ಲೇಖಕ: admin

ಬೆಂಗಳೂರು ಆ.13 NEWS DESK : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ…

Read More

ಮಡಿಕೇರಿ ಆ.13 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಗೆ ಒಳಪಡುವ ಮಂಡೆಪಂಡ, ಚೆಂದಂಡ ಕುಟುಂಬಗಳಿಗೆ ತೆರಳುವ ಹಾಗೂ ಸಾರ್ವಜನಿಕರ ಬಳಕೆಯ  ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಕುಟುಂಬಸ್ಥರ ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧಗೊಂಡಿದೆ.  ಈ ಹಿಂದೆ ರಸ್ತೆಯ ಅಭಿವೃದ್ಧಿ ಕುರಿತು ಶಾಸಕರಿಗೆಮನವಿ ಬಂದಾಗ, ಅವರು ರೂ. 5 ಲಕ್ಷಗಳ ಅನುದಾನವನ್ನು ಒದಗಿಸಿದ್ದರು. ಇದೀಗ ಈ ರಸ್ತೆಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದ್ದು, ರಸ್ತೆ ಕಾಮಗಾರಿಗೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಎಲ್ಲಾ ಪ್ರಮುಖ ನಾಯಕರಿಗೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಧನ್ಯವಾದಗಳು ಅರ್ಪಿಸಿದ್ದಾರೆ.

Read More

ಸುಂಟಿಕೊಪ್ಪ ಆ.13 NEWS DESK : ಸುಂಟಿಕೊಪ್ಪ ಎಸ್‍ವೈಎಸ್ ವತಿಯಿಂದ ‘ಪ್ರೇಶ್ ಇಂಡಿಯಾ’ ಎಂಬ ಧ್ಯೇಯವಾಕ್ಯದೊಂದಿಗೆ ನಾಮಫಲಕಗಳನ್ನು ಸ್ವಚ್ಛಗೊಳಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ಎಸ್‍ವೈಎಸ್  ಟೀಂ ಇಸಾಬಾ ತಂಡದ ಯುವಕರು ಗದ್ದೆಹಳ್ಳದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿರುವ ಸರಕಾರಿ ಮತ್ತು ವಿವಿಧ ಸಂಘ ಸಂಸ್ಥೆಗಳಿಗೆ ಸೇರಿದ ನಾಮಫಲಕಗಳನ್ನು ಸ್ವಚ್ಛಗೊಳಿದರು.  ಸ್ವಚ್ಛತಾ ಕಾರ್ಯದಲ್ಲಿ ಟೀಂ ಇಸಾಬಾ ತಂಡದ ನಾಸೀರ್ ಮತ್ತು ಸಾಹಿಲ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

Read More

ಮಡಿಕೇರಿ ಆ.13 NEWS DESK : ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲಾ ಸಮಿತಿಯ, ತಾಲ್ಲೂಕು ಘಟಕವಾದ ಕುಶಾಲನಗರ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಕನ್ನಡ ಭವನ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ತಿಳಿಸಿದ್ದಾರೆ.  ಗೌರವ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಅಧ್ಯಕ್ಷರಾಗಿ ಹೆಚ್.ಬಿ.ದಿನೇಶ್ ಚಾರಿ, ಉಪಾಧ್ಯಕ್ಷರಾಗಿ ಕೆ.ಶಾಂತಕುಮಾರ್, ಎನ್.ಕೆ.ಮಾಲಾದೇವಿ , ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ.ಅಮೃತ, ಸಹಕಾರ್ಯದರ್ಶಿಯಾಗಿ ಕೆ.ಆರ್.ರಮೇಶ್, ಕೋಶಾಧಿಕಾರಿಯಾಗಿ ಬರಮಣ್ಣ ಟಿ ಬೆಟ್ಟಗೇರಿ  ಹಾಗೂ ನಿರ್ದೇಶಕರಾಗಿ ಕೆ.ಎಸ್.ಚಂದ್ರಶೇಖರ್, ಎಸ್.ಎಸ್.ಅಂಕಿತಾ, ಮಂಜುನಾಥ್, ಪ್ರಕಾಶ್, ಎಸ್.ಹೆಚ್.ಶಿಲ್ಪ, ಎಮ್.ಎಸ್.ದೀಪಿಕಾ , ಬಸವರಾಜ್ ಹಾಗೂ  ಮನು ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಕಾರ್ಯಕ್ರಮದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಚಂದನ್ ನಂದರಬೆಟ್ಟು ತಿಳಿಸಿದ್ದಾರೆ.

