ಮಡಿಕೇರಿ ಆ.12 NEWS DESK : ಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ. ಆರ್ಯವೈಶ್ಯ ಮಂಡಳಿಯ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್ ಅವರನ್ನೊಳಗೊಂಡ ಮಂಡಳಿಗೆ ಕಾರ್ಯದರ್ಶಿಯಾಗಿ ಕೆ.ಪ್ರವೀಣ್, ಖಜಾಂಚಿಯಾಗಿ ಪಿ.ಎಸ್.ಪ್ರಶಾಂತ್, ಉಪಾಧ್ಯಕ್ಷರಾಗಿ ಬಿ.ಎಲ್.ಅಶೋಕ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಎ.ಎಸ್ ಕುಮಾರ್, ನಿರ್ದೇಶಕರುಗಳಾಗಿ ಬಿ.ಎಲ್.ಸತ್ಯನಾರಾಯಣ, ಎಸ್.ಎನ್.ನಾಗೇಂದ್ರ, ಬಿ.ಆರ್.ನಟರಾಜ್, ಕೆ.ಜೆ.ಸತೀಶ್, ಬಿ.ಪಿ.ಕೃಷ್ಣಮೂರ್ತಿ ಹಾಗೂ ವಿ.ವೈಶಾಖ್ ಆಯ್ಕೆಯಾದರು.
ಲೇಖಕ: admin
ಸುಂಟಿಕೊಪ್ಪ ಆ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ವತಿಯಿಂದ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಒಕ್ಕೂಟ ಹಾಗೂ ಸಂಘಗಳ ಪದಾಧಿಕಾರಿಗಳು ಶಾಲೆಯ ಆವರಣದ ಸುತ್ತ ಬೆಳೆದಿದ್ದ ಕಾಡುಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಭವ್ಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳಾದ ಜನನಿ, ಮೂಕಾಂಬಿಕ, ಅನ್ನಪೂರ್ಣ, ಶ್ರೀ ಸರಸ್ವತಿ, ನೇತಾಜಿ ಹಾಗೂ ಪರಮೇಶ್ವರ ಸಂಘಗಳ ಪ್ರಬಂಧಕರು ಹಾಗೂ ಸಂಘದ ಸದಸ್ಯರುಗಳು ಆವರಣದಲ್ಲಿ ಬೆಳೆದಿದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛಾತ ಕಾರ್ಯವನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಉಪಾಧ್ಯಕ್ಷೆ ಗೀತಾ, ಒಕ್ಕೂಟ…
ಮಡಿಕೇರಿ ಆ.12 NEWS DESK : 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ವರ್ತಕರಲ್ಲಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವಚ್ಛ ಪರಿಸರಕ್ಕಾಗಿ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಳ್ಳಲಾಗಿದೆ. ಇದೇ ಆ.1 ರಿಂದ ಈ ನೀರಿನ ಬಾಟಲಿಗಳ ಮಾರಾಟವನ್ನು ನಗರಸಭೆ ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಿಳಿಸಿದ್ದಾರೆ. 2024-25ರ ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶದ ಪ್ರಕಾರ 45 ಲಕ್ಷಕ್ಕೂ ಅಧಿಕ ಪ್ರವಾಸಿಗರು ಮಡಿಕೇರಿ ನಗರಕ್ಕೆ ಭೇಟಿ ನೀಡಿದ್ದಾರೆ. ಕನಿಷ್ಠ 25 ರಿಂದ 30 ಲಕ್ಷ ನೀರಿನ ಬಾಟಲ್ ಮಡಿಕೇರಿ ನಗರ ಒಂದರಲ್ಲೇ ಕಂಡು ಬಂದಿದೆ. ಈ ಬಾಟಲ್ ಗಳು…
ಮಡಿಕೇರಿ ಆ.12 NEWS DESK : ಭಾರತ ಸ್ವಾತಂತ್ರ್ಯದ 78ನೇ ವರ್ಷಾಚರಣೆಯ ಪ್ರಯುಕ್ತ ಆ.15ರಂದು “ವಾಯ್ಸ್ ಆಫ್ ಕೊಡವ- (ವಿಒಕೆ)” ಮತ್ತು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಸಹಯೋಗದಲ್ಲಿ ” ನೆಪ್ಪುರ ನಳತ್ ಮಾಂಜತ ಮೊಟ್ಟ್” – ”ever lasting footprints inthe shadow of memories’ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ, ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವ ಅವರು, ಈ ದೇಶದ ಸ್ವಾತಂತ್ರ್ಯಕ್ಕಾಗಿ ಈ ನಾಡಿನ ಹಿರಿಯರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡಿದ್ದಾರೆ, ಭಾರತ ಸ್ವಾತಂತ್ರ್ಯದ ಇತಿಹಾಸದಲ್ಲಿ ಕೊಡಗು ತನ್ನದೇ ಅಧ್ಯಾಯವನ್ನು ಹೊಂದಿದೆ. ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗಮಾಡಿದ ಹೋರಾಟಗಾರರನ್ನು ಕೊಡಗು ದೇಶಕ್ಕೆ ನೀಡಿದೆ. ಆದರೆ ಅವರಿಗೆ ಸರ್ಕಾರದಿಂದಾಗಲೀ, ಸಾರ್ವಜನಿಕರಿಂದಾಗಲಿ ಸೂಕ್ತವಾದ ಗೌರವ ನೀಡಲಾಗುತ್ತಿಲ್ಲ. ಸರ್ಕಾರದಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೆಲವೇ ಕೆಲವು ಹೋರಾಟಗಾರರನ್ನು ಗುರ್ತಿಸಿ ಗೌರವ ನೀಡಲಾಗುತ್ತಿದೆ. ಆದರೆ ಇಲ್ಲಿನ ನೈಜ ಹೋರಾಟಗಾರರಿಗೆ…
