ಲೇಖಕ: admin

ಮಡಿಕೇರಿ ಆ.13 NEWS DESK : ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಆ.20 ರಂದು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಭಾಷಣ, ರಾಷ್ಟ್ರಗೀತೆ ಸ್ಪರ್ಧೆಯನ್ನು ಆಯೋಜಿಸುವಂತಾಗಬೇಕು. ವಿಜೇತ ಮಕ್ಕಳಿಗೆ ಸೂಕ್ತ ಬಹುಮಾನ ವಿತರಿಸಲು ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ನಿಲಯಾರ್ಥಿಗಳನ್ನು ಸನ್ಮಾನಿಸುವಂತಾಗಬೇಕು. ಡಿ.ದೇವರಾಜ ಅವರ ವಿಚಾರಧಾರೆಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಣ್ಣ…

Read More

ಮಡಿಕೇರಿ ಆ.13 NEWS DESK : ಭಾರತೀಯ ಅಂಚೆ ಇಲಾಖೆ ವತಿಯಿಂದ ವಿಶ್ವ ಆನೆ ದಿನ-2025 ಪ್ರಯುಕ್ತ ವಿಶೇಷ ಅಂಚೆ ಲಕೋಟೆಯನ್ನು ಕೊಡಗು ವಿಭಾಗದ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ದುಬಾರೆ ಸಾಕಾನೆ ಶಿಬಿರದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವಿಶೇಷ ಅಂಚೆ ಲಕೋಟೆಯನ್ನು ಹರ್ಷ ಎಂಬ ಆನೆ ಹೊತ್ತಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಸಿಸಿಎಫ್ ಕೊಡಗು ವೃತ್ತ, ಡಿಸಿಎಫ್ ಮಡಿಕೇರಿ ವಿಭಾಗ, ಎಸಿಎಫ್ ಮಡಿಕೇರಿ, ಆರ್‍ಎಫ್‍ಒ ಕುಶಾಲನಗರ ವಿಭಾಗ ಹಾಗೂ ಅಂಚೆ ಇಲಾಖೆಯ ಕೊಡಗು ವಿಭಾಗದ ಅಧೀಕ್ಷರು, ಸಹಾಯಕ ಅಂಚೆ ಅಧೀಕ್ಷಕರು ಮತ್ತು ಎರಡು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕೊಡಗು ಜಿಲ್ಲೆಯ ಮಡಿಕೇರಿ ವಿಭಾಗದ ಕುಶಾಲನಗರದಲ್ಲಿರುವ ದುಬಾರೆ ಸಾಕಾನೆ ಶಿಬಿರವು ಸುಮಾರು 34 ಏಷ್ಯಾಟಿಕ್ ಆನೆಗಳನ್ನು ಹೊಂದಿದೆ. ಸಂಘರ್ಷದಲ್ಲಿರುವ ಕಾಡಾನೆಗಳನ್ನು ರಕ್ಷಿಸುವುದು, ಸೆರೆಹಿಡಿಯುವುದು, ಸ್ಥಳಾಂತರ ಮಾಡುವುದು ಮತ್ತು ಪಳಗಿಸುವುದು ಈ ದುಬಾರೆ ಸಾಕಾನೆ ಶಿಬಿರದ ಉದ್ದೇಶವಾಗಿದೆ. ಇದರ ಜೊತೆಗೆ ಗಾಯಗೊಂಡ ಕಾಡಾನೆಗಳು ಹಾಗೂ ತಾಯಿ ಕಳೆದುಕೊಂಡ ಆನೆ ಮರಿಗಳನ್ನು ಸಹ ಈ…

