನ್ನು ಪತ್ತೆ ಹಚ್ಚಿ, ಬಳಸುತ್ತಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಹಾಗೂ ರಸಗೊಬ್ಬರ (ನಿಯಂತ್ರಣ) ಆದೇಶ 1985ರ ಅನ್ವಯ ಸೂಕ್ತ ಕ್ರಮ ವಹಿಸಲು ಹಾಗೂ ಅಂತಹ ಕೈಗಾರಿಕೆಗಳ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಅವರು ಕೃಷಿ, ಕೈಗಾರಿಕೆ ಮತ್ತು ವಾಣಿಜ್ಯ, ತೋಟಗಾರಿಕೆ, ಕಾಫಿ ಮಂಡಳಿ, ಪೊಲೀಸ್ ಹಾಗೂ ಅರಣ್ಯ ಇಲಾಖೆಗಳನ್ನು ಒಳಗೊಂಡಂತೆ ತಾಲ್ಲೂಕುವಾರು 3 (ಮೂರು) ತಂಡಗಳನ್ನು ರಚಿಸಿ ಆದೇಶಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಕೆ ಮಾಡುತ್ತಿರುವುದು ಅಥವಾ ಅಕ್ರಮವಾಗಿ ದಾಸ್ತಾನು ಮಾರಾಟ ಮತ್ತು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ದೂರವಾಣಿ…
ಕಾರ್ಕಳ ಆ.14 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಪುಸ್ತಕ ಧಾರೆ – 2025 ” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ” ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ರವರು ” ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ” ಎಂದರು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್…
ಗೋಣಿಕೊಪ್ಪ ಆ.13 NEWS DESK : ಗೌರಿ ಗಣೇಶ ಹಬ್ಬದ ಸಂಭ್ರಮವಾಗಿ ಗಿಡುಗ ಸಿನಿಮಾ ರಾಜ್ಯಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಕೆಂಪೇಗೌಡ ಮಾಗಡಿ ತಿಳಿಸಿದ್ದಾರೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಿಡುಗ ಸಿನಿಮಾ ಅಣ್ಣ ತಂಗಿಯ ಬಾಂಧವ್ಯದ ಬೆಸುಗೆಯ ಕೌಟುಂಬಿಕ ಕಥೆಯನ್ನು ಹೊಂದಿರುವ ಸಿನಿಮವಾಗಿದೆ. ಸಿನಿಮಾದಲ್ಲಿ ಒಂದು ಕೊಲೆಯ ಸುತ್ತ ನಡೆಯುವ ಘಟನೆಗಳನ್ನು ಆಧರಿಸಿ ತ್ರಿಲ್ಲಿಂಗ್ ನೀಡಲಾಗಿದೆ. ಸಿನಿಮಾದಲ್ಲಿರುವ ಮೂರು ಅತ್ಯುತ್ತಮ ಹಾಡುಗಳು ಈಗಾಗಲೇ ಜನಪ್ರಿಯಗೊಂಡಿದೆ ಎಂದು ತಿಳಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಸಿನಿಮಾ ನಡೆಯಲಿದ್ದು, 40 ದಿನಗಳಲ್ಲಿ ಬೆಂಗಳೂರು, ಮಾಗಡಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಸುಮಾರು 30ಕ್ಕೂ ಹೆಚ್ಚು ಕಲಾವಿದರು ಚಿತ್ರದಲ್ಲಿ ಪಾತ್ರದಾರಿಗಳಾಗಿ ಸಿನಿಮಾಕ್ಕೆ ಜೀವ ತುಂಬಿದ್ದಾರೆ ಎಂದರು. ಸಿನಿಮಾ ಪ್ರೇಕ್ಷಕರನ್ನು ಸಂಪೂರ್ಣವಾಗಿ ಮನತಣಿಸಲು ಈ ತಂಡ ತಮ್ಮ ಕಲಾ ಕೌಶಲ್ಯವನ್ನು ದಾರೆ ಎರೆದಿದೆ ಎಂದರು. ಸಿನಿಮಾದ ನಾಯಕ ನಟನಾಗಿ ಕೊಡಗಿನ ನಿವಾಸಿ ರತೀಶ್ ಹುದಿಕೇರಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ಈಗಾಗಲೇ…