ಮಡಿಕೇರಿ NEWS DESK ಆ.12 : ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಬದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷ ಹೆಚ್.ಎನ್.ಮಂಜುನಾಥ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ನೂರಾರು ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ತಿದ್ದುಪಡಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಹೋರಾಟಗಳನ್ನು ನಡೆಸಿದರು ಸರ್ಕಾರ ಅನುಮೋದನೆ ನೀಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. *ಆ.25 ರ ಗಡುವು* ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಮಾತನಾಡಿ, ಬೇಡಿಕೆಯ ಈಡೇರಿಕೆಗಾಗಿ ಇದೇ ಆ.25 ರ ಗಡುವನ್ನು ರಾಜ್ಯ ಸರಕಾರಕ್ಕೆ ನೀಡಲಾಗುತ್ತಿದೆ. ಈ…
ಮಡಿಕೇರಿ ಆ.12 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆಯ ಭಾಗವಾಗಿ ನಗರದ ಗಾಂಧಿ ಮೈದಾನದಿಂದ ಬಾಲಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ, ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ ಯಾವುದೇ ಆದೇಶವಾಗಿಲ್ಲ ಎಂದು ಆಶಾ ಕಾರ್ಯಕರ್ತರು ದೂರಿದರು. ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ಅವೈಜ್ಞಾನಿಕವಾಗಿರುವ…
ನಾಪೋಕ್ಲು ಆ.12 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದೈನಂದಿನ ಚಟುವಟಿಕೆಗೆ ಚಾಲನೆ ದೊರೆಯಿತು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ಸಮಾಜ ಸೇವೆಯನ್ನು ಮಾಡಿ ದೇಶದ ಅಭಿವೃದ್ಧಿಗೆ ಸಹಾಯಕವಾಗಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಹೇಳಿದರು. ಪಾರಾಣೆ ಗ್ರಾಮದ ಪ್ರಗತಿಪರ ರೈತ ಬಲ್ಯಾಟಂಡ ಕೌಶಿಕ್ ಕುಟ್ಟಯ್ಯ ಮಾತನಾಡಿ, ತಾವು ಮಾಡುತ್ತಿರುವ ಪ್ರಗತಿಪರ ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ವಿದ್ಯಾರ್ಥಿಗಳು ತಮ್ಮ ನೆಲ ಜಲದ ಸಂರಕ್ಷಣೆಗೆ ಬದ್ಧರಾಗಿರಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ…
ನಾಪೋಕ್ಲು ಆ.12 NEWS DESK : ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ನರ್ಸಿಂಗ್ ಸೂಪರಿಟೆಂಡೆಂಟ್ ಗ್ರೇಡ್ 2. ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಡಾ.ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಯಿತು. ನಾಪೋಕ್ಲುಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಸಾಧಕರನ್ನು ಸನ್ಮಾನಿಸಿ, ಗೌರವಿಸಿದರು. ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಕಾಫಿ ಬೆಳೆಗಾರರಾದ ಬಿದ್ದಾಟಂಡ ಸುಮನ್ ಪ್ರದೀಪ್, ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ ಇನ್ನಿತರ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
ನಾಪೋಕ್ಲು ಆ.12 NEWS DESK : ಆಚಾರ, ವಿಚಾರ, ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಜವಾಬ್ದಾರಿ ಹಿರಿಯರ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಾಪೋಕ್ಲು ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಆಟಿಡೊಂಜಿ ದಿನ -2025 ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಲ್ಲವ ಸಮಾಜದವರು ಅವರದೇ ಆದ ವಿಶಿಷ್ಟ ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಎಲ್ಲರಿಗೂ ಆದರ್ಶ ಪ್ರಾಯರಾದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಹಿಂಬಾಲಕರಾದ ಬಿಲ್ಲವ ಸಮಾಜದವರು, ಸಮಾಜದ ಎಲ್ಲಾ ಆಯಾಮಗಳಲ್ಲಿ ಮುನ್ನಲೆಗೆ ಬರಬೇಕೆಂದು ಕರೆ ನೀಡಿದರು. ಅತ್ಯಂತ ಶ್ರಮಜೀವಿಗಳು ಹಾಗೂ ಸ್ವಾಭಿಮಾನಿಗಳಾದ ಬಿಲ್ಲವ ಸಮಾಜದವರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದ್ದಾರೆ. ಜನಾಂಗದ ಯಾವುದೇ ಬೇಡಿಕೆ ಇದ್ದರೂ ತಾನು ಅದಕ್ಕೆ ಸ್ಪಂದಿಸುವುದಾಗಿ ಹೇಳಿದರು. ಬಿಲ್ಲವ ಸಮಾಜದ ಅಭಿವೃದ್ದಿಗಾಗಿ ಮಡಿಕೇರಿಯಲ್ಲಿ 26 ಸೆಂಟ್ಸ್ ಜಾಗವನ್ನು…