Read More

ಮಡಿಕೇರಿ ಆ.13 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಯಂಸೇವಕರಿಗೆ ಸಾಮಾಜಿಕ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಮಡಿಕೇರಿ ಸರ್ಕಲ್ ಇನ್ಸ್ಪೆಕ್ಟರ್ ಪಿ.ಕೆ.ರಾಜು ಅವರು ಸ್ವಯಂ ಸೇವಕರಿಗೆ ದಸರಾ ಆಚರಣೆಯಲ್ಲಿ ಡಿಜೆಗಳ ಹಾವಳಿ ಯಿಂದಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಿದರು. ನಂತರ ಸ್ವಯಂಸೇವಕರಿಗೆ ಡಿಜೆ ನಡೆಸುವ ಕುರಿತು ಪರ ಹಾಗೂ ವಿರೋಧ ಚರ್ಚಾ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು, ನಮ್ಮ ಸಂಪ್ರದಾಯವಾದ ಜನಪದ ನೃತ್ಯ, ಶಾಸ್ತ್ರೀಯ ಸಂಗೀತದ ಕಡೆಗೆ ವಿದ್ಯಾರ್ಥಿಗಳು ಒಲವು ಬೆಳೆಸಿಕೊಳ್ಳಬೇಕು. ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಸಾಮಾಜಿಕ ಅವಘಡಗಳಿಗೆ ಕಾರಣವಾಗಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎ.ಎಸ್.ಐ ರಾಮಪ್ಪ ಪೂಜಾರಿ ಹಾಗೂ ಪೊಲೀಸ್ ಇಲಾಖೆಯ ಡ್ಯಾನಿಲ್ , ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಶೈಲಶ್ರೀ ಕೆ…

Read More

ಸಿದ್ದಾಪುರ ಆ.13 NEWS DESK : ಸಿದ್ದಾಪುರದ ಸರ್ಕಾರಿ ಮಲಯಾಳಂ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಚುಗಳನ್ನು ವಿತರಣೆ ಮಾಡಲಾಯಿತು. ನೆಲ್ಯಹುದಿಕೇರಿಯ ಸಮಾಜ ಸೇವಕ ಕೆ.ಎಂ.ಬಶೀರ್ ಅವರ ಸಹಕಾರದೊಂದಿಗೆ ಸಮಾಜ ಸೇವಾ ಸಂಘಟನೆಯ ಯುವಕರು ನಾಲ್ಕು ಬೆಂಚುಗಳನ್ನ ಶಿಕ್ಷಕರುಗಳ ಸಮ್ಮುಖದಲ್ಲಿ ವಿತರಣೆ ಮಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವ ಯುವಕರ ಸೇವಾ ಮನೊ ಭಾವನೆಗೆ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜ ಸೇವಾ ಸಂಘಟನೆಯ ಪ್ರಮುಖರಾದ ಮಿಥುನ್, ಅರುಣ್, ಆಶಿಕ್, ಜಮಾಲ್, ಟೋನಿ, ಶಿವಶಂಕರ, ಜಾಗು, ಕುಶ, ದಿನೇಶ್, ಶಿವ, ಕಿರಣ್ ಸೇರಿದಂತೆ ಮತ್ತು ಇತರರು ಹಾಜರಿದ್ದರು.

Read More

ಮಡಿಕೇರಿ ಆ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2024 ನೇ ವರ್ಷದ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಅಹ್ವಾನಿಸಲಾಗಿದೆ. ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಮಾಹಿತಿಗಳನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ವ್ಯಕ್ತಿ ಪರಿಚಯ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ಸೆ.11 ಕೊನೆ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2024-ಯೋಜನೆ” ಎಂದು ಬರೆದು ಅರ್ಜಿ…