ಮಡಿಕೇರಿ ಆ.13 NEWS DESK : ಮಾದರಿ ಸೌರಗ್ರಾಮ ಯೋಜನೆಯಡಿಯಲ್ಲಿ ಭಾರತ ಸರ್ಕಾರ `ಸೌರ ವಿದ್ಯುತ್’ ಉತ್ಪಾದನೆಯ ಪಾಲನ್ನು ಹೆಚ್ಚಿಸುವ ಗುರಿ ಹೊಂದಿದೆ. ಎಂಎನ್‍ಆರ್‍ಐ ಮಾದರಿ ಸೂಚಿಯಂತೆ ಪ್ರತಿ ಜಿಲ್ಲೆಯಲ್ಲಿ 5 ಸಾವಿರ ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಹಾಲಿ ವಿದ್ಯುತ್ ಜಾಲದಿಂದ ಸಂಪರ್ಕ ಹೊಂದಿರುವ ಕಂದಾಯ ಗ್ರಾಮಗಳು ಸ್ಪರ್ಧಿಸುವ ಅವಕಾಶ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಬಿದರೂರು, ಚೌಡ್ಲು, ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು-ಕೂಡಿಗೆ ಮತ್ತು ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಗ್ರಾಮಗಳನ್ನು ಪೊಟೆನ್ಸ್ಯಯಲ್ ಕ್ಯಾಂಡಿಡೇಟ್ ಗ್ರಾಮಗಳಾಗಿ ಗುರುತಿಸಲಾಗಿದೆ. ಪೊಟೆನ್ಸ್ಯಯಲ್ ಕ್ಯಾಂಡಿಡೇಟ್ ಗ್ರಾಮಗಳಾಗಿ ಆಯ್ಕೆಯಾಗಿರುವ ಗ್ರಾಮಗಳಿಗೆ 2025 ರ ಜು.1 ರಿಂದ 6 ತಿಂಗಳ ಅವಧಿ (31-12-2025) ನೀಡಲಾಗಿದ್ದು, ಈ ಅವಧಿಯಲ್ಲಿ ವಿವಿಧ ಯೋಜನೆಗಳನ್ನು ಗರಿಷ್ಠ ಮಟ್ಟದಲ್ಲಿ ಅನುಷ್ಠಾನಗೊಳಿಸಿ ಹೆಚ್ಚಿನ ನವೀಕರಿಸಬಹುದಾದ ಸೌರವಿದ್ಯುತ್ ಉತ್ಪಾದನೆಯ ಗುರಿಯನ್ನು ಸಾಧಿಸುವ ಗ್ರಾಮವನ್ನು ಮಾದರಿ ಸೌರಗ್ರಾಮ ಎಂದು ಆಯ್ಕೆ ಮಾಡಲಾಗುವುದು. ಆಯ್ಕೆ ಆಗುವ ಮಾದರಿ ಸೌರಗ್ರಾಮಕ್ಕೆ ರೂ.1 ಕೋಟಿ ಕೇಂದ್ರಿಯ ಹಣಕಾಸಿನ…
ಮಡಿಕೇರಿ ಆ.13 NEWS DESK : ನ್ಯಾಯಾಲಯದ ಸೂಚನೆ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಮಡಿಕೇರಿ ನಗರದ ಅಂಚಿನಲ್ಲಿರುವ, ರಾಜ್ಯ ಸುರಕ್ಷಿತ ಸ್ಮಾರಕವಾದ ಗದ್ದುಗೆಯ ಒತ್ತುವರಿ ಜಾಗದಲ್ಲಿರುವ ಅನಧಿಕೃತ ನಿರ್ಮಾಣಗಳನ್ನು ಶೀಘ್ರ ತೆರವುಗೊಳಿಸುವಂತೆ ಜಿಲ್ಲಾ ಲಿಂಗಾಯತ ಮತ್ತು ವೀರಶೈವ ಮಹಾಸಭಾದ ಪದಾಧಿಕಾರಿಗಳು ಹಾಗೂ ಗದ್ದುಗೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗದ್ದುಗೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು, ಕಳೆದ ಕೆಲವು ದಶಕಗಳಿಂದ ಗದ್ದುಗೆಯ 19.86 ಎಕರೆ ಜಾಗದ ಪೈಕಿ ಒತ್ತುವರಿಯಾಗಿರುವ 1.18 ಎಕರೆ ಜಾಗದಲ್ಲಿರುವ ಅನಧಿಕೃತ ಒತ್ತುವರಿಗಳನ್ನು ತೆರವು ಮಾಡುವಂತೆ ಆಗ್ರಹಿಸಿಕೊಂಡು ಬರಲಾಗುತ್ತಿದೆ. ಒತ್ತುವರಿ ತೆರವು ಕಾರ್ಯ ನಡೆಯುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಪುರಾತತ್ವ ಇಲಾಖೆಗೆ ಒಳಪಟ್ಟ ಸ್ಮಾರಕಗಳಿಗೆ ಸಂಬಂಧಿಸಿದ ಜಾಗವನ್ನು ಇತರರಿಗೆ ಪರಭಾರೆ ಮಾಡುವುದಾಗಲಿ, ನಿವೇಶನಗಳನ್ನಾಗಿ ನೀಡಲು ಬರುವುದಿಲ್ಲ. ಹೀಗಿದ್ದೂ ಗದ್ದುಗೆಗೆ ಸೇರಿದ ಜಾಗದಲ್ಲಿ ಮನೆಗಳು, ಶಾಲೆ, ಹೋಟೆಲ್, ಐಟಿಡಿಪಿ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ. ಅನಧಿಕೃತ…