Read More

ವಿರಾಜಪೇಟೆ ಆ.13 NEWS DESK : ಕಟ್ಟಡ ಕಾರ್ಮಿಕರ ತಮ್ಮ ಪಾಲಿನ ಹಕ್ಕುಗಳನ್ನು ಹಾಗೂ ಸೌಲಭ್ಯ ಪಡೆಯಬೇಕಾದರೆ ಸಾಂಘಿಕ ಹೋರಾಟ ಅಗತ್ಯತೆಯಿದೆ ಎಂದು ಅರಣ್ಯ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ವನ್ಯಜೀವಿ ಮಂಡಳಿಯ ರಾಜ್ಯ ಸದಸ್ಯರಾದ ಸಂಕೇತ್ ಪೂವಯ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಸಿಐಟಿಯು, ಸಿ.ಡಬ್ಲ್ಯೂ.ಎಫ್.ಐ ವತಿಯಿಂದ ವಿರಾಜಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರ 2ನೇ ಜಿಲ್ಲಾ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಕಾರ್ಮಿಕರ ಸಮ್ಮೇಳನಗಳನ್ನು ಮಾಡುವ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ಸರಕಾರಕ್ಕೆ ತಿಳಿಸುವ ಕೆಲಸವನ್ನು ಕಾರ್ಮಿಕರಿಗೆ ಸಂಘಟನೆ ಮಾಡುತ್ತಿದೆ. ಕಟ್ಟಡ ಕಾರ್ಮಿಕರಿಗಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಣಿಯಾಗುವ ಮೂಲಕ ಸರಕಾರದ ಸಲವತ್ತುಗಳನ್ನು ಪಡೆದುಕೊಳ್ಳಬೇಕೆಂದರು. ನಮ್ಮ ಜಿಲ್ಲೆಯಲ್ಲಿ ಕಟ್ಟಡ ರಂಗದಲ್ಲಿ ಕೆಲಸ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಹೊರರಾಜ್ಯದ ಕಾರ್ಮಿಕರು ದುಡಿಯುತ್ತಿದ್ದಾರೆ. ಈ ಕಾರ್ಮಿಕರನ್ನು ಕಡಿಮೆ ದರದಲ್ಲಿ ಮತ್ತು ಹೆಚ್ಚು ಸಮಯದ ಕೆಲಸವನ್ನು ಮಾಡಿಸುವುದರೊಂದಿಗೆ…