Read More

ಪುತ್ತೂರು ಆ.13 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಎಂಸಿಎ ವಿಭಾಗಗಳ ಆಶ್ರಯದಲ್ಲಿ ಕೃತಕ ಬುದ್ದಿಮತ್ತೆಯೊಂದಿಗೆ ಮುಂದಿನ ಪೀಳಿಗೆಯ ಬೋಧನೆ ಮತ್ತು ಎಐ ಪರಿಕರಗಳ ಪ್ರಾಯೋಗಿಕ ಪರಿಚಯ ಎನ್ನುವ ವಿಷಯದ ಬಗ್ಗೆ 5 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್ (ಸೈಬರ್ ಸೆಕ್ಯುರಿಟಿ) ವಿಭಾಗದ ಅಸೋಸಿಯೇಟ್ ಡಾ.ಮಂಜುನಾಥ್.ಬಿ.ಆರ್, ಯಾವುದೇ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಮೊದಲು ಅಧ್ಯಾಪಕನು ಅದರಲ್ಲಿ ಪರಿಣತಿಯನ್ನು ಹೊಂದಿರಬೇಕು, ಒಂದು ವಿಷಯವನ್ನು ಒಪ್ಪಿಕೊಂಡ ಬಳಿಕ ಅದನ್ನು ಪೂರ್ಣಗೊಳಿಸುವುದು ನಮ್ಮ ಜವಾಬ್ಧಾರಿ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ಅಧ್ಯಾಪಕರು ಎಲ್ಲಾ ವಿಷಯವನ್ನು ತಿಳಿದುಕೊಂಡಿರುತ್ತಾರೆ ಎನ್ನುವ ವಿದ್ಯಾರ್ಥಿಗಳ ಮನೋಭಾವಕ್ಕೆ ತಕ್ಕಂತೆ ಹೊಸ ಹೊಸ ವಿಷಯಗಳನ್ನು ಕಲಿಯುತ್ತಾ ತಮ್ಮನ್ನು ತಾವು ಎತ್ತರಿಸಿಕೊಳ್ಳುವ…

Read More

ವಿರಾಜಪೇಟೆ ಆ.13 NEWS DESK : ವಿರಾಜಪೇಟೆ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು (ಪಂಜರಪೇಟೆ) ತಿತಿಮತಿಯ ವಿಜ್ಞಾನ ವಿಭಾಗಕ್ಕೆ ಬೋಧನೆ ಮಾಡಲು ಅತಿಥಿ ಉಪನ್ಯಾಸಕರುಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಆಂಗ್ಲ ಭಾಷೆ, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯ ಬೋಧನೆ ಮಾಡಲು ಅತಿಥಿ ಉಪನ್ಯಾಸಕರು ಬೇಕಾಗಿದ್ದು, ಆಸಕ್ತರು ಕಾಲೇಜಿನ ಪ್ರಾಂಶುಪಾಲರನ್ನು- 9448874562 ಸಂಪರ್ಕಿಸುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಕೋರಲಾಗಿದೆ.

Read More

ವಿರಾಜಪೇಟೆ ಆ.13 NEWS DESK : ನಗರದ ಚಿಕ್ಕಪೇಟೆ ಛತ್ರಕೆರೆಯ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ದಿವ್ಯ ಆರಾಧನೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇಗುಲದ ಪ್ರಧಾನ ಅರ್ಚಕರಾದ ಸುಬ್ರಮಣ್ಯ ಭಟ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ಮುಂಜಾನೆ ಸ್ವಾಮಿಗಳ ದಿವ್ಯ ಮೂರ್ತಿಗೆ ಕ್ಷೀರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳು ನಡೆದವು. ನಂತರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿವಿಧ ಹೂವುಗಳಿಂದ ಅಲಂಕಾರ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಮಹಿಳಾ ಸಂಘದ ಭಕ್ತರಿಂದ ಗುರು ರಾಯರ ಭಜನಾ ಸಂಕೀರ್ತನೆ ಜರುಗಿತು. ಮಧ್ಯಾಹ್ನ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಆಡಳಿತ ಮಂಡಳಿಯ ವತಿಯಿಂದ ಅನ್ನಸಂತರ್ಪಣೆ ನೆರವೇರಿತು. ಪೂಜಾ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಮತ್ತು ನಗರದ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ

Read More

ಕುಶಾಲನಗರ ಆ.13 NEWS DESK :  ಶೃಂಗೇರಿಯಲ್ಲಿ ನಡೆದ ಜೆಸಿಐ ಇಂಡಿಯಾದ ವಲಯ- 14 ರ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ – ವಿಸ್ತಾರ ಕಾರ್ಯಕ್ರಮದಲ್ಲಿ ಜೆಸಿಐ ಕುಶಾಲನಗರ ಕಾವೇರಿ ಘಟಕವು ಉತ್ತಮ ಸೇವಾ ಕಾರ್ಯಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿದೆ. ಈ ಸಾಧನೆಗೆ ಕುಶಾಲನಗರ ಜೆಸಿಐ ಕಾವೇರಿ ಸಂಸ್ಥೆಗೆ 3ನೇ ಸ್ಥಾನ ಲಭಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ತೇಜ ದಿನೇಶ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ದೇವನಹಳ್ಳಿ ಘಟಕ ಪ್ರಥಮ ಹಾಗೂ ವಿಜಯಪುರ ಘಟಕ ದ್ವಿತೀಯ ಸ್ಥಾನ ಗಳಿಸಿವೆ. ಈ ಸಂದರ್ಭದಲ್ಲಿ ಜೆಸಿಐ ಕುಶಾಲನಗರ ಕಾವೇರಿ ಸಂಸ್ಥೆಗೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜೂನ್ಜುನ್ ವಾಲಾ ಅವರು ಜೆಸಿಐ ಕುಶಾಲನಗರ ಕಾವೇರಿ ಅಧ್ಯಕ್ಷೆ ತೇಜ ದಿನೇಶ್ ಮತ್ತು ತಂಡದವರಿಗೆ ಟ್ರೋಫಿ ಮತ್ತು ಬಹುಮಾನ ವಿತರಿಸಿದರು. ಈ ಸಂದರ್ಭ ಸಂಸ್ಥೆಯ ವಲಯ ಉಪಾಧ್ಯಕ್ಷ ಬಿ.ಜಗದೀಶ್, ವಲಯ ಸಮನ್ವಯಾಧಿಕಾರಿ ಎಂ.ಜೆ.ರಜನಿಕಾಂತ್, ಜೆಸಿಐ ವಲಯ ಅಲ್ಯೂಮಿನಿಯಂ ಕ್ಲಬ್ ನ  ಮಾಜಿ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ,…

Read More

ಮಡಿಕೇರಿ ಆ.13 NEWS DESK : ಅಂತರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ  ಹಾಗೂ ಹೆಚ್ಐವಿ/ ಏಡ್ಸ್ ಅರಿವು ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರೆವೆನ್ಷನ್ ಸೊಸೈಟಿ ಬೆಂಗಳೂರು, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಏಡ್ಸ್ ಮತ್ತು ನಿಯಂತ್ರಣ ಘಟಕದ ಅಧಿಕಾರಿ ಡಾ.ಸನತ್ ಕುಮಾರ್ ಮಾತನಾಡಿ, ಹದಿಹರೆಯದ ಯುವಕರಲ್ಲಿ ಏಡ್ಸ್ ಹರಡುವಿಕೆ ಹಾಗೂ ಅದನ್ನು ತಡೆಗಟ್ಟುವ ಕುರಿತು ವಿವರಿಸಿದರು. ಸಂಪನ್ಮೂಲ ವ್ಯಕ್ತಿ ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ ಮಾತನಾಡಿ, ಹೆಚ್‍ಐವಿ ಎಂಬ ಮಾರಕ ರೋಗವನ್ನು ತಡೆಗಟ್ಟುವಲ್ಲಿ ಯುವಜನತೆ ಪಾತ್ರಗಳು ಅತೀ ಮುಖ್ಯ ವಾಗಿವೆ. ಆರೋಗ್ಯವಂತ ಸಮಾಜವನ್ನು ಕಾಣಬೇಕಾದರೆ…

Read More