Read More

ಮಡಿಕೇರಿ NEWS DESK ಆ.12 : ಜನಪ್ರಿಯ ಪ್ರವಾಸಿತಾಣ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಾಣ ಕಾನೂನಿಗೆ ವಿರುದ್ಧವಾಗಿದ್ದು, ಈ ಯೋಜನೆಯಲ್ಲಿ ಸಕ್ರಿಯರಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಹಾಗೂ ಸುಂಟಿಕೊಪ್ಪದ ಇಬ್ಬರು ರಾಜಕಾರಣಿಗಳು ಜಿಲ್ಲಾಡಳಿತದ ದಾರಿ ತಪ್ಪಿಸಿ, ರಾಜ್ಯ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯ ಮೇಲೆ ಪ್ರಭಾವ ಬೀರಿ ಪುರಾತತ್ವ ಇಲಾಖೆ ವ್ಯಾಪ್ತಿಯ ರಾಜಾಸೀಟ್ ನಲ್ಲಿ ಗಾಜಿನ ಸೇತುವೆ ನಿರ್ಮಿಸಲು ಮತ್ತು 50 ಮೀಟರ್ ಪಕ್ಕದಲ್ಲಿ ಹೊಟೇಲ್ ನಿರ್ಮಾಣ ಮಾಡಲು ಮುಂದಾಗಿರುವುದು ನಮ್ಮ ಜನಪ್ರತಿನಿಧಿಗಳ ಆಜ್ಞೆಯ ಮೇರೆಗೆ ನಡೆಯುತ್ತಿರುವ ಅಪಾಯಕಾರಿ ಹಾಗೂ ವಿನಾಶಕಾರಿ ಕೃತ್ಯವಾಗಿದೆ ಎಂದು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು ತಮ್ಮ ಮತದಾರರ ಘನತೆಯನ್ನು ಹಾಗೂ ನಮ್ಮ ಸಂವಿಧಾನದಲ್ಲಿ ಮೂಲಭೂತವಾಗಿ ಪ್ರತಿಪಾದಿಸಲಾದ ಜಲಸಂಪನ್ಮೂಲಗಳು, ಸಸ್ಯ, ಪ್ರಾಣಿ, ಪರಿಸರ ವಿಜ್ಞಾನ ಮತ್ತು ತಮ್ಮ ಕ್ಷೇತ್ರದ ಸ್ಥಳೀಯರ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ವಿಶೇಷವಾಗಿ 11 ಮೂಲಭೂತ ಕರ್ತವ್ಯಗಳಲ್ಲಿ,…

Read More

ಸೋಮವಾರಪೇಟೆ NEWS DESK ಆ.12 : ಸಿ ಆ್ಯಂಡ್ ಡಿ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು, ಆಸ್ತಿ ದುರಸ್ತಿ ವಿಳಂಬವನ್ನು ಖಂಡಿಸಿ ತಾಲ್ಲೂಕು ರೈತ ಹೋರಾಟ ಸಮಿತಿ ಹಾಗು ಕೊಡಗು ರೈತ ಸಂಘ ಮಂಗಳವಾರ ಕರೆ ನೀಡಿದ್ದ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಗ್ರಾಮೀಣ ಭಾಗದ ರೈತರು ಬೆಳಿಗ್ಗೆಯೇ ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸಿ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ಸಂಚಾಲಕ ಬಿ.ಜೆ.ದೀಪಕ್, ಪ್ರಮುಖರಾದ ಎಸ್.ಜಿ.ಮೇದಪ್ಪ, ಕೆ.ಎಂ.ಲೋಕೇಶ್ ಕುಮಾರ್, ಬಿ.ಪಿ.ಅನಿಲ್, ಹರಗ ಮಿಥುನ್, ಕೂತಿ ದಿವಾಕರ್, ಕೆ.ಎಂ.ದಿನೇಶ್ ಅವರುಗಳ ನೇತೃತ್ವದಲ್ಲಿ ವಿವೇಕಾನಂದ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ಬೀಟಿಕಟ್ಟೆ ಜಂಕ್ಷನ್‌ನಲ್ಲಿ ರೈತ ಹೋರಾಟ ಸಮಿತಿ ಹಾಗು ರೈತ ಸಂಘದ ಎಸ್.ಬಿ.ಭರತ್‌ಕುಮಾರ್, ಜಿ.ಎಂ.ಹೂವಯ್ಯ, ಬಿ.ಪಿ.ಮೊಗಪ್ಪ, ಗೋಪಾಲ್‌ಕೃಷ್ಣ ಅವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದರು ಗೌಡಳ್ಳಿ, ಚೌಡ್ಲು, ತೋಳೂರುಶೆಟ್ಟಳ್ಳಿ, ಕಲ್ಕಂದೂರು-ಕೂಡುರಸ್ತೆ, ಮಾದಾಪುರ, ಕುಂಬೂರು, ಅಬ್ಬೂರುಕಟ್ಟೆ ಜಂಕ್ಷನ್‌ನಲ್ಲಿ ರಸ್ತೆ ತಡೆ ನಡೆಸಿದರು. ಸೋಮವಾರಪೇಟೆ ಪಟ್ಟಣದಲ್ಲಿ ವರ್ತಕರು ಅಂಗಡಿ ಮುಂಗಟ್ಟು ಮುಚ್ಚಿದ್ದರು. ಖಾಸಗಿ ಬಸ್‌ಗಳು, ಆಟೋ,…

Read More

ಮಡಿಕೇರಿ NEWS DESK ಆ.12 : ಕೊಡಗು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಗರದ ರೆಡ್ ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಜಿನೇವಾ ಒಪ್ಪಂದದ ಮಹತ್ವವನ್ನು ಸಭೆಗೆ ತಿಳಿಸಿದರು. ಜಿನೇವಾ ಒಪ್ಪಂದಗಳ ದಿನವನ್ನು ಪ್ರತಿ ವರ್ಷ ಆಗಸ್ಟ್ 12 ರಂದು ಆಚರಿಸಲಾಗುತ್ತದೆ. ಇದು ಸಶಸ್ತ್ರ ಸಂಘರ್ಷಗಳ ಸಮಯದಲ್ಲಿ ಮಾನವೀಯ ಕಾನೂನುಗಳನ್ನು ಪಾಲಿಸುವ ಮಹತ್ವವನ್ನು ನೆನಪಿಸುತ್ತದೆ. ಯುದ್ಧದ ಸಮಯದಲ್ಲಿ ಗಾಯಗೊಂಡವರು ಮತ್ತು ಸೆರೆಯಾಳುಗಳನ್ನು ರಕ್ಷಿಸಲು ಅಂತರರಾಷ್ಟ್ರೀಯ ಕಾನೂನು ಮಾನದಂಡಗಳನ್ನು ಜಿನೇವಾ ಒಪ್ಪಂದ ಪ್ರತಿಪಾದಿಸುತ್ತದೆ. ಸಂಘರ್ಷದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಮತ್ತು ರಕ್ಷಿಸುವಲ್ಲಿ ಈ ಒಪ್ಪಂದಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು. ಜಿಲ್ಲೆಯ ಪ್ರೌಢ ಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಮತ್ತು ಯೂತ್ ರೆಡ್ ಕ್ರಾಸ್ ಘಟಕಗಳನ್ನು ಮರು ಸ್ಥಾಪನೆ ಮಾಡಲಾಗುವುದು. ಕೊಡಗು ರೆಡ್ ಕ್ರಾಸ್ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ…

Read More

ಮಡಿಕೇರಿ ಆ.12 NEWS DESK : ಪ್ರಸಕ್ತ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಿತು. ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಪಂದ್ಯಾವಳಿಯ ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ದೈಹಿಕ ಶಿಕ್ಷಕರಾದ ರಾಕಿ ಪೂವಣ್ಣ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಚಿದಾನಂದ ಎನ್.ಎಸ್., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗಿರಿಧರ ಗೌಡ, ಭಾಗಮಂಡಲ ದೈಹಿಕ ಶಿಕ್ಷಣ ಉಪನ್ಯಾಸಕರು, ಮೂರ್ನಾಡು ದೈಹಿಕ ಶಿಕ್ಷಣ ಉಪನ್ಯಾಸಕರಾದ ಬೋಪಣ್ಣ, ಇತರರು ಇದ್ದರು. ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೈಕಲರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ನಡುವೆ ನಡೆಯಿತು. ಇದರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು 4-0 ಗೋಲ್‍ಗಳ ಅಂತರದಲ್ಲಿ ವಿಜೇತರಾದರು.…

Read More

ಮಡಿಕೇರಿ ಆ.12 NEWS DESK : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು. ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿವಿಧ ಇಲಾಖೆ ಮೂಲಕ ನಡೆಯಲಿವೆ. ಹರ್ ಘರ್…

Read More